Connect with us

ಕ್ರೀಡೆ

ಇಂದಿನ ಪ್ರಮುಖ ಸುದ್ದಿಗಳು

Published

on

ಇಂದಿನ ಪ್ರಮುಖ ಸುದ್ದಿಗಳು

  1. ಮುಂಬೈನಲ್ಲಿ ಇದೀಗ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಪ್ರಥಮ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು. ಖ್ಯಾತ ಹಿನ್ನೆಲೆ ಗಾಯಕಿ, ಭಾರತರತ್ನ ಪುರಸ್ಕೃತ ಲತಾ ಮಂಗೇಶ್ಕರ್ ಅವರ ಸ್ಮರಣಾರ್ಥ ಈ ಪ್ರಶಸ್ತಿಯನ್ನು ಸ್ಥಾಪಿಸಲಾಗಿದೆ. ರಾಷ್ಟ್ರಕ್ಕೆ ಅನುಕರಣಿಯ ಕೊಡುಗೆ ನೀಡಿರುವ ವ್ಯಕ್ತಿಗೆ ವಾರ್ಷಿಕವಾಗಿ ಈ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುತ್ತಿದೆ ಎಂದು ಪ್ರಕಟಣೆ ತಿಳಿಸಿದೆ.
  2. ಜಮ್ಮು-ಕಾಶ್ಮೀರ ಕೇಂದ್ರಾಡಳಿತ ಪ್ರದೇಶದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ರಾಷ್ಟ್ರೀಯ ಪಂಚಾಯತ್ ರಾಜ್ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ದೇಶಾದ್ಯಂತ ಎಲ್ಲ ಗ್ರಾಮ ಪಂಚಾಯತ್‌ಗಳ ಸದಸ್ಯರ ಸಭೆಗಳನ್ನುದ್ದೇಶಿಸಿ ಭಾಷಣ ಮಾಡುವುದರ ಜತೆಗೆ ಸಾಂಬಾ ಜಿಲ್ಲೆಯ ಪಲ್ಲಿ ಪಂಚಾಯತ್‌ಗೂ ಸಹ ಪ್ರಧಾನಿ ಭೇಟಿ ನೀಡಿ ಸುಮಾರು 20ಸಾವಿರ ಕೋಟಿ ರೂಪಾಯಿ ಮೊತ್ತದ ಹಲವಾರು ಅಭಿವೃಧ್ಧಿ ಕಾರ್ಯಕ್ರಮವನ್ನು ಉದ್ಘಾಟಿಸಿದರು.
  3. ಫಿನ್ ಟೆನ್ ಸಂಬಂಧಿತ ಅನೇಕ ಹೊಸ ಸ್ಟಾರ್ಟ್ ಅಪ್‌ಗಳು ಕೂಡ ದೇಶದಲ್ಲಿ ಕಾರ್ಯಾರಂಭ ಮಾಡಿವೆ. ದೆಹಲಿಯಲ್ಲಿ ಒಂದು ದಿನ ನಗದು ಬಳಸದೇ ಇಡೀ ದಿನದ ಖರ್ಚನ್ನು ಡಿಜಿಟಲ್ ಪಾವತಿ ಮೂಲವೇ ಮಾಡಿದ ಸಾಗರಿಕ ಮತ್ತು ಪ್ರೇಕ್ಷಾ ಅವರ ಪ್ರಯೋಗವನ್ನು ಪ್ರಧಾನಿ ನರೇಂದ್ರ ಮೋದಿ ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಉದಾಹರಣೆ ನೀಡಿದರು.
  4. ಚುನಾಯಿತ ಪ್ರತಿನಿಧಿಗಳ ಪಕ್ಷಾಂತರ ದೇಶವನ್ನು ಬಾಧಿಸುತ್ತಿದೆ. ಈ ಸಮಸ್ಯೆ ಪರಿಹಾರಕ್ಕೆ ಸಂಬಂಧಿತ ಕಾಯ್ದೆಗೆ ತಿದ್ದುಪಡಿ ತರುವುದು ಅತ್ಯಗತ್ಯವಾಗಿದೆ ಎಂದು ಉಪರಾಷ್ಟ್ರಪತಿ ಎಂ. ವೆಂಕಯ್ಯನಾಯ್ಡು ಬೆಂಗಳೂರಿನಲ್ಲಿ ಆಯೋಜಿಸಿದ್ದ ನವಭಾರತದಲ್ಲಿ ಮಾಧ್ಯಮ ಕುರಿತು ಸಂವಾದದಲ್ಲಿ ಪ್ರತಿಪಾದಿಸಿದರು.
  5. ಸಫ್ದರ್‌ಜಂಗ್ ವಿಮಾನ ನಿಲ್ದಾಣದಲ್ಲಿ ನಾಳೆ ನಾಗರಿಕ ವಿಮಾನಯಾನ ಸಚಿವಾಲಯದಿಂದ ಬೃಹತ್ ಯೋಗ ಕಾರ್ಯಕ್ರಮ ಯೋಗ ಪ್ರಭಾ ವನ್ನು ಆಯೋಜಿಸಲಾಗಿದೆ. ಕೇಂದ್ರ ನಾಗರಿಕ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಸಚಿವಾಲಯದ 500ಕ್ಕೂ ಹೆಚ್ಚು ಸಿಬ್ಬಂದಿ ಮತ್ತು ಅದರ ಸಂಬಂಧಿತ ಸಂಸ್ಥೆಗಳ ಪ್ರತಿನಿಧಿಗಳು ಪಾಲ್ಗೊಳ್ಳಲಿದ್ದಾರೆ.
  6. ದೇಶದಲ್ಲಿ ಇದುವರೆಗೆ 187ಕೋಟಿ 67ಲಕ್ಷಕ್ಕೂ ಹೆಚ್ಚು ಕೋವಿಡ್ ಲಸಿಕಾ ಡೋಸ್‌ಗಳನ್ನು ನೀಡಲಾಗಿದೆ. ಕಳೆದ 24ಗಂಟೆಗಳಲ್ಲಿ 19ಲಕ್ಷಕ್ಕೂ ಹೆಚ್ಚು ಡೋಸ್‌ಗಳನ್ನು ಪೂರೈಸಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿದೆ. ಇದೇ ಅವಧಿಯಲ್ಲಿ ದೇಶದಲ್ಲಿ 2ಸಾವಿರದ 593ಹೊಸ ಕೋವಿಡ್ ಸೋಂಕಿನ ಪ್ರಕರಣಗಳು ವರದಿಯಾಗಿವೆ.
  7. ಖೇಲೋ ಇಂಡಿಯಾ 2021ಕ್ರೀಡಾಕೂಟಕ್ಕೆ ಉಪರಾಷ್ಟ್ರಪತಿ ಎಂ. ವೆಂಕಯ್ಯನಾಯ್ಡು ಚಾಲನೆ ನೀಡಿದರು. 200 ವಿಶ್ವವಿದ್ಯಾಲಯಗಳ ನಾಲ್ಕೂವರೆ ಸಾವಿರ ಕ್ರೀಡಾಪಟುಗಳು 10ದಿನಗಳ ಕಾಲ ನಡೆಯುವ ಖೇಲೋ ಇಂಡಿಯಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾರೆ. ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕ್ರೀಡಾ ಸಚಿವ ಅನುರಾಗ್ ಸಿಂಗ್ ಠಾಕೂರ್ ಮುಂತಾದವರು ಸಮಾರಂಭದಲ್ಲಿ ಉಪಸ್ಥಿತರಿದ್ದರು.
  8. ಕೇಂದ್ರ ವಾರ್ತಾ ಮತ್ತು ಪ್ರಸಾರ ಹಾಗೂ ಕ್ರೀಡಾ ಸಚಿವ ಅನುರಾಗ್ ಸಿಂಗ್ ಠಾಕೂರ್ ಬೆಂಗಳೂರಿನ ಜೈನ್ ವಿಶ್ವವಿದ್ಯಾಲಯದ ಗ್ಲೋಬಲ್ ಕ್ಯಾಂಪಸ್‌ಗೆ ಭೇಟಿ ನೀಡಿ ಕ್ರೀಡಾಕೂಟದ ಕ್ರೀಡಾಪಟುಗಳೊಂದಿಗೆ ಸಂವಾದ ನಡೆಸಿದರು.
  9. ಮುಂದಿನ ತಿಂಗಳ18 ರಂದು ಅಂತಾರಾಷ್ಟ್ರೀಯ ಸಂಗ್ರಹಾಲಯ ದಿನ ಆಚರಿಸಲಾಗುತ್ತದೆ. ಜನರು ಸ್ಥಳೀಯ ಮ್ಯೂಸಿಯಂಗಳಿಗೆ ಭೇಟಿ ನೀಡಿ ತಮ್ಮ ಅನುಭವಗಳನ್ನು ಹಂಚಿಕೊಳ್ಳುವಂತೆ ಪ್ರಧಾನಮಂತ್ರಿ ನರೇಂದ್ರ ಮೋದಿ ಜನತೆಯಲ್ಲಿ ಮನವಿ ಮಾಡಿದ್ದಾರೆ. ಗಣಿತದ ಬಗ್ಗೆಯೂ ಮನ್ ಕಿ ಬಾತ್‌ನಲ್ಲಿ ಪ್ರಧಾನಿ ಪ್ರಸ್ತಾಪಿಸಿದರು. ಕೋಲ್ಕತಾದ ಗೌರವ್ ಟೆಕರೀವಾಲ್ ಅವರೊಂದಿಗೆ ಮಾತನಾಡಿದರು. ವೈದಿಕ ಗಣಿತದ ಕೀರ್ತಿ ಭಾರತಿ ಕೃಷ್ಣ ತೀರ್ಥ ಮಹಾರಾಜ್ ಅವರಿಗೆ ಸಲ್ಲುತ್ತದೆ ಎಂದು ಗೌರವ್ ತಿಳಿಸಿದರು. ಭಾರತಿಕೃಷ್ಣ ತೀರ್ಥ ಮಹಾರಾಜ್ ನೀಡಿದ 16 ಸೂತ್ರಗಳ ಮೂಲಕ ಕ್ಲಿಷ್ಟಕರ ಗಣಿತ ಸಮಸ್ಯೆಗಳನ್ನು ಸುಲಭವಾಗಿ ಪರಿಹರಿಸಬಹುದು ಎಂದು ಹೇಳಿದರು.
  10. ಚಿತ್ರದುರ್ಗ ಜಿಲ್ಲಾಡಳಿತ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮೇರುನಟ ಡಾ.ರಾಜ್‌ಕುಮಾರ್ ಅವರ 93ನೇ ಜಯಂತಿ ಆಚರಿಸಲಾಯಿತು. ಉಪವಿಭಾಗಾಧಿಕಾರಿ ಆರ್.ಚಂದ್ರಯ್ಯನವರು ಡಾ.ರಾಜ್‌ಕುಮಾರ್ ಭಾವಚಿತ್ರಕ್ಕೆ ಪೂಜೆ ನೆರವೇರಿಸಿ ಪುಷ್ಪ ಸಮರ್ಪಿಸಿದರು. ಈ ಸಂದರ್ಭದಲ್ಲಿ ವಾರ್ತಾ ಇಲಾಖೆ ಸಹಾಯಕ ನಿರ್ದೇಶಕರಾದ ಜೆ.ಮಂಜೇಗೌಡ, ಸಿಬ್ಬಂದಿಗಳಾದ ವೆಂಕಟೇಶ್, ವೇಣುಗೋಪಾಲ.ಪಿ.ಎಂ. ಚಂದ್ರಶೇಖರ. ಎಸ್ , ರಮೇಶ್, ಉಮೇಶ್.ಜೆ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ಕ್ರೀಡೆ

ದಾವಣಗೆರೆ | ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿ ರಾಘವೇಂದ್ರ ಎನ್ ಬಿ ದೇಹದಾರ್ಢ್ಯ ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆದ್ದು ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ

Published

on

ಸುದ್ದಿದಿನ,ದಾವಣಗೆರೆ:ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ ದಾವಣಗೆರೆ ವಿಶ್ವವಿದ್ಯಾಲಯದ ಮಟ್ಟದ ದೇಹದಾರ್ಢ್ಯ ಸ್ಪರ್ಧೆಯಲ್ಲಿ 90ಕೆಜಿ ವಿಭಾಗದಲ್ಲಿ ರಾಘವೇಂದ್ರ ಚಿನ್ನದ ಪದಕ ಗೆಲ್ಲುವ ಮೂಲಕ ರಾಷ್ಟ್ರೀಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ..

ದಾವಣಗೆರೆ ನಗರದ ಜಿಎಫ್ ಜಿಸಿ ಕಾಲೇಜಿನಲ್ಲಿ ದಾವಣಗೆರೆ ವಿಶ್ವವಿದ್ಯಾಲಯ ಹಾಗೂ ದೈಹಿಕ ಶಿಕ್ಷಣ ನಿರ್ದೇಶಕರ ಸಂಘದಿಂದ ದೇಹದಾರ್ಢ್ಯ ಸ್ಪರ್ಧೆ ಹಾಗೂ ಆಯ್ಕೆ ಗಳು ನಡೆದವು, ಕಾಲೇಜಿನಲ್ಲಿ ಪ್ರಥಮ ಬಿಎ ವ್ಯಾಸಂಗ ಮಾಡುತ್ತಿರುವ ರಾಘವೇಂದ್ರ, ಹಳೇ ಕುಂದುವಾಡದ ಬಸವರಾಜ್, ಲಕ್ಷ್ಮಿದೇವಿ ದಂಪತಿಯ ಪುತ್ರನಾಗಿದ್ದು, ಸ್ಪರ್ಧೆಯಲ್ಲಿ 90ಕೆಜಿ ವಿಭಾಗದಲ್ಲಿ ದೇಹ ಪ್ರದರ್ಶಿಸಿ ಚಿನ್ನದ ಪದಕಕ್ಕೆ ಮುತ್ತಿಟ್ಟಿದ್ದಾನೆ.

ಓದಿನ ಜೊತೆಗೆ ತನ್ನ ತಂದೆಯ ಕಿರಾಣಿ ಅಂಗಡಿಯಲ್ಲಿ ಕೆಲಸ ಮಾಡುತ್ತಾ ತನ್ನ ಕನಸನ್ನು ನನಸು ಮಾಡಿಕೊಳ್ಳಲು ಬಿಡುವಿನ‌ ವೇಳೆಯಲ್ಲಿ ಕೋಚ್ ಮಧು ಪೂಜಾರ್ ಮಾರ್ಗದರ್ಶನದಲ್ಲಿ ದೇಹ ಹುರಿಗೊಳಿಸಿ ಸ್ಪರ್ಧೆಯಲ್ಲಿ ಭಾಗವಹಿಸಿ ಚಿನ್ನದ ಪದಕ ಗಳಿಸಿದ್ದಾನೆ, ಸ್ಪರ್ಧೆಯಲ್ಲಿ ಬೈಸಿಪ್ಸ್, ಲ್ಯಾಟ್ ಸ್ಟ್ರೈಡ್ ಪೋಸ್ ಕೊಟ್ಟು ನೋಡುಗರನ್ನು, ತೀರ್ಪುಗಾರರನ್ನು ಬೆರಗುಗೊಳಿಸಿದ್ದಾನೆ.

ಇನ್ನೂ ರಾಘವೇಂದ್ರನ ದೇಹ ಪ್ರದರ್ಶನ ವೇಳೆ ಶಿಳ್ಳೆ, ಚಪ್ಪಾಳೆ ಕೇಳಿ ಬಂದವು, ರಾಘವೇಂದ್ರ ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆಯಾಗಿದ್ದು ಬರುವ ಫೆಬ್ರುವರಿಯಲ್ಲಿ ಮಂಗಳೂರಿನಲ್ಲಿ ಸ್ಪರ್ಧೆ ನಡೆಯಲಿದೆ, ಇನ್ನೂ ಚಿನ್ನದ ಪದಕ ಗಳಿಸಿರುವ ರಾಘವೇಂದ್ರನಿಗೆ ಜಿಎಫ್ ಜಿಸಿ ಕಾಲೇಜು ಆಡಳಿತ ಮಂಡಳಿ, ಮಾರ್ಗದರ್ಶಕರು, ಹಳೇ ಕುಂದುವಾಡ ಗ್ರಾಮಸ್ಥರು ಅಭಿನಂದನೆ ಸಲ್ಲಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಕ್ರೀಡೆ

ಅದ್ವಿತೀಯ 2024ರಲ್ಲಿ ಜಿಎಂಐಟಿ ಕಾಲೇಜಿನ ಸಿಎಸ್ಇ ವಿದ್ಯಾರ್ಥಿಗಳ ಪೋಸ್ಟರ್ ಪ್ರಸ್ತುತಿಯಲ್ಲಿ ತೃತೀಯ ಸ್ಥಾನ

Published

on

ಸುದ್ದಿದಿನ,ದಾವಣಗೆರೆ:ಜಿಎಂ ತಾಂತ್ರಿಕ ಮಹಾವಿದ್ಯಾಲಯದ ಕಂಪ್ಯೂಟರ್ ಸೈನ್ಸ್ ಅಂಡ್ ಇಂಜಿನಿಯರಿಂಗ್ (ಸಿ.ಎಸ್.ಇ) ವಿಭಾಗದ 5ನೇ ಸೆಮಿಸ್ಟರ್ ‘ಎ’ ವಿಭಾಗದ ವಿದ್ಯಾರ್ಥಿಗಳಾದ ಅಭಿಷೇಕ್ ಯು. ಮತ್ತು ಅಫ್ರಿದ್ ಆರ್.ಕೆ. ಈ ಇಬ್ಬರು ಇತ್ತೀಚಿಗೆ ಹುಬ್ಬಳ್ಳಿಯ ಕೆಎಲ್‌ಇ ತಾಂತ್ರಿಕ ಸಂಸ್ಥೆಯಲ್ಲಿ ನಡೆದ ಅದ್ವಿತೀಯ 2024ರಲ್ಲಿ ಪೋಸ್ಟರ್ ಪ್ರಸ್ತುತಿಯಲ್ಲಿ ತೃತೀಯ ಸ್ಥಾನವನ್ನು ಗಳಿಸಿದ್ದಾರೆ.

ಜಿಎಂ ತಾಂತ್ರಿಕ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ. ಎಂ.ಬಿ. ಸಂಜಯ್ ಪಾಂಡೆ, ಕಂಪ್ಯೂಟರ್ ಸೈನ್ಸ್ ಇಂಜಿನಿಯರಿಂಗ್ ವಿಭಾಗದ ಮುಖ್ಯಸ್ಥರಾದ ಡಾ. ಬಿ.ಎನ್. ವೀರಪ್ಪ, ಇನ್ಫಾರ್ಮಶನ್ ಸೈನ್ಸ್ ಅಂಡ್ ಇಂಜಿನಿಯರಿಂಗ್ ವಿಭಾಗದ ಮುಖ್ಯಸ್ಥರಾದ ಡಾ. ಎಸ್. ನೀಲಾಂಬಿಕೆ, ವಿದ್ಯಾರ್ಥಿ ವ್ಯವಹಾರಗಳ ವಿಭಾಗದ ಉಪ ನಿರ್ದೇಶಕರಾದ ಎಂ. ಸಂತೋಷ ಕುಮಾರ್, ಜಿಎಂ ವಿಶ್ವವಿದ್ಯಾಲಯದ ಗಣಿತಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಕೆ.ಎಸ್. ಓಂಕಾರಪ್ಪ ಸೇರಿದಂತೆ ಆಡಳಿತ ಮಂಡಳಿ, ವಿಭಾಗದ ಮುಖ್ಯಸ್ಥರು ಮತ್ತು ಸಿಬ್ಬಂದಿಗಳು ಅಭಿನಂದಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಕ್ರೀಡೆ

ತುಮಕೂರಿನಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣಕ್ಕೆ ಭೂಮಿ ಪೂಜೆ ನೆರವೇರಿಸಿದ ಸಿಎಂ ಸಿದ್ದರಾಮಯ್ಯ

Published

on

ಸುದ್ದಿದಿನ,ತುಮಕೂರು:ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣಕ್ಕಾಗಿ ತುಮಕೂರಿನಲ್ಲಿ ಒಟ್ಟು 50 ಎಕರೆ ಜಾಗವನ್ನು ಕರ್ನಾಟಕ ಕ್ರಿಕೆಟ್ ಸಂಸ್ಥೆಗೆ ನೀಡಲಾಗಿದ್ದು ಇದು ಜಿಲ್ಲೆಯ ಆರ್ಥಿಕ ಬೆಳವಣಿಗೆ ಮತ್ತು ಅಭಿವೃದ್ಧಿಗೆ ಪೂರಕ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ತುಮಕೂರಿನ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣಕ್ಕೆ ಬ್ಯಾಟಿಂಗ್ ಮಾಡುವ ಮೂಲಕ ಚಾಲನೆ ನೀಡಿ ಮಾತನಾಡಿದ ಅವರು ಆದಷ್ಟು ಶೀಘ್ರವೇ ಕ್ರೀಡಾಂಗಣ ನಿರ್ಮಾಣ ಮುಗಿಸಿ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆ ಪೂರೈಸಲಾಗುವುದು ಎಂದು ಹೇಳಿದ್ದಾರೆ. ಮೈಸೂರಿನಲ್ಲೂ ಕ್ರೀಡಾಂಗಣ ನಿರ್ಮಾಣಕ್ಕೆ ಕರ್ನಾಟಕ ಕ್ರಿಕೆಟ್ ಸಂಸ್ಥೆ ಬೇಡಿಕೆ ಮುಂದಿಟ್ಟಿದ್ದು ಮೈಸೂರಿನಲ್ಲೂ ಜಾಗ ನೀಡಲಾಗುವುದು ಎಂದು ಸ್ಪಷ್ಟಪಡಿಸಿದ್ದಾರೆ.

ಗೃಹ ಸಚಿವ ಡಾ.ಜಿ.ಪರಮೇಶ್ವರ್ ಮಾತನಾಡಿ, ಚೆನ್ನೈ-ಮುಂಬೈ ಇಂಡಸ್ಟ್ರೀಯಲ್ ಕಾರಿಡಾರ್ ಗಾಗಿ ಆರು ಹಂತದಲ್ಲಿ 20 ಸಾವಿರ ಎಕರೆ ಸ್ವಾಧೀನ ಮಾಡಲಾಗುವುದು ಎಂದು ತಿಳಿಸಿದ್ದಾರೆ.

ವಸಂತನರಸಾಪುರದಲ್ಲಿ ಏಷ್ಯಾದಲ್ಲಿಯೇ ಅತಿ ದೊಡ್ಡ ಟೌನ್ ಶಿಪ್ ಪ್ರಾರಂಭವಾಗಿದೆ ಎಂದು ತಿಳಿಸಿದ ಅವರು, ಸ್ಥಳೀಯರಿಗೆ ಉದ್ಯೋಗ ನೀಡಬೇಕು ಎಂದು ಕೈಗಾರಿಕೆಗಳಿಗೆ ಮನವಿ ಮಾಡಲಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending