ದಿನದ ಸುದ್ದಿ
ನಾಳೆ ಡಾ. ಬಿ.ಆರ್. ಅಂಬೇಡ್ಕರ್ ಅವರ 135 ನೇ ಜನ್ಮ ದಿನಾಚರಣೆ
ಸುದ್ದಿದಿನ,ದಾವಣಗೆರೆ:ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವ ಹಿನ್ನೆಲೆಯಲ್ಲಿ, ಈ ವರ್ಷದ ಡಾ|| ಬಿ.ಆರ್. ಅಂಬೇಡ್ಕರ್ ಅವರ 135 ನೇ ಜನ್ಮ ದಿನಾಚರಣೆಯನ್ನು ಅತ್ಯಂತ ಸರಳವಾಗಿ ಆಚರಿಸಲು ಜಿಲ್ಲಾಡಳಿತ ನಿರ್ಧರಿಸಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.
ಎಪ್ರಿಲ್ 14 ರಂದು ಮಂಗಳವಾರ ಬೆಳಿಗ್ಗೆ 9:00 ಗಂಟೆಗೆ ಡಾ|| ಬಿ.ಆರ್ ಅಂಬೇಡ್ಕರ್ ವೃತ್ತದಲ್ಲಿರುವ ಅಂಬೇಡ್ಕರ್ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡಲಾಗುವುದು. ನಂತರ ಬೆಳಿಗ್ಗೆ 11:00 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿಯ “ತುಂಗಭದ್ರಾ” ಸಭಾಂಗಣದಲ್ಲಿ ಬಾಬಾಸಾಹೇಬ್ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಮೆರವಣಿಗೆ ಮಾರ್ಗ
ಬೆಳಿಗ್ಗೆ 9:00 ಗಂಟೆಗೆ ಅಂಬೇಡ್ಕರ್ ವೃತ್ತದಿಂದ ಭಾವಚಿತ್ರದ ಮೆರವಣಿಗೆ ಆರಂಭವಾಗಲಿದ್ದು, ಹೈಸ್ಕೂಲ್ ಮೈದಾನ ಮಾರ್ಗವಾಗಿ ಮಹಾನಗರ ಪಾಲಿಕೆ, ಗಾಂಧಿ ವೃತ್ತ ಹಾಗೂ ಜಯದೇವ ವೃತ್ತದ ಮೂಲಕ ಸಾಗಿ ಪುನಃ ಅಂಬೇಡ್ಕರ್ ವೃತ್ತಕ್ಕೆ ತಲುಪಲಿದೆ.
ಈ ಕಾರ್ಯಕ್ರಮದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು, ದಾವಣಗೆರೆ ತಾಲ್ಲೂಕು ಮಟ್ಟದ ಅಧಿಕಾರಿಗಳು, ದಲಿತಪರ ಸಂಘಟನೆಯ ಮುಖಂಡರು, ಪ್ರಗತಿಪರ ಚಿಂತಕರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಜಿಲ್ಲಾಧಿಕಾರಿ ಗಂಗಾಧರಸ್ವಾಮಿ ಜಿ.ಎಂ ರವರು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243