Connect with us

ಕ್ರೀಡೆ

ಮಧ್ಯಾಹ್ನದ ಟಾಪ್ ನ್ಯೂಸ್ ಹೆಡ್ ಲೈನ್ಸ್

Published

on

ಮಧ್ಯಾಹ್ನದ ಟಾಪ್ ನ್ಯೂಸ್ ಹೆಡ್ ಲೈನ್ಸ್

  1. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಬೆಳಗ್ಗೆ ಬೆಂಗಳೂರಿನ ತಮ್ಮ ನಿವಾಸದ ಬಳಿ ಜನತಾ ದರ್ಶನ ನಡೆಸಿ ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸಿದರು. ಬಳಿಕ ಜನರ ಸಮಸ್ಯೆ ಪರಿಹರಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.
  2. ರಾಜ್ಯದಲ್ಲಿ 50 ಕನಕದಾಸರ ಹಾಗೂ100 ಅಂಬೇಡ್ಕರ್ ವಸತಿ ನಿಲಯಗಳನ್ನು ನಿರ್ಮಿಸಲು ಬಜೆಟ್‌ನಲ್ಲಿ ಅನುಮೋದನೆ ನೀಡಲಾಗಿದೆ. ಅದೇ ರೀತಿ ನಾರಾಯಣಗುರು ಅವರ ಹೆಸರಿನಲ್ಲಿ ರಾಜ್ಯದ ನಾಲ್ಕು ಸ್ಥಳಗಳಲ್ಲಿ 29ಕೋಟಿ ರೂಪಾಯಿ ವೆಚ್ಚದಲ್ಲಿ ವಸತಿ ಶಾಲೆ ನಿರ್ಮಿಸಲಾಗುವುದು.
  3. ರಾಜ್ಯದ 5 ಕಡೆ ದೀನದಯಾಳ್ ಅವರ ಹೆಸರಿನಲ್ಲಿ 1 ಸಾವಿರ ವಿದ್ಯಾರ್ಥಿಗಳ ಸಾಮರ್ಥ್ಯದ ವಸತಿ ನಿಲಯಗಳನ್ನು ನಿರ್ಮಿಸಲು ಉದ್ದೇಶಿಸಲಾಗಿದೆ. ಇದಕ್ಕಾಗಿ ಬಜೆಟ್‌ನಲ್ಲಿ 250 ಕೋಟಿ ರೂಪಾಯಿ ಮೀಸಲಿಡಲಾಗಿದೆ ಎಂದು ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಖಾತೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹಾವೇರಿಯಲ್ಲಿ ಹೇಳಿದ್ದಾರೆ.
  4. ರಾಮನಗರದ ಕೆಮ್ಮಾಳೆ ಗೇಟ್ ಗ್ರಾಮದ ಬಳಿ ಕೆಎಸ್‌ಆರ್‌ಟಿಸಿ ಬಸ್ ಮತ್ತು ಕಾರಿನ ನಡುವೆ ಸಂಭವಿಸಿದ ಅಪಘಾತದಲ್ಲಿ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದು, ಮತ್ತಿಬ್ಬರಿಗೆ ಗಂಭೀರ ಗಾಯಗಳಾಗಿವೆ.
  5. ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮುಂದಿನ ಮೂರ್‍ನಾಲ್ಕು ದಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
  6. ಕೊರೊನಾ ಲಸಿಕಾ ಅಭಿಯಾನದ ಮೂಲಕ ದೇಶಾದ್ಯಂತ ಈವರೆಗೆ 190 ಕೋಟಿಗೂ ಅಧಿಕ ಲಸಿಕಾ ಡೋಸ್ ನೀಡಲಾಗಿದೆ. ನಿನ್ನೆ ಒಂದೇ ದಿನ 17 ಲಕ್ಷ 49ಸಾವಿರಕ್ಕೂ ಹೆಚ್ಚು ಡೋಸ್ ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

    ಐಪಿಎಲ್ ಟಿ-20ಕ್ರಿಕೆಟ್ ಟೂರ್ನಿಯಲ್ಲಿಂದು ಎರಡು ಪಂದ್ಯಗಳು ನಡೆಯಲಿವೆ. ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಮಧ್ಯಾಹ್ನ3.30ಕ್ಕೆ ಆರಂಭವಾಗಲಿರುವ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಮತ್ತು ರಾಜಸ್ತಾನ್ ರಾಯಲ್ಸ್ ತಂಡಗಳು ಸೆಣಸಲಿವೆ. ರಾತ್ರಿ 7.30ಕ್ಕೆ ಪುಣೆಯ ಎಂಸಿಎ ಮೈದಾನದಲ್ಲಿ ನಡೆಯಲಿರುವ ಮತ್ತೊಂದು ಪಂದ್ಯದಲ್ಲಿ ಲಖನೌ ಸೂಪರ್ ಜೈಂಟ್ಸ್ ಮತ್ತು ಕೋಲ್ಕೊತ್ತಾ ನೈಟ್ ರೈಡರ್ಸ್ ಮುಖಾಮುಖಿಯಾಗಲಿವೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ಕ್ರೀಡೆ

ಏ.10 ರಿಂದ ಬೇಸಿಗೆ ಕಬಡ್ಡಿ ತರಬೇತಿ ಶಿಬಿರ

Published

on

ಸುದ್ದಿದಿನ,ದಾವಣಗೆರೆ:ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಸೃಷ್ಟಿ ಕಬಡಿ ಅಕಾಡೆಮಿ(ರಿ), ದಾವಣಗೆರೆ ಇವರ ಸಂಯುಕ್ತಾಶ್ರಯದಲ್ಲಿ ಬೇಸಿಗೆ ಕಬಡ್ಡಿ ತರಬೇತಿ ಶಿಬಿರವನ್ನು ದಾವಣಗೆರೆ ಜಿಲ್ಲಾ ಕ್ರೀಡಾಂಗಣದಲ್ಲಿ ಏಪ್ರಿಲ್ 10 ರಿಂದ 30 ರವರೆಗೆ ಬೆಳಿಗ್ಗೆ 6.30 ರಿಂದ 8 ಗಂಟೆಯ ವರೆಗೆ ಹಾಗೂ ಸಾಯಂಕಾಲ ಸಂಜೆ 5 ರಿಂದ 6.30 ರ ವರೆಗೆ ಆಯೋಜಿಸಲಾಗಿದೆ.

ಆಸಕ್ತ ಶಾಲಾ ಕಾಲೇಜು ವಿದ್ಯಾರ್ಥಿ ವಿದ್ಯಾರ್ಥಿನಿಯರು ಬೇಸಿಗೆ ಕಬಡ್ಡಿ ತರಬೇತಿ ಶಿಬಿರದ ಸದುಪಯೋಗವನ್ನು ಪಡೆದುಕೊಳ್ಳಬಹುದು. ಹೆಚ್ಚಿನ ವಿವರಗಳಿಗೆ ಇಲಾಖೆಯ ತರಬೇತುದಾರರಾದ ಶ್ರೀಶೈಲ ಎಸ್-ಮೊ.ನಂ: 9448667255 ಹಾಗೂ ನೂರುಲ್ಲ ಮೊ.ನಂ: 9740107364, ಶಿವಯೋಗಿ ಮೊ.ನಂ: 9019619900, ರಾಕೇಶ್ ಮೊನಂ:9448835907 ಇವರನ್ನು ಸಂಪರ್ಕಿಸಲು ಇಲಾಖೆಯ ಸಹಾಯಕ ನಿರ್ದೇಶಕರಾದ ರೇಣುಕಾದೇವಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಕ್ರೀಡೆ

ಬೇಸಿಗೆ ವಾಲಿಬಾಲ್ ತರಬೇತಿ

Published

on

ಸುದ್ದಿದಿನ,ದಾವಣಗೆರೆ:ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಸಿಟಿ ಸ್ಟಾರ್ ವಾಲಿಬಾಲ್ ಕ್ಲಬ್, ಫ್ರೆಂಡ್ಸ್ ಸ್ಪೋಟ್ಸ್ ಕ್ಲಬ್ ಹಾಗೂ ಗೋಲ್ಡನ್ ಈಗಲ್ ಕ್ಲಬ್ ಇವರ ಸಂಯುಕ್ತಾಶ್ರಯದಲ್ಲಿ ಏಪ್ರಿಲ್ 25 ರವರೆಗೆ ಜಿಲ್ಲಾ ಕ್ರೀಡಾಂಗಣದಲ್ಲಿ ಬೇಸಿಗೆ ವಾಲಿಬಾಲ್ ತರಬೇತಿ ಶಿಬಿರವನ್ನು ಬೆಳಿಗ್ಗೆ 5 ರಿಂದ 7 ಗಂಟೆಯವರೆಗೆ ಹಾಗೂ ಸಂಜೆ 5 ರಿಂದ 6.30 ರವರೆಗೆ ಆಯೋಜಿಸಲಾಗಿದೆ.

ಶಾಲಾ ಕಾಲೇಜು ವಿದ್ಯಾರ್ಥಿ, ವಿದ್ಯಾರ್ಥಿನಿಯರು ಬೇಸಿಗೆ ವಾಲಿಬಾಲ್ ತರಬೇತಿ ಶಿಬಿರದ ಸದುಪಯೋಗವನ್ನು ಪಡೆದುಕೊಳ್ಳಬಹುದು. ಹೆಚ್ಚಿನ ವಿವರಗಳಿಗೆ ಇಲಾಖೆಯ ತರಬೇತುದಾರರಾದ ಎಂ.ಎಸ್. ಜಮಾ ಅಹಮ್ಮದ್-ಮೊ.ನಂ: 9141091590, ದರ್ಶನ್ ಮೊ.ನಂ: 8147842647 ಇವರನ್ನು ಸಂಪರ್ಕಿಸಲು ಇಲಾಖೆಯ ಸಹಾಯಕ ನಿರ್ದೇಶಕರಾದ ರೇಣುಕಾದೇವಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಕ್ರೀಡೆ

ದಾವಣಗೆರೆ | ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿ ರಾಘವೇಂದ್ರ ಎನ್ ಬಿ ದೇಹದಾರ್ಢ್ಯ ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆದ್ದು ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ

Published

on

ಸುದ್ದಿದಿನ,ದಾವಣಗೆರೆ:ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ ದಾವಣಗೆರೆ ವಿಶ್ವವಿದ್ಯಾಲಯದ ಮಟ್ಟದ ದೇಹದಾರ್ಢ್ಯ ಸ್ಪರ್ಧೆಯಲ್ಲಿ 90ಕೆಜಿ ವಿಭಾಗದಲ್ಲಿ ರಾಘವೇಂದ್ರ ಚಿನ್ನದ ಪದಕ ಗೆಲ್ಲುವ ಮೂಲಕ ರಾಷ್ಟ್ರೀಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ..

ದಾವಣಗೆರೆ ನಗರದ ಜಿಎಫ್ ಜಿಸಿ ಕಾಲೇಜಿನಲ್ಲಿ ದಾವಣಗೆರೆ ವಿಶ್ವವಿದ್ಯಾಲಯ ಹಾಗೂ ದೈಹಿಕ ಶಿಕ್ಷಣ ನಿರ್ದೇಶಕರ ಸಂಘದಿಂದ ದೇಹದಾರ್ಢ್ಯ ಸ್ಪರ್ಧೆ ಹಾಗೂ ಆಯ್ಕೆ ಗಳು ನಡೆದವು, ಕಾಲೇಜಿನಲ್ಲಿ ಪ್ರಥಮ ಬಿಎ ವ್ಯಾಸಂಗ ಮಾಡುತ್ತಿರುವ ರಾಘವೇಂದ್ರ, ಹಳೇ ಕುಂದುವಾಡದ ಬಸವರಾಜ್, ಲಕ್ಷ್ಮಿದೇವಿ ದಂಪತಿಯ ಪುತ್ರನಾಗಿದ್ದು, ಸ್ಪರ್ಧೆಯಲ್ಲಿ 90ಕೆಜಿ ವಿಭಾಗದಲ್ಲಿ ದೇಹ ಪ್ರದರ್ಶಿಸಿ ಚಿನ್ನದ ಪದಕಕ್ಕೆ ಮುತ್ತಿಟ್ಟಿದ್ದಾನೆ.

ಓದಿನ ಜೊತೆಗೆ ತನ್ನ ತಂದೆಯ ಕಿರಾಣಿ ಅಂಗಡಿಯಲ್ಲಿ ಕೆಲಸ ಮಾಡುತ್ತಾ ತನ್ನ ಕನಸನ್ನು ನನಸು ಮಾಡಿಕೊಳ್ಳಲು ಬಿಡುವಿನ‌ ವೇಳೆಯಲ್ಲಿ ಕೋಚ್ ಮಧು ಪೂಜಾರ್ ಮಾರ್ಗದರ್ಶನದಲ್ಲಿ ದೇಹ ಹುರಿಗೊಳಿಸಿ ಸ್ಪರ್ಧೆಯಲ್ಲಿ ಭಾಗವಹಿಸಿ ಚಿನ್ನದ ಪದಕ ಗಳಿಸಿದ್ದಾನೆ, ಸ್ಪರ್ಧೆಯಲ್ಲಿ ಬೈಸಿಪ್ಸ್, ಲ್ಯಾಟ್ ಸ್ಟ್ರೈಡ್ ಪೋಸ್ ಕೊಟ್ಟು ನೋಡುಗರನ್ನು, ತೀರ್ಪುಗಾರರನ್ನು ಬೆರಗುಗೊಳಿಸಿದ್ದಾನೆ.

ಇನ್ನೂ ರಾಘವೇಂದ್ರನ ದೇಹ ಪ್ರದರ್ಶನ ವೇಳೆ ಶಿಳ್ಳೆ, ಚಪ್ಪಾಳೆ ಕೇಳಿ ಬಂದವು, ರಾಘವೇಂದ್ರ ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆಯಾಗಿದ್ದು ಬರುವ ಫೆಬ್ರುವರಿಯಲ್ಲಿ ಮಂಗಳೂರಿನಲ್ಲಿ ಸ್ಪರ್ಧೆ ನಡೆಯಲಿದೆ, ಇನ್ನೂ ಚಿನ್ನದ ಪದಕ ಗಳಿಸಿರುವ ರಾಘವೇಂದ್ರನಿಗೆ ಜಿಎಫ್ ಜಿಸಿ ಕಾಲೇಜು ಆಡಳಿತ ಮಂಡಳಿ, ಮಾರ್ಗದರ್ಶಕರು, ಹಳೇ ಕುಂದುವಾಡ ಗ್ರಾಮಸ್ಥರು ಅಭಿನಂದನೆ ಸಲ್ಲಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending