ಕ್ರೀಡೆ
ಮಧ್ಯಾಹ್ನದ ಟಾಪ್ ನ್ಯೂಸ್ ಹೆಡ್ ಲೈನ್ಸ್
ಮಧ್ಯಾಹ್ನದ ಟಾಪ್ ನ್ಯೂಸ್ ಹೆಡ್ ಲೈನ್ಸ್
- ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಬೆಳಗ್ಗೆ ಬೆಂಗಳೂರಿನ ತಮ್ಮ ನಿವಾಸದ ಬಳಿ ಜನತಾ ದರ್ಶನ ನಡೆಸಿ ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸಿದರು. ಬಳಿಕ ಜನರ ಸಮಸ್ಯೆ ಪರಿಹರಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.
- ರಾಜ್ಯದಲ್ಲಿ 50 ಕನಕದಾಸರ ಹಾಗೂ100 ಅಂಬೇಡ್ಕರ್ ವಸತಿ ನಿಲಯಗಳನ್ನು ನಿರ್ಮಿಸಲು ಬಜೆಟ್‌ನಲ್ಲಿ ಅನುಮೋದನೆ ನೀಡಲಾಗಿದೆ. ಅದೇ ರೀತಿ ನಾರಾಯಣಗುರು ಅವರ ಹೆಸರಿನಲ್ಲಿ ರಾಜ್ಯದ ನಾಲ್ಕು ಸ್ಥಳಗಳಲ್ಲಿ 29ಕೋಟಿ ರೂಪಾಯಿ ವೆಚ್ಚದಲ್ಲಿ ವಸತಿ ಶಾಲೆ ನಿರ್ಮಿಸಲಾಗುವುದು.
- ರಾಜ್ಯದ 5 ಕಡೆ ದೀನದಯಾಳ್ ಅವರ ಹೆಸರಿನಲ್ಲಿ 1 ಸಾವಿರ ವಿದ್ಯಾರ್ಥಿಗಳ ಸಾಮರ್ಥ್ಯದ ವಸತಿ ನಿಲಯಗಳನ್ನು ನಿರ್ಮಿಸಲು ಉದ್ದೇಶಿಸಲಾಗಿದೆ. ಇದಕ್ಕಾಗಿ ಬಜೆಟ್‌ನಲ್ಲಿ 250 ಕೋಟಿ ರೂಪಾಯಿ ಮೀಸಲಿಡಲಾಗಿದೆ ಎಂದು ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಖಾತೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹಾವೇರಿಯಲ್ಲಿ ಹೇಳಿದ್ದಾರೆ.
- ರಾಮನಗರದ ಕೆಮ್ಮಾಳೆ ಗೇಟ್ ಗ್ರಾಮದ ಬಳಿ ಕೆಎಸ್‌ಆರ್‌ಟಿಸಿ ಬಸ್ ಮತ್ತು ಕಾರಿನ ನಡುವೆ ಸಂಭವಿಸಿದ ಅಪಘಾತದಲ್ಲಿ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದು, ಮತ್ತಿಬ್ಬರಿಗೆ ಗಂಭೀರ ಗಾಯಗಳಾಗಿವೆ.
- ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮುಂದಿನ ಮೂರ್‍ನಾಲ್ಕು ದಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
- ಕೊರೊನಾ ಲಸಿಕಾ ಅಭಿಯಾನದ ಮೂಲಕ ದೇಶಾದ್ಯಂತ ಈವರೆಗೆ 190 ಕೋಟಿಗೂ ಅಧಿಕ ಲಸಿಕಾ ಡೋಸ್ ನೀಡಲಾಗಿದೆ. ನಿನ್ನೆ ಒಂದೇ ದಿನ 17 ಲಕ್ಷ 49ಸಾವಿರಕ್ಕೂ ಹೆಚ್ಚು ಡೋಸ್ ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.
ಐಪಿಎಲ್ ಟಿ-20ಕ್ರಿಕೆಟ್ ಟೂರ್ನಿಯಲ್ಲಿಂದು ಎರಡು ಪಂದ್ಯಗಳು ನಡೆಯಲಿವೆ. ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಮಧ್ಯಾಹ್ನ3.30ಕ್ಕೆ ಆರಂಭವಾಗಲಿರುವ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಮತ್ತು ರಾಜಸ್ತಾನ್ ರಾಯಲ್ಸ್ ತಂಡಗಳು ಸೆಣಸಲಿವೆ. ರಾತ್ರಿ 7.30ಕ್ಕೆ ಪುಣೆಯ ಎಂಸಿಎ ಮೈದಾನದಲ್ಲಿ ನಡೆಯಲಿರುವ ಮತ್ತೊಂದು ಪಂದ್ಯದಲ್ಲಿ ಲಖನೌ ಸೂಪರ್ ಜೈಂಟ್ಸ್ ಮತ್ತು ಕೋಲ್ಕೊತ್ತಾ ನೈಟ್ ರೈಡರ್ಸ್ ಮುಖಾಮುಖಿಯಾಗಲಿವೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243