ದಿನದ ಸುದ್ದಿ

ಟೊಯೋಟಾ ಕಾರ್ಖಾನೆ ಕಾರ್ಮಿಕರ ಮುಷ್ಕರ : ಅಹವಾಲು ಆಲಿಸಿದ ಸಿದ್ದರಾಮಯ್ಯ

Published

on

ಸುದ್ದಿದಿನ, ಬೆಂಗಳೂರು : ತಮ್ಮ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಳೆದ 80 ದಿನಗಳಿಂದ ಮುಷ್ಕರ ನಡೆಸುತ್ತಿರುವ ಟೊಯೊಟ ಕಾರ್ಖಾನೆಯ ಬಿಡದಿ ಘಟಕದ ಕಾರ್ಮಿಕರು, ಮತ್ತವರ ಕುಟುಂಬದವರನ್ನು ಭಾನುವಾರ ಭೇಟಿ ನೀಡಿ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಹವಾಲು ಆಲಿಸಿದರು.

ನಂತರ ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್ ಅವರಿಗೆ ಕರೆಮಾಡಿ ಮಾತನಾಡಿದ ಅವರು, ಆದಷ್ಟು ಶೀಘ್ರ ಆಡಳಿತ ಮಂಡಳಿ ಹಾಗೂ ಕಾರ್ಮಿಕ ನಾಯಕರ ಸಭೆ ಕರೆದು ಸಮಸ್ಯೆ ಬಗೆಹರಿಸುವಂತೆ ತಿಳಿಸಿದರು.

ಈ ಸಂದರ್ಭದಲ್ಲಿ ಶಾಸಕರಾದ ರವಿ, ಸಿ.ಎಂ. ಲಿಂಗಪ್ಪ, ಮಾಜಿ ಶಾಸಕರಾದ ಮಾಗಡಿ ಬಾಲಕೃಷ್ಣ ಸೇರಿದಂತೆ ಹಲವು ನಾಯಕರು ಜೊತೆಗಿದ್ದರು.

 

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version