ದಿನದ ಸುದ್ದಿ

ಘೋರ ರೈಲು ದುರಂತದಲ್ಲಿ ಸುಮಾರು 60ಕ್ಕೂ ಹೆಚ್ಚು ಮಂದಿ ಸಾವು !

Published

on

ಸುದ್ದಿದಿನ ಡೆಸ್ಕ್: ಪಂಜಾಬಿನ ಅಮೃತಸರದಲ್ಲಿ ದಸರಾ ಮಹೋತ್ಸವದ ವೇಳೆ ಘೋರ ರೈಲು ದುರಂತ ಸಂಭವಿಸಿದ್ದು, ಸುಮಾರು 60ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ.

ದಸರಾ ಹಬ್ಬದ ಪ್ರಯುಕ್ತ ಬನ್ನಿ ಪೂಜೆಯ ನಂತರ ರಾವಣನ ಪ್ರತಿಕೃತಿ ದಹಿಸುತ್ತದ್ದ ವೇಳೆ ಅಪಾರ ಪ್ರಮಾಣದ ಪಟಾಕಿ ಸಿಡಿಸಿದ ಕಾರಣ ಅಮೃತಸರದ ಜೋಧಾಪಾಟಕ ರೈಲ್ವೆ ಮಾರ್ಗದಲ್ಲಿ ನಿಂತಿದ್ದ ಭಕ್ತರ ಮೇಲೆ ರೈಲು ಹರಿದಿದೆ. ಈ ದುರಂತದಲ್ಲಿ ಸುಮಾರು 60 ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ. ನೂರಕ್ಕೂ ಹೆಚ್ಚು ಮಂದಿಗೆ ಗಂಭೀರವಾಗಿ ಗಾಯಗಳಾಗಿವೆ.

ಈ ಕಾರ್ಯಕ್ರಮಕ್ಕೆ ಅಧಿಕೃತವಾಗಿ ಪರವಾನಗಿ , ಪೂರ್ವ ಯೋಜನೆ, ತಯಾರಿ ಯಾವುದೇ ರೀತಿಯ ಮುಂಜಾಗ್ರತಾ ಕ್ರಮ ತೆಗೆದುಕೊಂಡಿರಲಿಲ್ಲ ಎಂದು ತಿಳಿದು ಬಂದಿದೆ. ಈ ಕಾರ್ಯಕ್ರಮಕ್ಕೆ ಪಂಜಾಬ್‌ನ ಸಚಿವ ನವಜೋತ್ ಸಿಂಗ್ ಸಿದ್ದು ಇವರ ಧರ್ಮಪತ್ನಿ ಅವರನ್ನು ಮುಖ್ಯ ಅತಿಥಿಯನ್ನಾಗಿ ಆಹ್ವಾನಿಸಲಾಗಿತ್ತು. ಈ ದುರಂತದಲ್ಲಿ ಮೃತಪಟ್ಟವರಿಗೆ ಅಲ್ಲಿನ ಸರ್ಕಾರ ತಲಾ 5 ಲಕ್ಷ ರೂಪಾಯಿಗಳನ್ನು ಪರಿಹಾರ ಘೋಷಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9986715401

Trending

Exit mobile version