ದಿನದ ಸುದ್ದಿ
ಮೆದಿಕೇರನಹಳ್ಳಿಯಲ್ಲಿದೆ ರೈಲು ಶಾಲೆ ; ಸ್ವಂತ ಖರ್ಚಿನಲ್ಲಿ ವಿದ್ಯಾಸಿರಿ ಎಕ್ಸ್‌ಪ್ರೆಸ್ ನಿರ್ಮಿಸಿದ ಶಿಕ್ಷಕರು, ಹಳೇ ವಿದ್ಯಾರ್ಥಿಗಳು..!
ಸುದ್ದಿದಿನ ವಿಶೇಷ: ಭಾರತದ ಸಂಸ್ಕೃತಿಯಲ್ಲಿ ಶಿಕ್ಷಣವನ್ನು ಎಂದೂ ಲಾಭ–ದಾಯಕ ಉದ್ದಿಮೆಯನ್ನಾಗಿ ಪರಿಗಣಿಸಿದ್ದ ಉದಾ–ಹರಣೆಗಳಿಲ್ಲ. ಹಲವು ಜನೋಪಕಾರಿ ಸಂಘ ಸಂಸ್ಥೆಗಳು, ಮಠಮಾನ್ಯಗಳು ಶಿಕ್ಷಣವನ್ನು ಒಂದು ಸಾಮಾಜಿಕ ಒಳಿತೆಂದು ಭಾವಿಸಿ ಶಾಲಾ ಕಾಲೇಜುಗಳನ್ನು ತೆರೆದು ಶಿಕ್ಷಣ ನೀಡಿದ ಉದಾಹರಣೆಗಳು ನಮ್ಮಲ್ಲಿ ಹೇರಳ. ನಮ್ಮ ಸಂಪ್ರದಾಯದಲ್ಲಿ ಶಿಕ್ಷಣ ಎಲ್ಲ ದಾನಗಳಿಗಿಂತ ಶ್ರೇಷ್ಠವಾದ ದಾನ.
ಆದರೆ, ಇಂದು ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಶಿಕ್ಷಣದ ಖಾಸಗೀಕರಣ ಮತ್ತು ವ್ಯಾಪರೀಕರಣ ಜನ ಸಾಮಾನ್ಯರಲ್ಲಿ ಹೆಚ್ಚಿನ ಆತಂಕವನ್ನು ಉಂಟು ಮಾಡಿದೆ. ಶಿಕ್ಷಣವನ್ನು ಒಂದು ಲಾಭದ ಉದ್ದಿಮೆಯನ್ನಾಗಿ ಮಾಡಿಕೊಂಡಿರುವ ಹಲವು ಜನರು ಶಿಕ್ಷಣದ ಖಾಸಗೀಕರಣ ಮತ್ತು ವ್ಯಾಪಾರೀಕರಣದ ಪರ–ವಾಗಿದ್ದಾರೆ. ಲಾಭದ ಲೆಕ್ಕಾಚಾರವನ್ನೇ ಪ್ರಧಾನವಾಗಿ ಪರಿಗಣಿ–ಸುವ ಅವರಿಗೆ ಶಿಕ್ಷಣ ಒಂದು ವ್ಯಾಪಾರದ ವಸ್ತು ಮತ್ತು ತಂದೆ-ತಾಯಿ ಹಾಗೂ ಮಕ್ಕಳು ಗ್ರಾಹಕರು. ಶಿಕ್ಷಕರೇ ಅವರ ಸೇಲ್ಸ್ ಮ್ಯಾನ್‌ಗಳು. ಅವರ ಮೇಲೊಬ್ಬ ಸಿಇಒ. ಇದು ಆಧುನಿಕ ಶಿಕ್ಷಣ ವ್ಯಾಪಾರ ಮಳಿಗೆಯ ಸಂರಚನೆ.
ಇಷ್ಟೆಲ್ಲಾ ಯಾಕೆ ಹೇಳ ಬೇಕಾಯ್ತು ಎಂದರೆ,ಬಹುತೇಕ ಸರ್ಕಾರಿ ಕನ್ನಡ ಶಾಲೆಗಳು ಕೊನೆ ಉಸಿರೆಳೆಯುತ್ತಿವೆ. ವಿದ್ಯಾರ್ಥಿಗಳಿಲ್ಲದೆ ಶಾಲೆಗಳು ಬಣಗುಡುತ್ತಿವೆ. ಒಂದು ಕಾಲದಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಿದ್ದರ ಪರಿಣಾಮ ತರಗತಿಗಳನ್ನು ಎ ಸೆಕ್ಷನ್ , ಬಿ ಸೆಕ್ಷನ್ ವಿಭಾಗಗಳಾಗಿ ಮಾಡಿ ಬೋಧಿಸಲಾಗುತ್ತಿತ್ತು. ಈಗ ಅದು ಕನಸಿನ ಮಾತು ಎಂದರೆ ತಪ್ಪಾಗಲಾರದು. ಆದರೂ ನಾವು ನಿರಾಶಾವಾದಿಗಳಾಗ ಬೇಕಿಲ್ಲ. ಏಕೆಂದರೆ ಅಂತಹದೊಂದು ಉದಾಹರಣೆಗೆ ಕಾರಣವಾಗಿದೆ ಈ ಶಾಲೆ. ಈ ಸ್ಟೋರಿ ನೋಡಿ.
ಅದು ಸುಮಾರು ಸಾವಿರ ಜನಸಂಖ್ಯೆ ಇರುವ, ಇದುವರೆಗೂ ಸಾರಿಗೆ ಸಂಪರ್ಕವಿರದ ಒಂದು ಪುಟ್ಟ ಗ್ರಾಮ. ಅಲ್ಲಿರುವ ಸರ್ಕಾರಿ ಶಾಲೆ, ಹಾಗೂ ಅಲ್ಲಿನ ಶಿಕ್ಷಕರಿಗೆ ಪ್ರಸಂಶೆಯ ಮಾತುಗಳು ಕೇಳಿ ಬರುತ್ತಿವೆ. ಅದು ಯಾವ ಊರು ಅನ್ನೋ ಕುತೂಹಲ ನಿಮ್ಮಲ್ಲೀಗ ಇಮ್ಮಡಿಸಿರ ಬಹುದು. ಅದು ದಾವಣಗೆರೆ ಜಿಲ್ಲೆಯ, ಜಗಳೂರು ತಾಲೂಕಿನ ಮೆದಿಕೇರನಹಳ್ಳಿ.
ಈ ಹಳ್ಳಿಯ ಸರ್ಕಾರಿ ಪ್ರೌಢ ಶಾಲೆಗೆ ಮುಖ್ಯೋಪಾಧ್ಯಾಯರಾದ ಅರುಣ್ ಕುಮಾರ್ ಹೆಚ್.ಎನ್. ಅವರು ವರ್ಗವಾಗಿ ಬಂದ ಕೇವಲ ಒಂದೂವರೆ ತಿಂಗಳಿನಲ್ಲಿ ಶಾಲೆಗೆ ಹೊಸರೂಪ ಕೊಟ್ಟು ಗಮನ ಸೆಳೆದಿದ್ದಾರೆ. ತನ್ನ ಸ್ವಂತ ಖರ್ಚಿನಲ್ಲಿ
ಶಾಲೆಗೆ ರೈಲಿನಾಕಾರಾದ ಚಿತ್ತಾರದ ರಂಗು ಮೂಡಿಸಿ ‘ರೈಲು ಶಾಲೆ’ಯಾಗಿ ಪರಿವರ್ತಿಸಿ ಬಿಟ್ಟಿದ್ದಾರೆ. ಶಾಲೆಗೆ ‘ರೈಲು’ ಆಕಾರ ಕೊಡಿಸುವುದರ ಮೂಲಕ ಶಿಕ್ಷಕರ, ವಿದ್ಯಾರ್ಥಿಗಳ, ಗ್ರಾಮದ ಜನತೆಯ ಮನ ಗೆದ್ದಿದ್ದಾರೆ.
2006 ರಲ್ಲಿ ಆರಂಭವಾದ ಈ ಶಾಲೆ ಹಲವು ಕೊರತೆಗಳಿಂದ ಕೂಡಿತ್ತು. ಈ ಹಿಂದೆ ಬಂದ ಮುಖ್ಯೋಪಾಧ್ಯಾಯರು ಸರ್ಕಾರ ಸಹಾಯದಿಂದ ಶಾಲೆಯನ್ನು ಒಂದು ಮಟ್ಟಿಗೆ ನಡೆಸಿಕೊಂಡು ಬಂದಿದ್ದರು. ಆದರೆ ಈಗಿರುವ ಮುಖ್ಯೋಪಾಧ್ಯಾಯರು ಅವರೇ ಹೇಳುವಂತೆ ‘ನಾನು ಕಾರ್ಯನಿರ್ವಹಿಸುವ ಶಾಲೆಯನ್ನು ಮಾದರಿ ಶಾಲೆಯನ್ನಾಗಿ ಮಾಡುವುದು ನನ್ನ ಗುರಿಯೂ ಹೌದು, ಕನಸೂ ಹೌದು’ ಎನ್ನುತ್ತಾರೆ.
ಅದರಂತೆಯೇ ಈಗಿನ ಶಾಲೆಗೆ ರೈಲು ಆಕಾರದ ಚಿತ್ತಾರ ಕೊಡಿಸುವುದರ ಮೂಲಕ, ಅದಕ್ಕೆ ವಿದ್ಯಾಸಿರಿ ಎಕ್ಸ್‌ಪ್ರೆಸ್ ಎಂದು ನಾಮಕರಣ ಮಾಡಿದ್ದಾರೆ. ಸಹ ಶಿಕ್ಷಕರೂ ಕೂಡ ಇವರ ಉತ್ಸಾಹ ಕಂಡು ಬೆರೆಗಾಗಿ ಸಾಥ್ ನೀಡುತ್ತಿದ್ದಾರೆ.
ಸಹ ಶಿಕ್ಷಕರ ಸಾಥ್
ಅಂದ ಹಾಗೆ ಶಾಲೆಯ ಸಹ ಶಿಕ್ಷಕರು ಈ ಕ್ರಿಯಾಶೀಲ ಯೋಜನೆಗೆ ಸಾಥ್ ನೀಡಿದ್ದು, ಮುಖ್ಯ ಶಿಕ್ಷಕರಿಗೆಂದೇ ಒಂದು ಪ್ರತ್ಯೇಕ ಕೊಠಡಿ ರೂಪಿಸಿ ಪ್ರೋತ್ಸಾಹ ನೀಡಿದ್ದಾರೆ. ಕರೊನಾ ಸಂಕಷ್ಟದ ಕಾಲದಲ್ಲಿ ನಾವು ಸಮಯವನ್ನು ಹಾಳು ಮಾಡದೆ ಅಭಿವೃದ್ಧಿ ಕೆಲಸಗಳ ಉಸ್ತುವಾರಿ ವಹಿಸಿಕೊಂಡು ಕೆಲಸ ಮಾಡುತ್ತಿದ್ದೇವೆ ಎನ್ನುತ್ತಾರೆ ಕನ್ನಡ ಶಿಕ್ಷಕ ವಿಜಯ್ ಕುಮಾರ್.
ಶಿಕ್ಷಕರ ಈ ಕಾರ್ಯ ಗಮನಿಸಿದ ಶಾಲೆಯ ಹಳೇ ವಿದ್ಯಾರ್ಥಿಗಳು ಸ್ವಯಂ ಪ್ರೇರಿತರಾಗಿ ಅಭಿವೃದ್ಧಿಗೆ ಕೈ ಜೋಡಿಸಿದ್ದಾರೆ. ಶಾಲಾ ಕೊಠಡಿಗಳ ದುರಸ್ತಿಗೆ ಹಣ ಹಾಕಿ ಸ್ವತಃ ಅವರೇ ಮುಂದೆ ನಿಂತು ಕೆಲಸ ಮಾಡಿಸುತ್ತಿದ್ದಾರೆ. ಜೊತೆಗೆ ಎಸ್ ಡಿಎಂಸಿ ಅಧ್ಯಕ್ಷರು, ಸದಸ್ಯರು ಹಾಗೂ ಗ್ರಾಮಸ್ಥರು ಈ ಕಾರ್ಯಕ್ಕೆ ಸೈ ಎಂದಿದ್ದಾರೆ.
ಆಟ, ಪಾಠದಲ್ಲಿ ಮುಂದು
ಇಲ್ಲಿನ ವಿದ್ಯಾರ್ಥಿಗಳು ಆಟ, ಪಾಠದಲ್ಲಿ ಕೂಡ ಮುಂದೆ ಇದ್ದಾರೆ. ಎಸ್ ಎಸ್ ಎಲ್ ಸಿ ಯಲ್ಲಿ ಐದು ಬಾರಿ ಶೇ.100ರಷ್ಟು ಫಲಿತಾಂಶ ಸಾಧಿಸಿದ್ದಾರೆ. ಇದಕ್ಕೆ ಪೂರಕವಾಗಿ ಶಾಲೆ ವಾತಾವರಣ ಇದ್ದು, ಖಾಸಗಿ ಶಾಲೆಗಳಿಗೂ ಕೂಡ ಮಾದರಿಯಾಗಿದೆ ಎಂದರೆ ತಪ್ಪಾಗಲಾರದು.
ವಿಡಿಯೋ ನೋಡಿ
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದಾವಣಗೆರೆ | ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ
ಸುದ್ದಿದಿನ,ದಾವಣಗೆರೆ: ದಾವಣಗೆರೆ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ ಆಧುನಿಕ ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ ಜೂನ್ 15 ಮತ್ತು 16 ರಂದು ಆಯೋಜಿಸಲಾಗಿದೆ.
ಆಸಕ್ತ ರೈತರು ಆಧಾರ್ ಕಾರ್ಡ್ ಜೆರಾಕ್ಸ್, 2 ಪಾಸ್ ಪೋರ್ಟ್ ಸೈಜ್ ಪೋಟೋ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರು ಜಾತಿ ಪ್ರಮಾಣ ಪತ್ರದ ಜೆರಾಕ್ಸ್ ಪ್ರತಿಯೊಂದಿಗೆ ಹಾಜರಾಗಬೇಕು. ತರಬೇತಿ ಕಾರ್ಯಕ್ರಮಕ್ಕೆ ಯಾವುದೇ ಪ್ರೋತ್ಸಾಹಧನ ಮತ್ತು ಭತ್ಯೆಗಳನ್ನು ನೀಡಲಾಗುವುದಿಲ್ಲ.
ಹೆಚ್ಚಿನ ಮಾಹಿತಿಗಾಗಿ ಪಶುಪಾಲನಾ ಮತ್ತು ಪಶು ವೈದ್ಯಕೀಯ ತರಬೇತಿ ಕೇಂದ್ರ, ದಾವಣಗೆರೆ ಕಚೇರಿ ದೂ.ಸಂ: 08192-233787 ಸಂಪರ್ಕಿಸಿ ಮಾಹಿತಿ ಪಡೆದುಕೊಳ್ಳಬಹುದು ಎಂದು ಪಶುವೈದ್ಯಾಧಿಕಾರಿಗಳು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ವಸತಿ ಯೋಜನೆಗೆ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ: ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ದಿ ನಿಗಮದ ವಸತಿ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದೆ.ಅರ್ಜಿ ಸಲ್ಲಿಸಲು ಜೂನ್ 12 ಕೊನೆಯ ದಿನವಾಗಿರುತ್ತದೆ.
ಈ ಯೋಜನೆಯಡಿ ಸೌಲಭ್ಯ ಒದಗಿಸಲು ನಿಗಧಿತ ಅರ್ಜಿ ನಮೂನೆಯಲ್ಲಿ ಅವಶ್ಯಕ ದಾಖಲಾತಿ ಹಾಗೂ ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು ಗ್ರೇಡ್-1ರವರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಚನ್ನಗಿರಿ ಕಚೇರಿಯನ್ನು ಸಂಪರ್ಕಿಸಬಹುದೆಂದು ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
10 ಮುಖ್ಯ ಅಂಶಗಳನ್ನು ಪಾಲಿಸಿ ; ಸಕ್ಕರೆ ಕಾಯಿಲೆಗೆ ಗುಡ್ ಬೈ ಹೇಳಿ..
1. ಸಮತೋಲಿತ ಆಹಾರ (Balanced Diet): ನಿಮ್ಮ ಆಹಾರದಲ್ಲಿ ಹೆಚ್ಚು ನಾರಿನಂಶವಿರುವ (fiber) ತರಕಾರಿ, ಸೊಪ್ಪು, ಮೊಳಕೆ ಬರಿಸಿದ ಕಾಳುಗಳು ಮತ್ತು ಸಿರಿಧಾನ್ಯಗಳನ್ನು ಬಳಸಿ. ಕಾರ್ಬೋಹೈಡ್ರೇಟ್ ಹಾಗೂ ಎಣ್ಣೆಯಂಶವಿರುವ ಆಹಾರವನ್ನು ಕಡಿಮೆ ಮಾಡಿ.
2. ಸಿಹಿ ಪದಾರ್ಥಗಳ ನಿಯಂತ್ರಣ (Avoid Sweets): ಸಕ್ಕರೆ, ಬೆಲ್ಲ, ಬೇಕರಿ ತಿಂಡಿಗಳು, ಐಸ್‌ಕ್ರೀಮ್ ಮತ್ತು ಕೃತಕ ಸಕ್ಕರೆ ಇರುವ ತಂಪು ಪಾನೀಯಗಳ ಬಳಕೆಯನ್ನು ಸಂಪೂರ್ಣವಾಗಿ ಕಡಿಮೆ ಮಾಡಿ ಅಥವಾ ದೂರವಿಡಿ.
3. ದಿನನಿತ್ಯದ ವ್ಯಾಯಾಮ (Regular Exercise): ಪ್ರತಿದಿನ ಕನಿಷ್ಠ 30 ರಿಂದ 45 ನಿಮಿಷಗಳ ಕಾಲ ವೇಗದ ನಡಿಗೆ (brisk walking), ಸೈಕ್ಲಿಂಗ್, ಈಜು ಅಥವಾ ಯೋಗ ಮಾಡುವುದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟ ನಿಯಂತ್ರಣಕ್ಕೆ ಬರುತ್ತದೆ.
4. ದೇಹದ ತೂಕದ ನಿರ್ವಹಣೆ (Weight Management): ಅತಿಯಾದ ದೇಹದ ತೂಕವು ಇನ್ಸುಲಿನ್ ಕಾರ್ಯಕ್ಷಮತೆಯನ್ನು ಕುಂಠಿತಗೊಳಿಸುತ್ತದೆ. ಆದ್ದರಿಂದ ತೂಕವನ್ನು ಆರೋಗ್ಯಕರ ಮಿತಿಯಲ್ಲಿ ಇಟ್ಟುಕೊಳ್ಳುವುದು ಅತ್ಯಗತ್ಯ.
5. ನಿಯಮಿತ ರಕ್ತದ ಪರೀಕ್ಷೆ (Regular Blood Sugar Check): ವೈದ್ಯರ ಸಲಹೆಯಂತೆ ಕಾಲಕಾಲಕ್ಕೆ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು (Fasting ಮತ್ತು Post Prandial) ಹಾಗೂ ಮೂರು ತಿಂಗಳ ಸರಾಸರಿ ತಿಳಿಸುವ HbA1c ಪರೀಕ್ಷೆಯನ್ನು ಮಾಡಿಸಿಕೊಳ್ಳಿ.
6. ಸಮಯಕ್ಕೆ ಸರಿಯಾಗಿ ಔಷಧಿ ಸೇವನೆ (Timely Medication): ವೈದ್ಯರು ಸೂಚಿಸಿದ ಮಾತ್ರೆಗಳನ್ನು ಅಥವಾ ಇನ್ಸುಲಿನ್ ಅನ್ನು ನಿಗದಿತ ಸಮಯಕ್ಕೆ ತೆಗೆದುಕೊಳ್ಳಿ. ಸ್ವಂತ ನಿರ್ಧಾರದಿಂದ ಔಷಧಿಯನ್ನು ನಿಲ್ಲಿಸಬೇಡಿ.
7. ಮಾನಸಿಕ ಒತ್ತಡದ ನಿರ್ವಹಣೆ (Stress Management): ಅತಿಯಾದ ಮಾನಸಿಕ ಒತ್ತಡವು ದೇಹದಲ್ಲಿ ಸಕ್ಕರೆ ಮಟ್ಟವನ್ನು ಹೆಚ್ಚಿಸುವ ಹಾರ್ಮೋನ್‌ಗಳನ್ನು ಬಿಡುಗಡೆ ಮಾಡುತ್ತದೆ. ಒತ್ತಡ ಕಡಿಮೆ ಮಾಡಿಕೊಳ್ಳಲು ಧ್ಯಾನ (Meditation) ಅಥವಾ ಹವ್ಯಾಸಗಳಲ್ಲಿ ತೊಡಗಿಕೊಳ್ಳಿ.
8. ಪೂರಕ ನೀರು ಕುಡಿಯುವುದು (Stay Hydrated): ದಿನವಿಡೀ ಸಾಕಷ್ಟು ಪ್ರಮಾಣದಲ್ಲಿ ನೀರು ಕುಡಿಯಿರಿ. ಇದು ದೇಹದಲ್ಲಿರುವ ಹೆಚ್ಚುವರಿ ಗ್ಲೂಕೋಸ್ ಮೂತ್ರದ ಮೂಲಕ ಹೊರಹೋಗಲು ಸಹಾಯ ಮಾಡುತ್ತದೆ.
9. ಉತ್ತಮ ನಿದ್ರೆ (Good Sleep): ಪ್ರತಿದಿನ ರಾತ್ರಿ 7 ರಿಂದ 8 ಗಂಟೆಗಳ ಕಾಲ ಶಾಂತಿಯುತವಾದ ನಿದ್ರೆ ಮಾಡುವುದು ದೇಹದ ಚಯಾಪಚಯ ಕ್ರಿಯೆ (Metabolism) ಮತ್ತು ಹಾರ್ಮೋನ್‌ಗಳ ಸಮತೋಲನಕ್ಕೆ ಬಹಳ ಮುಖ್ಯ.
10. ದುರಭ್ಯಾಸಗಳಿಂದ ದೂರವಿರಿ (Avoid Smoking and Alcohol): ಧೂಮಪಾನ ಮತ್ತು ಮದ್ಯಪಾನವು ಸಕ್ಕರೆ ಕಾಯಿಲೆಯ ತೊಂದರೆಗಳನ್ನು (ಹೃದಯ ಮತ್ತು ನರಗಳ ಸಮಸ್ಯೆ) ಮತ್ತಷ್ಟು ಹೆಚ್ಚು ಮಾಡುವುದರಿಂದ ಇವುಗಳಿಂದ ದೂರವಿರುವುದು ಒಳ್ಳೆಯದು.
ಗಮನಿಸಿ: ಈ ಮೇಲಿನ ಮಾಹಿತಿ ರೋಗದ ನಿರ್ವಹಣೆಗೆ ಸಾಮಾನ್ಯ ಮಾರ್ಗದರ್ಶನವಾಗಿದೆ. ಪ್ರತಿಯೊಬ್ಬರ ದೇಹ ಪ್ರಕೃತಿ ವಿಭಿನ್ನವಾಗಿರುವುದರಿಂದ, ನಿಮ್ಮ ವೈದ್ಯರ ವೈಯಕ್ತಿಕ ಸಲಹೆ ಮತ್ತು ಚಿಕಿತ್ಸೆಯ ಕ್ರಮವೇ ಅಂತಿಮ ಹಾಗೂ ಸುರಕ್ಷಿತ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ6 days agoಆಶ್ರಯ ಯೋಜನೆ – ಆವಧಿ ವಿಸ್ತರಣೆ
-
ದಿನದ ಸುದ್ದಿ6 days agoಹೊಳಲ್ಕೆರೆ | ಸ್ಪೀಚ್ ಸಂಸ್ಥೆ ಸಂಸ್ಥಾಪಕ ಹೆಚ್.ರಾಮಚಂದ್ರಪ್ಪ ನಿಧನ ; ಇಂದು ಅಂತ್ಯಕ್ರಿಯೆ
-
ಅಂಕಣ6 days agoಕವಿತೆ | ದೇವರ ಹೂವು
-
ದಿನದ ಸುದ್ದಿ4 days ago10 ಮುಖ್ಯ ಅಂಶಗಳನ್ನು ಪಾಲಿಸಿ ; ಸಕ್ಕರೆ ಕಾಯಿಲೆಗೆ ಗುಡ್ ಬೈ ಹೇಳಿ..
-
ದಿನದ ಸುದ್ದಿ4 days agoರಾಷ್ಟ್ರೀಯ ಖಾದ್ಯ ತೈಲ ಅಭಿಯಾನ – ಎಣ್ಣೆಕಾಳು ಕಾರ್ಯಕ್ರಮದಡಿ ಸೌಲಭ್ಯ: ಅರ್ಜಿ ಆಹ್ವಾನ
-
ದಿನದ ಸುದ್ದಿ3 days agoವಸತಿ ಯೋಜನೆಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ4 days agoಉಚಿತ ಕೋಳಿ ಸಾಕಾಣಿಕೆ ತರಬೇತಿ: ಅರ್ಜಿ ಆಹ್ವಾನ
-
ದಿನದ ಸುದ್ದಿ4 days agoಕೃಷಿ ಪಂಡಿತ ಹಾಗೂ ಆತ್ಮ ಶ್ರೇಷ್ಠ ಕೃಷಿಕ ಪ್ರಶಸ್ತಿ: ಅರ್ಜಿ ಆಹ್ವಾನ

