ದಿನದ ಸುದ್ದಿ
ರೈಲು ಪ್ರಯಾಣ ; ಐದು ವರ್ಷದೊಳಗಿನ ಮಕ್ಕಳ ಟಿಕೆಟ್ ಕುರಿತಂತೆ ಬದಲಾವಣೆ ಇಲ್ಲ
ಸುದ್ದಿದಿನ ಡೆಸ್ಕ್ : ರೈಲಿನಲ್ಲಿ ಪ್ರಯಾಣಿಸುವ ಐದು ವರ್ಷದೊಳಗಿನ ( Five Years ) ಮಕ್ಕಳ ಟಿಕೆಟ್ (Children Tickets ) ಕುರಿತಂತೆ ನಿಯಮದಲ್ಲಿ (Rules) ಯಾವುದೇ ಬದಲಾವಣೆ ಮಾಡಿಲ್ಲ ( No Change ) ಎಂದು ರೈಲ್ವೆ ಸಚಿವಾಲಯ ( Ministry of Railways ) ಸ್ಪಷ್ಟಪಡಿಸಿದೆ.
ಒಂದರಿಂದ ನಾಲ್ಕು ವರ್ಷದ ವಯೋಮಾನದ ಮಕ್ಕಳಿಗೆ ಕಡ್ಡಾಯ ರೈಲ್ವೆ ಟಿಕೆಟ್ ಖರೀದಿಸಬೇಕೆಂಬ ಬಗ್ಗೆ ಇತ್ತೀಚೆಗೆ ಕೆಲ ಮಾಧ್ಯಮಗಳಲ್ಲಿ ವರದಿಯಾಗಿದ್ದು, ಇವು ಸತ್ಯಕ್ಕೆ ದೂರ ಎಂದು ಸಚಿವಾಲಯ ತಿಳಿಸಿದೆ.
ಇದನ್ನೂ ಓದಿ | ಧಾರ್ಮಿಕ ಸಂಸ್ಥೆಗಳ ಅಭಿವೃದ್ಧಿಗೆ ವಿಶೇಷ ಅನುದಾನ : ಸಚಿವೆ ಶಶಿಕಲಾ ಜೊಲ್ಲೆ
ಕೆಲ ಮಾಧ್ಯಮ ಪ್ರಕಟಣೆಗಳು ಜನರಿಗೆ ತಪ್ಪು ಮಾಹಿತಿ ನೀಡುತ್ತಿದ್ದು, ಐದು ವರ್ಷದೊಳಗಿನ ಮಕ್ಕಳು ಉಚಿತ ಪ್ರಯಾಣ ಮಾಡಲು ಅವಕಾಶವಿದೆ. ಆದರೆ, ಪೋಷಕರು ಸ್ವಯಂ ಇಚ್ಛೆಯಿಂದ ಮಕ್ಕಳಿಗೆ ಆಸನ ಅಥವಾ ಬರ್ತ್ ಒದಗಿಸಲು ಟಿಕೆಟ್ ಖರೀದಿಗೆ ಸಹ ಅವಕಾಶ ನೀಡಲಾಗಿದೆ ಎಂದು ರೈಲ್ವೆ ಸಚಿವಾಲಯ ಸ್ಪಷ್ಟಪಡಿಸಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ನಾಳೆ ಹರಿಹರ ರೈಲು ನಿಲ್ದಾಣದಲ್ಲಿ ವಾರ್ಷಿಕ ವಿಪತ್ತು ನಿರ್ವಹಣೆ ಅಣುಕು ಅಭ್ಯಾಸ
ಸುದ್ದಿದಿನ, ಹರಿಹರ :ಇದೇ 14 ರಂದು ಗುರುವಾರ (ನಾಳೆ) ಹರಿಹರ ರೈಲು ನಿಲ್ದಾಣದಲ್ಲಿ ವಾರ್ಷಿಕ ವಿಪತ್ತು ನಿರ್ವಹಣೆಯ ಅಣುಕು ಅಭ್ಯಾಸವನ್ನು ಬೆಳಗ್ಗೆ 8:30 ಕ್ಕೆ ನಡೆಸಲಿದೆ ಎಂದು ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
ನೈಋತ್ಯ ರೈಲ್ವೆಯ ಮೈಸೂರು ವಿಭಾಗವು ಎನ್‌ಡಿಆರ್‌ಎಫ್, ಎಸ್‌ಡಿಆರ್‌ಎಫ್ ಹಾಗೂ ರಾಜ್ಯ ಸರ್ಕಾರದ ಅಧಿಕಾರಿಗಳ ಸಮನ್ವಯದಲ್ಲಿ ಅಣಕು ಅಭ್ಯಾಸವು ನಡೆಸಲಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ನಟ ದಿಲೀಪ್ ರಾಜ್ ಆ ಒಂದು ತಪ್ಪು ಪ್ರಾಣಕ್ಕೆ ಮುಳುವಾಯ್ತು
ಸುದ್ದಿದಿನಡೆಸ್ಕ್:ಕನ್ನಡ ಚಿತ್ರರಂಗದ ಖ್ಯಾತ ನಟ ದಿಲೀಪ್ ರಾಜ್ (47) ಅವರ ಅಕಾಲಿಕ ನಿಧನವು ಇಡೀ ಸ್ಯಾಂಡಲ್‌ವುಡ್ ಅನ್ನು ದಿಗ್ಭ್ರಮೆಗೊಳಿಸಿದೆ. ಕೇವಲ 47 ವರ್ಷ ವಯಸ್ಸಿನ ಈ ಪ್ರತಿಭಾನ್ವಿತ ಕಲಾವಿದ ಇಂದು ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. ಆದರೆ ಅವರ ಈ ಸಾವಿನ ಹಿಂದೆ ಒಂದು ಬೇಸರದ ಸಂಗತಿಯೂ ಅಡಗಿದೆ, ಅದೇನೆಂದರೆ ಅವರ ಆರೋಗ್ಯದ ಕುರಿತು ತೋರಿದ ಒಂದು ನಿರ್ಲಕ್ಷ್ಯ!
ನಟ ನಿರ್ಮಾಪಕ ದಿಲೀಪ್ ರಾಜ್ ಅವರು ಇಂದು ಹೃದಯಾಘಾತದಿಂದ ನಿಧನರಾಗಿದ್ದು, ಇಡೀ ಸ್ಯಾಂಡಲ್‌ವುಡ್ ದಿಗ್ಭ್ರಮೆಗೊಂಡಿದೆ. ಕೆಲವು ದಿನಗಳ ಹಿಂದೆ ಗೋವಾ ಪ್ರವಾಸದಲ್ಲಿದ್ದಾಗಲೇ ಅವರಿಗೆ ಆಗಾಗ ಎದೆನೋವು ಕಾಣಿಸಿಕೊಂಡಿತ್ತು, ಆದರೆ ಪ್ರವಾಸದ ಖುಷಿಯಲ್ಲಿದ್ದ ಅವರು ಅದನ್ನ ಗಂಭೀರವಾಗಿ ಪರಿಗಣಿಸಿರಲಿಲ್ಲ.. ಬೆಂಗಳೂರಿಗೆ ಮರಳಿದ ನಂತರ ಇಂದು ವೈದ್ಯಕೀಯ ತಪಾಸಣೆಗೆ ಅಪಾಯಿಂಟ್‌ಮೆಂಟ್ ಕೂಡ ಫಿಕ್ಸ್ ಆಗಿತ್ತು. ಆದರೆ ವಿಧಿ ಆಟವೇ ಬೇರೆಯಾಗಿತ್ತು;
ತಪಾಸಣೆಗೆ ಹೋಗುವ ಮುನ್ನವೇ ರಾತ್ರಿ ತೀವ್ರ ಎದೆನೋವು ಕಾಣಿಸಿಕೊಂಡು ಕುಮಾರಸ್ವಾಮಿ ಲೇಔಟ್‌ನ ಅಪೋಲೋ ಆಸ್ಪತ್ರೆಯಲ್ಲಿ ಅವರು ಕೊನೆಯುಸಿರೆಳೆದಿದ್ದಾರೆ.ನೋವು ಕಾಣಿಸಿಕೊಂಡ ತಕ್ಷಣವೇ ಆಸ್ಪತ್ರೆಗೆ ದಾಖಲಾಗಿದ್ದರೆ ಇಂದು ಪರಿಸ್ಥಿತಿ ಬೇರೆಯೇ ಇರುತ್ತಿತ್ತು ಎಂದು ಅವರ ಕುಟುಂಬಸ್ಥರು ಮತ್ತು ಅಭಿಮಾನಿಗಳು ಕಣ್ಣೀರು ಹಾಕುತ್ತಿದ್ದಾರೆ.
ನಟ ದಿಲೀಪ್ ರಾಜ್ ಅವರು ಕೆಲವೇ ದಿನಗಳ ಹಿಂದೆ ಗೋವಾಗೆ ಪ್ರವಾಸ ತೆರಳಿದ್ದರು.
ಅಲ್ಲಿ ಗೆಳೆಯರೊಂದಿಗೆ ಕಾಲ ಕಳೆಯುವಾಗಲೇ ಅವರಿಗೆ ಎದೆ ನೋವು ಕಾಣಿಸಿಕೊಂಡಿತ್ತು ಎನ್ನಲಾಗುತ್ತಿದೆ. ಅಂದೇ ಹೃದಯವು ಅಪಾಯದ ಮುನ್ಸೂಚನೆ ನೀಡಿದ್ದರೂ, ದಿಲೀಪ್ ಅವರು ಅದನ್ನು ಗಂಭೀರವಾಗಿ ಪರಿಗಣಿಸದೆ ನಿರ್ಲಕ್ಷ್ಯ ತೋರಿದ್ದರು. ಗೋವಾ ಟ್ರಿಪ್‌ನಲ್ಲಿದ್ದಾಗಲೇ ಆಗಾಗ ನೋವು ಕಾಣಿಸಿಕೊಂಡರೂ, ಅವರು ಅದನ್ನು ಕೇರ್ ಮಾಡಿರಲಿಲ್ಲ.
ಬೆಂಗಳೂರಿಗೆ ಮರಳಿದ ನಂತರ ಅವರು ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಲು ನಿರ್ಧರಿಸಿದ್ದರು. ವಿಪರ್ಯಾಸವೆಂದರೆ, ಇಂದು ಅವರು ಆಸ್ಪತ್ರೆಗೆ ತೆರಳಿ ಹೃದಯ ತಪಾಸಣೆ ಮಾಡಿಸಿಕೊಳ್ಳಬೇಕಿತ್ತು ಮತ್ತು ಅದಕ್ಕಾಗಿ ವೈದ್ಯರ ಅಪಾಯಿಂಟ್‌ಮೆಂಟ್ ಕೂಡ ಫಿಕ್ಸ್ ಆಗಿತ್ತು. ಆದರೆ ವಿಧಿ ಆಟವೇ ಬೇರೆಯಾಗಿತ್ತು. ನಿನ್ನೆ ರಾತ್ರಿ ಕೂಡ ಧಾರಾವಾಹಿ ಕಲಾವಿದರ ಜೊತೆ ಫೋನ್‌ನಲ್ಲಿ ಆತ್ಮೀಯವಾಗಿ ಮಾತನಾಡಿದ್ದ ನಟನಿಗೆ, ಮಧ್ಯರಾತ್ರಿ ತೀವ್ರವಾದ ಎದೆನೋವು ಕಾಣಿಸಿಕೊಂಡಿದೆ. ಆಸ್ಪತ್ರೆಗೆ ತೆರಳುವ ಮುನ್ನವೇ ಅವರು ಏಕಾಏಕಿ ಕುಸಿದು ಬಿದ್ದು ಕೊನೆಯುಸಿರೆಳೆದಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಸಾವಿನಲ್ಲೂ ಒಂದಾದ ಪ್ರೇಮಿಗಳು: ಪ್ರೇಮಿಯ ಪಕ್ಕದಲ್ಲೇ ಪ್ರೇಯಸಿಯ ಅಂತ್ಯಸಂಸ್ಕಾರ!
ಸುದ್ದಿದಿನ,ಕುಂಬಳೆ: ಪ್ರೀತಿ ಎನ್ನುವುದು ಸಾವಿನ ನಂತರವೂ ಶಾಶ್ವತ ಎಂಬುದಕ್ಕೆ ಕೇರಳದ ಕಾಸರಗೋಡಿನಲ್ಲಿ ನಡೆದ ಈ ಘಟನೆ ಸಾಕ್ಷಿಯಾಗಿದೆ. ನಿಶ್ಚಿತಾರ್ಥವಾಗಿದ್ದ ಯುವಕ ಮೃತಪಟ್ಟ ಬೆನ್ನಲ್ಲೇ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದ ಯುವತಿಯ ಅಂತ್ಯಸಂಸ್ಕಾರವನ್ನು ಆಕೆಯ ಇಚ್ಛೆಯಂತೆ ಯುವಕನ ಸಮಾಧಿಯ ಪಕ್ಕದಲ್ಲೇ ನೆರವೇರಿಸಲಾಗಿದೆ.
ನಡೆದಿದ್ದೇನು?
ಕಿದೂರು ಕುಂಟಂಗೇರಡ್ಕದ ಪ್ರಫುಲ್ಲ (26) ಮತ್ತು ತಮಿಳುನಾಡು ನಿವಾಸಿಯಾದ ಬ್ಯಾಂಕ್ ನೌಕರ ಮಣಿ ಎಂಬವರಿಗೆ ನಾಲ್ಕು ತಿಂಗಳ ಹಿಂದೆ ಅದ್ಧೂರಿಯಾಗಿ ಮದುವೆ ನಿಶ್ಚಿತಾರ್ಥ ನಡೆದಿತ್ತು. ಇನ್ನೇನು ದಾಂಪತ್ಯ ಜೀವನಕ್ಕೆ ಕಾಲಿಡಬೇಕು ಎನ್ನುವಷ್ಟರಲ್ಲಿ, ಒಂದು ತಿಂಗಳ ಹಿಂದೆ ಸಂಭವಿಸಿದ ಬೈಕ್ ಅಪಘಾತದಲ್ಲಿ ಮಣಿ ಮೃತಪಟ್ಟಿದ್ದರು.
ಡೆತ್ ನೋಟ್‌ನಲ್ಲಿತ್ತು ಕೊನೆಯ ಆಸೆ
ತನ್ನ ಭಾವಿ ಪತಿಯ ಅಗಲಿಕೆಯಿಂದ ತೀವ್ರವಾಗಿ ನೊಂದಿದ್ದ ಪ್ರಫುಲ್ಲ, ಕಳೆದ ಭಾನುವಾರ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದರು. ಸಾವಿಗೂ ಮುನ್ನ ಆಕೆ ಬರೆದಿದ್ದ ಡೆತ್ ನೋಟ್ ಎಲ್ಲರ ಕಣ್ಣಾಲಿಗಳನ್ನು ಒದ್ದೆ ಮಾಡಿದೆ. “ನನ್ನ ಮೃತದೇಹವನ್ನು ಮಣಿಯ ಸಮಾಧಿಯ ಸಮೀಪದಲ್ಲೇ ಅಂತ್ಯಸಂಸ್ಕಾರ ಮಾಡಬೇಕು” ಎಂದು ಆಕೆ ತನ್ನ ಕೊನೆಯ ಆಸೆಯನ್ನು ಬರೆದಿಟ್ಟಿದ್ದರು.
ತಮಿಳುನಾಡಿನಲ್ಲಿ ಅಂತ್ಯಕ್ರಿಯೆ
ಯುವತಿಯ ಆಸೆಯಂತೆ ಉಭಯ ಕುಟುಂಬದವರು ಮಾತುಕತೆ ನಡೆಸಿದರು. ಅದರಂತೆ ನಿನ್ನೆ ಕಾಸರಗೋಡಿನಿಂದ ಪ್ರಫುಲ್ಲರ ಮೃತದೇಹವನ್ನು ತಮಿಳುನಾಡಿನ ತಿರುನಲ್ವೇಲಿ ಜಿಲ್ಲೆಯ ವಳ್ಳಿಯೂರು ಎಂಬಲ್ಲಿಗೆ ಕೊಂಡೊಯ್ಯಲಾಯಿತು. ಅಲ್ಲಿ ಮಣಿಯ ಸಮಾಧಿಯ ಪಕ್ಕದಲ್ಲೇ ಪ್ರಫುಲ್ಲರ ಅಂತ್ಯಸಂಸ್ಕಾರವನ್ನು ನೆರವೇರಿಸುವ ಮೂಲಕ ಪ್ರೇಮಿಗಳಿಬ್ಬರನ್ನು ಸಾವಿನಲ್ಲೂ ಒಂದಾಗಿಸಲಾಯಿತು.
ಅಂತ್ಯಸಂಸ್ಕಾರದ ವೇಳೆ ಎರಡೂ ಕುಟುಂಬದ ಸದಸ್ಯರು ಉಪಸ್ಥಿತರಿದ್ದು, ಮರುಗುವ ಪ್ರೇಮಕಥೆಗೆ ಕಂಬನಿಯ ವಿದಾಯ ಹೇಳಿದರು. ಈ ವಿಡಿಯೋ ಮತ್ತು ಸುದ್ದಿ ಈಗ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗುತ್ತಿದ್ದು, ನೆಟ್ಟಿಗರು ಈ ಜೋಡಿಯ ಆತ್ಮಕ್ಕೆ ಶಾಂತಿ ಕೋರುತ್ತಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ3 days ago2.5 ಕೋಟಿ ಖರೀದಿಯಲ್ಲಿ ಅವ್ಯವಹಾರ ; ಆಯುಕ್ತೆ ಮಂಜುಶ್ರೀ ಸೇರಿ 6 ಅಧಿಕಾರಿಗಳ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ6 days agoದಾವಣಗೆರೆ | ಸರ್ಕಾರಿ ಮಹಿಳಾ ಕಾಲೇಜಿನಲ್ಲಿ ಬೆಂಕಿ ರಹಿತ ಕುಕಿಂಗ್ ಕಾರ್ಯಕ್ರಮ
-
ದಿನದ ಸುದ್ದಿ6 days agoಮಕ್ಕಳ ಆಧಾರ್ ಬಯೋಮೆಟ್ರಿಕ್ ನವೀಕರಣಕ್ಕೆ ಉಚಿತ ಅವಕಾಶ : ಕೂಡಲೇ ಆಧಾರ್ ಸೇವಾ ಕೇಂದ್ರಗಳಿಗೆ ಭೇಟಿ ನೀಡಿ
-
ದಿನದ ಸುದ್ದಿ3 days agoದಾವಣಗೆರೆ | ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಸಮಾರೋಪ ಸಮಾರಂಭ
-
ಅಂಕಣ2 days agoಪ್ರಜಾಪ್ರಭುತ್ವ: ಸಮಾನತೆ, ಸಾಮಾಜಿಕ ನ್ಯಾಯ ಮತ್ತು ನೈತಿಕ ಹೊಣೆಗಾರಿಕೆ
-
ಕ್ರೀಡೆ6 days agoಹಿರಿಯ ಕ್ರಿಕೆಟ್ ಪಟು ಎನ್ಆರ್ಎಚ್ ರಮೇಶ್ ನಿಧನ
-
ದಿನದ ಸುದ್ದಿ2 days agoದಾವಣಗೆರೆ| ಅಪರಿಚಿತರು ನೀಡಿದ ಟೆಲಿಗ್ರಾಮ್ ಲಿಂಕ್ ಕ್ಲಿಕ್ ಮಾಡಿ 14 ಲಕ್ಷ ಕಳೆದುಕೊಂಡ ಉಪನ್ಯಾಸಕ
-
ದಿನದ ಸುದ್ದಿ3 days agoಮಾನಸಿಕ ಆರೋಗ್ಯ ಅರಿವು ಅಗತ್ಯ : ಡಾ. ಪ್ರಭು ಎಂ. ಬಿಸ್ಲೇರಿ

