ದಿನದ ಸುದ್ದಿ

ಕಾನೂನು ಪದವೀಧರರಿಗೆ ತರಬೇತಿ : ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ : ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯು ಪ್ರಸಕ್ತ ಸಾಲಿನಲ್ಲಿ ಆಡಳಿತ ನ್ಯಾಯಧೀಕರಣದಲ್ಲಿ ಪರಿಶಿಷ್ಟ ವರ್ಗದ ಕಾನೂನು ಪದವೀಧರರಿಗೆ ತರಬೇತಿ ನೀಡಲು ಕಾನೂನು ಪದವಿ ಹೊಂದಿದ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಪರಿಶಿಷ್ಟ ವರ್ಗಗಳ ಕಲ್ಯಾಣ ನಿರ್ದೇಶನಾಲಯ ಪರಿಶಿಷ್ಟ ಪಂಗಡದ ಕಾನೂನು ಪದವೀಧರರನ್ನು ಆಡಳಿತ ನ್ಯಾಯಧೀಕರಣ ತರಬೇತಿ ನೀಡಲು ಅರ್ಜಿಗಳನ್ನು ಆನ್‍ಲೈನ್ ಮೂಲಕ ಸಲ್ಲಿಸಲು ಜೂ.30 ಕೊನೆಯ ದಿನವಾಗಿತ್ತು.

ಕೋವಿಡ್-19 ಸಾಂಕ್ರಾಮಿಕ ರೋಗದ ಪ್ರಯುಕ್ತ ಲಾಕ್‍ಡೌನ್ ಜಾರಿಯಾದ ಹಿನ್ನಲೆಯಲ್ಲಿ ಆನ್‍ಲೈನ್ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಲಾಗಿತ್ತು. ಇದೀಗ ಅವಧಿಯನ್ನು ವಿಸ್ತರಿಸಿದ್ದು, ಅರ್ಹ ಅಭ್ಯರ್ಥಿಗಳು ಜು.01 ರಿಂದ ಆ.14 ರ ಒಳಗಾಗಿ www.tw.kar.nic.in ವೆಬ್‍ಸೈಟ್‍ನಲ್ಲಿ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಅವಧಿ ಮೀರಿ ಬಂದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version