ದಿನದ ಸುದ್ದಿ

ಭಾರತೀಯ ಸೇನೆಗೆ ಸೇರಲು ತರಬೇತಿ | ಅರ್ಜಿ ಆಹ್ವಾನ

Published

on

ಸುದ್ದಿದಿನ, ಯಾದಗಿರಿ| ಭಾರತೀಯ ಸೇನೆಗೆ ಸೇರಬಯಸುವ ರಾಜ್ಯದ ಹಿಂದುಳಿದ ವರ್ಗಗಳ ಅರ್ಹ ಅಭ್ಯರ್ಥಿಗಳಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ 2018-19ನೇ ಸಾಲಿಗೆ ಆಯ್ಕೆ ಪೂರ್ವ ಸಿದ್ಧತೆ ಬಗ್ಗೆ ವೃತ್ತಿ ಮಾರ್ಗದರ್ಶನ ಮತ್ತು ತರಬೇತಿಯನ್ನು ನೀಡಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಉಚಿತ ಊಟ, ವಸತಿ ಸೌಲಭ್ಯ ಇದ್ದು, ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ ಹಾಗೂ 3ಬಿ ಗಳಿಗೆ ಸೇರಿದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಕೆಗೆ ಜುಲೈ 25 ಕೊನೆಯ ದಿನವಾಗಿದ್ದು, ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ವೆಬ್‍ಸೈಟ್: www.backwardclasses.kar.nic.in ಸಂಪರ್ಕಿಸಬಹುದು. ಸಹಾಯವಾಣಿ ಸಂಖ್ಯೆ 80507 70004ಗೆ ಕರೆ ಮಾಡಬಹುದು ಎಂದು ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9986715401

Leave a Reply

Your email address will not be published. Required fields are marked *

Trending

Exit mobile version