ದಿನದ ಸುದ್ದಿ
ಬೆಂಗಳೂರಿಂದ ಮತದಾನಕ್ಕೆ ತೆರಳುವ ಪ್ರಯಾಣಿಕರು ; ಬಹುತೇಕ ಬಸ್, ಟ್ರೈನ್ ಟಿಕೆಟ್ ಬುಕ್ಕಿಂಗ್ ಫುಲ್

ಸುದ್ದಿದಿನ, ಬೆಂಗಳೂರು : ಇನ್ನು ರಾಜ್ಯ ವಿಧಾನಸಭಾ ಚುನಾವಣೆಯ ಮತದಾನಕ್ಕೆ ಕೇವಲ ಆರು ದಿನಗಳು ಬಾಕಿ ಇದ್ದು, ಮೇ 11 ಕ್ಕೆ ರಾಜಧಾನಿಯಿಂದ ವಿವಿಧ ರಾಜ್ಯದ ಜಿಲ್ಲೆಗಳಿಗೆ ತೆರಳುವ ಕೆಎಸ್ ಆರ್ಟಿಸಿ ಮತ್ತು ಖಾಸಗಿ ಬಸ್ಗಳ ಶೇ.80ರಷ್ಟು ಸೀಟುಗಳು ಈಗಾಗಲೇ ಭರ್ತಿಯಾಗಿವೆ.
ಉದ್ಯೋಗ ಆರಿಸಿ ಲಕ್ಷಾಂತರ ಮಂದಿ ರಾಜ್ಯದ ನಾನಾ ಭಾಗಗಳಿಂದ ಬೆಂಗಳೂರು ನಗರಕ್ಕೆ ಬಂದಿದ್ದಾರೆ., ಗಾರ್ಮೆಂಟ್ಸ್, ಕಟ್ಟಡ ನಿರ್ಮಾಣ, ಐಟಿ-ಬಿಟಿ, ಕಂಪನಿಗಳು, ಹೋಟೆಲ್ ಸೇರಿದಂತೆ ವಿವಿಧ ವಲಯಗಳಲ್ಲಿ ಕೆಲಸಮಾಡುತ್ತಿದ್ದಾರೆ. ಮತದಾನ ಮಾಡಲು ಮೇ 12ರಂದು ದೊಡ್ಡ ಪ್ರಮಾಣದಲ್ಲಿ ಜನರು ತಮ್ಮ ತಮ್ಮ ಊರುಗಳಿಗೆ ತೆರಳುತ್ತಿದ್ದಾರೆ . ಸಾರ್ವತ್ರಿಕ ರಜೆಯನ್ನು ಮತದಾನದ ದಿನ ಸರ್ಕಾರಿ ಮತ್ತು ಖಾಸಗಿ ವಲಯಗಳಿಗೆ ಘೋಷಿಸಿರುವುದರಿಂದ ದೂರದಲ್ಲಿರುವ ತಮ್ಮ ಊರುಗಳಿಗೆ ಹೋಗಲು ಮೇ 11ರಂದು ಖಾಸಗಿ ಹಾಗೂ ಕೆಎಸ್ಆರ್ಟಿಸಿ ಬಸ್ಗಳಲ್ಲಿ ಈಗಾಗಲೇ ತಮ್ಮ ಮುಂಗಡ ಟಿಕೆಟ್ ಕಾಯ್ದಿರಿಸಿದ್ದಾರೆ.
ಪ್ರಯಾಣಿಸಲು ಒಂದು ತಿಂಗಳು ಮುಂಚಿತವಾಗಿ ಕೆಎಸ್ಆರ್ಟಿಸಿ ಮತ್ತು ಖಾಸಗಿ ಬಸ್ಗಳಲ್ಲಿ ಟಿಕೆಟ್ ಕಾಯ್ದಿರಿಸಲು ಅವಕಾಶವಿರುವುದರಿಂದ ಮುಂಗಡ ಟಿಕೆಟ್ ಬುಕ್ಕಿಂಗ್ಗೆ ಏಪ್ರಿಲ್ ಮೊದಲ ವಾರದಿಂದಲೇ ಮುಂದಾಗಿದ್ದಾರೆ. ಈವರೆಗೆ ಶೇ.80ರಷ್ಟು ಸೀಟುಗಳು ಬುಕ್ಕಿಂಗ್ ಆಗಿದ್ದು, ಮತದಾನಕ್ಕಿನ್ನು ಆರು ದಿನಗಳು ಇರುವುದರಿಂದ ಖಾಸಗಿ ಮತ್ತು ಕೆಎಸ್ಆರ್ಟಿಸಿ ಬಸ್ಗಳ ಎಲ್ಲ ಸೀಟುಗಳು ಬುಕ್ಕಿಂಗ್ ಆಗುವ ಸಂಭವವಿದೆ.
ಬೆಂಗಳೂರಿ ನಿಂದ ದಾವಣಗೆರೆ, ಉಡುಪಿ, ಮಂಗಳೂರು, ಚಿಕ್ಕಮಗಳೂರು, ಶಿವಮೊಗ್ಗ, ಬೆಳಗಾವಿ, ಕಲಬುರಗಿ, ಹುಬ್ಬಳ್ಳಿ-ಧಾರವಾಡ, ಮಡಿಕೇರಿ, ಕೊಪ್ಪಳ, ರಾಯಚೂರು, ಯಾದಗಿರಿ ಮೊದಲಾದ ಜಿಲ್ಲೆಗಳಿಗೆ ತೆರಳುವ ಬಸ್ಗಳ ಟಿಕೆಟ್ ಬುಕ್ಕಿಂಗ್ ಹೆಚ್ಚಾಗಿದೆ. ಇದರ ಜೊತೆಗೆ ಮೇ 11ರಂದು ಮಂಗಳೂರು, ಹುಬ್ಬಳ್ಳಿ-ಧಾರವಾಡ, ಗದಗ ಮೊದಲಾದ ದೂರದ ಜಿಲ್ಲೆಗಳಿಗೆ ಹೋಗುವ ಎಲ್ಲ ಬಗೆಯ ರೈಲುಗಳ ಟಿಕೆಟ್ ಬುಕ್ಕಿಂಗ್ ಕೂಡ ಬಹುತೇಕ ಭರ್ತಿಯಾಗಲಿದೆ.
ನಗರದಿಂದ ಮೇ ೧೧ರಂದು ದೂರದ ಜಿಲ್ಲೆಗಳಿಗೆ ತೆರಳುವ ಸ್ಲೀಪರ್, ಐರಾವತ ಕ್ಲಬ್ ಕ್ಲಾಸ್, ಐರಾವತ, ರಾಜಹಂಸ ಐರಾವತ ಗೋಲ್ಡ್, ಬಸ್ ಗಳ ಶೇ.80 ರಷ್ಟು ಆಸನಗಳು ಭರ್ತಿಯಾಗಿವೆ. ಇನ್ನು ಬೇರೆಯ ಬಸ್ ಗಳಿಗೂ ಮುಂಗಡ ಟಿಕೆಟ್ ಬುಕ್ಕಿಂಗ್ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಪ್ರಯಾಣಿಕರು ಏಪ್ರಿಲ್ ಮೊದಲ ವಾರದಿಂದಲೇ ಮುಂಗಡವಾಗಿ ಕಾಯ್ದಿರಿಸಲು ಮುಂದಾಗಿದ್ದಾರೆ. ಮತದಾನಕ್ಕೆ ಇನ್ನು ಐದು ದಿನ ಇರುವುದರಿಂದ ಉಳಿದ ಸೀಟುಗಳು ಭರ್ತಿಯಾಗುವ ಸಾಧ್ಯತೆಯಿದೆ. ಒಂದು ವೇಳೆ ಹೆಚ್ಚುವರಿ ಬಸ್ಳಿಗೆ ಬೇಡಿಕೆ ಬಂದಲ್ಲಿ ಒದಗಿಸಲು ನಿಗಮ ಸಿದ್ಧವಿದೆ ಎಂದು ಕೆಎಸ್ಆರ್ಟಿಸಿಯ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಅಭ್ಯರ್ಥಿಗಳಿಂದ ವಾಹನ ವ್ಯವಸ್ಥೆ
ನಗರದಲ್ಲಿರುವ ಮತದಾರರನ್ನು ತಮ್ಮ ಊರುಗಳಿಗೆ ಕರೆದೊಯ್ಯಲು ಕೆಲ ಅಭ್ಯರ್ಥಿಗಳೇ ವಾಹನ ವ್ಯವಸ್ಥೆಯನ್ನು ಈಗಾಗಲೇ ಮಾಡುತ್ತಿದ್ದಾರೆ. ಮತದಾನಕ್ಕೆ ಕರೆದೊಯ್ದು ಬಳಿಕ ಪುನಃ ಬೆಂಗಳೂರಿಗೆ ವಾಪಸು ಬಿಡುವ ಭರವಸೆಯನ್ನು ನೀಡಿದ್ದು, , ಕಾರುಗಳ ಬುಕ್ಕಿಂಗ್,ಮಿನಿ ಬಸ್ಗಳು, ಟೆಂಪೋ ಟ್ರಾವೆಲರ್ನಲ್ಲಿ ತೊಡಗಿದ್ದಾರೆ.
ಸುದ್ದಿಗಾಗಿ ಸುದ್ದಿದಿನ.ಕಾಂ ವಾಟ್ಸಾಪ್ ನಂಬರ್ | 9986715401

ದಿನದ ಸುದ್ದಿ
ಉಚಿತ ಲ್ಯಾಪ್‍ಟಾಪ್ ಪಡೆಯಲು ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ : ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ನೊಂದಾಯಿತ ಕಾರ್ಮಿಕರ ಮಕ್ಕಳು ಪ್ರಸಕ್ತ ಸಾಲಿನಲ್ಲಿ ಪ್ರಥಮ ಹಾಗೂ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‍ಟಾಪ್‍ಗಳನ್ನು ವಿತರಿಸಲು ಅರ್ಜಿ ಆಹ್ವಾನಿಸಲಾಗಿದೆ.
ದಾವಣಗೆರೆ ಉಪ ವಿಭಾಗದ ಕಾರ್ಮಿಕ ಅಧಿಕಾರಿ ಇವರ ವ್ಯಾಪ್ತಿಯಲ್ಲಿ ನೋಂದಣಿಯಾಗಿರುವ ಕಾರ್ಮಿಕರು ಈ ಸೌಲಭ್ಯವನ್ನು ಪಡೆಯಬಹುದು. ಅರ್ಜಿ ನಮೂನೆಯನ್ನು ಸಂಬಂಧಿಸಿದ ಕಾರ್ಮಿಕ ನಿರೀಕ್ಷಕರ ಕಛೇರಿಯಿಂದ ಪಡೆದು ಅಗತ್ಯ ದಾಖಲೆಗಳೊಂದಿಗೆ ಕಾರ್ಮಿಕ ನಿರೀಕ್ಷಕರಿಗೆ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಅಕ್ಟೋಬರ್ 11 ಕೊನೆಯ ದಿನವಾಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ಕಾರ್ಮಿಕ ಅಧಿಕಾರಿಯವರ ಕಚೇರಿ ದೂ ಸಂ:08192-237332 ಸಂಪರ್ಕಿಸಲು ಕಾರ್ಮಿಕ ಅಧಿಕಾರಿ ಇಬ್ರಾಹಿಂ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ನಾಳೆಯಿಂದ ತಮಿಳುನಾಡಿಗೆ ಕಾವೇರಿ ನೀರು ; ಕಾವೇರಿ ನದಿ ನೀರು ಸಮಿತಿ ನಿರ್ದೇಶನ

ಸುದ್ದಿದಿನ ಡೆಸ್ಕ್ : ತಮಿಳುನಾಡಿಗೆ 3 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಕಾವೇರಿ ನದಿ ನೀರು ಸಮಿತಿ ತೀರ್ಪಿನ ಕುರಿತು ಕಾನೂನು ತಜ್ಞರ ಜೊತೆ ಚರ್ಚಿಸಿ, ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರಿನಲ್ಲಿ ನಿನ್ನೆ ಹೇಳಿದ್ದಾರೆ.
ತಮಿಳುನಾಡಿಗೆ ನಾಳೆಯಿಂದ (ಸೆಪ್ಟಂಬರ್28) ಅಕ್ಟೋಬರ್ 15ರ ತನಕ ಪ್ರತಿನಿತ್ಯ 3 ಸಾವಿರ ಕ್ಯೂಸೆಕ್‌ನಂತೆ ನೀರು ಹರಿಸುವಂತೆ, ಕಾವೇರಿ ನದಿ ನೀರು ಸಮಿತಿ ನಿನ್ನೆ ಕರ್ನಾಟಕಕ್ಕೆ ನಿರ್ದೇಶನ ನೀಡಿದೆ. ಕಾವೇರಿ ನದಿ ನೀರು ಸಮಿತಿ ವರ್ಚುವಲ್ ಮೂಲಕ ನಡೆದ ಸಭೆಯಲ್ಲಿ ಈ ನಿರ್ದೇಶನ ನೀಡಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಉತ್ತಮ ಶಿಕ್ಷಕರ ಪ್ರಶಸ್ತಿಗೆ ಸುಮಂಗಳಾ ಮೇಟಿ ಆಯ್ಕೆ

ಸುದ್ದಿದಿನ, ಬಳ್ಳಾರಿ : ಸಿರಿಗೇರಿ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ (ಬಸವನಪೇಟೆ) ಮುಖ್ಯ ಗುರುಗಳಾದ ಶ್ರೀಮತಿ ಸುಮಂಗಳಾ ಮೇಟಿಯವರು 2023-24 ನೇ ಸಾಲಿನ ಬಳ್ಳಾರಿ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ಶಿಕ್ಷಕ ವೃತ್ತಿ ಧರ್ಮ ನೇ ತನ್ನ ಸರ್ವಸ್ವ ಎಂದು ತಿಳಿದುಕೊಂಡಂತಹ ಶ್ರೀಮತಿ ಸುಮಂಗಳಾ ಮೇಟಿಯವರು, ಶಿಕ್ಷಕ ವೃತ್ತಿಯಲ್ಲಿ ಉತ್ತಮ ಕರ್ತವ್ಯ ಹಾಗೂ ಸೇವೆಯನ್ನು ಸಲ್ಲಿಸಿದನ್ನು ಪರಿಗಣಿಸಿ ಈ ಹಿಂದೆಯೇ 2022-23 ನೇ ಸಾಲಿನ ಬಳ್ಳಾರಿ ಜಿಲ್ಲಾ ಮಟ್ಟದ ಸಾವಿತ್ರಿ ಬಾಯಿ ಫುಲೆ ಶಿಕ್ಷಕಿ ಪ್ರಶಸ್ತಿ ಪುರಸ್ಕೃತರಾಗಿದ್ದು, ಇವರ ಶಿಕ್ಷಣ ಕ್ಷೇತ್ರದಲ್ಲಿನ ಅಗಾಧವಾದ ಕರ್ತವ್ಯ ಮತ್ತು ಸೇವೆ ನಿಷ್ಠೆಯನ್ನು ಗುರುತಿಸಿದ ಶಾಲಾ ಶಿಕ್ಷಣ ಇಲಾಖೆ ಬಳ್ಳಾರಿ ವತಿಯಿಂದ 2023-24 ನೇ ಸಾಲಿನ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿಗೆ ಆಯ್ಕೆಯಾಗಿರುವುದಕ್ಕೆ ಇದೇ ಸಂದರ್ಭದಲ್ಲಿ ಗ್ರಾಮಸ್ಥರು, ಸಮಸ್ತ ಶಿಕ್ಷಕರ ವರ್ಗದವರು, ಅತಿಥಿ ಶಿಕ್ಷಕರು, ಹಿತೈಷಿಗಳು, ಹಳೆಯ ವಿದ್ಯಾರ್ಥಿ ಬಳಗ, ಶಿಕ್ಷಣ ಪ್ರೇಮಿಗಳು, ಅಭಿಮಾನಿ ಬಳಗ,
ಮುಂತಾದವರು ಅಭಿನಂದನೆಯನ್ನು ಸಲ್ಲಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ4 days ago
ನಾಳೆಯಿಂದ ತಮಿಳುನಾಡಿಗೆ ಕಾವೇರಿ ನೀರು ; ಕಾವೇರಿ ನದಿ ನೀರು ಸಮಿತಿ ನಿರ್ದೇಶನ
-
ದಿನದ ಸುದ್ದಿ5 days ago
ಬೆಂಗಳೂರು ಬಂದ್ ಹಿನ್ನೆಲೆಯಲ್ಲಿ ನಗರದೆಲ್ಲೆಡೆ ಬಿಗಿ ಬಂದೋಬಸ್ತ್ : ಪೊಲೀಸ್ ಕಮೀಷನರ್ ದಯಾನಂದ್
-
ದಿನದ ಸುದ್ದಿ4 days ago
ಉಚಿತ ಲ್ಯಾಪ್‍ಟಾಪ್ ಪಡೆಯಲು ಅರ್ಜಿ ಆಹ್ವಾನ
-
ದಿನದ ಸುದ್ದಿ4 days ago
ಉತ್ತಮ ಶಿಕ್ಷಕರ ಪ್ರಶಸ್ತಿಗೆ ಸುಮಂಗಳಾ ಮೇಟಿ ಆಯ್ಕೆ