ದಿನದ ಸುದ್ದಿ

ಬೆಂಗಳೂರಿಂದ ಮತದಾನಕ್ಕೆ ತೆರಳುವ ಪ್ರಯಾಣಿಕರು ; ಬಹುತೇಕ ಬಸ್, ಟ್ರೈನ್ ಟಿಕೆಟ್ ಬುಕ್ಕಿಂಗ್ ಫುಲ್

Published

on

ಸುದ್ದಿದಿನ, ಬೆಂಗಳೂರು : ನ್ನು ರಾಜ್ಯ ವಿಧಾನಸಭಾ ಚುನಾವಣೆಯ ಮತದಾನಕ್ಕೆ ಕೇವಲ ಆರು ದಿನಗಳು ಬಾಕಿ ಇದ್ದು, ಮೇ 11 ಕ್ಕೆ ರಾಜಧಾನಿಯಿಂದ ವಿವಿಧ ರಾಜ್ಯದ ಜಿಲ್ಲೆಗಳಿಗೆ ತೆರಳುವ ಕೆಎಸ್ ಆರ್ಟಿಸಿ ಮತ್ತು ಖಾಸಗಿ ಬಸ್ಗಳ ಶೇ.80ರಷ್ಟು ಸೀಟುಗಳು ಈಗಾಗಲೇ ಭರ್ತಿಯಾಗಿವೆ.

ಉದ್ಯೋಗ ಆರಿಸಿ ಲಕ್ಷಾಂತರ ಮಂದಿ ರಾಜ್ಯದ ನಾನಾ ಭಾಗಗಳಿಂದ ಬೆಂಗಳೂರು ನಗರಕ್ಕೆ ಬಂದಿದ್ದಾರೆ., ಗಾರ್ಮೆಂಟ್ಸ್, ಕಟ್ಟಡ ನಿರ್ಮಾಣ, ಐಟಿ-ಬಿಟಿ, ಕಂಪನಿಗಳು, ಹೋಟೆಲ್ ಸೇರಿದಂತೆ ವಿವಿಧ ವಲಯಗಳಲ್ಲಿ ಕೆಲಸಮಾಡುತ್ತಿದ್ದಾರೆ. ಮತದಾನ ಮಾಡಲು ಮೇ 12ರಂದು ದೊಡ್ಡ ಪ್ರಮಾಣದಲ್ಲಿ ಜನರು ತಮ್ಮ ತಮ್ಮ ಊರುಗಳಿಗೆ ತೆರಳುತ್ತಿದ್ದಾರೆ . ಸಾರ್ವತ್ರಿಕ ರಜೆಯನ್ನು ಮತದಾನದ ದಿನ ಸರ್ಕಾರಿ ಮತ್ತು ಖಾಸಗಿ ವಲಯಗಳಿಗೆ ಘೋಷಿಸಿರುವುದರಿಂದ ದೂರದಲ್ಲಿರುವ ತಮ್ಮ ಊರುಗಳಿಗೆ ಹೋಗಲು ಮೇ 11ರಂದು ಖಾಸಗಿ ಹಾಗೂ ಕೆಎಸ್ಆರ್ಟಿಸಿ ಬಸ್ಗಳಲ್ಲಿ ಈಗಾಗಲೇ ತಮ್ಮ ಮುಂಗಡ ಟಿಕೆಟ್ ಕಾಯ್ದಿರಿಸಿದ್ದಾರೆ.

ಪ್ರಯಾಣಿಸಲು ಒಂದು ತಿಂಗಳು ಮುಂಚಿತವಾಗಿ  ಕೆಎಸ್ಆರ್ಟಿಸಿ ಮತ್ತು ಖಾಸಗಿ ಬಸ್ಗಳಲ್ಲಿ ಟಿಕೆಟ್  ಕಾಯ್ದಿರಿಸಲು ಅವಕಾಶವಿರುವುದರಿಂದ ಮುಂಗಡ ಟಿಕೆಟ್ ಬುಕ್ಕಿಂಗ್ಗೆ ಏಪ್ರಿಲ್ ಮೊದಲ ವಾರದಿಂದಲೇ ಮುಂದಾಗಿದ್ದಾರೆ. ಈವರೆಗೆ ಶೇ.80ರಷ್ಟು ಸೀಟುಗಳು ಬುಕ್ಕಿಂಗ್ ಆಗಿದ್ದು, ಮತದಾನಕ್ಕಿನ್ನು ಆರು ದಿನಗಳು ಇರುವುದರಿಂದ ಖಾಸಗಿ ಮತ್ತು ಕೆಎಸ್ಆರ್ಟಿಸಿ ಬಸ್ಗಳ ಎಲ್ಲ ಸೀಟುಗಳು ಬುಕ್ಕಿಂಗ್ ಆಗುವ ಸಂಭವವಿದೆ.

ಬೆಂಗಳೂರಿ ನಿಂದ ದಾವಣಗೆರೆ, ಉಡುಪಿ, ಮಂಗಳೂರು, ಚಿಕ್ಕಮಗಳೂರು, ಶಿವಮೊಗ್ಗ, ಬೆಳಗಾವಿ, ಕಲಬುರಗಿ, ಹುಬ್ಬಳ್ಳಿ-ಧಾರವಾಡ, ಮಡಿಕೇರಿ, ಕೊಪ್ಪಳ, ರಾಯಚೂರು, ಯಾದಗಿರಿ ಮೊದಲಾದ ಜಿಲ್ಲೆಗಳಿಗೆ ತೆರಳುವ ಬಸ್ಗಳ ಟಿಕೆಟ್ ಬುಕ್ಕಿಂಗ್ ಹೆಚ್ಚಾಗಿದೆ. ಇದರ ಜೊತೆಗೆ ಮೇ 11ರಂದು ಮಂಗಳೂರು, ಹುಬ್ಬಳ್ಳಿ-ಧಾರವಾಡ, ಗದಗ  ಮೊದಲಾದ ದೂರದ ಜಿಲ್ಲೆಗಳಿಗೆ ಹೋಗುವ ಎಲ್ಲ ಬಗೆಯ ರೈಲುಗಳ ಟಿಕೆಟ್ ಬುಕ್ಕಿಂಗ್ ಕೂಡ ಬಹುತೇಕ ಭರ್ತಿಯಾಗಲಿದೆ.

ನಗರದಿಂದ ಮೇ ೧೧ರಂದು ದೂರದ ಜಿಲ್ಲೆಗಳಿಗೆ ತೆರಳುವ ಸ್ಲೀಪರ್, ಐರಾವತ ಕ್ಲಬ್ ಕ್ಲಾಸ್, ಐರಾವತ, ರಾಜಹಂಸ  ಐರಾವತ ಗೋಲ್ಡ್, ಬಸ್ ಗಳ ಶೇ.80 ರಷ್ಟು ಆಸನಗಳು ಭರ್ತಿಯಾಗಿವೆ. ಇನ್ನು ಬೇರೆಯ ಬಸ್ ಗಳಿಗೂ ಮುಂಗಡ ಟಿಕೆಟ್ ಬುಕ್ಕಿಂಗ್ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಪ್ರಯಾಣಿಕರು ಏಪ್ರಿಲ್ ಮೊದಲ ವಾರದಿಂದಲೇ ಮುಂಗಡವಾಗಿ ಕಾಯ್ದಿರಿಸಲು ಮುಂದಾಗಿದ್ದಾರೆ. ಮತದಾನಕ್ಕೆ ಇನ್ನು ಐದು ದಿನ ಇರುವುದರಿಂದ ಉಳಿದ ಸೀಟುಗಳು ಭರ್ತಿಯಾಗುವ ಸಾಧ್ಯತೆಯಿದೆ. ಒಂದು ವೇಳೆ ಹೆಚ್ಚುವರಿ ಬಸ್ಳಿಗೆ ಬೇಡಿಕೆ ಬಂದಲ್ಲಿ ಒದಗಿಸಲು ನಿಗಮ ಸಿದ್ಧವಿದೆ ಎಂದು ಕೆಎಸ್ಆರ್ಟಿಸಿಯ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಅಭ್ಯರ್ಥಿಗಳಿಂದ ವಾಹನ ವ್ಯವಸ್ಥೆ

ನಗರದಲ್ಲಿರುವ ಮತದಾರರನ್ನು ತಮ್ಮ ಊರುಗಳಿಗೆ ಕರೆದೊಯ್ಯಲು ಕೆಲ ಅಭ್ಯರ್ಥಿಗಳೇ ವಾಹನ ವ್ಯವಸ್ಥೆಯನ್ನು ಈಗಾಗಲೇ ಮಾಡುತ್ತಿದ್ದಾರೆ.  ಮತದಾನಕ್ಕೆ ಕರೆದೊಯ್ದು ಬಳಿಕ ಪುನಃ ಬೆಂಗಳೂರಿಗೆ ವಾಪಸು ಬಿಡುವ ಭರವಸೆಯನ್ನು ನೀಡಿದ್ದು, , ಕಾರುಗಳ ಬುಕ್ಕಿಂಗ್,ಮಿನಿ ಬಸ್ಗಳು, ಟೆಂಪೋ ಟ್ರಾವೆಲರ್ನಲ್ಲಿ ತೊಡಗಿದ್ದಾರೆ.

ಸುದ್ದಿಗಾಗಿ ಸುದ್ದಿದಿನ.ಕಾಂ ವಾಟ್ಸಾಪ್ ನಂಬರ್ | 9986715401

Leave a Reply

Your email address will not be published. Required fields are marked *

Trending

Exit mobile version