ದಿನದ ಸುದ್ದಿ

ಸಬ್ ಇನ್ಸ್‍ಪೆಕ್ಟರ್ ಹುದ್ದೆಗಳಿಗೆ ಉಚಿತ ತರಬೇತಿ : ಅರ್ಜಿ ಆಹ್ವಾನ

Published

on

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ 2019-2020ನೇ ಸಾಲಿನಲ್ಲಿ ಅಲ್ಪಸಂಖ್ಯಾತರ ಮುಸ್ಲಿಂ, ಕ್ರಿಶ್ಚಿಯನ್, ಪಾರ್ಸಿ, ಜೈನ್ ಬೌದ್ಧ ಹಾಗೂ ಸಿಖ್ ಅಭ್ಯರ್ಥಿಗಳಿಗೆ ಕರ್ನಾಟಕ ಪೊಲೀಸ್ ಸೇವೆಯ ಸಬ್ ಇನ್ಸ್‍ಪೆಕ್ಟರ್ ಹುದ್ದೆಗಳಿಗೆ ಉಚಿತ ತರಬೇತಿ ನೀಡಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತರು WWW.gokdom.kar.nic.in ನಲ್ಲಿ ಜನವರಿ 31ರವರೆಗೆ ಅರ್ಜಿ ಸಲ್ಲಿಸುವುದು. ಅಭ್ಯರ್ಥಿಗಳಿಗೆ 90 ದಿನಗಳ ಕಾಲ ಊಟ ಮತ್ತು ವಸತಿಯೊಂದಿಗೆ ಬೆಳಗಾವಿ, ಬೆಂಗಳೂರು, ಮೈಸೂರು, ಕಲ್ಬುರ್ಗಿ, ಧಾರವಾಡ, ಶಿವಮೊಗ್ಗ, ವಿಜಯಪುರ, ಬಳ್ಳಾರಿ, ದಾವಣಗೆರೆ, ಮಂಗಳೂರು ಕೇಂದ್ರಗಳಲ್ಲಿ ತರಬೇತಿ ನೀಡಲಾಗುವುದು.

ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ: 0821- 2422088ನ್ನು ಸಂಪರ್ಕಿಸುವಂತೆ
ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಹೆಚ್.ಬಿ.ಮುಕ್ತಾರ್ ಪಾಷ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Trending

Exit mobile version