ಲೈಫ್ ಸ್ಟೈಲ್
ಮಂಗಳವಾರದ ಭವಿಷ್ಯ | ಉದ್ಯೋಗ, ವ್ಯವಹಾರ, ಪ್ರೇಮ, ದಾಂಪತ್ಯ, ಕೌಟುಂಬಿಕ ಕಲಹದಂತ ಕಠಿಣ ಸಮಸ್ಯೆಗಳಿಗೆ ಶಾಸ್ತ್ರೋಕ್ತ ಪರಿಹಾರ ಶತಸಿದ್ಧ ; ಇಂದೇ ಕರೆಮಾಡಿ
ಶ್ರೀ ಸುಬ್ರಹ್ಮಣ್ಯ ಸ್ವಾಮಿ ಸ್ಮರಣೆಯನ್ನು ಮಾಡುತ್ತಾ ಈ ದಿನದ ರಾಶಿಗಳ ಶುಭಾಶುಭಫಲಗಳನ್ನು ತಿಳಿಯೋಣ.
ಜ್ಯೋತಿಷ್ಯರು ಪ್ರಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್
ನಿಮ್ಮ ಸಮಸ್ಯೆಗಳಾದ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಷಯ, ದಾಂಪತ್ಯ, ಕೌಟುಂಬಿಕ ಕಲಹ, ಇನ್ನು ಇತ್ಯಾದಿ ಗುಪ್ತ ಕಠಿಣ ಸಮಸ್ಯೆಗಳಿಗೆ ಶಾಸ್ತ್ರೋಕ್ತ ತಾಂತ್ರಿಕ್ ವಿಧಾನಗಳಿಂದ ಪರಿಹಾರ ಶತಸಿದ್ಧ.
ಇಂದೇ ಕರೆ ಮಾಡಿ.
9945410150
ಮೇಷ ರಾಶಿ
ನಿಮ್ಮ ವ್ಯಾವಹಾರಿಕ ದೃಷ್ಟಿಕೋನ ಭವಿಷ್ಯದ ಅಭಿವೃದ್ಧಿಗೆ ಪೂರಕವಾಗಲಿದೆ. ನಿಮ್ಮಲ್ಲಿನ ವ್ಯಕ್ತಿತ್ವಕ್ಕೆ ಅಡ್ಡಿಯಾಗಿರುವ ಕೆಲವು ಅಂಶಗಳನ್ನು ತೆಗೆದುಹಾಕಿ ಮುನ್ನಡೆಯಿರಿ. ನಿಮ್ಮ ಯೋಜನೆಗಳಿಗೆ ಬಂಡವಾಳದ ಅಗತ್ಯತೆಯನ್ನು ಹಿತೈಷಿಗಳು ಪೂರೈಸಲಿದ್ದಾರೆ. ಕೆಲವರನ್ನು ನಂಬಿ ನಿಮ್ಮ ಆರ್ಥಿಕ ವ್ಯವಸ್ಥೆಯನ್ನು ಹಾಳು ಮಾಡಿಕೊಳ್ಳಬಹುದಾದ ಸಾಧ್ಯತೆ ಕಂಡು ಬರುತ್ತದೆ ಆದಷ್ಟು ಎಚ್ಚರವಹಿಸಿ. ಅನ್ಯರ ಸಮಸ್ಯೆಗಳಲ್ಲಿ ಇಂದು ಯಾವುದೇ ಕಾರಣಕ್ಕೂ ಮಧ್ಯಪ್ರವೇಶಿಸಬೇಡಿ ಇದು ನಿಮಗೆ ಸಮಸ್ಯೆ ತಂದುಕೊಡಲಿದೆ.
ಪ್ರಧಾನ ತಾಂತ್ರಿಕ್ ಗಿರಿಧರ ಭಟ್
9945410150
ವೃಷಭ ರಾಶಿ
ಸಾಂಪ್ರದಾಯಿಕ ಉದ್ಯಮದ ಜೊತೆಗೆ ಆಧುನಿಕ ಕುಶಲತೆಗಳನ್ನು ಬಳಸಿಕೊಂಡು ನಿಮ್ಮ ಆರ್ಥಿಕ ಸ್ಥಿತಿಯನ್ನು ಉತ್ತಮಪಡಿಸಿಕೊಳ್ಳುವುದು ಒಳಿತು. ನಿಮ್ಮ ಬಲಿಷ್ಠ ಚಿಂತನೆಗಳು ಸಕಾಲಕ್ಕೆ ಪ್ರಯೋಗವಾಗದೆ ಅಲ್ಲಿಯೇ ಮುದುಡಿ ಹೋಗುವ ಸಾಧ್ಯತೆಗಳು ಕಂಡು ಬರುತ್ತದೆ. ಉದ್ಯೋಗದಲ್ಲಿ ಆತ್ಮವಿಶ್ವಾಸ ಹೆಚ್ಚಾಗಲಿದೆ, ಹಾಗೂ ನಿಮ್ಮ ಕಾರ್ಯವೈಖರಿಗೆ ಮೆಚ್ಚುಗೆ ಸೂಚಿಸುತ್ತಾರೆ, ನಿಮ್ಮ ಸ್ಥಾನ ಇನ್ನೂ ಮೇಲಕ್ಕೆ ಹೋಗುವ ಸಾಧ್ಯತೆ ಕಂಡು ಬರುತ್ತದೆ.
ಪ್ರಧಾನ ತಾಂತ್ರಿಕ್ ಗಿರಿಧರ ಭಟ್
9945410150
ಮಿಥುನ ರಾಶಿ
ಸಣ್ಣ ವಿಷಯಕ್ಕೆ ಸಂಗಾತಿಯೊಡನೆ ಮನಸ್ತಾಪ ಮಾಡಿಕೊಳ್ಳುವುದು ಒಳ್ಳೆಯ ಲಕ್ಷಣವಲ್ಲ. ಜಡತ್ವದಿಂದ ಚೈತನ್ಯದೆಡೆ ಪ್ರಯಾಣ ಸಾಗಲಿದೆ. ಆರ್ಥಿಕ ಸಂಕಷ್ಟಗಳು ದೂರವಾಗಿ ಹೊಸತನ ನಿಮ್ಮಲ್ಲಿ ತುಂಬಿಕೊಳ್ಳುವುದು. ವಿವೇಚನೆಯಿಂದ ವ್ಯವಹಾರದಲ್ಲಿ ಪಾಲ್ಗೊಳ್ಳುವ ಸಾಧ್ಯತೆ ಕಾಣಬಹುದು ಹಾಗೂ ಅದರಲ್ಲಿ ಯಶಸ್ವಿ ಸಹ ಆಗುವಿರಿ. ಸರ್ಕಾರಿ ಕೆಲಸದ ಕುರಿತು ನಿಮ್ಮಲ್ಲಿ ಹೊಸ ಹುರುಪು ಮೂಡಲಿದೆ ಮತ್ತು ಕೆಲಸದ ಸಫಲತೆ ಇಂದು ಗುರುತಿಸುತ್ತೀರಿ.
ಪ್ರಧಾನ ತಾಂತ್ರಿಕ್ ಗಿರಿಧರ ಭಟ್
9945410150
ಕರ್ಕಾಟಕ ರಾಶಿ
ಮೇಲಾಧಿಕಾರಿಗಳ ಒಡನಾಟ ಹೆಚ್ಚಾಗಬಹುದು. ಕುಟುಂಬದ ಕೆಲವು ದೈವಿಕ ಹರಕೆಗಳನ್ನು ತೀರಿಸುವ ಕಾರ್ಯಕ್ರಮಗಳು ನಡೆಯಬಹುದಾದ ಸಾಧ್ಯತೆ ಕಾಣಬಹುದು. ಆರ್ಥಿಕವಾಗಿ ಬೃಹತ್ ಮಟ್ಟದ ಯೋಜನೆಗೆ ಸಿದ್ಧಗೊಳ್ಳುವಿರಿ. ಮಾಡುವ ಕೆಲಸದಲ್ಲಿ ಆಕಸ್ಮಿಕವಾದ ಬದಲಾವಣೆ ಕಾಣಬಹುದು, ಹಾಗೂ ನಿಮಗೆ ಕಿರಿಕಿರಿಯೆನಿಸುವ ಸಂದರ್ಭ ಎದುರಾಗುತ್ತದೆ.
ಪ್ರಧಾನ ತಾಂತ್ರಿಕ್ ಗಿರಿಧರ ಭಟ್
9945410150
ಸಿಂಹ ರಾಶಿ
ನವೀನ ಕಾರ್ಯಕ್ರಮಗಳಲ್ಲಿ ಆಸಕ್ತಿ ಬೆಳೆಯಲಿದೆ. ಕುಟುಂಬಸ್ಥರೊಡನೆ ಪ್ರವಾಸದ ಕಾರ್ಯಕ್ರಮ ಹಮ್ಮಿಕೊಳ್ಳಲು ಬಯಸುವಿರಿ. ದೈವಿಕ ಹರಕೆಗಳನ್ನು ತೀರಿಸಲು ಸಜ್ಜಾಗುವ ಸಾಧ್ಯತೆ ಕಾಣಬಹುದು. ಗೃಹಪಯೋಗಿ ಚಟುವಟಿಕೆಗಳಲ್ಲಿ ಕಾಲ ಕಳೆಯುವಿರಿ. ಕೆಲಸದಲ್ಲಿ ಕ್ರಿಯಾಶೀಲತೆ ಉತ್ತಮವಾಗಿದೆ. ಮನೆಯಲ್ಲಿ ದೈವಿಕ ಸಂಕಲ್ಪ ಕಾರ್ಯಕ್ರಮಗಳು ನಡೆಯಬಹುದಾದ ಸಾಧ್ಯತೆ ಇದೆ.
ಪ್ರಧಾನ ತಾಂತ್ರಿಕ್ ಗಿರಿಧರ ಭಟ್
9945410150
ಕನ್ಯಾ ರಾಶಿ
ಆರ್ಥಿಕ ವ್ಯವಸ್ಥೆ ನಿರೀಕ್ಷೆಯ ಹಾಗೆ ಶುಭದಾಯಕವಾಗಿ ನಡೆಯಲಿದೆ. ಮಕ್ಕಳ ವಿದ್ಯಾಭ್ಯಾಸದಲ್ಲಿ ಉತ್ತಮವಾದ ಸಾಧನೆ ಕಾಣಲಿದೆ, ಅವರ ಮುಂದಿನ ಭವಿಷ್ಯಕ್ಕೆ ನಿಮ್ಮ ಪಾಲ್ಗೊಳ್ಳುವಿಕೆ ಈದಿನ ನಿರೀಕ್ಷಿಸಬಹುದು. ಬಹುಜನೋಪಯೋಗಿ ಕಾರ್ಯಗಳಿಂದ ನಿಮ್ಮ ವ್ಯಕ್ತಿತ್ವ ಉತ್ಕೃಷ್ಟವಾಗಿ ರೂಪುಗೊಳ್ಳಲಿದೆ.
ಪ್ರಧಾನ ತಾಂತ್ರಿಕ್ ಗಿರಿಧರ ಭಟ್
9945410150
ತುಲಾ ರಾಶಿ
ನಿಮ್ಮ ಮನ ಇಚ್ಚ ಕಾರ್ಯಗಳನ್ನು ನೆರವೇರಿಸಲು ಚಾಲನೆ ನೀಡುತ್ತೀರಿ. ಯಾವುದೇ ಕೆಲಸವಿರಲಿ ತಾಳ್ಮೆ ಬಹಳ ಮುಖ್ಯವಾಗಿದೆ. ಮಕ್ಕಳ ಕೆಲವು ಅಭ್ಯಾಸಗಳು ನಿಮ್ಮನ್ನು ಚಿಂತೆಗೆ ಕೊಡಲಿದೆ. ನೀವು ಅವರ ಬಗ್ಗೆ ವಿಶೇಷ ಕಾಳಜಿ ವಹಿಸುವುದು ಸೂಕ್ತ.
ಪ್ರಧಾನ ತಾಂತ್ರಿಕ್ ಗಿರಿಧರ ಭಟ್
9945410150
ವೃಶ್ಚಿಕ ರಾಶಿ
ನಿಮ್ಮಲ್ಲಿ ಬರುವಂತಹ ಅನುಮಾನ ಸುಳ್ಳು ಆಗಿರಬಹುದು. ಕೂಲಂಕುಶವಾಗಿ ವಿಷಯದ ಬಗ್ಗೆ ತಿಳಿದುಕೊಳ್ಳಲು ಪ್ರಯತ್ನಿಸಿ. ಕೆಲಸದಲ್ಲಿನ ನಿಮ್ಮ ಪ್ರಯತ್ನ ಹಾಗೂ ಶ್ರಮ ಬಹಳಷ್ಟಿದ್ದರು ಇನ್ನೊಬ್ಬರ ಕೈವಾಡದಿಂದ ಶ್ರೇಯಸ್ಸು ಬೇರೆಯವರ ಪಾಲಾಗಬಹುದು.
ಪ್ರಧಾನ ತಾಂತ್ರಿಕ್ ಗಿರಿಧರ ಭಟ್
9945410150
ಧನಸ್ಸು ರಾಶಿ
ದೇವತಾ ಕಾರ್ಯಗಳಿಗೆ ಮನೆಯಲ್ಲಿ ಚಿಂತನೆ ಮಾಡುವಿರಿ. ಪತಿ ಪತ್ನಿಯ ಸಾಂಗತ್ಯ ನಿಮ್ಮ ಆದರ್ಶ ಜೀವನ, ಬಹಳ ರೋಮಾಂಚನಕಾರಿಯಾಗಿರುತ್ತದೆ. ಜಗಳವಾಡುವ ಪರಿಸ್ಥಿತಿ ಬಂದರೆ ಆದಷ್ಟು ಆ ಸ್ಥಳವನ್ನು ಖಾಲಿ ಮಾಡುವುದು ಒಳ್ಳೆಯದು.
ಪ್ರಧಾನ ತಾಂತ್ರಿಕ್ ಗಿರಿಧರ ಭಟ್
9945410150
ಮಕರ ರಾಶಿ
ಹಿರಿಯರ ಮಾರ್ಗದರ್ಶನದಿಂದ ನಿಮ್ಮ ಯೋಜನೆಗೆ ಸಿದ್ಧತೆ ಮಾಡುವಿರಿ. ನಿವೇಶನ ಖರೀದಿಗೆ ಆಸಕ್ತಿ ವಹಿಸುವಿರಿ. ನಿಮ್ಮ ಪತ್ನಿಯ ವಿಚಾರಗಳಿಂದ ಪ್ರಭಾವಿತರಾಗಿ ನಿಮ್ಮ ಬೆಳವಣಿಗೆಗೆ ಸಹಕಾರಿಯಾಗುವ ವಿಷಯವನ್ನು ಆಯ್ಕೆ ಮಾಡಿಕೊಳ್ಳುವಿರಿ. ಕೊಟ್ಟಿರುವ ಸಾಲವನ್ನೆಲ್ಲ ಹಿಂಪಡೆಯಲು ಸಿದ್ಧರಾಗಿ. ಮನೋವ್ಯಾಧಿ ಎಂಬುದು ಔಷಧ ವಿಲ್ಲದ ಕಾಯಿಲೆ ನೀವು ಆದಷ್ಟು ಚಟುವಟಿಕೆಗಳಲ್ಲಿ ಪಾಲ್ಗೊಳ್ಳಿ.
ಪ್ರಧಾನ ತಾಂತ್ರಿಕ್ ಗಿರಿಧರ ಭಟ್
9945410150
ಕುಂಭ ರಾಶಿ
ಸಮಾಜದ ಮುಖ್ಯವಾಹಿನಿಯಲ್ಲಿ ಬೆರೆಯುವುದು ಅಭ್ಯಾಸ ಮಾಡಿಕೊಳ್ಳುವುದು ಮುಖ್ಯ. ಹಣಕಾಸಿನ ಸ್ಥಿತಿ ಉತ್ತಮವಾಗಿದೆ ಆದರೂ ಸಹ ನಿಮಗೆ ಚಡಪಡಿಕೆ, ಕನವರಿಕೆ ಹೆಚ್ಚಾಗಲಿದೆ. ಅತಿ ಆಸೆ, ಹಠಮಾರಿತನ ಶುಭವಲ್ಲ. ಹಾಸಿಗೆ ಇದ್ದಷ್ಟು ಕಾಲು ಚಾಚಿ.
ಪ್ರಧಾನ ತಾಂತ್ರಿಕ್ ಗಿರಿಧರ ಭಟ್
9945410150
ಮೀನ ರಾಶಿ
ಪತ್ನಿಯೊಡನೆ ಮನಸ್ಸು ಬಿಚ್ಚಿ ಮಾತನಾಡಿ ಮುನಿಸಿಕೊಳ್ಳುವುದು ಒಳ್ಳೆಯದಲ್ಲ. ಹಣಕಾಸು ಬಂದರೆ ಉಳಿತಾಯ ಮಾಡಿ, ಭವಿಷ್ಯದ ದೃಷ್ಟಿಕೋನವನ್ನು ಅಳವಡಿಸಿಕೊಳ್ಳಿ ದುಂದುವೆಚ್ಚ ಒಳ್ಳೆಯದಲ್ಲ.
ಪ್ರಧಾನ ತಾಂತ್ರಿಕ್ ಗಿರಿಧರ ಭಟ್
9945410150
ಕಾರ್ಯಸಿದ್ದಿ ಆಂಜನೇಯ ಜ್ಯೋತಿಷ್ಯಂ
ಜ್ಯೋತಿಷ್ಯರು ಪ್ರಧಾನ ತಾಂತ್ರಿಕ್ ಗಿರಿಧರ ಭಟ್
ನಿಮ್ಮ ಸಮಸ್ಯೆಗಳ ಸಮಾಲೋಚನೆಗಾಗಿ ಲಭ್ಯರಿದ್ದಾರೆ. ಪರಿಹಾರ ಮಾರ್ಗದರ್ಶನಕ್ಕಾಗಿ
ಇಂದೇ ಕರೆ ಮಾಡಿ.
9945410150

ದಿನದ ಸುದ್ದಿ
ದಾವಣಗೆರೆ | ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ
ಸುದ್ದಿದಿನ,ದಾವಣಗೆರೆ: ದಾವಣಗೆರೆ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ ಆಧುನಿಕ ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ ಜೂನ್ 15 ಮತ್ತು 16 ರಂದು ಆಯೋಜಿಸಲಾಗಿದೆ.
ಆಸಕ್ತ ರೈತರು ಆಧಾರ್ ಕಾರ್ಡ್ ಜೆರಾಕ್ಸ್, 2 ಪಾಸ್ ಪೋರ್ಟ್ ಸೈಜ್ ಪೋಟೋ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರು ಜಾತಿ ಪ್ರಮಾಣ ಪತ್ರದ ಜೆರಾಕ್ಸ್ ಪ್ರತಿಯೊಂದಿಗೆ ಹಾಜರಾಗಬೇಕು. ತರಬೇತಿ ಕಾರ್ಯಕ್ರಮಕ್ಕೆ ಯಾವುದೇ ಪ್ರೋತ್ಸಾಹಧನ ಮತ್ತು ಭತ್ಯೆಗಳನ್ನು ನೀಡಲಾಗುವುದಿಲ್ಲ.
ಹೆಚ್ಚಿನ ಮಾಹಿತಿಗಾಗಿ ಪಶುಪಾಲನಾ ಮತ್ತು ಪಶು ವೈದ್ಯಕೀಯ ತರಬೇತಿ ಕೇಂದ್ರ, ದಾವಣಗೆರೆ ಕಚೇರಿ ದೂ.ಸಂ: 08192-233787 ಸಂಪರ್ಕಿಸಿ ಮಾಹಿತಿ ಪಡೆದುಕೊಳ್ಳಬಹುದು ಎಂದು ಪಶುವೈದ್ಯಾಧಿಕಾರಿಗಳು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
10 ಮುಖ್ಯ ಅಂಶಗಳನ್ನು ಪಾಲಿಸಿ ; ಸಕ್ಕರೆ ಕಾಯಿಲೆಗೆ ಗುಡ್ ಬೈ ಹೇಳಿ..
1. ಸಮತೋಲಿತ ಆಹಾರ (Balanced Diet): ನಿಮ್ಮ ಆಹಾರದಲ್ಲಿ ಹೆಚ್ಚು ನಾರಿನಂಶವಿರುವ (fiber) ತರಕಾರಿ, ಸೊಪ್ಪು, ಮೊಳಕೆ ಬರಿಸಿದ ಕಾಳುಗಳು ಮತ್ತು ಸಿರಿಧಾನ್ಯಗಳನ್ನು ಬಳಸಿ. ಕಾರ್ಬೋಹೈಡ್ರೇಟ್ ಹಾಗೂ ಎಣ್ಣೆಯಂಶವಿರುವ ಆಹಾರವನ್ನು ಕಡಿಮೆ ಮಾಡಿ.
2. ಸಿಹಿ ಪದಾರ್ಥಗಳ ನಿಯಂತ್ರಣ (Avoid Sweets): ಸಕ್ಕರೆ, ಬೆಲ್ಲ, ಬೇಕರಿ ತಿಂಡಿಗಳು, ಐಸ್ಕ್ರೀಮ್ ಮತ್ತು ಕೃತಕ ಸಕ್ಕರೆ ಇರುವ ತಂಪು ಪಾನೀಯಗಳ ಬಳಕೆಯನ್ನು ಸಂಪೂರ್ಣವಾಗಿ ಕಡಿಮೆ ಮಾಡಿ ಅಥವಾ ದೂರವಿಡಿ.
3. ದಿನನಿತ್ಯದ ವ್ಯಾಯಾಮ (Regular Exercise): ಪ್ರತಿದಿನ ಕನಿಷ್ಠ 30 ರಿಂದ 45 ನಿಮಿಷಗಳ ಕಾಲ ವೇಗದ ನಡಿಗೆ (brisk walking), ಸೈಕ್ಲಿಂಗ್, ಈಜು ಅಥವಾ ಯೋಗ ಮಾಡುವುದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟ ನಿಯಂತ್ರಣಕ್ಕೆ ಬರುತ್ತದೆ.
4. ದೇಹದ ತೂಕದ ನಿರ್ವಹಣೆ (Weight Management): ಅತಿಯಾದ ದೇಹದ ತೂಕವು ಇನ್ಸುಲಿನ್ ಕಾರ್ಯಕ್ಷಮತೆಯನ್ನು ಕುಂಠಿತಗೊಳಿಸುತ್ತದೆ. ಆದ್ದರಿಂದ ತೂಕವನ್ನು ಆರೋಗ್ಯಕರ ಮಿತಿಯಲ್ಲಿ ಇಟ್ಟುಕೊಳ್ಳುವುದು ಅತ್ಯಗತ್ಯ.
5. ನಿಯಮಿತ ರಕ್ತದ ಪರೀಕ್ಷೆ (Regular Blood Sugar Check): ವೈದ್ಯರ ಸಲಹೆಯಂತೆ ಕಾಲಕಾಲಕ್ಕೆ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು (Fasting ಮತ್ತು Post Prandial) ಹಾಗೂ ಮೂರು ತಿಂಗಳ ಸರಾಸರಿ ತಿಳಿಸುವ HbA1c ಪರೀಕ್ಷೆಯನ್ನು ಮಾಡಿಸಿಕೊಳ್ಳಿ.
6. ಸಮಯಕ್ಕೆ ಸರಿಯಾಗಿ ಔಷಧಿ ಸೇವನೆ (Timely Medication): ವೈದ್ಯರು ಸೂಚಿಸಿದ ಮಾತ್ರೆಗಳನ್ನು ಅಥವಾ ಇನ್ಸುಲಿನ್ ಅನ್ನು ನಿಗದಿತ ಸಮಯಕ್ಕೆ ತೆಗೆದುಕೊಳ್ಳಿ. ಸ್ವಂತ ನಿರ್ಧಾರದಿಂದ ಔಷಧಿಯನ್ನು ನಿಲ್ಲಿಸಬೇಡಿ.
7. ಮಾನಸಿಕ ಒತ್ತಡದ ನಿರ್ವಹಣೆ (Stress Management): ಅತಿಯಾದ ಮಾನಸಿಕ ಒತ್ತಡವು ದೇಹದಲ್ಲಿ ಸಕ್ಕರೆ ಮಟ್ಟವನ್ನು ಹೆಚ್ಚಿಸುವ ಹಾರ್ಮೋನ್ಗಳನ್ನು ಬಿಡುಗಡೆ ಮಾಡುತ್ತದೆ. ಒತ್ತಡ ಕಡಿಮೆ ಮಾಡಿಕೊಳ್ಳಲು ಧ್ಯಾನ (Meditation) ಅಥವಾ ಹವ್ಯಾಸಗಳಲ್ಲಿ ತೊಡಗಿಕೊಳ್ಳಿ.
8. ಪೂರಕ ನೀರು ಕುಡಿಯುವುದು (Stay Hydrated): ದಿನವಿಡೀ ಸಾಕಷ್ಟು ಪ್ರಮಾಣದಲ್ಲಿ ನೀರು ಕುಡಿಯಿರಿ. ಇದು ದೇಹದಲ್ಲಿರುವ ಹೆಚ್ಚುವರಿ ಗ್ಲೂಕೋಸ್ ಮೂತ್ರದ ಮೂಲಕ ಹೊರಹೋಗಲು ಸಹಾಯ ಮಾಡುತ್ತದೆ.
9. ಉತ್ತಮ ನಿದ್ರೆ (Good Sleep): ಪ್ರತಿದಿನ ರಾತ್ರಿ 7 ರಿಂದ 8 ಗಂಟೆಗಳ ಕಾಲ ಶಾಂತಿಯುತವಾದ ನಿದ್ರೆ ಮಾಡುವುದು ದೇಹದ ಚಯಾಪಚಯ ಕ್ರಿಯೆ (Metabolism) ಮತ್ತು ಹಾರ್ಮೋನ್ಗಳ ಸಮತೋಲನಕ್ಕೆ ಬಹಳ ಮುಖ್ಯ.
10. ದುರಭ್ಯಾಸಗಳಿಂದ ದೂರವಿರಿ (Avoid Smoking and Alcohol): ಧೂಮಪಾನ ಮತ್ತು ಮದ್ಯಪಾನವು ಸಕ್ಕರೆ ಕಾಯಿಲೆಯ ತೊಂದರೆಗಳನ್ನು (ಹೃದಯ ಮತ್ತು ನರಗಳ ಸಮಸ್ಯೆ) ಮತ್ತಷ್ಟು ಹೆಚ್ಚು ಮಾಡುವುದರಿಂದ ಇವುಗಳಿಂದ ದೂರವಿರುವುದು ಒಳ್ಳೆಯದು.
ಗಮನಿಸಿ: ಈ ಮೇಲಿನ ಮಾಹಿತಿ ರೋಗದ ನಿರ್ವಹಣೆಗೆ ಸಾಮಾನ್ಯ ಮಾರ್ಗದರ್ಶನವಾಗಿದೆ. ಪ್ರತಿಯೊಬ್ಬರ ದೇಹ ಪ್ರಕೃತಿ ವಿಭಿನ್ನವಾಗಿರುವುದರಿಂದ, ನಿಮ್ಮ ವೈದ್ಯರ ವೈಯಕ್ತಿಕ ಸಲಹೆ ಮತ್ತು ಚಿಕಿತ್ಸೆಯ ಕ್ರಮವೇ ಅಂತಿಮ ಹಾಗೂ ಸುರಕ್ಷಿತ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಗರಿಕೆ ಹುಲ್ಲಿನ ಜ್ಯೂಸ್ನಲ್ಲಿದೆ ರಕ್ತದ ಕ್ಯಾನ್ಸರ್ ಗುಣಪಡಿಸುವ ಶಕ್ತಿ
ಗಿರೀಶ್ ಮುತ್ತು
ಗರಿಕೆ ಹುಲ್ಲಿನ ರಸದ ಸೇವನೆಯಿಂದ ದೇಹದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ. ಸಿನೊಡಾನ್ ಡ್ಯಾಕ್ಟಿಲಾನ್ ಪ್ರೊಟೀನ್ ಎಂಬ ಅಂಶವಿದ್ದು, ಇದು ರೋಗನಿರೋಧಕ ಶಕ್ತಿ ಹೆಚ್ಚಲು ಸಹಾಯ ಮಾಡುತ್ತದೆ. ಇದು ಜ್ವರದಂತಹ ಸಮಸ್ಯೆಗಳ ನಿವಾರಣೆಗೆ ಸಹಾಯ ಮಾಡುತ್ತದೆ. ಹಾಗಾಗೊ ವಾರಕೊಮ್ಮೆ ಅಥವಾ ಹದಿನೈದು ದಿನಕ್ಕೊಮ್ಮೆ ಗರಿಕೆ ಹುಲ್ಲಿನ ರಸ ಅಥವಾ ಕಷಾಯದ ಸೇವನೆ ಮಾಡಬೇಕು
ನಾವು ನಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಲು ಹಲವಾರು ರೀತಿಯ ವ್ಯಾಯಾಮ ಮತ್ತು ಡಯಟ್ ಮಾಡುತ್ತೇವೆ. ಈ ಮಳೆಗಾಲದಲ್ಲಿ ಅನೇಕ ಜನರು ಆರೋಗ್ಯ ಸಮಸ್ಯೆಗಳಿಂದ ದೂರವಿರಲು ಹಲವು ಬಗೆಯ ಜ್ಯೂಸ್ ಕುಡಿಯುತ್ತಾರೆ. ಹಣ್ಣು, ತರಕಾರಿ ರಸ ಕುಡಿದು ಆರೋಗ್ಯವಾಗಿರಲು ಪ್ರಯತ್ನಿಸುತ್ತಾರೆ. ಆದರೆ ಈ ಒಂದು ಜ್ಯೂಸ್ ಅನ್ನು ನೀವು ಕುಡಿದರೆ ನಿಮ್ಮತ್ತ ಕಾಯಿಲೆಗಳು ಸುಳಿಯುವುದೇ ಇಲ್ಲ. ಅದುವೇ ಗರಿಕೆ ಹುಲ್ಲುನ ಜ್ಯೂಸ್.
ಹೌದು… ಆಯುರ್ವೇದ ವೈದ್ಯರು ಈ ಮೂಲಿಕೆಯು ಆರೋಗ್ಯಕ್ಕೆ ಹಲವು ವಿಧಗಳಲ್ಲಿ ಪ್ರಯೋಜನಕಾರಿಯಾಗಿದೆ ಎನ್ನುತ್ತಾರೆ. ಇದನ್ನು ಸೇವಿಸುವುದರಿಂದ ದೇಹದಲ್ಲಿನ ಕ್ಯಾನ್ಸರ್ ಪ್ರಮಾಣವನ್ನು ಕಡಿಮೆ ಮಾಡಬಹುದು. ಅಲ್ಲದೆ ಈ ಹುಲ್ಲಿನ ರಸವನ್ನು ಕುಡಿಯುವುದರಿಂದ ರಕ್ತದಲ್ಲಿರುವ ಕ್ಯಾನ್ಸರ್ ಕೋಶಗಳು ಕಡಿಮೆಯಾಗುವುದು ಮಾತ್ರವಲ್ಲದೆ ರಕ್ತ ಶುದ್ಧವಾಗಿರುತ್ತದೆ.
ಈ ಗರಿಕೆ ಹುಲ್ಲಿನಲ್ಲಿ ವಿಟಮಿನ್ ಎ, ಕೆ, ಸಿ ಮತ್ತು ವಿಟಮಿನ್ ಇ ಗಳು ಸಮೃದ್ಧವಾಗಿದೆ. ಇದು ರಕ್ತವನ್ನು ಶುದ್ಧೀಕರಿಸುತ್ತದೆ ಮತ್ತು ರಕ್ತದೊತ್ತಡ, ರಕ್ತಹೀನತೆ ಮತ್ತು ರಕ್ತ ಸಂಬಂಧಿತ ಕಾಯಿಲೆಗಳನ್ನು ಗುಣಪಡಿಸುತ್ತದೆ. ಹಾಗಾದರೆ ಗರಿಕೆ ಹುಲ್ಲಿನ ಜ್ಯೂಸ್ನ ಇತರ ಆರೋಗ್ಯಕರ ಪ್ರಯೋಜನಗಳ ಬಗ್ಗೆ ತಿಳಿಯೋಣ.
ಗರಿಕೆ ರಸದ ಪ್ರಯೋಜನಗಳು
1. ಈ ಗರಿಕೆ ಹುಲ್ಲಿನ ಜ್ಯೂಸ್ ಎಲ್ಲಿಯೂ ಸಿಗುವುದಿಲ್ಲ. ಕೆಲವೆಡೆ ಮಾತ್ರ ಸಿಗುತ್ತದೆ. ಬೇರು ಮತ್ತು ಎಲೆಗಳು ಸೇರಿದಂತೆ ಗರಿಕೆ ಎಲ್ಲಾ ಭಾಗಗಳು ಔಷಧೀಯ ಗುಣಗಳನ್ನು ಹೊಂದಿದೆ. ಇದು ಕೆಲವು ಹಾನಿಕಾರಕ ವ್ಯಾಕ್ಸಿನಿಯಾ ವೈರಸ್ ಎಂಬ ಸೂಕ್ಷ್ಮಜೀವಿಯನ್ನು ನಾಶಪಡಿಸುವ ಗುಣವನ್ನು ಹೊಂದಿದೆ. ಹೀಗಾಗಿ ಈ ಜ್ಯೂಸ್ ಕುಡಿಯುವವರೂ ಇದು ಆರೋಗ್ಯಕ್ಕೆ ತುಂಬಾ ಒಳ್ಳೆಯದು ಎನ್ನುತ್ತಾರೆ.
2. ಮೂತ್ರಕೋಶದ ಕಲ್ಲುಗಳು, ದೇಹದ ಊತ, ಮಕ್ಕಳಲ್ಲಿ ದೀರ್ಘಕಾಲದ ನೆಗಡಿ, ಮೂಗು ಸೋರುವಿಕೆ, ನೆಗಡಿ, ಅತಿಸಾರ, ಕಣ್ಣಿನ ದೋಷಗಳು, ಮೆದುಳಿನ ರಕ್ತಸ್ರಾವದಂತಹ ಕಾಯಿಲೆಗಳಿಗೆ ಈ ರಸ ತುಂಬಾ ಒಳ್ಳೆಯದು.
3. ಅಲ್ಲದೆ ತೂಕ ನಷ್ಟ, ಕೊಲೆಸ್ಟ್ರಾಲ್ ಕಡಿತ, ನರರೋಗ, ರಕ್ತದ ಕ್ಯಾನ್ಸರ್ ಚಿಕಿತ್ಸೆ, ಕೆಮ್ಮು, ಹೊಟ್ಟೆ ನೋವು, ರಕ್ತಹೀನತೆ, ಸಂಧಿವಾತ, ಹೃದಯ ಅಸ್ವಸ್ಥತೆ, ಚರ್ಮ ರೋಗಗಳು ಇತ್ಯಾದಿಗಳಿಗೆ ಅತ್ಯುತ್ತಮ ಔಷಧವಾಗಿ ಕಾರ್ಯನಿರ್ವಹಿಸುತ್ತದೆ
4. ರಕ್ತದಲ್ಲಿನ ಹಿಮೋಗ್ಲೋಬಿನ್ ಮಟ್ಟವನ್ನು ಹೆಚ್ಚಿಸಲು ಮತ್ತು ರಕ್ತದಿಂದ ವಿಷವನ್ನು ತೆಗೆದುಹಾಕುವಲ್ಲಿ ಗರಿಕೆ ರಸವು ಪರಿಣಾಮಕಾರಿಯಾಗಿದೆ.
5. ಗರಿಕೆ ಹುಲ್ಲಿನ ರಸ ಮತ್ತು ಕೊಬ್ಬರಿ ಎಣ್ಣೆಯನ್ನು ಸಮಪ್ರಮಾಣದಲ್ಲಿ ಬೆರೆಸಿ ಕುದಿಸಬೇಕು.. ನಂತರ ಚರ್ಮರೋಗಗಳಾದ ರಿಂಗ್ವರ್ಮ್ ಮತ್ತು ಒಣ ಚರ್ಮವನ್ನು ತ್ವರಿತವಾಗಿ ಗುಣ ಪಡಿಸುತ್ತದೆ.
6. ಗರಿಕೆ ಹುಲ್ಲು ಬೇಕಾದಷ್ಟು ಸಂಗ್ರಹಿಸಿ, ಸ್ವಲ್ಪ ಅರಿಶಿನವನ್ನು ಸೇರಿಸಿ ಪೇಸ್ಟ್ ಮಾಡಿ ದೇಹಕ್ಕೆ ಉಜ್ಜಿಕೊಂಡರೆ, ಒಂದು ಗಂಟೆ ಬಿಟ್ಟು ನಂತರ ಸ್ನಾನ ಮಾಡಿ. ಇದರಿಂದ ದೇಹದ ತುರಿಕೆ ನಿವಾರಣೆಯಾಗುತ್ತದೆ.
ಗರಿಕೆ ಹುಲ್ಲಿನ ರಸ ತಯಾರಿಸುವುದು ಹೇಗೆ?
*ತಾಜಾ ಗರಿಕೆ ಹುಲ್ಲು ಒಂದು ಹಿಡಿಯಷ್ಟು ತೆಗೆದುಕೊಂಡು ಸ್ವಚ್ಚವಾಗಿ ತೊಳೆದುಕೊಳ್ಳಿ.
* ಬಳಿಕ ಇದನ್ನು ಸಣ್ಣ ಸಣ್ಣ ತುಂಡುಗಳನ್ನಾಗಿ ಕತ್ತರಿಸಿಕೊಳ್ಳಿ.
* ಬಳಿಕ ಇದನ್ನು ಮಿಕ್ಸಿಗೆ ಹಾಕಿ ರುಬ್ಬಿಕೊಳ್ಳಬೇಕು.
* ಚೆನ್ನಾಗಿ ಪೇಸ್ಟ್ ಆದ ಬಳಿಕ ಇದನ್ನು ಸೋಸಿಕೊಳ್ಳಬೇಕು.
* ಬಳಿಕ ಇದನ್ನು ಕುಡಿಯಬೇಕು. ಆದರೆ ಇದು ತಕ್ಷಣದ ಮನೆಮದ್ದಾಗಿದೆ. ಆದರೆ ಯಾವುದೇ ಆರೋಗ್ಯ ಸಮಸ್ಯೆಗಳಿಗೆ ಇದು ಕೊನೆಯ ಮದ್ದು ಅಲ್ಲ. ಹೀಗಾಗಿ ಯಾವುದೇ ಆರೋಗ್ಯ ಸಮಸ್ಯೆಗಳು ಉಂಟಾದಾಗ ಮೊದಲು ವೈದ್ಯರನ್ನು ಸಂಪರ್ಕಿಸುವುದು ತುಂಬಾ ಅವಶ್ಯಕ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ5 days ago10 ಮುಖ್ಯ ಅಂಶಗಳನ್ನು ಪಾಲಿಸಿ ; ಸಕ್ಕರೆ ಕಾಯಿಲೆಗೆ ಗುಡ್ ಬೈ ಹೇಳಿ..
-
ದಿನದ ಸುದ್ದಿ5 days agoವಸತಿ ಯೋಜನೆಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ6 days agoರಾಷ್ಟ್ರೀಯ ಖಾದ್ಯ ತೈಲ ಅಭಿಯಾನ – ಎಣ್ಣೆಕಾಳು ಕಾರ್ಯಕ್ರಮದಡಿ ಸೌಲಭ್ಯ: ಅರ್ಜಿ ಆಹ್ವಾನ
-
ದಿನದ ಸುದ್ದಿ6 days agoಉಚಿತ ಕೋಳಿ ಸಾಕಾಣಿಕೆ ತರಬೇತಿ: ಅರ್ಜಿ ಆಹ್ವಾನ
-
ದಿನದ ಸುದ್ದಿ6 days agoಕೃಷಿ ಪಂಡಿತ ಹಾಗೂ ಆತ್ಮ ಶ್ರೇಷ್ಠ ಕೃಷಿಕ ಪ್ರಶಸ್ತಿ: ಅರ್ಜಿ ಆಹ್ವಾನ
-
ದಿನದ ಸುದ್ದಿ2 days agoದಾವಣಗೆರೆ | ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ
-
ದಿನದ ಸುದ್ದಿ5 hours agoಆಯುರ್ವೇದ ಆರೋಗ್ಯಕರ ಜೀವನ ಶೈಲಿ

