ದಿನದ ಸುದ್ದಿ
ತುಂಗಾ ಮೇಲ್ದಂಡೆ ಯೋಜನೆ ಮುಖ್ಯ ಕಾಲುವೆ ಅಭಿವೃದ್ಧಿಗೆ ಸರ್ಕಾರದಿಂದ ಅನುಮತಿ
ಸುದ್ದಿದಿನಡೆಸ್ಕ್:ಹಾವೇರಿ ಜಿಲ್ಲೆ ರಟ್ಟೀಹಳ್ಳಿ ತಾಲೂಕಿನಲ್ಲಿ ಹಾದುಹೋಗಿರುವ ತುಂಗಾ ಮೇಲ್ದಂಡೆ ಯೋಜನೆ ಮುಖ್ಯ ಕಾಲುವೆಯನ್ನು 39.43ಕೋಟಿ ರೂಪಾಯಿ ವೆಚ್ಚದಲ್ಲಿ ಅಭಿವೃದ್ಧಿಪಡಿಸಲು ಸರ್ಕಾರದಿಂದ ಅನುಮತಿ ದೊರೆತಿದೆ ಎಂದು ಶಾಸಕ ಯು.ಬಿ.ಬಣಕಾರ ತಿಳಿಸಿದ್ದಾರೆ.
ರಟ್ಟೀಹಳ್ಳಿ ತಾಲೂಕಿನ ಜೋಕನಾಳದ ಐತಿಹಾಸಿಕ ಭಗವತಿ ಕೆರೆಗೆ ಬಾಗಿನ ಅರ್ಪಿಸಿ ಮಾತನಾಡಿದ ಅವರು, ತುಂಗಾ ಮೇಲ್ದಂಡೆ ಮುಖ್ಯ ಕಾಲುವೆ ನಿರ್ವಹಣೆ ಹಾಗೂ ಸರ್ವಿಸ್ ರಸ್ತೆ ನಿರ್ಮಿಸುವುದು ಯೋಜನೆಯಲ್ಲಿ ಸೇರಿಸಲಾಗಿದೆ. ಐತಿಹಾಸಿಕ ಭಗವತಿ ಕೆರೆಯ ವಿಸ್ತೀರ್ಣ ಗುರುತಿಸಿ ಬಿಗಿ ಭದ್ರತೆ ಮೂಲಕ ಕೆರೆಯ ಹೂಳೆತ್ತೆಲಾಗುವುದು ಎಂದರು.
ಮುಂದಿನ ಒಂದು ತಿಂಗಳಲ್ಲಿ ಪ್ರವಾಸೋದ್ಯಮ ಇಲಾಖೆಯ ಅಧಿಕಾರಿಗಳು, ಗ್ರಾಮದ ನಾಗರೀಕರೊಂದಿಗೆ ಚರ್ಚಿಸಿ ಕೆರೆಯ ಸಮಗ್ರ ಅಭಿವೃದ್ಧಿ ಜೊತೆಗೆ ಪ್ರವಾಸಿ ತಾಣವನ್ನಾಗಿಸಲು ಯೋಜನೆ ಸಿದ್ಧಪಡಿಸಲಾಗುವುದು ಎಂದು ಹೇಳಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243