ದಿನದ ಸುದ್ದಿ
ನಕಲಿ ಚಿನ್ನ ಮಾರಿ ಲಕ್ಷಾಂತರ ರೂಪಾಯಿ ವಂಚಿಸಿದ್ದ ಆರೋಪಿಗಳು ಅರೆಸ್ಟ್ !
ದಾವಣಗೆರೆ: ನಕಲಿ ಬಂಗಾರ ಮಾರಾಟ ಮಾಡಿ ವಂಚನೆ ಮಾಡುತ್ತಿದ್ದ ಇಬ್ಬರು ಆರೋಪಗಳನ್ನು ಪೊಲೀಸರು ಬಂಧಿಸಿದ್ದಾರೆ.
ಚನ್ನಗಿರಿ ತಾಲ್ಲೂಕಿನ ಚಿಕ್ಕಕುರುಬರಹಳ್ಳಿ ಗ್ರಾಮದ ವೆಂಕಟೇಶ್ ಹಾಗೂ ಚಿಕ್ಕಬೆನ್ನೂರು ಗ್ರಾಮದ ಮಂಜಪ್ಪ ಎಂಬುವವರನ್ನು ಅರೆಸ್ಟ್ ಮಾಡಲಾಗಿದೆ. ಆರೋಪಿಗಳು ಕಳೆದ ವರ್ಷ ತಮಿಳುನಾಡು ಮೂಲದ ರಾಜಕುಮಾರ್ ಎಂಬುವವರಿಗೆ ನಕಲಿ ಮಾರಿ 12.50 ಲಕ್ಷ ರೂಪಾಯಿ ವಂಚನೆ ಮಾಡಿದ್ದರು. ಪ್ರಕರಣ ಬೆನ್ನು ಹತ್ತಿದ ಪೊಲೀಸರು ಆರೋಪಗಳನ್ನು ಬಂಧಿಸುವಲ್ಲಿ ಯಶಸ್ವಿ ಆಗಿದ್ದಾರೆ.
ದಾವಣಗೆರೆ ಎಸ್ಪಿ ಆರ್. ಚೇತನ್ ಹಾಗೂ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಉದೇಶ ಅವರು ಡಿವೈಎಸ್‌ಪಿ ಎಂ.ಕೆ. ಗಂಗಲ್ ನೇತೃತ್ವದಲ್ಲಿ ತಂಡ ರಚಿಸಿದ್ದರು. ಆರೋಪಗಳಿಂದ 10.18 ಲಕ್ಷ ರೂಪಾಯಿ ವಶಪಡಿಸಿಕೊಳ್ಳಲಾಗಿದೆ.