ದಿನದ ಸುದ್ದಿ

ಉದಯಪುರ​ ಶಿರಚ್ಛೇದ ಪ್ರಕರಣ : ಆರೋಪಿಗಳನ್ನು ಬಂಧಿಸಿದ 5 ಪೊಲೀಸರಿಗೆ ಅವಧಿ ಮೀರಿದ ಬಡ್ತಿ ನೀಡಿದ ರಾಜಸ್ಥಾನ ಮುಖ್ಯಮಂತ್ರಿ

Published

on

ಸುದ್ದಿದಿನ,ರಾಜಸ್ಥಾನ: ನೂಪುರ್​ ಶರ್ಮಾ ಪರ ಪೋಸ್ಟ್​ ಹಾಕಿದ್ದಕ್ಕೆ ಉದಯಪುರ ದಲ್ಲಿ ಟೈಲರ್​ ಶಿರಚ್ಛೇಧ ಮಾಡಿರುವ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾದ ಪೊಲೀಸರಾದ ತೇಜ್‌ಪಾಲ್, ನರೇಂದ್ರ, ಶೌಕತ್, ವಿಕಾಸ್ ಮತ್ತು ಗೌತಮ್​​ಗೆ ರಾಜಸ್ಥಾನ ಸಿಎಂ ಅಶೋಕ್​ ಗೆಹ್ಲೋಟ್​ ಅವರು ತಮ್ಮ ಅವಧಿ ಮೀರಿದ ಬಡ್ತಿ ಘೋಷಣೆ ಮಾಡಿದ್ದಾರೆ.

ಕಡಿಮೆ ಅವಧಿಯಲ್ಲಿ ಈ ಐವರು ದಿಟ್ಟ ಪೊಲೀಸರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ರಾಜಸ್ಥಾನ ಸಿಎಂ ಅಶೋಕ್​ ಗೆಹ್ಲೋಟ್​ ಟ್ವೀಟ್​ ಮಾಡುವ ಮೂಲಕ ಅಭಿನಂದನೆ ಸಲ್ಲಿಸಿದ್ದಾರೆ.

ಟೈಲರ್​ ಕನ್ಹಯ್ಯ ಕುಮಾರ್​ ಎಂಬಾತನನ್ನು ದುಷ್ಕರ್ಮಿಗಳು ಕತ್ತು ಸೀಳಿ ಅತ್ಯಂತ ಬರ್ಬರವಾಗಿ ಕೊಲೆ ಮಾಡಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version