ದಿನದ ಸುದ್ದಿ

ಉದಯಪುರ ಹತ್ಯೆ ಭಯೋತ್ಪಾದಕ ಕೃತ್ಯ ; ಕಾಂಗ್ರೆಸ್ ನಾಯಕ ರಾಹುಲ್‌ ಗಾಂಧಿ ಖಂಡನೆ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ,ನವದೆಹಲಿ : ಉದಯಪುರದಲ್ಲಿ ನಡೆದ ಘೋರ ಹತ್ಯೆಯಿಂದ ನಾನು ತೀವ್ರ ಆಘಾತಕ್ಕೊಳಗಾಗಿದ್ದೇನೆ. ಧರ್ಮದ ಹೆಸರಿನಲ್ಲಿ ನಡೆಯುತ್ತಿರುವ ಕ್ರೌರ್ಯವನ್ನು ಸಹಿಸಲು ಸಾಧ್ಯವಿಲ್ಲ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.

ಈ ಕ್ರೌರ್ಯದಿಂದಾಗಿ ಭಯೋತ್ಪಾದನೆಯನ್ನು ಹರಡುವವರಿಗೆ ತಕ್ಷಣ ಕಠಿಣವಾದ ಶಿಕ್ಷೆಯಾಗಬೇಕು. ನಾವೆಲ್ಲರೂ ಒಟ್ಟಾಗಿ ದ್ವೇಷವನ್ನು ಸೋಲಿಸಬೇಕು. ನಾನು ಎಲ್ಲರಿಗೂ ಮನವಿ ಮಾಡುತ್ತೇನೆ ದೇಶದಲ್ಲಿ ಶಾಂತಿ ಮತ್ತು ಸಹೋದರತ್ವ ಕಾಪಾಡಿಕೊಳ್ಳಿ ಎಂದು ರಾಹುಲ್‌ ಗಾಂಧಿ ಟ್ವೀಟ್ ಮಾಡಿದ್ದಾರೆ.

ರಾಜಸ್ಥಾನದ ಉದಯಪುರದಲ್ಲಿ ಟೈಲರ್‌ನ ಭೀಕರ ಹತ್ಯೆಯ ಬಳಿಕ ಅಲ್ಲಿನ ಪರಿಸ್ಥಿತಿ ಪ್ರಕ್ಷುಬ್ಧಗೊಂಡಿದೆ. ಈ ಹಿನ್ನೆಲೆಯಲ್ಲಿ ಜನರು ಶಾಂತಿ ಪಾಲಿಸಲು ರಾಹುಲ್ ಗಾಂಧಿ ಮನವಿ ಮಾಡಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version