ದಿನದ ಸುದ್ದಿ
ಭ್ರೂಣ ಲಿಂಗ ಪತ್ತೆಯಾದಲ್ಲಿ ಕಠಿಣ ಕಾನೂನು ಕ್ರಮ : ಡಾ.ರಾಮ್ರಾವ್
ಸುದ್ದಿದಿನ,ಉಡುಪಿ : ಎನ್ ಟಿ ಪಿ ಮತ್ತು ಟಿ ಓ ಪಿ ಗರ್ಭಪಾತಕ್ಕೆ ಸಂಬಂಧಿಸಿದಂತೆ ಬೇರೆ ಬೇರೆ ಕಡತ ನಿರ್ವಹಣೆ ಮಾಡಿ, ಭ್ರೂಣಲಿಂಗ ಪತ್ತೆ ಮಾಡುವುದು ಸುಳಿವು ಸಿಕ್ಕಲ್ಲಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು, ಇದರ ಮಾಹಿತಿ ನೀಡಿದವರಿಗೆ ಬಹುಮಾನ ನೀಡಲಾಗುವುದಾಗಿ ತಿಳಿಸಿ ಭ್ರೂಣಲಿಂಗ ಪತ್ತೆಕಾಯ್ದೆ ಬಗ್ಗೆ ಪ್ರಚಾರ ಪಡಿಸುವುದಾಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ರಾಮ್ರಾವ್ ತಿಳಿಸಿದರು.
ಅವರು ಬುಧವಾರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಕಚೇರಿಯಲ್ಲಿ ನಡೆದ ಜಿಲ್ಲಾ ಮಟ್ಟದ ಪ್ರಸವ ಪೂರ್ವ ಭ್ರೂಣ ಲಿಂಗ ಪತ್ತೆ ಕಾಯಿದೆ ಬಗ್ಗೆ ಸಲಹಾ ಸಮಿತಿಯಲ್ಲಿ ಮಾತನಾಡಿ, ಭ್ರೂಣ ಲಿಂಗ ಪತ್ತೆ ನಿಷೇಧಿಸಲಾಗಿದೆ ಮತ್ತು ಭ್ರೂಣ ಲಿಂಗ ಪತ್ತೆ ಮಾಡುವುದಿಲ್ಲ ಎಂದು ದೊಡ್ಡದಾಗಿ ಸ್ಕಾನಿಂಗ್ ಸೆಂಟರ್ನ ರೋಗಿಗಳು ಕುಳಿತು ಕೊಳ್ಳುವ ಸ್ಥಳದ ಸಮೀಪ ಫಲಕವನ್ನು ಅಳವಡಿಸಬೇಕೆಂದು ಹೇಳಿದರು. ಗರ್ಭಿಣಿಯರನ್ನು ದಾಖಲಾತಿ ಮಾಡುವಾಗ ಹಳೆಯ ಪದ್ದತಿಯಂತೆ ಅನಿವಾರ್ಯ ಹೊರತು ಪಡಿಸಿ ಬಾಲಿಕಾ ಸಾಫ್ಟ್ವೇರ್ನಲ್ಲಿ ಏ ಫಾರಂ ಮೂಲಕ ಕಡ್ಡಾಯವಾಗಿ ಭರ್ತಿ ಮಾಡಿಕೊಳ್ಳಬೇಕು ಎಂದು ತಿಳಿಸಿದರು.
ಸೀಲ್ ಮಾಡಲಾದ ಸ್ಕಾನಿಂಗ್ ಯಂತ್ರವನ್ನು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಬೆಂಗಳೂರು ಇವರಿಂದ ನೋಂದಾಯಿತವಾದ ಸಂಸ್ಥೆಗೆ ತಕ್ಷಣ ವಿಲೆವಾರಿ ಮಾಡಬೇಕು. ಎನ್ನುವ ಮಾಹಿತಿಯನ್ನು ಎಲ್ಲಾ ಸ್ಕ್ಯಾನಿಂಗ್ ಸಂಸ್ಥೆಗೆ ತಿಳಿಸಿದ್ದು, ಇದುವರೆಗೂ ಕೆಲವೊಂದು ಸ್ಕಾನಿಂಗ್ ಸಂಸ್ಥೆಗಳು ವಿಲೇ ಮಾಡಿರುವುದಿಲ್ಲ. ಆದುದರಿಂದ ಎಲ್ಲಾ ಸ್ಕಾನಿಂಗ್ ಸಂಸ್ಥೆಗೆ ಸೀಲ್ ಮಾಡಲಾದ ಸ್ಕಾನಿಂಗ್ ಯಂತ್ರವನ್ನು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಬೆಂಗಳೂರು ಇವರಿಂದ ನೊಂದಾಯಿತ ಸಂಸ್ಥೆಗೆ ತಕ್ಷಣ ವಿಲೇ ಮಾಡುವ ಬಗ್ಗೆ ಪತ್ರ ಬರೆಯುವ ಬಗ್ಗೆ ಸಭೆಯಲ್ಲಿ ಸೂಚಿಸಲಾಯಿತು. ಎಲ್ಲಾ 14 ಸೀಲ್ ಮಾಡಲಾದ ಸಂಸ್ಥೆಗಳಿಗೆ ಪ್ರತ್ಯೇಕ ಸೂಚನೆ ನೀಡಲು ತೀರ್ಮಾನಿಸಲಾಯಿತು.
ಗಂಡು ಹೆಣ್ಣಿನ ಅನುಪಾತ ಕಡಿಮೆ ಇರುವ ಗ್ರಾಮಗಳಲ್ಲಿ ಶಿಶು ಮರಣ ಮತ್ತು ನಿರ್ಜಿವ ಜನನದ ಕುರಿತು ವೈದ್ಯಕೀಯ ಹಾಗೂ ಸಾಮಾಜಿಕ ಕಾರಣ ಹಾಗೂ ಲಿಂಗಾನುಪಾತದ ತಾರತಮ್ಯದ ಬಗ್ಗೆ ಕಸ್ತೂರ್ಬಾ ಮೆಡಿಕಲ್ ಕಾಲೇಜು ಮಣಿಪಾಲದ ಕಮ್ಯುನಿಟಿ ಮೆಡಿಸಿನ್ ವಿಭಾಗದವರಿಂದ ಆಯಾ ಕ್ಷೇತ್ರದ ಧರ್ಮಸ್ಥಳ ಗ್ರಾಮೀಣ ಅಭಿವೃದ್ಧಿ ಸ್ವ ಸಹಾಯ ಸಂಘದ ಸದಸ್ಯರ ಹಾಗೂ ಆಶಾ ಕಾರ್ಯಕರ್ತರ ಸಹಕಾರ ಪಡೆದು ಸರ್ವೇ ನಡೆಸಲು ಕೋರಿದ್ದು, ಅದರಂತೆ ಸರ್ವೇ ನಡೆಸಿ ಪ್ರಾಥಮಿಕ ವರದಿಯನ್ನು ನೀಡಿರುತ್ತಾರೆ ಆದರೆ ಸದ್ರಿ ವರದಿಯಲ್ಲಿ 53% ಗರ್ಭಪಾತ ಪ್ರಕರಣಗಳಿಗೆ ಕಾರಣ ಏನು ಎನ್ನುವ ಬಗ್ಗೆ ತಿಳಿಸಿರುವುದಿಲ್ಲ ಆದ್ದರಿಂದ ಅದರ ಬಗ್ಗೆ ಮರು ಸರ್ವೇ ಮಾಡಲು ಸಭೆಯಲ್ಲಿ ಸೂಚಿಸಿದ್ದು, ಸರ್ವೇ ನಡೆಸುವಾಗ ಯಾವೆಲ್ಲ ಮಾಹಿತಿಯನ್ನು ಕೇಳಿ ಪಡೆಯಬೇಕೆಂಬುದರ ಕುರಿತು ಚರ್ಚಿಸಲಾಯಿತು.
ಜಿಲ್ಲೆಯ ಎಲ್ಲಾ ಸ್ಕಾನಿಂಗ್ ಸಂಸ್ಥೆಗಳಿಗೆ ಅಗತ್ಯವಿರುವ ಉಪಕರಣಗಳನ್ನು ಒದಗಿಸಲು ಮಂಜೂರಾತಿಗಾಗಿ ಕೋರಲಾಗಿದ್ದು, ಅನುಮೋದನೆ ನೀಡಲು ಸಭೆಯಲ್ಲಿ ಚರ್ಚಿಸಲಾಯಿತು.
ಜಿಲ್ಲಾ ಪಿಸಿ ಮತ್ತು ಪಿಎನ್ಡಿಟಿ ಸಲಹಾ ಸಮಿತಿ ಅಧ್ಯಕ್ಷ ಡಾ.ಪ್ರತಾಪ್ ಕುಮಾರ್ ಅಧ್ಯಕ್ಷತೆ ವಹಿಸಿದ್ದರು.
ಸಭೆಯಲ್ಲಿ ಜಿಲ್ಲಾಪಿಸಿ & ಪಿಎನ್ಡಿಟಿ ಸಲಹಾ ಸಮಿತಿ ಸದಸ್ಯೆ ಡಾ.ಪಾರ್ವತಿ ಭಟ್, ಸಮಾಜ ಸೇವಕಿ ಗೀತಾ ವಾಗ್ಳೆ, ಜಿಲ್ಲಾ ಆಸ್ಪತ್ರೆಯ ರೇಡಿಯೋಲಜಿಸ್ಟ್ ಡಾ.ಆಮ್ನಾ ಹೆಗ್ಡೆ ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದುರ್ಗಾಂಬಿಕಾದೇವಿ ಜಾತ್ರೆ ; ಭಕ್ತಾದಿಗಳಿಗೆ ಶೌಚಾಲಯ ವ್ಯವಸ್ಥೆ
ಸುದ್ದಿದಿನ,ದಾವಣಗೆರೆ:ಫೆಬ್ರವರಿ 23 ರಿಂದ 27 ರವರೆಗೆ ನಡೆಯುವ ದುರ್ಗಾಂಬಿಕಾದೇವಿ ಜಾತ್ರೆ ಪ್ರಯಕ್ತ ದೇವಾಲಯಕ್ಕೆ ಆಗಮಿಸುವ ಭಕ್ತಾಧಿಗಳಿಗೆ ಶೌಚಾಲಯಗಳ ವ್ಯವಸ್ಥೆ ಕಲ್ಪಿಸಲಾಗಿದೆ.
ದೊಡ್ಡಪೇಟೆಯ ನಾಮದೇವ ಸಿಂಪಿ ಕಲ್ಯಾಣ ಮಂಟಪ, ವಿರಕ್ತಮಠ ಮತ್ತು ನಗರ ಕುಟುಂಬ ಕಲ್ಯಾಣ ಕೇಂದ್ರ-1, ಎಸ್.ಕೆ.ಪಿ ರಸ್ತೆಯ ಎಸ್.ವಿ.ಎಸ್.ಶಾಲೆ ಮತ್ತು ಕನ್ನಿಕಾಪರಮೇಶ್ವರಿ ದೇವಸ್ಥಾನ ಸಂಘ, ಮಾರ್ಕಂಡೇಶ್ವರ ಕಲ್ಯಾಣ ಮಂಟಪ, ಈ ಸ್ಥಳಗಳಲ್ಲಿರುವ ಶೌಚಾಲಯಗಳನ್ನು ಉಪಯೋಗಿಸುವ ಮೂಲಕ ದೇವಾಲಯದ ಸುತ್ತಮುತ್ತಲಿನ ಆವರಣವನ್ನು ಸ್ವಚ್ಚವಾಗಿಡಲು ಸಹಕರಿಸಬೇಕೆಂದು ಪಾಲಿಕೆ ಆಯುಕ್ತರು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಮಾಜಿ ದೇವದಾಸಿ ಮಹಿಳೆಯರ ಮರು ಸಮೀಕ್ಷೆ : ಆಕ್ಷೇಪಣೆಗಳಿಗೆ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ : ಮಾಜಿ ದೇವದಾಸಿ ಮಹಿಳೆಯರ ಮರು ಸಮೀಕ್ಷೆ -2025ಕ್ಕೆ ಸಂಬಂಧಿಸಿದಂತೆ ಜಿಲ್ಲಾ ಮಟ್ಟದ ಮೇಲ್ವಿಚಾರಣೆ ಮತ್ತು ಮೌಲ್ಯಮಾಪನಗಳಿಗೆ ಆಕ್ಷೇಪಣೆ, ತಕರಾರು ಸಲ್ಲಿಸಲು ಅರ್ಜಿ ಆಹ್ವಾನಿಸಲಾಗಿದೆ.
ತಿರಸ್ಕೃತಗೊಂಡ ಅರ್ಜಿಗಳ ಅಭ್ಯರ್ಥಿಗಳ ಆಕ್ಷೇಪಣೆಗಳಿದ್ದಲ್ಲಿ, ಮಾರ್ಚ್ 13 ರೊಳಗೆ ನಿಗದಿಪಡಿಸಿದ ದಿನಾಂಕದೊಳಗಾಗಿ ಪೂರಕ ದಾಖಲಾತಿಗಳನ್ನು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಗೆ ಸಲ್ಲಿಸಬೇಕೆಂದು ಜಿಲ್ಲಾಧಿಕಾರಿ ಗಂಗಾರ‍್ವಾಮಿ.ಜಿ.ಎಂ.ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಉದ್ಯೋಗಿಗಳಿಗೆ ಗೂಗಲ್ ಶಾಕ್..! AI ಕಲಿಯದಿದ್ದರೆ ಉದ್ಯೋಗ ತೊರೆಯಿರಿ
ಸುದ್ದಿದಿನ,ಬೆಂಗಳೂರು: ಜಗತ್ತಿನ ಟೆಕ್ ದೈತ್ಯ ಕಂಪನಿ ಗೂಗಲ್ ತನ್ನ ಉದ್ಯೋಗಿಗಳಿಗೆ ಶಾಕ್ ನೀಡಿದೆ. AI ಕಲಿಯದಿದ್ದರೆ ಉದ್ಯೋಗ ತೊರೆಯುವಂತೆ ಸೂಚಿಸಿದ್ದು, ‘ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP) ಘೋಷಿಸಿದೆ.
‘ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP)
AI ಕಲಿಯುವುದು ಅನಿವಾರ್ಯ: ಗೂಗಲ್ ಈಗ ಸಂಪೂರ್ಣವಾಗಿ ‘AI ಫಸ್ಟ್’ ಕಂಪನಿಯಾಗಿ ರೂಪಾಂತರಗೊಳ್ಳುತ್ತಿದೆ. ತಂತ್ರಜ್ಞಾನದ ವೇಗಕ್ಕೆ ಹೊಂದಿಕೊಳ್ಳಲು ಸಾಧ್ಯವಾಗದ ಅಥವಾ AI ಕಲಿಯಲು ಆಸಕ್ತಿ ಇಲ್ಲದ ಉದ್ಯೋಗಿಗಳಿಗೆ ಗೌರವಯುತವಾಗಿ ಉದ್ಯೋಗ ತೊರೆಯಲು ‘ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP) ಯನ್ನು ಜಾರಿಗೊಳಿಸಿದೆ.
ಯಾರಿಗೆ ಅನ್ವಯಿಸುತ್ತದೆ?: ಇದು ಮುಖ್ಯವಾಗಿ ಗೂಗಲ್‌ನ ಗ್ಲೋಬಲ್ ಬಿಸಿನೆಸ್ ಆರ್ಗನೈಸೇಷನ್ (GBO) ವಿಭಾಗದ ಉದ್ಯೋಗಿಗಳಿಗೆ (ಸೇಲ್ಸ್, ಕಾರ್ಪೊರೇಟ್ ಡೆವಲಪ್ಮೆಂಟ್ ಮತ್ತು ಸೊಲ್ಯೂಷನ್ಸ್ ಟೀಮ್) ಗೆ ಅನ್ವಯಿಸುತ್ತದೆ. ಆದರೆ, ಗ್ರಾಹಕರೊಂದಿಗೆ ನೇರ ಸಂಪರ್ಕ ಹೊಂದಿರುವ ತಂಡಗಳಿಗೆ ಇದರಿಂದ ವಿನಾಯಿತಿ ನೀಡಲಾಗಿದೆ.
ಇದು ಲೇ-ಆಫ್ ಅಲ್ಲ: ಇದು ಕಡ್ಡಾಯವಾಗಿ ಕೆಲಸದಿಂದ ತೆಗೆದುಹಾಕುವ ಪ್ರಕ್ರಿಯೆಯಲ್ಲ. ಬದಲಾಗಿ, ಸ್ವತಃ ಹೊರಹೋಗಲು ಬಯಸುವ ಉದ್ಯೋಗಿಗಳಿಗೆ ಉತ್ತಮ ಪರಿಹಾರ ಧನ (Severance Package) ಮತ್ತು ಇತರ ಸೌಲಭ್ಯಗಳನ್ನು ನೀಡಿ ಕಳುಹಿಸಿಕೊಡುವ ಯೋಜನೆಯಾಗಿದೆ.
ಕಾರಣವೇನು?: ತಂತ್ರಜ್ಞಾನ ಅತ್ಯಂತ ವೇಗವಾಗಿ ಬದಲಾಗುತ್ತಿದ್ದು, ಕಂಪನಿಗೆ AI ಮಿಷನ್‌ಗೆ ಸಂಪೂರ್ಣವಾಗಿ ಹೊಂದಿಕೊಳ್ಳುವ ಮತ್ತು ಕ್ರಿಯಾತ್ಮಕವಾಗಿ ಕೆಲಸ ಮಾಡುವ ಕಾರ್ಯಪಡೆಯ ಅಗತ್ಯವಿದೆ ಎಂದು ಗೂಗಲ್‌ನ ಚೀಫ್ ಬಿಸಿನೆಸ್ ಆಫೀಸರ್ ಫಿಲಿಪ್ ಶೆಡ್ಲರ್ ತಿಳಿಸಿದ್ದಾರೆ.
ಭವಿಷ್ಯದ ಮುನ್ಸೂಚನೆ: ಅಮೆಜಾನ್, ಮೆಟಾ ಮತ್ತು ಮೈಕ್ರೋಸಾಫ್ಟ್‌ನಂತಹ ಇತರ ಟೆಕ್ ದೈತ್ಯ ಕಂಪನಿಗಳು ಕೂಡ ಇದೇ ಹಾದಿಯಲ್ಲಿ ಸಾಗುವ ಸಾಧ್ಯತೆ ಇದೆ. 2026ರಲ್ಲಿ ಈ ನಾಲ್ಕು ಕಂಪನಿಗಳು AI ತಂತ್ರಜ್ಞಾನಕ್ಕಾಗಿ ಸುಮಾರು 58.92 ಲಕ್ಷ ಕೋಟಿ ರೂಪಾಯಿ ಹೂಡಿಕೆ ಮಾಡುವ ಅಂದಾಜಿದೆ.
ಒಟ್ಟಾರೆಯಾಗಿ, ಭವಿಷ್ಯದ ಉದ್ಯೋಗ ಮಾರುಕಟ್ಟೆಯಲ್ಲಿ AI ಕೌಶಲ್ಯ ಅತ್ಯಂತ ಅನಿವಾರ್ಯ ಎಂಬ ಎಚ್ಚರಿಕೆಯ ಸಂದೇಶವನ್ನು ಗೂಗಲ್ ಈ ಮೂಲಕ ನೀಡಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ6 days agoದಾವಣಗೆರೆ | ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಕೊಟ್ರೇಶ್ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ5 days agoಫೆ.14 ರಂದು ಸಂತ ಸೇವಾಲಾಲ್‌ರವರ 287ನೇ ಜಯಂತಿ ಕಾರ್ಯಕ್ರಮ
-
ದಿನದ ಸುದ್ದಿ4 days agoಎಸ್.ಎಸ್.ಎಲ್.ಸಿ ಫಲಿತಾಂಶ ಹೆಚ್ಚಿಸಲು ಕ್ರಮವಹಿಸಿ : ಶಿಕ್ಷಕರಿಗೆ ಡಿಸಿ ಗಂಗಾಧರಸ್ವಾಮಿ ಸೂಚನೆ
-
ದಿನದ ಸುದ್ದಿ6 days agoಕನ್ನಡಭಾಷೆಯಲ್ಲಿ ನಾಮಫಲಕ ಕಡ್ಡಾಯ : ಆಯುಕ್ತೆ ರೇಣುಕಾ ಆದೇಶ
-
ದಿನದ ಸುದ್ದಿ4 days agoಉದ್ಯೋಗಿಗಳಿಗೆ ಗೂಗಲ್ ಶಾಕ್..! AI ಕಲಿಯದಿದ್ದರೆ ಉದ್ಯೋಗ ತೊರೆಯಿರಿ
-
ದಿನದ ಸುದ್ದಿ23 hours agoಮಾಜಿ ದೇವದಾಸಿ ಮಹಿಳೆಯರ ಮರು ಸಮೀಕ್ಷೆ : ಆಕ್ಷೇಪಣೆಗಳಿಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ22 hours agoದುರ್ಗಾಂಬಿಕಾದೇವಿ ಜಾತ್ರೆ ; ಭಕ್ತಾದಿಗಳಿಗೆ ಶೌಚಾಲಯ ವ್ಯವಸ್ಥೆ

