ದಿನದ ಸುದ್ದಿ
ಉಡುಪಿ | ಜಿಲ್ಲೆಯಲ್ಲಿ ಮೀನು, ಮಾಂಸ ನಿರ್ಬಂದಿಸಿಲ್ಲ : ಜಿಲ್ಲಾಧಿಕಾರಿ
ಸುದ್ದಿದಿನ,ಉಡುಪಿ : ಜಿಲ್ಲೆಯಲ್ಲಿ ಮೀನು ಹಿಡಿಯುವುದು ಹಾಗೂ ಮಾರಾಟ ಮಾಡುವುದನ್ನು ನಿರ್ಬಂದಿಸಿಲ್ಲ, ಅದರೆ ಗುಂಪು ಗುಂಪಾಗಿ ಮೀನುಗಾರಿಕೆ ಮಾಡುವುದು ಹಾಗೂ ಮಾರಾಟ ಮಾಡುವುದಕ್ಕೆ ನಿರ್ಭಂದವಿದೆ, ಆದರೆ ಸಾಂಪ್ರದಾಯಿಕ ದೋಣಿಗಳಲ್ಲಿ ಮೀನುಗಾರಿಕೆ ಮಾಡಲು ಮತ್ತು ಸಾಮಾಜಿಕ ಅಂತರ ಕಾಯ್ದುಕೊಂಡು ಮೀನು , ಕೋಳಿ , ಮಾಂಸ ಮಾರಾಟ ಮಾಡಬಹುದು ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಸ್ಪಷ್ಠಪಡಿಸಿದ್ದಾರೆ.
ಅವರು ಗುರುವಾರ, ಉಡುಪಿ ಪತ್ರಿಕಾ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯ ರೈತರ ಬೆಳಗಳಿಗೆ ಸಹ ಯಾವುದೇ ತೊಂದರೆಯಾಗದಂತೆ ಸಮರ್ಪಕ ರೀತಿಯಲ್ಲಿ ಸಾಗಾಟ ಮತ್ತು ಮಾರಾಟಕ್ಕೆ ವ್ಯವಸ್ಥೆ ಮಾಡಲಾಗಿದೆ, ಎಪಿಎಂಸಿ ಮತ್ತು ತೋಟಗಾರಿಕಾ ಇಲಾಖೆಯ ಮೂಲಕ ಅಗತ್ಯ ಕ್ರಮಗಳನ್ನು ಕೈಗೊಂಡಿದ್ದು, ರೈತರು ಯಾವುದೇ ಆತಂಕ ಪಡುವ ಅಗತ್ಯವಿಲ್ಲ,ಆಹಾರ ಸಾಮಗ್ರಿಗಳ ಕೊರತೆಯಾಗದಂತೆ ಕ್ರಮ ಕೈಗೊಂಡಿದೆ, ಪಡಿತರ ವಿತರಣೆ ನಡೆಯುತ್ತಿದ್ದು ಯಾವುದೇ ಗೊಂದಲಗಳಿಗೆ ಆಸ್ಪದ ನೀಡದಂತೆ ಸಮರ್ಪಕ ರೀತಿಯಲ್ಲಿ ಪಡಿತರ ವಿತರಿಸಲಾಗುತ್ತಿದೆ, ಪಡಿತರ ದಾಸ್ತಾನು ಕೊರತೆಯಿಲ್ಲ ಎಂದು ಜಿ.ಜಗದೀಶ್ ತಿಳಿಸಿದರು.
ಜಿಲ್ಲೆಯಲ್ಲಿ ಜಿಲ್ಲಾಡಳಿತದಿಂದ ಕ್ವಾರಟೈಂನ್ ಮಾಡಿರುವವರ ಊಟ ಮತ್ತು ವಸತಿ ವ್ಯವಸ್ಥೆಯನ್ನು ಸಂಪೂರ್ಣವಾಗಿ ಜಿಲ್ಲಾಡಳಿತದ ಮೂಲಕ ಮಾಡುತ್ತಿದ್ದು, ಅವರಿಗೆ ಪೌಷ್ಠಿಕ ಆಹಾರ ಮತ್ತು ಹಣ್ಣುಗಳನ್ನು ಒದಗಿಸಲಾಗುತ್ತಿದೆ, ಜಿಲ್ಲೆಯಲ್ಲಿ ಇನ್ನು 4 ದಿನದಲ್ಲಿ ಪ್ರಸ್ತುತ ಕ್ವಾರಟೈಂನ್ ನಲ್ಲಿರುವರ ಅವಧಿ ಮುಗಿಯಲಿದೆ, ನಂತರ 14 ದಿನ ಅವರ ಬಗ್ಗೆ ನಿಗಾ ವಹಿಸಲಾಗುವುದು, ಹೋ ಕ್ವಾರಠೈಂನ್ ಉಲ್ಲಂಘಿಸುವವರ ವಿರುದ್ದ 2 ವರ್ಷಗಳ ಜೈಲು ವಾಸದ ಶಿಕ್ಷೆ ವಿಧಿಸಬಹುದಾಗಿದ್ದು, ಅವರಿಂದ ತೊಂದರೆಗೊಳಗಾದ ನಾಗರೀಕರ ಚಿಕಿತ್ಸಾ ವೆಚ್ಚವನ್ನು , ಕ್ವಾರಂಟೈನ್ ಉಲ್ಲಂಘಿಸಿದ ವ್ಯಕ್ತಿಯಿಂದಲೇ ವಸೂಲಿ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಸೂಚಿಸಿದರು.
ಜಿಲ್ಲೆಯಿಂದ ದೆಹಲಿಯಲ್ಲಿ ನಡೆದ ಪ್ರಾರ್ಥನೆಗೆ ಹೋದವರೂ ಯಾರೂ ಇಲ್ಲ, ಆದರೆ ಆ ಸಮಯದಲ್ಲಿ ಇತರೆ ಕಾರ್ಯದ ಮೇಲೆ ದೆಹಲಿಗೆ ಹೋಗಿದ್ದ ಜಿಲ್ಲೆಯ 16 ಜನರನ್ನು ಮೊಬೈಲ್ ಟವರ್ ಮೂಲಕ ಗುರುತಿಸಲಾಗಿದ್ದು, ಅದರಲ್ಲಿ 9 ಜನ ಹೋಂ ಕ್ವಾರಟೈಂನ್ ನಲ್ಲಿದ್ದು, ಇತÀರರು ಬೇರೆ ಜಿಲ್ಲೆಯಲ್ಲಿದ್ದು ಸಂಬಂದಪಟ್ಟ ಜಿಲ್ಲಾಡಳಿತಕ್ಕೆ ಅವರ ಬಗ್ಗೆ ಮಾಹಿತಿ ನೀಡಲಾಗಿದೆ , ಜಿಲ್ಲೆಯ ಸಾರ್ವಜನಿಕರು ಆತಂಕ ಪಡುವ ಅಗತ್ಯವಿಲ್ಲ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಸ್ಪಷ್ಠಪಡಿಸಿದರು.
ಜಿಲ್ಲೆಯಲ್ಲಿನ ವಲಸೆ ಕಾರ್ಮಿಕರಿಗೆ ಯಾವುದೇ ತೊಂದರೆಯಾದಗಂತೆ ಜಿಲ್ಲಾಡಳಿತ ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಂಡಿದ್ದು, ಕಾರ್ಮಿಕರು ಆತಂಕ ಪಡುವ ಅಗತ್ಯವಿಲ್ಲ, ಈಗಾಗಲೇ 3800 ಮಂದಿಗೆ ಅಗತ್ಯ ವ್ಯವಸ್ಥೆ ಕಲ್ಪಿಸಿದ್ದು , ಕಾರ್ಮಿಕರು ರೈಲ್ವೆ ಹಳಿಗಳ ಮೇಲೆ , ರಸ್ತೆಯಲ್ಲಿ ಸಂಚರಿಸಬಾರದು ಎಂದು ಡಿಸಿ ತಿಳಿಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243