ದಿನದ ಸುದ್ದಿ
ಉಡುಪಿ ಜಿಲ್ಲಾ ಮಲೆಕುಡಿಯ ಸಂಘ : ಅದ್ಯಕ್ಷ ಮತ್ತು ಪ್ರಧಾನ ಕಾರ್ಯದರ್ಶಿ ಆಯ್ಕೆ
ಸುದ್ದಿದಿನ,ಉಡುಪಿ : ಜಿಲ್ಲಾ ಮಲೆಕುಡಿಯ ಸಂಘ ದ2019 -20 ಸಾಲಿನ ನೂತನ ಪದಾಧಿಕಾರಿಗಳ ರಚನಾ ಸಭೆಯು ಜೂ.07ರಂದು ಸಂಘದ ಕೇಂದ್ರ ಕಛೇರಿ ಪೇರಡ್ಕದಲ್ಲಿ ಜಿಲ್ಲಾಧ್ಯಕ್ಷ ಸುಧಾಕರ ಗೌಡ ನಾಡ್ಪಾಲು ಇವರ ಅಧ್ಯಕ್ಷತೆಯಲ್ಲಿ ಜರುಗಿತು.
ಅಧ್ಯಕ್ಷರಾಗಿ ಮಂಜಪ್ಪ ಗೌಡ ನೂರಾಳ್ ಬೆಟ್ಟು, ಉಪಾಧ್ಯಕ್ಷರಾಗಿ ಸುಂದರ ಗೌಡ ಮುದ್ರಾಡಿ, ಗೋಪಾಲ ಗೌಡ ಎತ್ತಲ್ ಗುಡ್ಡೆ, ಪ್ರಧಾನ ಕಾರ್ಯದರ್ಶಿಯಾಗಿ ಸಾಧು ಗೌಡ ನಾರ್ಜೆ, ಸಹ ಕಾರ್ಯದರ್ಶಿಯಾಗಿ ಕಾವ್ಯ ಶಿರ್ಲಾಲು, ಕೋಶಾಧಿಕಾರಿಯಾಗಿ ವಿಷ್ಣುಮೂರ್ತಿ ಕೆರ್ವಾಶೆ, ಸಂಘಟನಾ ಕಾರ್ಯದರ್ಶಿಗಳಾಗಿ ಭಾಸ್ಕರ ಗೌಡ ಕೆರ್ವಾಶೆ, ವಿಜಯ್ ಗೌಡ ಈದು, ಪ್ರಕಾಶ್ ಗೌಡ ಅಂಡಾರು, ವಕ್ತಾರರಾಗಿ ಸುಂದರ ಗೌಡ ರೆಂಜಾಳ, ಗೌರವ ಸಲಹೆಗಾರರಾಗಿ ಸುಧಾಕರ ಗೌಡ ನಾಡ್ಪಾಲು, ವೀರಪ್ಪ ಗೌಡ ಪೇರಡ್ಕ ಆಯ್ಕೆಯಾದರು.
ಕಾರ್ಯಕಾರಿ ಸಮಿತಿ ಸದಸ್ಯರಾಗಿ ಶೇಖರ ಗೌಡ ಕೂಡ್ಲು, ವಸಂತ ಕಬ್ಬಿನಾಲೆ, ಪ್ರಶಾಂತ್ ಕುಂದಾಪುರ, ವಿನಯ್ ಗೌಡ ಬಲ್ಲಾಡಿ, ರಾಜು ಗೌಡ ನಾರ್ಜೆ, ವೀಣಾ ಶಿರ್ಲಾಲು, ಅಕ್ಷತಾ ಕೆರ್ವಾಶೆ, ನಾರ್ಣ ಮಾಳ, ಪುಪ್ಪ ಪೇರಡ್ಕ, ಪ್ರವೀಣ್ ನಲ್ಲೂರು, ಹರೀಶ್ ಹುಕ್ರಟ್ಟೆ, ನವೀನ್ ತೆಳ್ಳಾರು, ಸಂತೋಷ್ ಈದು, ನವೀನ್ ನೂರಾಳ್ ಬೆಟ್ಟು, ಮೋಹಿನಿ ಕಬ್ಬಿನಾಲೆ, ಅರುಣ್ ರೆಂಜಾಳ, ಪಾರ್ವತಿ ಕಬ್ಬಿನಾಲೆ, ದಿನೇಶ್ ಗೌಡ ಈದು, ಸುಜಾತ ಕಬ್ಬಿನಾಲೆ, ದುಗ್ಗಪ್ಪ ಸೂಡ, ಗೌರೀಶ್ ಕಾರ್ಕಳ ಆಯ್ಕೆಯಾದರು.
ಈ ಸಂದರ್ಭದಲ್ಲಿ ರಾಜ್ಯ ಪ್ರಧಾನ ಕಾರ್ಯದರ್ಶಿ ಶ್ರೀಧರ ಗೌಡ ಈದು, ರಾಜ್ಯ ಸಂಘಟನಾ ಕಾರ್ಯದರ್ಶಿ ಗಂಗಾಧರ ಗೌಡ ಈದು, ಉಡುಪಿ ಜಿಲ್ಲಾ ಮಲೆಕುಡಿಯ ಸಂಘದ ಉಪಾಧ್ಯಕ್ಷ ರಘುರಾಮ ಗೌಡ ಕಬ್ಬಿನಾಲೆ, ಪ್ರಧಾನ ಕಾರ್ಯದರ್ಶಿ ದಿನೇಶ್ ಗೌಡ ನೂರಾಳ್ ಬೆಟ್ಟು, ಕೋಶಾಧಿಕಾರಿ ರಂಜಿತ್ ಶಿರ್ಲಾಲು, ಕಾರ್ಕಳ ತಾಲೂಕು ಸಮಿತಿ ಅಧ್ಯಕ್ಷ ಶೇಖರ್ ಗೌಡ ಮಾಳ, ಹೆಬ್ರಿ ತಾಲೂಕು ಸಮಿತಿ ಅಧ್ಯಕ್ಷ ಉದಯ್ ಗೌಡ ಮುದ್ರಾಡಿ, ಕಾರ್ಕಳ ತಾಲೂಕು ಸಮಿತಿಯ ಪ್ರಧಾನ ಕಾರ್ಯದರ್ಶಿ ಅಶೋಕ ಗೌಡ ಕೆರ್ವಾಶೆ ಹಾಗೂ ತಾಲೂಕು ಸಮಿತಿ, ಗ್ರಾಮ ಸಮಿತಿಗಳ ಪದಾಧಿಕಾರಿಗಳು ಉಪಸ್ಥಿತಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
AI ವಲಯದಲ್ಲಿ ಜಗತ್ತಿನ ನೂರು ಪ್ರಭಾವಶಾಲಿ ವ್ಯಕ್ತಿಗಳ ಪಟ್ಟಿ ಪ್ರಕಟ
ಸುದ್ದಿದಿನಡೆಸ್ಕ್:ಕೃತಕ ಬುದ್ಧಿಮತ್ತೆ ವಲಯದಲ್ಲಿ ಜಗತ್ತಿನ ನೂರು ಪ್ರಭಾವಶಾಲಿ ವ್ಯಕ್ತಿಗಳ ಪಟ್ಟಿಯನ್ನು ಟೈಮ್ ಪತ್ರಿಕೆ ಪ್ರಕಟಿಸಿದ್ದು, ಅದರಲ್ಲಿ ಕೇಂದ್ರ ವಾರ್ತಾ ಮತ್ತು ಪ್ರಸಾರ ಹಾಗೂ ರೈಲ್ವೆ ಖಾತೆ ಸಚಿವ ಅಶ್ವಿನಿ ವೈಷ್ಣವ್ ಸ್ಥಾನ ಪಡೆದಿದ್ದಾರೆ.
ಅಶ್ವಿನಿ ವೈಷ್ಣವ್ ಅವರನ್ನು ಶಾರ್ಪರ್ ವರ್ಗದಲ್ಲಿ ಹೆಸರಿಸಲಾಗಿದ್ದು, ಅವರ ನಾಯಕತ್ವದಲ್ಲಿ ಮುಂದಿನ 5 ವರ್ಷಗಳಲ್ಲಿ ಸೆಮಿಕಂಡಕ್ಟರ್ ತಯಾರಿಕಾ ಕ್ಷೇತ್ರದ ಮೊದಲ 5 ದೇಶಗಳಲ್ಲಿ ಭಾರತ ಸ್ಥಾನ ಪಡೆಯುವ ಆಶಯದಲ್ಲಿದೆ ಎಂದು ಟೈಮ್ ಮ್ಯಾಗ್‌ಜೀನ್ ಬರೆದಿದೆ.
ಕೃತಕ ಬುದ್ಧಿಮತ್ತೆ ಕ್ಷೇತ್ರದಲ್ಲಿ ಭಾರತವನ್ನು ಪ್ರಮುಖ ಶಕ್ತಿಯಾಗಿ ಹೊರಹೊಮ್ಮಿಸುವ ಪ್ರಯತ್ನದಲ್ಲಿ ಸಚಿವರು ನಿರ್ವಹಿಸಿದ ಮಹತ್ವದ ಪಾತ್ರದ ಹಿನ್ನೆಲೆಯಲ್ಲಿ ಪಟ್ಟಿಯಲ್ಲಿ ಅವರ ಹೆಸರು ನಮೂದಿತವಾಗಿದೆ ಎಂದು ವಾರ್ತಾ ಮತ್ತು ಪ್ರಸಾರ ಸಚಿವಾಲಯ ತಿಳಿಸಿದೆ.
ಕೃತಕ ಬುದ್ಧಿಮತ್ತೆ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿ ಪ್ರಮುಖ ಕೊಡುಗೆ ನೀಡಿದ ಇನ್ಫೋಸೀಸ್‌ನ ಸಹ ಸಂಸ್ಥಾಪಕ ನಂದನ್ ನಿಲೇಕಣಿ, ಸಿಇಓಗಳಾದ ಗೂಗಲ್‌ನ ಸುಂದರ್ ಪಿಚಾಯಿ, ಮೈಕ್ರೋಸಾಫ್ಟ್‌ನ ಸತ್ಯ ನಾದೆಲ್ಲಾ, ಓಪನ್‌ಎಐ ನ ಸ್ಯಾಮ್ ಅಲ್ಟ್‌ಮನ್, ಮೆಟಾದ ಮಾರ್ಕ್ ಝುಕೇರ್‌ಬರ್ಗ್ ಟೈಮ್ ಪ್ರಕಟಿಸಿದ ಪಟ್ಟಿಯಲ್ಲಿ ಸೇರಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ರಾಜಧಾನಿಯಲ್ಲಿ ಅಪಾಯಕಾರಿ ಮರಗಳನ್ನು ಕತ್ತರಿಸುವಂತೆ ಡಿಸಿಎಂ ಡಿ.ಕೆ.ಶಿವಕುಮಾರ್ ಸೂಚನೆ
ಸುದ್ದಿದಿನಡೆಸ್ಕ್:ರಾಜಧಾನಿ ಬೆಂಗಳೂರಿನಲ್ಲಿ 15 ದಿನದೊಳಗೆ ಗುಂಡಿ ಮುಚ್ಚುವಂತೆ ಉಪಮುಖ್ಯಮಂತ್ರಿ ಹಾಗೂ ಬೆಂಗಳೂರು ಉಸ್ತುವಾರಿ ಸಚಿವ ಡಿ.ಕೆ ಶಿವಕುಮಾರ್ ಸೂಚಿಸಿದ್ದಾರೆ.
ವಿದೇಶ ಪ್ರವಾಸಕ್ಕೂ ಮುನ್ನ ವೈಯಾಲಿಕಾವಲ್ ಬಿಬಿಎಂಪಿ ಕಚೇರಿಯಲ್ಲಿ ಅಧಿಕಾರಿಗಳ ಜತೆ ಬೆಂಗಳೂರಿನ ರಸ್ತೆ ಗುಂಡಿಗಳನ್ನು ಮುಚ್ಚುವುದು ಸೇರಿದಂತೆ ಹಲವು ವಿಚಾರಗಳ ಬಗ್ಗೆ ಇಂದು ಸಭೆ ನಡೆಸಿದ ಅವರು ಸರಿಯಾಗಿ ಕಾರ್ಯನಿವಹಿಸದ ಅಧಿಕಾರಿಗಳನ್ನು ಅಮಾನತುಗೊಳಿಸುವ ಎಚ್ಚರಿಕೆ ನೀಡಿದ್ದಾರೆ.
ಸೆಪ್ಟಂಬರ್‌ನಲ್ಲಿ ಬೆಂಗಳೂರಿನಲ್ಲಿ ಮಳೆಯಾಗುವ ಸಾಧ್ಯತೆ ಇರುವುದರಿಂದ ಅಧಿಕಾರಿಗಳು ಎಚ್ಚೆತ್ತುಕೊಳ್ಳುವಂತೆ ತಿಳಿಸಿದ ಅವರು, ಅಪಾಯಕಾರಿ ಮರಗಳಿದ್ದರೆ, ಕತ್ತರಿಸುವಂತೆ ಸೂಚಿಸಿದ್ದಾರೆ.
ಯಾವುದೇ ದೂರು ಬಂದರೆ ಅಧಿಕಾರಿಗಳೇ ನೇರ ಹೊಣೆ ಎಂದಿದ್ದಾರೆ. ಸಭೆಯಲ್ಲಿ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್, ವಿಶೇಷ ಆಯುಕ್ತ ಮೌನೀಶ್ ಮೌದ್ಗೀಲ್, ಬಿಎಂಆರ್ಡಿಎ ಆಯುಕ್ತ, ಉಪಮುಖ್ಯಮಂತ್ರಿಗಳ ಕಾರ್ಯದರ್ಶಿ ರಾಜೇಂದ್ರ ಚೋಳನ್ ಮತ್ತಿತರರು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಮಹದಾಯಿ ವಿಚಾರದಲ್ಲಿ ತಪ್ಪು ದಾರಿಗೆ ಎಳೆಯುವ ಪ್ರಯತ್ನ : ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಆರೋಪ
ಸುದ್ದಿದಿನಡೆಸ್ಕ್:ಮಹದಾಯಿ ವಿಚಾರದಲ್ಲಿ ತಪ್ಪು ದಾರಿಗೆ ಎಳೆಯುವ ಪ್ರಯತ್ನ ಮಾಡಲಾಗುತ್ತಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಆರೋಪಿಸಿದ್ದಾರೆ.
ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಮಹದಾಯಿ ಯೋಜನೆಯ ಹಿನ್ನಡೆಗೆ ಕಾಂಗ್ರೆಸ್ ಕಾರಣ ಎಂದು ದೂರಿದ್ದಾರೆ. ಜುಲೈನಲ್ಲಿ ನಡೆದ ಸಭೆ ತಮ್ಮ ಗಮನಕ್ಕೆ ಬಂದಿಲ್ಲ ಎಂದು ತಿಳಿಸಿದ ಅವರು, ರಾಜ್ಯದ ಜನರ ಹಿತ ಕಾಪಾಡಲು ಬದ್ಧ ಎಂದು ಹೇಳಿದ್ದಾರೆ. ಮಹದಾಯಿ ಕೇವಲ ಗೋವಾ ಸಂಬಂಧಿ ಯೋಜನೆ ಅಲ್ಲ. ಅಲ್ಲಿ ಹುಲಿ ಸಂರಕ್ಷಿತ ಪ್ರದೇಶ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
-
ದಿನದ ಸುದ್ದಿ5 days ago
ಪರಿಶಿಷ್ಟ ಜಾತಿ ಯುವಕ , ಯುವತಿಯರಿಗೆ ಜಿಮ್ ಫಿಟ್ನೆಸ್, ಬ್ಯೂಟೀಷಿಯನ್, ಚಾಟ್ಸ್ ತಯಾರಿಕೆ ತರಬೇತಿಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ5 days ago
ರಾಯಚೂರು | ಶಾಲಾ ಬಸ್ ಅಪಘಾತ ; ಇಬ್ಬರು ವಿದ್ಯಾರ್ಥಿಗಳು ಸಾವು
-
ದಿನದ ಸುದ್ದಿ4 days ago
ಇಂದು ದೇಶಾದ್ಯಂತ ಗಣೇಶ ಹಬ್ಬದ ಸಂಭ್ರಮ
-
ದಿನದ ಸುದ್ದಿ5 days ago
ಸರ್ಕಾರಿ ಐಟಿಐ ಪ್ರವೇಶಕ್ಕೆ ಆಹ್ವಾನ
-
ದಿನದ ಸುದ್ದಿ3 days ago
ಆತ್ಮಕತೆ | ಸರಳ ಹಾಗೂ ಒಲವಿನ ಮದುವೆಗಳ ಸಾಲುಸಾಲು
-
ದಿನದ ಸುದ್ದಿ4 days ago
ಭಾನುವಾರವೂ ಕ್ಯಾಶ್ ಕೌಟರ್ ಓಪನ್ ; ವಿದ್ಯುತ್ ಬಿಲ್ ಬಾಕಿ ಪಾವತಿಸಿ : ಬೆಸ್ಕಾಂ
-
ದಿನದ ಸುದ್ದಿ3 days ago
ರಿವರ್ ಕ್ರಾಸಿಂಗ್ ತರಬೇತಿ ; ಬೋಟ್ ಮುಳುಗಿ ಇಬ್ಬರು ಕಮಾಂಡೋಗಳು ಸಾವು
-
ದಿನದ ಸುದ್ದಿ4 days ago
ಹತ್ತು ವರ್ಷಗಳ ಬಳಿಕ ಕಲಬುರಗಿಯಲ್ಲಿ ರಾಜ್ಯ ಸಚಿವ ಸಂಪುಟ ಸಭೆ ನಡೆಸಲು ಸರ್ಕಾರ ನಿರ್ಧಾರ