ದಿನದ ಸುದ್ದಿ
ಉಕ್ರೇನ್‍ನಿಂದ ಸುರಕ್ಷಿತವಾಗಿ ಹಿಂದಿರುಗಿದ ವಿದ್ಯಾರ್ಥಿಗಳ ಯೋಗಕ್ಷೇಮ ವಿಚಾರಿಸಿದ ಸಂಸದ ಡಾ.ಜಿ.ಎಂ.ಸಿದ್ದೇಶ್ವರ್
ಸುದ್ದಿದಿನ,ದಾವಣಗೆರೆ :ರಷ್ಯಾ ಮತ್ತು ಉಕ್ರೇನ್ ನಡುವೆ ನಡೆಯುತ್ತಿರುವ ಯುದ್ಧದಿಂದಾಗಿ ಉಕ್ರೇನ್‍ನಲ್ಲಿ ವೈದ್ಯಕೀಯ ಶಿಕ್ಷಣ ಪಡೆಯಲು ತೆರಳಿದ್ದ ಜಿಲ್ಲೆಯ ಕೆಲವು ವಿದ್ಯಾರ್ಥಿಗಳು ಸುರಕ್ಷಿತವಾಗಿ ಮರಳಿ ಬಂದಿದ್ದು, ಇನ್ನುಳಿದ ವಿದ್ಯಾರ್ಥಿಗಳನ್ನು ಕೂಡ ಕರೆತರಲು ವಿದೇಶಾಂಗ ಸಚಿವರ ಜೊತೆಗೆ ನಿರಂತರವಾಗಿ ಮಾತುಕತೆ ನಡೆಸುತ್ತಿದ್ದೇವೆ ಎಂದು ಸಂಸದ ಡಾ ಜಿ.ಎಂ ಸಿದ್ದೇಶ್ವರ್ ಹೇಳಿದರು.
ಶನಿವಾರ ನಗರದಲ್ಲಿ ಉಕ್ರೇನ್‍ನಿಂದ ವಾಪಾಸ್ಸಾದ ವಿದ್ಯಾರ್ಥಿಗಳ ಮನೆಗೆ ಭೇಟಿ ನೀಡಿ, ನಂತರ ಪೋಷಕರು ಮತ್ತು ವಿದ್ಯಾರ್ಥಿಗಳೊಂದಿಗೆ ಯೋಗಕ್ಷೇಮ ವಿಚಾರಿಸಿ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.
ಯುದ್ಧಪೀಡಿತ ಉಕ್ರೇನ್ ದೇಶದ ವಿವಿಧ ನಗರಗಳಲ್ಲಿರುವ ಭಾರತೀಯರನ್ನು ತೆರವುಗೊಳಿಸುವ ಬಗ್ಗೆ ಭಾರತದ ವಿದೇಶಾಂಗ ಸಚಿವಾಲಯ ಅಧಿಕಾರಿಗಳು ಉಕ್ರೇನ್ ಹಾಗೂ ರಷ್ಯಾ ಎರಡೂ ದೇಶಗಳ ಅಧಿಕಾರಿಗಳ ಸಂಪರ್ಕದಲ್ಲಿದ್ದಾರೆ, ಉಕ್ರೇನ್‍ನಿಂದ ವಾಪಾಸ್ಸಾದ ವಿದ್ಯಾರ್ಥಿಗಳ ಮುಂದಿನ ವಿದ್ಯಾಭ್ಯಾಸದ ಬಗ್ಗೆ ನಮ್ಮ ಸರ್ಕಾರ ಚಿಂತನೆ ನಡೆಸುತ್ತಿದೆ, ಹೀಗಾಗಿ ವಿದ್ಯಾರ್ಥಿಗಳು ಆತಂಕ ಪಡದೇ ಧೈರ್ಯವಾಗಿರಿ ಎಂದು ಸಂಸದ ಜಿ.ಎಂ. ಸಿದ್ದೇಶ್ವರ ಅವರು ಹೇಳಿದರು.
ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಮಾತನಾಡಿ, ಭಾರತ ಸರ್ಕಾರ ತನ್ನ ಸ್ವಂತ ಖರ್ಚಿನಲ್ಲಿ ಬಸ್, ವಿಮಾನ, ರೈಲುಗಳ ಮೂಲಕ ವಿದ್ಯಾರ್ಥಿಗಳನ್ನು ಮರಳಿ ಭಾರತಕ್ಕೆ ಕರೆತರುತ್ತಿದೆ, ಜಿಲ್ಲೆಯ ಕೆಲವು ವಿದ್ಯಾರ್ಥಿಗಳು ಈಗಾಗಲೇ ಮರಳಿದ್ದು, ಇನ್ನುಳಿದ ವಿದ್ಯಾರ್ಥಿಗಳನ್ನು ಕೂಡ ಸುರಕ್ಷಿತವಾಗಿ ಕರೆತರುವ ಪ್ರಯತ್ನ ಮಾಡುತ್ತಿದ್ದೇವೆ. ಪೋಷಕರು ಭಯಪಡದೇ ಧೈರ್ಯವಾಗಿರಬೇಕು ಎಂದರು.
ಉಕ್ರೇನ್‍ನಿಂದ ವಾಪಾಸ್ಸಾದ ವಿದ್ಯಾರ್ಥಿಗಳಾದ ಸಂಜಯ್‍ಕುಮಾರ್, ಸಯ್ಯದ್ ಹಬೀಬಾ ಹಾಗೂ ವಿನಯ್ ಕಲ್ಲಿಹಾಳ್ ಮಾತನಾಡಿ, ಉಕ್ರೇನ್ ತೊರೆಯುವಂತೆ ವಿದ್ಯಾರ್ಥಿಗಳಿಗೆ ಭಾರತದ ರಾಯಭಾರಿ ಕಚೇರಿಯೂ ಸೂಚಿಸಿತ್ತು. ಆದರೆ ನಾವು ಓದುತ್ತಿದ್ದ ಕಾಲೇಜಿನವರು ವಾಪಸ್ ಹೋಗದಂತೆ ಹೇಳಿದ್ದರು, ಹಾಜರಾತಿಯೂ ಕಡ್ಡಾಯವಾಗಿತ್ತು. ಆನ್‍ಲೈನ್ ತರಗತಿಯ ಅವಕಾಶವು ಕೂಡ ಇರಲಿಲ್ಲ. ಹಾಗಾಗಿ ವಾಪಸ್ ಬರಲು ಪರಿಸ್ಥಿತಿ ಕಷ್ಟಕರವಾಗಿತ್ತು. ರಷ್ಯಾ ದಾಳಿ ಆರಂಭಿಸಿದ ನಂತರ ವಿಮಾನ ಸಂಚಾರ ರದ್ದಾದವು, ಆಗ ನಾವು ಬಂಕರ್‍ಗಳಲ್ಲಿ ಆಶ್ರಯ ಪಡೆದಿದ್ದೆವು ಎಂದು ತಿಳಿಸಿದರು.
ದೇಶಕ್ಕೆ ಸುರಕ್ಷಿತವಾಗಿ ಮರಳುವ ನಂಬಿಕೆ ಕಳೆದುಕೊಂಡಿದ್ದೆವು, ಕಷ್ಟಪಟ್ಟು ಉಕ್ರೇನ್ ಗಡಿ ದಾಟಿ ಬಂದೆವು, ಅಲ್ಲಿಂದ ಭಾರತ ಸರ್ಕಾರ ಮತ್ತು ಸೇನೆಯ ಅಧಿಕಾರಿಗಳು ನಮ್ಮನ್ನು ಸುರಕ್ಷಿತವಾಗಿ ಜಿಲ್ಲೆಗೆ ಕರೆತಂದರು. ಹೀಗಾಗಿ ಸರ್ಕಾರಕ್ಕೆ ಧನ್ಯವಾದಗಳನ್ನು ತಿಳಿಸುತ್ತೇವೆ ಎಂದು ಹೇಳಿದರು.
ಇದೆ ವೇಳೆ ಉಕ್ರೇನ್‍ನಲ್ಲಿ ಸಿಲುಕಿಕೊಂಡಿರುವ ಜಿಲ್ಲೆಯ ವಿದ್ಯಾರ್ಥಿ ಕುಶಾಲ್ ಶಂಕರಣ್ಣನವರ್ ಮನೆಗೆ ಸಂಸದರು ಹಾಗೂ ಜಿಲ್ಲಾಧಿಕಾರಿಗಳು ಭೇಟಿ ನೀಡಿ ಆದಷ್ಟು ಬೇಗ ಅವರನ್ನು ಉಕ್ರೇನ್‍ನಿಂದ ಕರೆ ತರುವ ಎಲ್ಲಾ ಪ್ರಯತ್ನ ಮಾಡಲಾಗುವುದು ಎಂದು ಪೋಷಕರಿಗೆ ಭರವಸೆ ನೀಡಿ ಧೈರ್ಯ ತುಂಬಿದರು.
ಇದೇ ಸಂದರ್ಭದಲ್ಲಿ ಮಹಾನಗರ ಪಾಲಿಕೆ ಮೇಯರ್ ಜಯಮ್ಮ ಗೋಪಿನಾಯ್ಕ್ ಹಾಗೂ ಉಪ ಮೇಯರ್ ಗಾಯಿತ್ರಿಬಾಯಿ, ಧೂಡಾ ಮಾಜಿ ಅಧ್ಯಕ್ಷ ಯಶವಂತ್‍ರಾವ್ ಜಾಧವ್, ಡಿವೈಎಸ್ಪಿ ನರಸಿಂಹ ತಾಮ್ರಧ್ವಜ ಹಾಗೂ ಇತರರು ಹಾಜರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಭಾನುವಾರವೂ ಕ್ಯಾಶ್ ಕೌಟರ್ ಓಪನ್ ; ವಿದ್ಯುತ್ ಬಿಲ್ ಬಾಕಿ ಪಾವತಿಸಿ : ಬೆಸ್ಕಾಂ
ಸುದ್ದಿದಿನಡೆಸ್ಕ್:ವಿದ್ಯುತ್ ಬಿಲ್ ಬಾಕಿ ಉಳಿಸಿಕೊಂಡಿರುವ ಗ್ರಾಹಕರು ವಿದ್ಯುತ್ ಸಂಪರ್ಕದ ಕಡಿತದಿಂದ ತೊಂದರೆಗೊಳಗಾಗದಂತೆ ನಾಳೆ ಮತ್ತು ಇದೇ 15ರ ಭಾನುವಾರವೂ ಬೆಸ್ಕಾಂ ಉಪ ವಿಭಾಗಗಳ ಕ್ಯಾಶ್ ಕೌಂಟರ್‌ಗಳು ತೆರೆದಿರಲಿವೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.
ಬಿಲ್ ಬಾಕಿ ಉಳಿಸಿಕೊಂಡಿರುವ ಗ್ರಾಹಕರು ವಿದ್ಯುತ್ ಸಂಪರ್ಕ ಕಡಿತದಿಂದ ತೊಂದರೆಗೆ ಒಳಗಾಗಬಾರದು ಹಾಗೂ ಆನ್‌ಲೈನ್ ಪೇಮೆಂಟ್ ಬಳಸದವರ ಅನಕೂಲಕ್ಕಾಗಿ ಈ ವಿಶೇಷ ವ್ಯವಸ್ಥೆ ಮಾಡಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ಬಿಲ್ ಬಂದ 30 ದಿನದೊಳಗೆ ವಿದ್ಯುತ್ ಶುಲ್ಕ ಪಾವತಿಸದಿದ್ದಲ್ಲಿ ಮತ್ತು ಹೆಚ್ಚುವರಿ ಭದ್ರತಾ ಠೇವಣಿ ಮೊತ್ತ ಪಾವತಿಸದಿದ್ದಲ್ಲಿ ಕೆಇಆರ್‌ಸಿ ನಿಯಮಾವಳಿ ಅನ್ವಯ ಗ್ರಾಹಕರ ವಿದ್ಯುತ್ ಸಂಪರ್ಕ ಕಡಿತಗೊಳಿಸಲು ನಿರ್ಧರಿಸಿದ್ದು, ಸೆಪ್ಟೆಂಬರ್ 1ರಿಂದಲೇ ಈ ನಿಯಮ ಜಾರಿಯಾಗಿದೆ ಎಂದು ಹೇಳಿದೆ.
ವಿದ್ಯುತ್ ಬಿಲ್ ಬಾಕಿ ಮೊತ್ತ ಮತ್ತು ಹೆಚ್ಚುವರಿ ಭದ್ರತಾ ಠೇವಣಿ ಮೊತ್ತ 100 ರೂಪಾಯಿ ಗಳಿಗಿಂತ ಅಧಿಕವಾಗಿದ್ದಲ್ಲಿ, ಅಂತಹ ಸ್ಥಾಪನಗಳ ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸಲಾಗುತ್ತದೆ. ಗೃಹ ಜ್ಯೋತಿಯೋಜನೆ ಅಡಿ ಶೂನ್ಯ ಬಿಲ್ ಪಡೆಯುತ್ತಿರುವ ಗ್ರಾಹಕರ ಹಿಂಬಾಕಿ ಶೂನ್ಯವಿದ್ದಲ್ಲಿ ಈ ಬಗ್ಗೆ ಚಿಂತಿಸಬೇಕಿಲ್ಲ ಎಂದು ಪ್ರಕಟಣೆ ಸ್ಪಷ್ಟಪಡಿಸಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಹತ್ತು ವರ್ಷಗಳ ಬಳಿಕ ಕಲಬುರಗಿಯಲ್ಲಿ ರಾಜ್ಯ ಸಚಿವ ಸಂಪುಟ ಸಭೆ ನಡೆಸಲು ಸರ್ಕಾರ ನಿರ್ಧಾರ
ಸುದ್ದಿದಿನಡೆಸ್ಕ್:ಹತ್ತು ವರ್ಷಗಳ ಬಳಿಕ ಕಲಬುರಗಿ ಜಿಲ್ಲೆಯಲ್ಲಿ ರಾಜ್ಯ ಸಚಿವ ಸಂಪುಟ ಸಭೆ ನಡೆಸಲು ಸರ್ಕಾರ ನಿರ್ಧರಿಸಿದೆ.
ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿ ಕುರಿತಂತೆ ಚರ್ಚೆ ನಡೆಸಿ, ನಿರ್ಣಯ ತೆಗೆದುಕೊಳ್ಳಲು ಸೆಪ್ಟೆಂಬರ್ 17ಕ್ಕೆ ಸಂಪುಟ ಸಭೆ ನಡೆಯಲಿದೆ.
ಜಿಲ್ಲೆಯ ಮಿನಿ ವಿಧಾನಸೌಧದಲ್ಲಿರುವ ಪ್ರಾದೇಶಿಕ ಆಯುಕ್ತರ ಕಾರ್ಯಾಲಯದ ಸಭಾಂಗಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆಯುವ ಸಂಪುಟ ಸಭೆಯಲ್ಲಿ ಕಲ್ಯಾಣ ಕರ್ನಾಟಕದ ಬಗ್ಗೆ ವಿಶೇಷ ಆದ್ಯತೆ ನೀಡಲು ನಿರ್ಧರಿಸಲಾಗಿದೆ. ಈ ಹಿಂದೆ 2014ರ ನವೆಂಬರ್ 28ರಂದು ಸಿದ್ದರಾಮಯ್ಯ ನೇತೃತ್ವದಲ್ಲಿ ಕಲಬುರಗಿಯಲ್ಲಿ ರಾಜ್ಯ ಸಚಿವ ಸಂಪುಟ ಸಭೆ ನಡೆದಿತ್ತು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಇಂದು ದೇಶಾದ್ಯಂತ ಗಣೇಶ ಹಬ್ಬದ ಸಂಭ್ರಮ
ಸುದ್ದಿದಿನಡೆಸ್ಕ್:ಇಂದು ಗಣೇಶ ಚತುರ್ಥಿ, ದೇಶ ಸೇರಿ ನಾಡಿನದ್ಯಂತ ಹಿಂದೂ ಸಂಪ್ರದಾಯದಲ್ಲಿ ನಾಡಿನ ಜನತೆ ತಮ್ಮ ಒಳಿತಿಗಾಗಿ, ಜ್ಞಾನ ಸಮೃದ್ಧಿಗಾಗಿ ಶಿವನ ಪುತ್ರ ಗಣೇಶನ ಮೂರ್ತಿಗಳನ್ನು ಪ್ರತಿಷ್ಠಾಪನೆ ಮಾಡಿ ಅತ್ಯಂತ ಶ್ರದ್ದಾ ಭಕ್ತಿಯಿಂದ ಈ ಹಬ್ಬವನ್ನು ಆಚರಣೆ ಮಾಡುತ್ತಿದ್ದಾರೆ ಅದರಂತೆ ಬೆಂಗಳೂರು ಜನತೆ ಮನೆ ಮನೆಗಳಲ್ಲಿ ಪ್ರತಿಷ್ಠಾಪನೆ ಮಾಡಿರುವ ಗಣೇಶನ ಮೂರ್ತಿಗಳನ್ನು ಜಲ ಮೂಲಗಳಲ್ಲಿ ವಿಸರ್ಜಿಸಲು ಬೆಂಗಳೂರು ಮಹಾ ನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಎಲ್ಲಾ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ.
ಇನ್ನೂ ಗಣೇಶ ಚತುರ್ಥಿ ವಿಶೇಷವಾಗಿ ನಾಡಿನ ಜನತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಸೇರಿದಂತ್ತೆ ಅನೇಕ ಸಚಿವರು ಹಾಗೂ ಗಣ್ಯರು ಶುಭ ಹಾರೈಸಿದ್ದಾರೆ.
ಗಣೇಶ ಹಬ್ಬದ ಆಚರಣೆಯ ಸಂದರ್ಭದಲ್ಲಿ ಮದ್ಯಪಾನಾಸಕ್ತರು ಗಲಭೆಮಾಡುವ ಸಾಧ್ಯತೆ ಇದ್ದು, ಈ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆ ಮತ್ತು ಸಾರ್ವಜನಿಕ ಶಾಂತಿ ಕಾಪಾಡುವ ದೃಷ್ಟಿಯಿಂದ ಕರ್ನಾಟಕ ಅಬಕಾರಿ ನಿಯಮಗಳಡಿ ಇಂದಿನಿಂದ ಉಡುಪಿ ಜಿಲ್ಲೆಯಾದ್ಯಂತ ಹಾಗೂ ಉಡುಪಿ ನಗರಸಭೆ ವ್ಯಾಪ್ತಿಯಲ್ಲಿ ಇದೇ 9 ಮತ್ತು ಸೆಪ್ಟೆಂಬರ್ 11 ರಂದು ಮಧ್ಯಾಹ್ನ 2 ರಿಂದ ಮದ್ಯರಾತ್ರಿ 12.00 ಗಂಟೆಯವರೆಗೆ ಮದ್ಯ ಮಾರಾಟವನ್ನು ನಿಷೇಧಿಸಿ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಆದೇಶ ಹೊರಡಿಸಿದ್ದಾರೆ.
ನೈಸರ್ಗಿಕವಾಗಿ ತಯಾರಿಸಿದ ಮಣ್ಣಿನ ಗಣೇಶನ ವಿಗ್ರಹಗಳನ್ನು ಮಾತ್ರ ಬಳಸುವ ಮೂಲಕ ಕೆರೆ, ನದಿ ಮೂಲಗಳು ಕಲುಷಿತಗೊಳಿಸದಂತೆ ಕಾಪಾಡುವುದು ನಮ್ಮ ಕರ್ತವ್ಯ ಎಂದು ಸಣ್ಣ ನೀರಾವರಿ ಖಾತೆ ಸಚಿವ ಎನ್.ಎಸ್.ಬೋಸರಾಜು ಹೇಳಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
-
ದಿನದ ಸುದ್ದಿ7 days ago
ಪತ್ರಕರ್ತರಿಗೆ ನಿವೇಶನ ಒದಗಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು : ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್
-
ದಿನದ ಸುದ್ದಿ6 days ago
ಮಾಯಕೊಂಡ ಗುಡ್ಡದಹಳ್ಳಿಗೆ ಕೆ.ಎಸ್.ಆರ್.ಟಿ.ಸಿ.ಬಸ್ ಸೌಕರ್ಯ: ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್
-
ದಿನದ ಸುದ್ದಿ7 days ago
ಆತ್ಮಕತೆ | ನಮ್ಮ ಬಿಆರ್ಪಿ ಸ್ನಾತಕೋತ್ತರ ಕೇಂದ್ರ
-
ದಿನದ ಸುದ್ದಿ6 days ago
ಸಮಾಜ ಕಲ್ಯಾಣ ಇಲಾಖೆ : ಪ್ರೋತ್ಸಾಹಧನಕ್ಕಾಗಿ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ
-
ದಿನದ ಸುದ್ದಿ6 days ago
ಶ್ರೀ ಮಹರ್ಷಿ ವಾಲ್ಮೀಕಿ ಸ್ಮರಣಾರ್ಥ ಪ್ರಶಸ್ತಿಗೆ ಆರ್ಜಿ ಆಹ್ವಾನ
-
ದಿನದ ಸುದ್ದಿ7 days ago
ನ್ಯಾಮತಿ | ತೂಕ ವಂಚನೆ ; ನ್ಯಾಯಬೆಲೆ ಅಂಗಡಿ ಅಮಾನತಿಗೆ ಡಿಸಿ ಆದೇಶ
-
ದಿನದ ಸುದ್ದಿ6 days ago
ಬಾಲ್ಯ ವಿವಾಹ ತಡೆಗೆ ನೂತನ ಕಾಯ್ದೆ ಜಾರಿ : ಸಚಿವೆ ಲಕ್ಷ್ಮಿ ಹೆಬ್ಬಾಳ್ಕಕರ್
-
ದಿನದ ಸುದ್ದಿ6 days ago
KPSC | ಮರು ಪರೀಕ್ಷೆಗೆ ಸಿಎಂ ಸಿದ್ದರಾಮಯ್ಯ ಸೂಚನೆ