Connect with us

ದಿನದ ಸುದ್ದಿ

13,207 ವಿದ್ಯಾರ್ಥಿಗಳಿಗೆ ಸ್ನಾತಕ ಮತ್ತು ಸ್ನಾತಕೋತ್ತರ ಪದವಿ ಪ್ರಧಾನ : ಇಂದು ದಾವಣಗೆರೆ ವಿಶ್ವವಿದ್ಯಾನಿಲಯದಲ್ಲಿ 8ನೇ ಘಟಿಕೋತ್ಸವ

Published

on

ಸುದ್ದಿದಿನ,ದಾವಣಗೆರೆ: ದಾವಣಗೆರೆ ವಿಶ್ವವಿದ್ಯಾನಿಲಯ 8ನೇ ಘಟಿಕೋತ್ಸವವನ್ನು ಏ.8 ರ ಬೆಳಿಗ್ಗೆ 11 ಗಂಟೆಗೆ ವಿಶ್ವವಿದ್ಯಾನಿಲಯದ ಆವರಣದಲ್ಲಿ ಏರ್ಪಡಿಸಲಾಗಿದ್ದು, ಈ ಬಾರಿಯ ಘಟಿಕೋತ್ಸವದಲ್ಲಿ ಒಟ್ಟು 13,207 ವಿದ್ಯಾರ್ಥಿಗಳಿಗೆ ಸ್ನಾತಕ ಮತ್ತು ಸ್ನಾತಕೋತ್ತರ ಪದವಿ ಪ್ರಧಾನ ಮಾಡಲಾಗುತ್ತಿದೆ. ಅಲ್ಲದೆ 44 ವಿದ್ಯಾರ್ಥಿಗಳು 74 ಚಿನ್ನದ ಪದಕಗಳನ್ನು ಪಡೆಯಲಿದ್ದಾರೆ ಎಂದು ಕುಲಪತಿ ಪ್ರೊ. ಶರಣಪ್ಪ ವಿ.ಹಲಸೆ ತಿಳಿಸಿದರು.

ಗುರುವಾರ ವಿಶ್ವವಿದ್ಯಾನಿಲಯದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, 2019-20 ನೇ ಸಾಲಿನ ಚಿನ್ನದ ಪದಕ ಗಳಿಕೆಯಲ್ಲಿ ಮಹಿಳಾ ವಿದ್ಯಾರ್ಥಿಗಳು ಮುನ್ನಡೆ ಸಾಧಿಸಿದ್ದು, 34 ವಿದ್ಯಾರ್ಥಿನಿಯರು ಪದಕಗಳನ್ನು ಪಡೆದಿದ್ದಾರೆ. ಗಣಿತ ವಿಭಾಗದ ವಿದ್ಯಾರ್ಥಿನಿ ಮೇಘ ಎನ್.ಎಸ್. 4 ಪದಕಗಳೊಂದಿಗೆ ಚಿನ್ನದ ಹುಡುಗಿ ಗೌರವಕ್ಕೆ ಪಾತ್ರರಾಗಿದ್ದಾರೆ. ಹಾಗೂ ಈ ಬಾರಿ ವಿವಿಧ ವಿಭಾಗಗಳಲ್ಲಿ 7 ಜನರಿಗೆ ಪಿಎಚ್.ಡಿ ಹಾಗೂ ಇಬ್ಬರಿಗೆ ಎಂ.ಫಿಲ್ ಪದವಿಯನ್ನು ಪ್ರಧಾನ ಮಾಡಲಾಗುತ್ತಿದೆ ಎಂದರು.

ಈ ಬಾರಿ ಸ್ನಾತಕ ಮತ್ತು ಸ್ನಾತಕೋತ್ತರ ಪದವಿಗಳ ಒಟ್ಟು 74 ಸ್ವರ್ಣ ಪದಕಗಳನ್ನು 43 ವಿದ್ಯಾರ್ಥಿಗಳು ಹಂಚಿಕೊಂಡಿದ್ದಾರೆ. ಸ್ನಾತಕ ವಿಭಾಗದಲ್ಲಿ 19 ಸ್ವರ್ಣ ಪದಕಗಳನ್ನು 12 ವಿದ್ಯಾರ್ಥಿಗಳು ಪಡೆಯಲಿದ್ದಾರೆ. ಅವರಲ್ಲಿ 3 ಪುರುಷ ಮತ್ತು 9 ಮಹಿಳಾ ವಿದ್ಯಾರ್ಥಿಗಳಿದ್ದಾರೆ. ಸ್ನಾತಕೋತ್ತರ ಪದವಿಯಲ್ಲಿ 29 ವಿದ್ಯಾರ್ಥಿಗಳು 52 ಪದಕಗಳನ್ನು ಗಳಿಸಿದ್ದಾರೆ. ಇವರಲ್ಲಿ 7 ಪುರುಷ ಹಾಗೂ 22 ಮಹಿಳಾ ವಿದ್ಯಾರ್ಥಿಗಳು ಇದ್ದಾರೆ. ಸ್ನಾತಕ ಪದವಿಯ 11 ಹಾಗೂ ಸ್ನಾತಕೋತ್ತರ ಪದವಿಯ 24 ಸೇರಿ ಒಟ್ಟು 35 ವಿದ್ಯಾರ್ಥಿಗಳು ಪ್ರಥಮ ರ್ಯಾಂಕ್ ಗಳಿಸಿದ್ದಾರೆ ಎಂದು ಮಾಹಿತಿ ನೀಡಿದರು.

ವಿಶ್ವವಿದ್ಯಾನಿಲಯವು 2019-20ರ ಅವಧಿಯಲ್ಲಿ ನಡೆಸಿದ ಪರೀಕ್ಷೆಯಲ್ಲಿ ತೇರ್ಗಡೆಯಾದ 11,193 ಪದವಿಯ ಹಾಗೂ 2,014 ಸ್ನಾತಕೋತ್ತರ ವಿದ್ಯಾರ್ಥಿಗಳು ಪದವಿ ಪಡೆಯಲಿದ್ದಾರೆ. ಈ ಬಾರಿ ಪದವಿಯಲ್ಲಿ 6,873 ಮಹಿಳೆಯರು ಹಾಗೂ 4,319 ಪುರುಷ ವಿದ್ಯಾರ್ಥಿಗಳು ಬಿಎ, ಬಿಕಾಂ, ಬಿಬಿಎಂ, ಬಿಎಸ್ಸಿ, ಬಿಸಿಎ, ಬಿಎಸ್‍ಡಬ್ಲ್ಯೂ, ಬಿವಿಎ, ಬಿ.ಇಡಿ ಹಾಗೂ ಬಿಬಿಇಡಿ ಪರೀಕ್ಷೆಯಲ್ಲಿ ತೇರ್ಗಡೆಯಾಗಿ ಪದವಿ ಪುರಸ್ಕಾರಕ್ಕೆ ಅರ್ಹರಾಗಿದ್ದಾರೆ. ಸ್ನಾತಕೋತ್ತರ ವಿಭಾಗದಲ್ಲಿ 1,189 ಮಹಿಳಾ ಮತ್ತು 824 ಪುರುಷ ವಿದ್ಯಾರ್ಥಿಗಳು ಸ್ನಾತಕೋತ್ತರ ಪದವಿಯನ್ನು ಪಡೆಯುವರು.

ಗೌರವ ಡಾಕ್ಟರೇಟ್ ಪದವಿ

ವಿವಿಧ ಕ್ಷೇತ್ರಗಳಲ್ಲಿ ಗಮನಾರ್ಹ ಸಾಧನೆ ಮಾಡಿದ ಇಬ್ಬರು ಗಣ್ಯರಾದ ಸಂಸದ ಜಿ.ಎಂ.ಸಿದ್ದೇಶ್ವರ ಮತ್ತು ವೈದ್ಯಕೀಯ ಕ್ಷೇತ್ರದಲ್ಲಿ ಗಮನಾರ್ಹ ಸೇವೆ ಸಲ್ಲಿಸಿದ ಬೆಂಗಳೂರು ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಪ್ರಾಧ್ಯಾಪಕ ಡಾ. ಎಂ.ಕೆ. ರಮೇಶ್ ಅವರಿಗೆ ಗೌರವ ಡಾಕ್ಟರೇಟ್ ಪುರಸ್ಕಾರ ನೀಡಲಾಗುವುದು ಎಂದರು.

ಡಾ.ಗುರುರಾಜ ಕರಜಗಿ ಅವರಿಂದ ಘಟೀಕೋತ್ಸವ ಭಾಷಣ

ಈ ಬಾರಿಯ ಘಟಿಕೋತ್ಸವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಅಕಾಡೆಮಿ ಫಾರ್ ಕ್ರಿಯೇಟಿವ್ ಟೀಚಿಂಗ್‍ನ ಸಂಸ್ಥಾಪಕ ಅಧ್ಯಕ್ಷರು ಹಾಗೂ ಶಿಕ್ಷಣ ತಜ್ಞರಾದ ಡಾ. ಗುರುರಾಜ್ ಕರಜಗಿ ಅವರು ಘಟಿಕೋತ್ಸವ ಭಾಷಣ ಮಾಡಲಿದ್ದಾರೆ.

ಕೊರೊನಾ ಸಂಕಷ್ಟದ ದಿನಗಳಲ್ಲೂ ಸುಸಜ್ಜಿತವಾಗಿ ಪರೀಕ್ಷೆ ನಡೆಸಿದ್ದು, ಈ ಸಂದರ್ಭದಲ್ಲಿ ಹಾಜರಾಗಲು ಸಾಧ್ಯವಾಗದ ವಿದ್ಯಾರ್ಥಿಗಳಿಗೆ ಹಾಗೂ ಅನುತ್ತಿರ್ಣರಾದ ವಿದ್ಯಾರ್ಥಿಗಳಿಗೆ ಮರು ಪರೀಕ್ಷೆ ನಡೆಸಿ ಫಲಿತಾಂಶ ಪ್ರಕಟಿಸಿ ವಿದ್ಯಾರ್ಥಿಗಳ ಭವಿಷ್ಯಕ್ಕೆ ದಾರಿ ಮಾಡಿಕೊಟ್ಟಿದೆ.

ಈ ಸಾಲಿನಲ್ಲಿ ನಡೆದ ಪರೀಕ್ಷೆಯಲ್ಲಿ ಸ್ನಾತಕ ಪದವಿಯಲ್ಲಿ ಶೇ.60.57 ಹಾಗೂ ಸ್ನಾತಕೋತ್ತರ ಪದವಿಯಲ್ಲಿ ಶೇ.95.31ರಷ್ಟು ಫಲಿತಾಂಶ ಬಂದಿದೆ. ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಪೂರಕವಾಗಿ ವಿವಿಯ ಎಲ್ಲಾ ಪ್ರಾಧ್ಯಾಪಕ ವೃಂದದವರು ಶ್ರಮಿಸಿದ್ದು, ಪಠ್ಯ ಮತ್ತು ಪ್ರಾಯೋಗಿಕ ತರಗತಿಗಳನ್ನು ಮುಗಿಸಿ ವಿದ್ಯಾರ್ಥಿಗಳನ್ನು ಪರೀಕ್ಷೆಗೆ ಸಜ್ಜು ಮಾಡಿರುವುದು ವಿಶೇಷ ಎಂದರು.

ಕೊರೊನಾ ಸಂದರ್ಭದಲ್ಲಿ ವಿಶ್ವವಿದ್ಯಾನಿಲಯದ 173 ಶಿಕ್ಷಕರು ಆನ್‍ಲೈನ್ ಮೂಲಕ ಒಟ್ಟು 4176 ತರಗತಿಗಳು, 63 ಕಾರ್ಯಾಗಾರ, 21 ಅಂತರರಾಷ್ಟ್ರೀಯ ಮತ್ತು ರಾಷ್ಟ್ರೀಯ ಮಟ್ಟದ ವಿಚಾರ ಸಂಕಿರಣಗಳನ್ನು ಹಮ್ಮಿಕೊಳ್ಳಲಾಗಿದ್ದು, 154 ವಿಶ್ವವಿದ್ಯಾನಿಲಯ ಮಟ್ಟದ ವಿಚಾರಗೋಷ್ಠಿಗಳನ್ನು ನಡೆಸಲಾಗಿದೆ. ದಾವಣಗೆರೆ ವಿಶ್ವವಿದ್ಯಾನಿಲಯದ ಸಾಮಾಜಿಕ ಜಾಲತಾಣ ಹಾಗೂ ಆನ್‍ಲೈನ್ ಪೋರ್ಟಲ್ ಮೂಲಕ ವಿದ್ಯಾರ್ಥಿಗಳ ಅಭ್ಯಾಸಕ್ಕೆ ಅನುಕೂಲವಾಗಲು ಸುಮಾರು 2100 ಮಾಹಿತಿ ಮತ್ತು ಪಾಠಗಳ ಟಿಪ್ಪಣಿಗಳನ್ನು ಒದಗಿಸಲಾಗಿತ್ತು.

ಇದೆಲ್ಲದರ ಪ್ರತಿಫಲದಿಂದಾಗಿ ದಾವಣಗೆರೆ ವಿಶ್ವವಿದ್ಯಾನಿಲಯವು ದೇಶದ ವಿಶ್ವವಿದ್ಯಾನಿಲಯಗಳ ಶೈಕ್ಷಣಿಕ ಇತಿಹಾಸದಲ್ಲಿ ದಾಖಲೆ ನಿರ್ಮಿಸಿ ಅಂತರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಂಡಿದೆ ಎಂದು ಸಂತಸ ವ್ಯಕ್ತಪಡಿಸಿದರು.

ಸುದ್ದಿಗೋಷ್ಠಿಯಲ್ಲಿ ಮೌಲ್ಯಮಾಪನ ಕುಲಸಚಿವರಾದ ಪ್ರೊ. ಅನಿತಾ ಹೆಚ್.ಎಸ್, ಕುಲಸಚಿವ ಪ್ರೊ. ಗಾಯತ್ರಿ ದೇವರಾಜ, ಹಣಕಾಸು ಅಧಿಕಾರಿ ಪ್ರಿಯಾಂಕ.ಡಿ, ಸಿಂಡಿಕೇಟ್ ಸದಸ್ಯರಾದ ವಿಜಯಲಕ್ಷ್ಮೀ, ವೀರಭದ್ರಯ್ಯ, ಶ್ರೀಧರ್.ಎಸ್, ಹೆಚ್.ಜಿ.ಕೃಷ್ಣಮೂರ್ತಿ, ವೀರಣ್ಣ ಗೌಡರ್, ಪ್ರಶಾಂತ್ ಬಣಕಾರ್, ಜ್ಯೋತಿ.ಎಮ್, ಇನಾಯತ್ ವುಲ್ಲಾ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಪ್ರತ್ಯೇಕ ದಾವಣಗೆರೆ-ಚಿತ್ರದುರ್ಗ ಮೆಗಾ ಡೈರಿ ಆರಂಭಿಸಿ : ಶಾಸಕ ಕೆ.ಎಸ್.ಬಸವಂತಪ್ಪ ಒತ್ತಾಯ

Published

on

ಸುದ್ದಿದಿನ,ದಾವಣಗೆರೆ: ಕ್ಷೇತ್ರದ ವ್ಯಾಪ್ತಿಯ ಕಲ್ಪನಹಳ್ಳಿ ಬಳಿ ಪ್ರತ್ಯೇಕ ದಾವಣಗೆರೆ-ಚಿತ್ರದುರ್ಗ ಮೆಗಾ ಡೈರಿ ಸ್ಥಾಪಿಸಲು ಭೂಮಿ ಖರೀದಿಸಿದ್ದು, ಈ ಬಗ್ಗೆ ಸರ್ಕಾರಕ್ಕೆ ಈಗಾಗಲೇ ಪ್ರಸ್ತಾವನೆ ಸಲ್ಲಿಸಲಾಗಿದೆ. ಕೂಡಲೇ ಅನುದಾನ ಬಿಡುಗಡೆ ಮಾಡಬೇಕೆಂದು ಮಾಯಕೊಂಡ ಶಾಸಕ ಕೆ.ಎಸ್.ಬಸವಂತಪ್ಪ ಒತ್ತಾಯಿಸಿದರು.

ವಿಧಾನಸಭೆಯಲ್ಲಿ ಬುಧವಾರ ಬಜೆಟ್ ಮೇಲಿನ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಶಿವಮೊಗ್ಗ ಹಾಲು ಒಕ್ಕೂಟದಿಂದ ಬೇರ್ಪಡಿಸಿ ಪ್ರತ್ಯೇಕ ದಾವಣಗೆರೆ-ಚಿತ್ರದುರ್ಗ ಒಳಗೊಂಡ ಮೆಗಾ ಡೈರಿ ಆರಂಭಿಸಲು ನನ್ನ ಕ್ಷೇತ್ರದ ವ್ಯಾಪ್ತಿಯ ಕಲ್ಪನಹಳ್ಳಿಯಲ್ಲಿ ಭೂಮಿ ಖರೀದಿಸಿದ್ದೇವೆ. ಸರ್ಕಾರ ಕೂಡಲೇ ಅನುದಾನ ಬಿಡುಗಡೆ ಮಾಡಿ ಡೈರಿ ಆರಂಭಿಸಿದರೆ ಈ ಭಾಗದ ರೈತರು ಆರ್ಥಿಕವಾಗಿ ಸಬಲರಾಗಲಿದ್ದಾರೆ ಎಂದು ಸದನದ ಗಮನ ಸೆಳೆದರು.

ಹೈನುಗಾರಿಕೆಯಲ್ಲಿ ಮಹಿಳೆಯರಿಗೆ ಶೇ.50ರಷ್ಟು ಸಬ್ಸಿಡಿ ಕೊಡುವುದನ್ನು ಶೇ.75ರಷ್ಟು ಹೆಚ್ಚಳ ಮಾಡಿದರೆ ಮಹಿಳೆಯರು ಆರ್ಥಿಕವಾಗಿ ಸ್ವಾವಲಂಬಿಯಾಗಿ ಉತ್ತಮ ಬದುಕು ಕಟ್ಟಿಕೊಳ್ಳುತ್ತಾರೆ. ಈ ಬಗ್ಗೆ ಸರ್ಕಾರ ಗಮನ ಹರಿಸಬೇಕೆಂದರು.

ಮಧ್ಯ ಕರ್ನಾಟಕದ ಕೇಂದ್ರ ಬಿಂದು, ಹಿಂದುಳಿದ ಜಿಲ್ಲೆ ದಾವಣಗೆರೆ. ಅದರಲ್ಲೂ ಅತೀ ಹಿಂದುಳಿದ ಮೀಸಲು ಕ್ಷೇತ್ರ ಮಾಯಕೊಂಡ. ಸಿರಿಗೆರೆ ತರಳಬಾಳು ಜಗದ್ಗುರುಗಳ ಹೋರಾಟದ ಫಲವಾಗಿ ನನ್ನ ಕ್ಷೇತ್ರದಲ್ಲಿ 22 ಕೆರೆಗಳ ಯೋಜನೆ ಜಾರಿಗೊಂಡು ಎಲ್ ಅಂಡ್ ಟಿ ಕಂಪನಿ ಕಾಮಗಾರಿ ನಡೆಸಿತ್ತು. ಕಳಪೆ ಕಾಮಗಾರಿಯಿಂದ 100 ಹಳ್ಳಿಗಳಿಗೆ ಕುಡಿಯುವ ನೀರು, ನೀರಾವರಿ ಕಲ್ಪಿಸಬೇಕೆಂಬ ಉದ್ದೇಶ ಈಡೇರಿಲ್ಲ. ಪುನಃ ಹೊಸ ಪೈಪ್‌ಲೈನ್ ಕಾಮಗಾರಿಗೆ ಹಣ ನೀಡಿ ಕಾಮಗಾರಿ ಆರಂಭಿಸುವAತೆ ಈಗಾಗಲೇ ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಮನವಿ ಸಲ್ಲಿಸಲಾಗಿತ್ತು. ಕೂಡಲೇ ಸರ್ಕಾರ ಅನುದಾನ ಬಿಡುಗಡೆ ಮಾಡಬೇಕೆಂದು ಒತ್ತಾಯಿಸಿದರು.

ನನ್ನ ಕ್ಷೇತ್ರದಲ್ಲಿ ಹೆಚ್ಚು ಗುಡ್ಡಗಾಡು ಪ್ರದೇಶ ಹೊಂದಿದ್ದು, ಈ ಪ್ರದೇಶಗಳಲ್ಲಿ ಅತೀ ಹೆಚ್ಚು ಕೆರೆಗಳನ್ನು ನಿರ್ಮಾಣ ಮಾಡಿದರೆ ಜನಜಾನುವಾರುಗಳಿಗೆ ಕುಡಿಯುವ ನೀರು, ಅಂತರ್ಜಲ ಮಟ್ಟ ವೃದ್ಧಿಗೆ ಅನುಕೂಲವಾಗುತ್ತದೆ. ಅಲ್ಲದೇ ಬ್ರಿಟಿಷರು ನಿರ್ಮಿಸಿದ ಕೆರೆ ಇದೆ. ಅದನ್ನು ಜೀರ್ಣೋದ್ಧಾರ ಮಾಡಿದರೆ ಇಡೀ ಪಕ್ಷಿ ಸಂಕುಲ, ಹಳ್ಳಿಗಳಿಗೆ ಕುಡಿಯುವ ನೀರು ಒದಗಿಸಬಹುದು ಎಂದು ಸದನ ಗಮನ ಸೆಳೆದರು.

ಎಸ್ಸಿ-ಎಸ್ಟಿ ಅಭಿವೃದ್ಧಿ ನಿಗಮಗಳಿಗೆ ಅನೇಕ ಸೌಲಭ್ಯ ಒದಗಿಸಲು ಅನುದಾನದ ಕೊರತೆ ಇದೆ. ಹೆಚ್ಚಿನ ಅನುದಾನ ನೀಡಬೇಕು. ಎಸ್ಸಿ-ಎಸ್ಟಿ ಸಮುದಾಯ ಆರ್ಥಿಕವಾಗಿ ಸಬಲರಾಗಲು ಭೂಒಡೆತನ ಯೋಜನೆ ಜಾರಿಗೊಳಿಸಿದ್ದು, ಕ್ಷೇತ್ರಕ್ಕೆ ಕೇವಲ ಒಂದೇ ಕೊಟ್ಟರೆ ಸಾಧ್ಯವಾಗುವುದಿಲ್ಲ. ಇದಕ್ಕೆ ಹೆಚ್ಚು ಒತ್ತು ಕೊಡಬೇಕು. ಖಾಸಗಿ ಕಾಲೇಜುಗಳಲ್ಲಿ ಡಿಪ್ಲೊಮಾ, ನರ್ಸಿಂಗ್, ಪ್ಯಾರಾ ಮೆಡಿಕಲ್ ಸೇರಿದಂತೆ ವೃತ್ತಿಪರ ಕೋರ್ಸ್ನಲ್ಲಿ ಅಭ್ಯಾಸ ಮಾಡುವ ಎಸ್ಸಿ-ಎಸ್ಟಿ ಮಕ್ಕಳಿಗೆ 2013-18ರಲ್ಲಿ ಹಾಸ್ಟೆಲ್ ಸೌಲಭ್ಯ ಇತ್ತು, ಈಗ ಇಲ್ಲ. ಕೂಡಲೇ ಈ ವಿದ್ಯಾರ್ಥಿಗಳಿಗೆ ಹಾಸ್ಟೆಲ್ ಸೌಲಭ್ಯ ಒದಗಿಸಬೇಕೆಂದು ಆಗ್ರಹಿಸಿದರು.

ಹೊರ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುವ ಪೌರ ಕಾರ್ಮಿಕರಿಗೆ ಹಗಲು ದರೋಡೆ ಮಾಡಲಾಗುತ್ತಿದೆ. ಹೊರ ಗುತ್ತಿಗೆ ತೆಗೆದು ನೇರವಾಗಿ ನೇಮಕಾತಿ ಮಾಡಿಕೊಂಡರೆ ಅವರ ಬದುಕು ಉಜ್ವಲವಾಗುತ್ತದೆ. ಶೋಷಿತ ಸಮುದಾಯಗಳಿಗೆ ತ್ವರಿತ ನ್ಯಾಯ ಒದಗಿಸಲು ಎಸ್ಸಿ-ಎಸ್ಟಿ ದೌರ್ಜನ್ಯ ಕಾಯ್ದೆಯಡಿ ರಾಜ್ಯದಲ್ಲಿ 33 ವಿಶೇಷ ಪೊಲೀಸ್ ಠಾಣೆ ತೆರೆಯಲು ಕ್ರಮ, ಅಲ್ಲದೇ ಎಸ್ಸಿ-ಎಸ್ಟಿ ಗುತ್ತಿಗೆದಾರರಿಗೆ 2 ಕೋಟಿ ಮೀಸಲು, ಅದರಂತೆ ಒಬಿಸಿ, ಅಲ್ಪಸಂಖ್ಯಾತರಿಗೂ 2 ಕೋಟಿ ಮೀಸಲಿಡುವ ಮೂಲಕ ರೈತರು, ಕಾಯಕ ಜೀವಿಗಳು, ವಿಶೇಷವಾಗಿ ಸಮಾಜ ಕಲ್ಯಾಣ ಇಲಾಖೆಯಲ್ಲಿ ಎಸ್‌ಸಿಪಿ-ಎಸ್‌ಟಿಪಿ ಯೋಜನೆಯಡಿ 48,018 ಕೋಟಿ ರೂ. ಬಜೆಟ್‌ನಲ್ಲಿ ಮೀಸಲಿಟ್ಟಿರುವ ಸಿಎಂ ಸಿದ್ದರಾಮಯ್ಯ ಅವರಿಗೆ ಅಭಿನಂದನೆ ಸಲ್ಲಿಸಿದರು.


  • ತ್ವರಿತವಾಗಿ ಕಾಮಗಾರಿ ಪೂರ್ಣಗೊಳಿಸಿ
    ಮಳೆಗಾಲದಲ್ಲಿ ತುಂಗಾ ಜಲಾಯಶದಿಂದ ಭದ್ರಾ ಜಲಾಶಯಕ್ಕೆ ನೀರು ತುಂಬಿಸಿ ಅಪರ್ ಭದ್ರಾ ಯೋಜನೆ ನೀರು ನೀಡುವ ಯೋಜನೆಯನ್ನು ತ್ವರಿತವಾಗಿ ಪೂರ್ಣಗೊಳಿಸಿದರೆ ಭದ್ರಾ ಅಚ್ಚುಕಟ್ಟು ಪ್ರದೇಶ ವ್ಯಾಪ್ತಿಯ ರೈತರಿಗೆ ಅನುಕೂಲವಾಗಲಿದೆ. ಇಲ್ಲದಿದ್ದರೆ, ನಮ್ಮ ಭಾಗದ ರೈತರಿಗೆ ಅನಾನುಕೂಲವಾಗಲಿದೆ. ಕೂಡಲೇ ಸರ್ಕಾರ ಈ ಯೋಜನೆಯ ಕಾಮಗಾರಿ ಪೂರ್ಣಗೊಳಿಸಬೇಕು. ರಾಗಿ, ಭತ್ತ, ತೊಗರಿ ಬೆಂಬಲ ಬೆಲೆಯಡಿ ಖರೀದಿಸಿದಂತೆ ಮೆಕ್ಕೆಜೋಳವನ್ನು ಬೆಂಬಲ ಬೆಲೆಯಡಿ ಖರೀದಿಸಬೇಕೆಂದು ಶಾಸಕ ಕೆ.ಎಸ್.ಬಸವಂತಪ್ಪ ಒತ್ತಾಯಿಸಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಕೆರೆಬಿಳಚಿ | ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ ; 6ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ

Published

on

ಸುದ್ದಿದಿನ,ಚನ್ನಗಿರಿ:ತಾಲೂಕಿನ ಕೆರೆಬಿಳಚಿಯಲ್ಲಿನ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ 6ನೇ ತರಗತಿಗೆ ಪ್ರವೇಶ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.

ಅಲ್ಪಸಂಖ್ಯಾತರ ಸಮುದಾಯದ ಮುಸ್ಲಿಂ ,ಕ್ರಿಶ್ಚಿಯನ್, ಜೈನ್ ,ಬೌದ್ಧ ಸಿಖ್ ಪಾರ್ಸಿ ಧರ್ಮದವರಿಗೆ 75% ಸ್ಥಾನ ಮತ್ತು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಇತರೆ ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ 25% ಸ್ಥಾನಗಳು ಮೀಸಲಾಗಿವೆ.ವಿದ್ಯಾರ್ಥಿಗಳನ್ನು ಪ್ರವೇಶ ಪರೀಕ್ಷೆಯ ಆಧಾರದ ಮೇಲೆ ಮತ್ತು ಮೀಸಲಾತಿ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಅರ್ಜಿ ಸಲ್ಲಿಸಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ : https://sevasindhuservices.karnataka.gov.in/

ಪ್ರವೇಶ ಪಡೆಯಲು ಅರ್ಹತೆಗಳು

  • 05 ನೇ ತರಗತಿಯಲ್ಲಿ ಉತ್ತೀರ್ಣರಾಗಿರುವ ವಿದ್ಯಾರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ.
  • ಪೋಷಕರ ಆದಾಯದ ಮಿತಿ ಎಸ್.ಸಿ/ಎಸ್.ಟಿ ಮತ್ತು ಪ್ರವರ್ಗ-1 ಅಭ್ಯರ್ಥಿಗಳಿಗೆ
  • 1 ಲಕ್ಷ ರೂ.ಗಳು ಮತ್ತು ಅಲ್ಪಸಂಖ್ಯಾತರಿಗೆ 2.5ಲಕ್ಷ ರೂ.ಗಳು ಮತ್ತು ಹಿಂದುಳಿದ ವರ್ಗದವರಿಗೆ 44500/- ರೂ.ಗಳಿಗೆ ಮೀರಿರಬಾರದು.

ವಸತಿ ಶಾಲೆಯಲ್ಲಿ ದೊರೆಯುವ ಸೌಲಭ್ಯಗಳು

  • ಆಯ್ಕೆಯಾದ ವಿದ್ಯಾರ್ಥಿಗಳಿಗೆ 6ನೇ ತರಗತಿಯಿಂದ 12 ತರಗತಿಯವರೆಗೆ ಉಚಿತ ಶಿಕ್ಷಣ.
  • ಉಚಿತ ಪಠ್ಯ ಪುಸ್ತಕ, ಲೇಖನ ಸಾಮಗ್ರಿಗಳು, ಸಮವಸ್ತ್ರ, ಶೂ ಮತ್ತು ಸಾಕ್ಸ್, ಹಾಸಿಗೆ ಹೊದಿಕೆ ಜೊತೆಗೆ ಉತ್ತಮ ಮೂಲ ಸೌಲಭ್ಯ ಒದಗಿಸಲಾಗುವುದು.
  • ಸುಸಜ್ಜಿತ ಕೊಠಡಿ ಹಾಗೂ ವಸತಿ ನಿಲಯಗಳು, ವಿದ್ಯುತ್ ವ್ಯವಸ್ಥೆ, 24×7 ಬಿಸಿ ನೀರಿನ ವ್ಯವಸ್ಥೆ, ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಇದೆ.
  • ನುರಿತ ಶಿಕ್ಷಕರು ಮತ್ತು ಉಪನ್ಯಾಸಕರಿಂದ ಭೋದನೆ, ಪ್ರತಿ ವಿಷಯಕ್ಕೆ ಸುಸಜ್ಜಿತ ಪ್ರಯೋಗಾಲಯ ಸೌಲಭ್ಯ ಹಾಗೂ ಡಿಜಿಟಲ್ ಗ್ರಂಥಾಲಯ ವ್ಯವಸ್ಥೆ ಇದೆ.
  • ಉಚಿತ ವಸತಿ ಮತ್ತು ಭೋಜನ ವ್ಯವಸ್ಥೆ ಇದೆ. ಜೊತೆಗೆ 24×7 CCTV ನಿರೀಕ್ಷಣೆಯಲ್ಲಿ ಇರುತ್ತದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಯಶಸ್ವಿನಿ ಆರೋಗ್ಯ ರಕ್ಷಣಾ ಯೋಜನೆ : ಹೊಸ ಸದಸ್ಯರ ನೊಂದಣಿ, ನೊಂದಣಿಯಾದ ಸದಸ್ಯರನ್ನು ನವೀಕರಿಸಲು ಸೂಚನೆ

Published

on

ಸುದ್ದಿದಿನ,ದಾವಣಗೆರೆ:ಕರ್ನಾಟಕ ಸಹಕಾರ ಸಂಘಗಳ ಕಾಯ್ದೆ 1959 ಹಾಗೂ ಸಹಕಾರ ಸಂಘಗಳ ನಿಯಮ 1960ರಡಿ ಜಿಲ್ಲೆಯಲ್ಲಿ ನೊಂದಣಿಯಾಗಿರುವ ಎಲ್ಲಾ ವಿಧದ ಸಹಕಾರ ಸಂಘಗಳ ಸದಸ್ಯರು ಮಾರ್ಚ್ 31ರೊಳಗಾಗಿ ಯಶಸ್ವಿನಿ ಆರೋಗ್ಯ ರಕ್ಷಣಾ ಯೋಜನೆಯಡಿ ಹೊಸ ಸದಸ್ಯರನ್ನು ನೊಂದಾಯಿಸುವ ಮತ್ತು ನೊಂದಣಿಯಾದ ಸದಸ್ಯರನ್ನು ನವೀಕರಿಸಲು ಮತ್ತು ಯಾವುದೇ ಒಂದು ಸಹಕಾರ ಸಂಘದ ಸದಸ್ಯರಾಗಿದ್ದರೆ, ಈ ಯೋಜನೆಯ ಫಲಾನಭವಿಗಳಾಗಬಹುದು ಎಂದು ಸಹಕಾರ ಸಂಘಗಳ ಉಪನಿಬಂಧಕ ಮಧು ಶ್ರೀನಿವಾಸ್ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending