ದಿನದ ಸುದ್ದಿ
ಕೇಂದ್ರ ಬಜೆಟ್ : ಕರ್ನಾಟಕದಲ್ಲಿ ಮಿಶ್ರ ಪ್ರತಿಕ್ರಿಯೆ
ಸುದ್ದಿದಿನಡೆಸ್ಕ್:ಕೇಂದ್ರದ ಮುಂಗಡ ಪತ್ರ ದೇಶದ ಅಭಿವೃದ್ಧಿಗೆ ಪೂರಕವಾಗಿದೆ ಎಂದು ತೆಲುಗು ದೇಶಂ ನಾಯಕ ಕೇಂದ್ರ ಸಚಿವ ಕಿಂಜರಪು ರಾಮಮೋಹನ ನಾಯ್ಡು ಹೇಳಿದ್ದಾರೆ. ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು, ಬಜೆಟ್ ಎಲ್ಲರ ಕನಸಾಗಿದೆ ಎಂದು ಹೇಳಿದ್ದಾರೆ. ಈಶಾನ್ಯ ರಾಜ್ಯಗಳ ಬೆಳವಣಿಗೆಗೆ ಆಯ-ವ್ಯಯ ಪೂರಕವಾಗಿದೆ ಎಂದು ಹೇಳಿದರು.
ಬಿಜೆಪಿ ಹಿರಿಯ ನಾಯಕ ರವಿಶಂಕರ್ ಪ್ರಸಾದ್, ಉದ್ಯೋಗ ಹೆಚ್ಚಿಸುವ ಕಾರ್ಯಕ್ರಮವನ್ನು ಹಣಕಾಸು ಸಚಿವರು ಪ್ರಕಟಿಸಿರುವುದಾಗಿ ಹೇಳಿದ್ದಾರೆ. ಜೆಡಿಯು ಮುಖಂಡ ರಾಜೀವ್ ರಂಜನ್ ಸಿಂಗ್, ಆಯ-ವ್ಯಯ ಬಿಹಾರ ಜನತೆಗೆ ಹಾಗೂ ಪ್ರವಾಸೋದ್ಯಮಕ್ಕೆ ಒತ್ತು ನೀಡಿದೆ ಎಂದರು.
ಕಾಂಗ್ರೆಸ್ ಮುಖಂಡ ಶಶಿತರೂರ್ ಪ್ರತಿಕ್ರಿಯೆಸಿ, ಉದ್ಯೋಗ ಖಾತರಿ ಯೋಜನೆಯ ರಾಜ್ಯಗಳ ತಾರತಮ್ಯವನ್ನು ನಿಭಾಯಿಸಿಲ್ಲ ಎಂದು ಪ್ರತಿಕ್ರಿಯಿಸಿದ್ದಾರೆ. ಶಿವಸೇನಾ ನಾಯಕ ಪ್ರಿಯಾಂಕ ಚತುರ್ವೇದಿ, ಮಹಾರಾಷ್ಟ್ರ ರಾಜ್ಯಕ್ಕೆ ನಿರ್ಧಿಷ್ಟವಾದ ಯೋಜನೆಗಳನ್ನು ಪ್ರಕಟಿಸಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಡಿಎಂಕೆ ನಾಯಕ ಟಿ.ಆರ್.ಬಾಲು, ಟಿಎಂಸಿ ನಾಯಕಿ ಕಲ್ಯಾಣ ಬ್ಯಾನರ್ಜಿ ಅವರು, ಆಯ-ವ್ಯಕ್ಕೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ.
ಕರ್ನಾಟಕದ ಸಂಸದರಾದ ಬಸವರಾಜ ಬೊಮ್ಮಾಯಿ, ವಿಶ್ವೇಶ್ವರ ಹೆಗಡೆ ಕಾಗೇರಿ ಹಾಗೂ ಜಗದೀಶ್ ಶೆಟ್ಟರ್, ಜನಪರ ಸಾಮಾನ್ಯವರ್ಗದವರ ಆಯ-ವ್ಯಯವಾಗಿದೆ ಎಂದರು. ಕೇಂದ್ರ ಸಚಿವರಾದ ಎಚ್.ಡಿ.ಕುಮಾರ್‌ಸ್ವಾಮಿ, ವಿ.ಸೋಮಣ್ಣ ಹಾಗೂ ಶೋಭಾ ಕರಂದ್ಲಾಜೆ ಅವರುಗಳು ಆಯ-ವ್ಯಯವನ್ನು ಮುಕ್ತ ಕಂಠದಿಂದ ಪ್ರಶಂಸಿಸಿದ್ದಾರೆ. ಭಾರತೀಯ ಕೈಗಾರಿಕಾ ಒಕ್ಕೂಟದ ಅಧ್ಯಕ್ಷ ಅನಿಶ್ ಶಹಾ ಪ್ರತಿಕ್ರಿಯಿಸಿ, ದೇಶದ ಬೆಳವಣಿಗೆಗೆ ಪೂರಕ ಆಯ-ವ್ಯಯ ರೈತರು, ಯುವಕರು, ಮಹಿಳೆಯರಿಗೆ ಸಹಕಾರಿ ಎಂದು ಹೇಳಿದ್ದಾರೆ.
ಶಿಕ್ಷಣ, ಆರೋಗ್ಯ, ರಕ್ಷಣಾ ಕ್ಷೇತ್ರಗಳಿಗೆ ಅನುದಾನವನ್ನು ಗಣನೀಯವಾಗಿ ಖಡಿತ ಮಾಡಿದ್ದಾರೆ ಎಂದು ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿದ್ದಾರೆ. ಕೇಂದ್ರ ಸರ್ಕಾರಕ್ಕೆ ಹಲವು ಯೋಜನೆಗಳ ಅನುಷ್ಠಾನಕ್ಕೆ ನೆರವು ಕೋರಿದ್ದೆವು. ಮಾಹಿತಿ ತಂತ್ರಜ್ಞಾನಕ್ಕೆ ನೀಡಿದ್ದ ಅನುದಾನವನ್ನು ಕಡಿಮೆ ಮಾಡಿರುವ ಕೇಂದ್ರ ಸರ್ಕಾರ, ಪರಿಶಿಷ್ಟ ಸಮುದಾಯ ಮತ್ತು ಅಲ್ಪ ಸಂಖ್ಯಾತರ ಅಭಿವೃದ್ಧಿಗೆ ಅನುದಾನವನ್ನು ಖಡಿತ ಮಾಡಿ, ರಾಜ್ಯಕ್ಕೆ ಅನ್ಯಾಯ ಮಾಡಿದ್ದಾರೆ ಎಂದು ಅವರು ತಿಳಿಸಿದ್ದಾರೆ.
ಮೂಲ ಸೌಕರ್ಯ ಅನ್ವೇಷಣೆ ಹಾಗೂ ಅಭಿವೃದ್ಧಿಗೆ ಆಯ-ವ್ಯಯ ಪೂರಕವಾಗಿದೆ ಎಂದು ರಾಷ್ಟ್ರೀಯ ಹೆದ್ದಾರಿ ಹಾಗೂ ಭೂ ಸಾರಿಗೆ ಸಚಿವ ನಿತಿನ್ ಗಡ್ಕರಿ ಆಯ-ವ್ಯಯದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯಿಸಿದ್ದಾರೆ. ದೇಶದ ಉತ್ಪಾದನೆ ಹಾಗೂ ಬೆಳವಣಿಗೆಯ ಪ್ರಮಾಣದಲ್ಲಿ ಕೃಷಿ, ಉದ್ಯೋಗ, ಕೌಶಲ್ಯಾಭಿವೃದ್ಧಿ ಜೊತೆಗೆ ಸಾಮಾಜಿಕ ನ್ಯಾಯಕ್ಕೆ ಒತ್ತು ನೀಡಲಾಗಿದೆ ಎಂದು ಅವರು ತಿಳಿಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243