ದಿನದ ಸುದ್ದಿ

ಎರಡು ದಿನಗಳ ರಾಜ್ಯ ಭೇಟಿಗಾಗಿ ಕೇಂದ್ರ ಸಚಿವ ಅಮಿತ್ ಶಾ ಬೆಂಗಳೂರಿಗೆ ಆಗಮನ; ಇಂದು ಸಂಜೆ ಖೇಲೋ ಇಂಡಿಯಾ ಸಮಾರೋಪದಲ್ಲಿ ಭಾಗಿ

Published

on

ಸುದ್ದಿದಿನ ಡೆಸ್ಕ್ : ಎರಡು ದಿನಗಳ ಭೇಟಿಗಾಗಿ ಕೇಂದ್ರ ಗೃಹ ಹಾಗೂ ಸಹಕಾರ ಸಚಿವ ಅಮಿತ್ ಶಾ ನಿನ್ನೆ ರಾತ್ರಿ ಬೆಂಗಳೂರಿಗೆ ಆಗಮಿಸಿದರು. ವಿಶೇಷ ವಿಮಾನದ ಮೂಲಕ ಹೆಚ್.ಎ.ಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಅವರನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆತ್ಮೀಯವಾಗಿ ಬರಮಾಡಿಕೊಂಡರು.

ಕೇಂದ್ರ ಸಚಿವರಾದ ಪ್ರಹ್ಲಾದ ಜೋಶಿ, ಸಚಿವರಾದ ಆರಗ ಜ್ಞಾನೇಂದ್ರ, ಗೋವಿಂದ ಎಂ. ಕಾರಜೋಳ, ನಾರಾಯಣ ಗೌಡ, ಲೋಕಸಭಾ ಸದಸ್ಯ ತೇಜಸ್ವಿ ಸೂರ್ಯ ಸೇರಿ ಹಲವರು ಉಪಸ್ಥಿತರಿದ್ದರು.

ಇಂದು ಬಸವ ಜಯಂತಿ ಅಂಗವಾಗಿ ಬೆಂಗಳೂರಿನ ಚಾಲುಕ್ಯ ವೃತ್ತದಲ್ಲಿರುವ ಬಸವೇಶ್ವರರ ಪ್ರತಿಮೆಗೆ ಮಾಲಾರ್ಪಣೆ ಮಾಡಲಿರುವ ಸಚಿವರು, ನೃಪತುಂಗ ವಿಶ್ವವಿದ್ಯಾಲಯದ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.

ಬಳಿಕ ಮಧ್ಯಾಹ್ನದಿಂದ ಸಂಜೆಯವರೆಗೆ ಬಿಜೆಪಿ ಕಚೇರಿಯಲ್ಲಿ ಪಕ್ಷದ ಪದಾಧಿಕಾರಿಗಳ ಜೊತೆ ಸಭೆ ನಡೆಸಲಿದ್ದಾರೆ. ನಂತರ ಖೇಲೋ ಇಂಡಿಯಾ ವಿಶ್ವವಿದ್ಯಾಲಯ ಕ್ರೀಡಾಕೂಟದ ಸಮಾರೋಪ ಸಮಾರಂಭದಲ್ಲಿ ಭಾಗಿಯಾಗಲಿದ್ದಾರೆ.

 

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version