ದಿನದ ಸುದ್ದಿ

ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಸೇರಿದಂತೆ 3 ಸ್ಥಾನಗಳಲ್ಲಿ ಬಿಜೆಪಿ ಗೆಲುವು, ಕಾಂಗ್ರೆಸ್‌ಗೆ 1 ಸ್ಥಾನ

Published

on

ಸುದ್ದಿದಿನ ಡೆಸ್ಕ್ : ಕರ್ನಾಟಕ ವಿಧಾನಸಭೆಯಿಂದ ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ನಿನ್ನೆ ನಡೆದ ದ್ವೈವಾರ್ಷಿಕ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ ಮೂರು ಹಾಗೂ ಕಾಂಗ್ರೆಸ್ ಪಕ್ಷ ಒಂದು ಸ್ಥಾನ ಗೆದ್ದುಕೊಂಡಿದೆ. ಚುನಾವಣಾ ಕಣದಲ್ಲಿ ಒಟ್ಟು ಆರು ಅಭ್ಯರ್ಥಿಗಳು ಸ್ಪರ್ಧಿಸಿದ್ದರು.

ಆಡಳಿತಾರೂಢ ಬಿಜೆಪಿಯಿಂದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಚಲನಚಿತ್ರ ನಟ ಜಗ್ಗೇಶ್ ಮತ್ತು ನಿರ್ಗಮಿತ ವಿಧಾನಪರಿಷತ್ ಸದಸ್ಯ ಲೆಹರ್ ಸಿಂಗ್ ಆಯ್ಕೆಯಾದರೆ, ಪ್ರತಿಪಕ್ಷ ಕಾಂಗ್ರೆಸ್‌ನಿಂದ ಕೇಂದ್ರದ ಮಾಜಿ ಸಚಿವ ಜೈರಾಮ್ ರಮೇಶ್ ಚುನಾಯಿತರಾದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version