ದಿನದ ಸುದ್ದಿ

ಯುಜಿಸಿ ನಾಲ್ಕು ವರ್ಷದ ಪದವಿ ಕಾರ್ಯಕ್ರಮ ನಾಳೆ ಪ್ರಕಟ

Published

on

ಸುದ್ದಿದಿನ ಡೆಸ್ಕ್ : ವಿಶ್ವವಿದ್ಯಾಲಯ ಅನುದಾನ ಆಯೋಗ – ಯುಜಿಸಿ ನಾಲ್ಕು ವರ್ಷದ ಪದವಿ ಕಾರ್ಯಕ್ರಮವನ್ನು ನಾಳೆ ಪ್ರಕಟಿಸಲಿದೆ. 2023-24ನೇ ಸಾಲಿನಲ್ಲಿ ಆರಂಭವಾಗಲಿರುವ ಶೈಕ್ಷಣಿಕ ವರ್ಷದಲ್ಲಿ ಉನ್ನತ ಶಿಕ್ಷಣ ಸಂಸ್ಥೆಗಳು ಈ ಕಾರ್ಯಕ್ರಮವನ್ನು ಅಳವಡಿಸಿಕೊಳ್ಳಬಹುದಾಗಿದೆ.

ಈ ಕಾರ್ಯಕ್ರಮದಲ್ಲಿ 4 ವರ್ಷದ ಪದವಿ ಶಿಕ್ಷಣ ವ್ಯವಸ್ಥೆಯನ್ನು ಹಂತ ಹಂತವಾಗಿ ಜಾರಿಗೊಳಿಸಲಾಗುವುದು. ಪ್ರತ್ಯೇಕ ಪ್ರವೇಶಾತಿ ಸೌಲಭ್ಯ ಮತ್ತು ಅದರಿಂದ ಹೊರಬರುವ ಆಯ್ಕೆಯನ್ನು ವಿದ್ಯಾರ್ಥಿಗಳಿಗೆ ಕಲ್ಪಿಸಲಾಗಿದೆ.

ರಾಷ್ಟ್ರೀಯ ಶಿಕ್ಷಣ ನೀತಿ -2020ರ ಅಡಿಯಲ್ಲಿ ಉನ್ನತ ಶಿಕ್ಷಣ ಕಲಿಕಾ ವ್ಯವಸ್ಥೆಯಲ್ಲಿ ಒಬ್ಬ ವಿದ್ಯಾರ್ಥಿ ಏಕ ಕಾಲಕ್ಕೆ ತನಗೆ ಇಷ್ಟವಾದ ಒಂದಕ್ಕಿಂತ ಹೆಚ್ಚು ಪದವಿ ತರಗತಿಗಳನ್ನು ಅಧ್ಯಯನ ನಡೆಸುವ ಅವಕಾಶ ಕಲ್ಪಿಸಲಾಗಿದೆ ಎಂದು ಯುಜಿಸಿ ಅಧ್ಯಕ್ಷ ಪ್ರೊಫೆಸರ್ ಎಂ. ಜಗದೀಶ್ ಕುಮಾರ್ ಹೇಳಿದ್ದಾರೆ.

ವಿಜ್ಞಾನ, ಸಾಮಾಜಿಕ ವಿಜ್ಞಾನ, ಮಾನವೀಯ ಸಂಬಂಧಗಳು, ಭಾಷೆ ಮತ್ತು ವೃತ್ತಿಪರ ವಿಷಯಗಳನ್ನು ಆಯ್ಕೆ ಮಾಡಿಕೊಳ್ಳಲು ವಿದ್ಯಾರ್ಥಿಗಳಿಗೆ ಅವಕಾಶವಿರುತ್ತದೆ ಎಂದು ಪ್ರೊಫೆಸರ್ ಜಗದೀಶ್ ಕುಮಾರ್ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version