ದಿನದ ಸುದ್ದಿ

ಯುಪಿ ಪೊಲೀಸರ ದುರ್ವರ್ತನೆ | ಸಿಎಂ ಯೋಗಿ ಆದಿತ್ಯನಾಥ್ ಬೆಲೆ ತೆರಬೇಕಾಗುತ್ತದೆ : ಸಿದ್ದರಾಮಯ್ಯ ಎಚ್ಚರಿಕೆ

Published

on

ಸುದ್ದಿದಿನ, ಬೆಂಗಳೂರು : ಉತ್ತರಪ್ರದೇಶದ ಪೊಲೀಸರು ನಮ್ಮ ಪಕ್ಷದ ನಾಯಕರಾದ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಅವರನ್ನು ಬಂಧಿಸಿರುವುದು ಖಂಡನೀಯ. ಈ ಇಬ್ಬರು ನಾಯಕರ ಬಂಧನ ಮತ್ತು ಅವರ ಜೊತೆಗಿನ ಪೊಲೀಸರ ದುರ್ವರ್ತನೆಗೆ ಯೋಗಿ ಆದಿತ್ಯನಾಥ್ ಅವರು ಬೆಲೆ ತೆರಬೇಕಾಗುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಚ್ಚರಿಕೆ ನೀಡಿದ್ದಾರೆ.

ಟ್ಬೀಟ್ ಮೂಲಕ ಅಭಿಪ್ರಾಯ ವ್ಯಕ್ತಪಡಿಸಿರುವ ಅವರು, ಅತ್ಯಾಚಾರಕ್ಕೀಡಾಗಿ ಸಾವನ್ನಪ್ಪಿರುವ ದಲಿತ ಯುವತಿಯ ಕುಟುಂಬವನ್ನು ಪೊಲೀಸರು ಗೃಹಬಂಧನದಲ್ಲಿರಿಸಿದ್ದಾರೆ. ಯೋಗಿ ಆದಿತ್ಯನಾಥ್ ಸರ್ಕಾರದ ಬಣ್ಣ ಬಯಲಾಗುತ್ತದೆ ಎನ್ನುವ ಕಾರಣಕ್ಕೆ ಆ ಕುಟುಂಬದ ಭೇಟಿಗೆ ನಮ್ಮ ನಾಯಕರಾದ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಅವರಿಗೆ ಅವಕಾಶ ನೀಡಲಾಗುತ್ತಿಲ್ಲ ಎಂದು ಕಳವಳ ವ್ಯಕ್ತಪಡಿಸಿದ್ದಾರೆ.

ಉತ್ತರಪ್ರದೇಶದ ಪೊಲೀಸ್ ರಾಜ್ಯದಲ್ಲಿ‌ ಸಂಸದ ರಾಹುಲ್ ಗಾಂಧಿ ಮತ್ತು ನಮ್ಮ ಪಕ್ಷದ ನಾಯಕಿ ಪ್ರಿಯಾಂಕಾ ಗಾಂಧಿ ಅವರೇ ಸುರಕ್ಷಿತರಲ್ಲ ಎಂದ‌ ಮೇಲೆ ಅಲ್ಲಿನ‌ ದಲಿತರು,‌ ಮಹಿಳೆಯರು, ರೈತರು, ಕಾರ್ಮಿಕರು ಹೇಗೆ ಸುರಕ್ಷಿತರಾಗಿರಲು ಸಾಧ್ಯ? ಯೋಗಿ ಆದಿತ್ಯನಾಥ್ ಸರ್ಕಾರ ಪ್ರಜಾಪ್ರಭುತ್ವಕ್ಕೆ ಕಳಂಕ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಾಂಗ್ರೆಸ್ ಪ್ರತಿಭಟನೆ

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version