ದಿನದ ಸುದ್ದಿ
ಕೇಂದ್ರ ಲೋಕಸೇವಾ ಆಯೋಗದ ಪೂರ್ವಭಾವಿ ಪರೀಕ್ಷೆ ; ಫಲಿತಾಂಶ ಪ್ರಕಟ
ಸುದ್ದಿದಿನಡೆಸ್ಕ್:ಕೇಂದ್ರ ಲೋಕಸೇವಾ ಆಯೋಗ, 2024 ರ ನಾಗರಿಕ ಸೇವೆಗಳ ಪೂರ್ವಭಾವಿ ಪರೀಕ್ಷೆಯ ಫಲಿತಾಂಶಗಳನ್ನು ಪ್ರಕಟಿಸಿದೆ.
ಅರ್ಹತೆ ಪಡೆದ ಅಭ್ಯರ್ಥಿಗಳು 2024 ರ ನಾಗರಿಕ ಸೇವೆಗಳ ಮುಖ್ಯ ಪರೀಕ್ಷೆಗಾಗಿ ವಿವರವಾದ ಅರ್ಜಿ ನಮೂನೆಯಲ್ಲಿ ಅರ್ಜಿ ಸಲ್ಲಿಸಬೇಕಾಗುತ್ತದೆ. ಅರ್ಜಿ ಭರ್ತಿ ಮಾಡಲು ಮತ್ತು ಅದರ ಸಲ್ಲಿಕೆಗೆ ದಿನಾಂಕಗಳು ಮತ್ತು ಪ್ರಮುಖ ಸೂಚನೆಗಳನ್ನು ಆಯೋಗದ ಜಾಲತಾಣದಲ್ಲಿ ಪ್ರಕಟಿಸಲಾಗುವುದು.
ನಾಗರಿಕ ಸೇವೆಗಳ ಪೂರ್ವಭಾವಿ ಪರೀಕ್ಷೆಯ ಅಂಕಗಳು, ಕಟ್ ಆಫ್ ಅಂಕಗಳು ಮತ್ತು ಉತ್ತರದ ಕೀಗಳನ್ನು ಆಯೋಗದ ವೆಬ್‌ಸೈಟ್‌ನಲ್ಲಿ ನಾಗರಿಕ ಸೇವಾ ಪರೀಕ್ಷೆ ಮತ್ತು ಭಾರತೀಯ ಅರಣ್ಯ ಸೇವಾ ಪರೀಕ್ಷೆಯ ಸಂಪೂರ್ಣ ಪ್ರಕ್ರಿಯೆಯ ಅಂತಿಮ ಘೋಷಣೆಯ ನಂತರ ಅಪ್‌ಲೋಡ್ ಮಾಡಲಾಗುತ್ತದೆ ಎಂದು ಆಯೋಗ ತಿಳಿಸಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243