ಲೈಫ್ ಸ್ಟೈಲ್
‘ಸೀಬೆಹಣ್ಣಿ’ನ ಮಹತ್ವ..!
ಸೀಬೆಹಣ್ಣು(ಪೇರಳೆ) ಬಾಯಿಗೆ ಮಾತ್ರ ರುಚಿ ಅಲ್ಲ ಅದರಿಂದ ಆರೋಗ್ಯ ಕೂಡ ವೃದ್ಧಿಸಲು ಸಾಧ್ಯ. ಈ ಸೀಬೆಹಣ್ಣು ಎಲ್ಲಾ ಕಾಲದಲ್ಲೂ ದೊರೆಯುತ್ತದೆ. ಸೀಬೆ ಮಾತ್ರವಲ್ಲ ಅದರ ಬೇರೆ ಭಾಗಗಳು ಕೂಡ ತುಂಬಾ ಉಪಯೋಗವಿದೆ. ಈಗ ಅದರ ಭಾಗ ಹಾಗೂ ಹಣ್ಣಿನಿಂದ ಆಗುವ ಉಪಯೋಗವನ್ನು ಮುಂದೆ ತಿಳಿಯೋಣ.
- ಸೀಬೆಯ ಎಲೆಗಳನ್ನು ನುಣ್ಣಗೆ ಅರೆದು ಮುಖಕ್ಕೆ ಲೇಪಿಸಿಕೊಂಡರೆ ಒಂದು ವಾರದೊಳಗೆ ಮೊಡವೆಗಳ ನಿವಾರಣೆಯಾಗುವುದು.
- ಸೀಬೆಯ ಕಾಯಿಗಳನ್ನು ಹಲ್ಲುಗಳಿಂದ ಕಚ್ಚಿ ಚಪ್ಪರಿಸಿ ತಿಂದರೆ ದಂತಕ್ಷಯದ ಭಾದೆ ಇರುವುದಿಲ್ಲ.
- ಸೀಬೆಯ ಎಲೆಗಳನ್ನು ನುಣ್ಣಗೆ ಅರೆದು ಅದರಲ್ಲಿ ಮೈಕೈ ತಿಕ್ಕಿಕೊಂಡು ಬಿಸಿನೀರಿನಲ್ಲಿ ಸ್ನಾನ ಮಾಡುತ್ತಾ ಬಂದರೆ ಬೆವರಿನ ದುರ್ನಾತ ಮಾಯವಾಗುವುದು.
- ಬೀಜ ತೆಗೆದ ಸೀಬೆಹಣ್ಣಿನ ತಿರುಳಿಗೆ ಜೇನುತುಪ್ಪವನ್ನು ಬೆರೆಸಿ ಗರ್ಭಿಣಿಯರು ಸೇವಿಸಿದರೆ ಹೃದ್ರೋಗ, ಅರಿಶಿನ ಕಾಮಾಲೆ, ಉಬ್ಬಸ ಮತ್ತು ಕ್ಷಯದಂತಹ ಖಾಯಿಲೆಗಳಿಗೆ ನಿರೋಧಕವಾಗಿರುವುದು.
- ಶ್ರೀಗಂಧದೊಂದಗೆ ಸೀಬೆ ಎಲೆಗಳನ್ನು ತೇದು ಹಚ್ಚಿದರೆ ಕಜ್ಜಿ, ತುರಿ, ಹುಳಕಡ್ಡಿಗಳು ಮಾಯವಾಗಿ ಹೋಗುವುದು. ಇದೇ ಲೇಪನವನ್ನು ತಲೆಗೆ ಹಚ್ಚಿಕೊಂಡು ಒಂದೆರಡು ಗಂಟೆಗಳ ನಂತರ ಸ್ನಾನ ಮಾಡಿದರೆ ಹೇನುಗಳು ಸಾಯುವುವು.
- ಚಿಗುರು ಸೀಬೆ ಎಲೆಗಳ ಕಷಾಯವನ್ನು ತಯಾರಿಸಿ ಅದಕ್ಕೆ ಸ್ವಲ್ಪ ಉಪ್ಪು ಸೇರಿಸಿ ದಿನಕ್ಕೆ ಮೂರು ಬಾರಿ ಬಾಯಿ ಮುಕ್ಕಳಿಸಿ ಉಗುಳುವುದರಿಂದ ಬಾಯಿಯ ದುರ್ನಾತ ಮಾಯವಾಗುವುದು. ಬಾಯಿಹುಣ್ಣು ನಿವಾರಣೆಯಾಗುವುದು. ಜೊತೆಗೆ ವಸಡಿನಿಂದ ರಕ್ತಸ್ರಾವವಾಗುತ್ತಿದ್ದರೆ ಅದು ಸಹ ನಿಂತು ಹೋಗುವುದು.
- ಚಿಗುರು ಸೀಬೆಯ ಎಲೆಗಳನ್ನು ನುಣ್ಣಗೆ ಅರೆದು ಕಷಾಯ ತಯಾರಿಸಿ ಅದಕ್ಕೆ ರುಚಿಗೆ ತಕ್ಕಷ್ಟು ಉಪ್ಪು ಸೇರಿಸಿ ದಿನಕ್ಕೆ ಮೂರು ಬಾರಿ ಬಾಯಿ ಮುಕ್ಕುಳಿಸುವುದರಿಂದ ವಸಡಿನ ರಕ್ತಸ್ರಾವ ಸ್ಥಗಿತಗೊಳ್ಳವುದು ಹಾಗೂ ಬಾಯಿ ಹುಣ್ಣು ನಿವಾರಣೆಯಾಗುವುದು.
- ಮೈನವೆ ಮತ್ತು ಪಿತ್ತದ ಗಂಧೆಗಳನ್ನು ಹೋಗಲಾಡಿಸಲು ಸೀಬೆಯ ಮತ್ತು ದೊಡ್ಡ ಪತ್ರೆಯ ಸೊಪ್ಪನ್ನು ಮೊಸರಿನಲ್ಲಿ ನುಣ್ಣಗೆ ಅರೆದು ಮೈಗೆ ಹಚ್ಚಿಕೊಂಡು ಚನ್ನಾಗಿ ತಿಕ್ಕಿದ ನಂತರ ಬಿಸಿ ಬಿಸಿ ನೀರಿನ ಸಾನ್ನ ಮಾಡಿ.
- ಬೀಜ ಬಲಿಯದ ಸೀಬೆಕಾಯಿಗಳ ಕಷಾಯ ಸಿದ್ಧಪಡಿಸಿ ಮಜ್ಜಿಗೆಯೊಂದಿಗೆ ಕುಡಿದರೆ ಆಮಶಂಕೆ ಮತ್ತು ಎದೆನೋವು ನಿವಾರಣೆಯಾಗುವುದು.
- ಅತಿಯಾದ ಹೊಟ್ಟೆ ನೋವು ಉಂಟಾಗಿದ್ದರೆ ಸೀಬೆಯ ಹಣ್ಣನ್ನು ಉಪ್ಪು ಮತ್ತು ಕುಟ್ಟಿದ ಕಾಳು ಮೆಣಸಿನ ಪುಡಿಯೊಂದಿಗೆ ತಿಂದರೆ ನೋವು ಮಾಯವಾಗಿ ಹೊಟ್ಟೆ ಹಗುರವಾಗುತ್ತದೆ.
- ಸೀಬೆಯ ತಿರುಳನ್ನು ಬೀಜ ತೆಗೆದು ಹಾಲು ಮತ್ತು ಜೇನಿನೊಂದಿಗೆ ಬೆರೆಸಿ ಟಾನಿಕ್ ತಯಾರಿಸಿಕೊಂಡು ಸೇವಿಸಿದರೆ ಅಕಾಲ ಮುಪ್ಪು, ಹೊಟ್ಟೆ ಹುಣ್ಣು, ಮುಟ್ಟಿನ ಸಂಬಂಧ ಶೂಲೆ, ಅರಿಶಿನ ಕಾಮಾಲೆಯವರು ವೈದ್ಯಕೀಯ ಚಿಕಿತ್ಸೆ ಪಡೆಯುವಾಗ ಹೆಚ್ಚು ಶಕ್ತಿಯ ಉತ್ಪನ್ನವಾಗುತ್ತದೆ.
- ಸಾಮಾನ್ಯವಾಗಿ ಶೀತ ಉಂಟಾದರೆ ಸೀಬೆಕಾಯಿ ತಿನ್ನಬಾರದು ಅನ್ನುವುದನ್ನು ನೀವು ಕೇಳಿರಬಹುದು. ಆದರೆ ಶೀತ ಉಂಟಾದರೆ ಸೀಬೆಕಾಯಿ ತಿನ್ನುವುದು ಒಳ್ಳೆಯದು. ಏಕೆಂದರೆ ಇದರಲ್ಲಿ ವಿಟಮಿನ್ ಸಿ ಹಾಗೂ ಕಬ್ಬಿಣದಂಶವಿದ್ದು ಶೀತವನ್ನು ಕಡಿಮೆ ಮಾಡುತ್ತದೆ.
- ಇದರಲ್ಲಿ ಮ್ಯಾಗ್ನಿಷಿಯಂ ಇರುವುದರಿಂದ ಸ್ನಾಯುಗಳಲ್ಲಿರುವ ಒತ್ತಡವನ್ನು ಕಡಿಮೆ ಮಾಡಿ ಅದಕ್ಕೆ ವಿಶ್ರಾಂತಿಯನ್ನು ನೀಡುತ್ತದೆ. ಇದರಿಂದ ಮೈಕೈ ಸೆಳೆತ ಕಡಿಮೆಯಾಗುವುದು.
- ಬಿ ಗುಂಪಿನ ವಿಟಮಿನ್‌ಗಳು ಮೆದುಳಿಗೆ ಅವಶ್ಯಕ. ಸೀಬೆಕಾಯಿಯಲ್ಲಿ ಬಿ3 ಹಾಗೂ ಬಿ6 ವಿಟಮಿನ್ ಇದ್ದು ಮೆದುಳಿನ ನರಗಳು ಸರಿಯಾಗಿ ಕಾರ್ಯನಿರ್ವಹಿಸುವಂತೆ ಮಾಡುತ್ತದೆ.
- ಸೀಬೆಕಾಯಿಯಲ್ಲಿ ವಿಟಮಿನ್ ಇ ಇದೆ. ತ್ವಚೆ ರಕ್ಷಣೆಯಲ್ಲಿ ವಿಟಮಿನ್ ಇ ಪ್ರಮುಖ ಪಾತ್ರವನ್ನು ವಹಿಸುತ್ತದೆ.
- ಇದರಲ್ಲಿ ಫಾಲಿಕ್ ಆಸಿಡ್ ಹಾಗೂ ಇತರ ಖನಿಜಾಂಶಗಳು ಇರುವುದರಿಂದ ಗರ್ಭಿಣಿಯರಿಗೆ ಸೂಕ್ತವಾದ ಆಹಾರವಾಗಿದೆ.
- ವಯಸ್ಸಿಗೆ ಸಂಬಂಧಿಸಿದ ಸಮಸ್ಯೆಗಳಾದ ಮರೆವು, ಮಂದ ದೃಷ್ಟಿ ಮತ್ತು ಸಂಧಿವಾತವನ್ನೂ ನಿವಾರಿಸುವಲ್ಲಿ ಸೀಬೆ ಹಣ್ಣು ಸಹಕಾರಿ.
- ತೂಕ ಕಡಿಮೆಮಾಡಿಕೊಳ್ಳಬೇಕೆಂದಿದ್ದರೆ ಸೀಬೆ ಒಳ್ಳೆ ಆಯ್ಕೆ. ಸೀಬೆಯಲ್ಲಿ ಅವಶ್ಯಕ ಕಾರ್ಬೊ ಹೈಡ್ರೇಡ್ ಮತ್ತು ಫೈಬರ್ ಇರುವುದರಿಂದ ಬೊಜ್ಜನ್ನೂ ನಿಯಂತ್ರಿಸುತ್ತದೆ.
- ವೀರ್ಯೋತ್ಪತ್ತಿ ಕಡಿಮೆಯಿದ್ದ ಪುರುಷರು ಸೀಬೆಹಣ್ಣನ್ನು ಸೇವಿಸುವುದರಿಂದ ತಮ್ಮ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬಹುದು ಎನ್ನಲಾಗಿದೆ.
- ಇದರಲ್ಲಿ ನಾರಿನಂಶ ಅಧಿಕವಿರುವುದರಿಂದ ಜೀರ್ಣಕ್ರಿಯೆಗೆ ತುಂಬಾ ಒಳ್ಳೆಯದು. ಮಲಬದ್ಧತೆ ಸಮಸ್ಯೆ ಇರುವವರು ಹಣ್ಣಾದ ಸೀಬೆಕಾಯಿಯನ್ನು ಪ್ರತೀದಿನ ತಿನ್ನಿ, ಉತ್ತಮ ಫಲಿತಾಂಶ ಕಾಣುವಿರಿ.
ಸುದ್ದಿದಿನ.ಕಾಂ|ವಾಟ್ಸಾಪ್|9986715401

ಅಂಕಣ
ದೀಪಾವಳಿ ವಿಶೇಷಾಂಕ | ದೇವನಗರಿ ಸುದ್ದಿದಿನ ಪತ್ರಿಕೆಯಿಂದ ಕತೆ- ಕವಿತೆ- ಲೇಖನ- ರೂಪದರ್ಶಿ ಫೋಟೋ ಗಳಿಗೆ ಆಹ್ವಾನ
ಸುದ್ದಿದಿನ,ದಾವಣಗೆರೆ: ಪ್ರಿಯ ಓದುಗರೆ, ಬೆಳಕಿನ ಹಬ್ಬ ದೀಪಾವಳಿಯ ಪ್ರಯುಕ್ತ ದೇವನಗರಿ ಸುದ್ದಿದಿನ – ಕನ್ನಡ ದಿನ ಪತ್ರಿಕೆ ಹಾಗೂ ಶ್ಯಾಮ್ ಪ್ರಕಾಶನದವತಿಯಿಂದ ‘ ದೀಪಾವಳಿ ವಿಶೇಷಾಂಕ’-2026ನ್ನು ತರಲಾಗುತ್ತಿದೆ.
ಈ ಹಿನ್ನೆಲೆಯಲ್ಲಿ ದೀಪಾವಳಿ ವಿಷೇಶಾಂಕ 2026ರ ವಿಭಾಗಕ್ಕೆ ಕತೆ, ಕವಿತೆ ಹಾಗೂ ಲೇಖನ ಹಾಗೂ ರೂಪದರ್ಶಿಗಳ ಛಾಯಾಚಿತ್ರಗಳನ್ನು ಆಹ್ವಾನಿಸಿದ್ದೇವೆ.
ಕತೆ – ಕವಿತೆಗಳನ್ನು ಕಳುಹಿಸಲು ಇರುವ ನಿಯಮಗಳು
ಕತೆ/ಕವಿತೆ ಸ್ವತಂತ್ರ ರಚನೆಯಾಗಿರಬೇಕು. ಈ ಮೊದಲು ಯಾವ ಮಾಧ್ಯಮಗಳಲ್ಲಿಯೂ ಪ್ರಕಟ ಅಥವಾ ಪ್ರಸಾರ ಆಗಿರಬಾರದು.
ಕತೆ 1500 ಸಾವಿರ ಪದಗಳ ಮಿತಿಯಲ್ಲಿರಲಿ. ಕವಿತೆಗೆ 40 ಸಾಲಿನ ಮಿತಿಯಿರಲಿ, ನುಡಿ ಅಥವಾ ಬರಹ ತಂತ್ರಾಂಶದಲ್ಲಿ ಇಲ್ಲವೆ ಯೂನಿಕೋಡ್‌ನಲ್ಲಿ ಇರಬೇಕು. ವಯಸ್ಸಿನ ಮಿತಿ ಇರುವುದಿಲ್ಲ.
ಕತೆ/ಕವಿತೆ ಇರುವ ಪುಟದಲ್ಲಿ ಹೆಸರು, ವಿವರ ಬರೆಯುವಂತಿಲ್ಲ. ಪ್ರತ್ಯೇಕ ಪುಟದಲ್ಲಿ ಹೆಸರು, ಅಂಚೆ ವಿಳಾಸ, ಮೊಬೈಲ್ ನಂಬರ್, ಇ-ಮೇಲ್ ವಿಳಾಸ ಒದಗಿಸಬೇಕು.
ಇತ್ತೀಚಿನ ಪಾಸ್‌ಪೋರ್ಟ್ ಅಳತೆಯ ವರ್ಣಮಯ ಭಾವಚಿತ್ರದೊಂದಿಗೆ 100 ಪದಗಳ ಒಳಗೆ ಕಿರು ಪರಿಚಯ ಕಳುಹಿಸಬೇಕು.
ಸ್ಪರ್ಧೆಗೆ ಕಳುಹಿಸಿರುವ ಬರಹಗಳನ್ನು ಹಿಂದಿರುಗಿಸುವುದಿಲ್ಲ. ಬರಹಗಳು ಕಡ್ಡಾಯವಾಗಿ ಎಂಎಸ್ ವರ್ಡ್ ಫೈಲ್ (MS word File) ನಲ್ಲಿರಲಿ.
ಬರಹ ಮತ್ತು ಫೋಟೋಗಳನ್ನು ಇ-ಮೇಲ್ ಮೂಲಕವಷ್ಟೇ ಕಳಿಸಿ.
ಲೇಖನಗಳಿಗೆ ಆಹ್ವಾನ : ವೈಚಾರಿಕತೆ, ವಿಮರ್ಶೆ, ಕಾನೂನು, ಸಾಹಿತ್ಯ, ತಂತ್ರಜ್ಞಾನ, ವಿಜ್ಞಾನ, ಡಿಜಿಟಲ್ ಮಾಧ್ಯಮ, ಸಿನೆಮಾ, ಪ್ರೇಮಪತ್ರ, ಕೃಷಿ, ರಾಜಕೀಯ, ಕಲೆ, ಆರೋಗ್ಯ, ಪ್ರವಾಸ, ಅಡುಗೆ, ಫೋಟೋಗ್ರಫಿ, ವೈಲ್ಡ್ ಲೈಫ್, ಹಾಸ್ಯ ಕುರಿತಾದ ಲೇಖನಗಳನ್ನು 450 ಪದಗಳನ್ನು ಮೀರದಂತೆ ಬರೆದು ಕಳುಹಿಸಿ.
ಹಾಗೆಯೇ, ವಿಶೇಷಾಂಕದ ಮುಖಪುಟದ ರೂಪದರ್ಶಿಯಾಗಲು ಅವಕಾಶವನ್ನು ಕಲ್ಪಸಿಲಾಗಿದೆ. ಆಸಕ್ತ ರೂಪದರ್ಶಿಗಳು ಸ್ಟುಡಿಯೋ ಅಥವಾ ಫೋಟೋಗ್ರಾಫರ್ ಮೂಲಕ ತೆಗೆದ ‘6*4 ಅಳತೆಯ ಮುದ್ರಿತ ಫೋಟೋ ಮತ್ತು ಇ-ಮೇಲ್ ಮೂಲಕವೂ ಕಳಿಸಬಹುದು. 80 ಪದಗಳಮಿತಿಯೊಳಗೆ ನಿಮ್ಮ ಪರಿಚಯದೊಂದಿಗೆ, ಒಬ್ಬರು 4 ಫೋಟೋ ಕಳುಹಿಸಬೇಕು. ವಯಸ್ಸಿನ ಮಿತಿಯಿಲ್ಲ ಇರುವುದಿಲ್ಲ.
ಕತೆಯ ವಿಜೇತರಿಗೆ ಪ್ರಥಮ ಬಹುಮಾನ : 10000, ದ್ವಿತೀಯ ಬಹುಮಾನ : 5000, ತೃತೀಯ ಬಹುಮಾನ : 3000 ಹಾಗೂ ಕವಿತೆ ಬಹುಮಾನ ವಿಜೇತರಿಗೆ ಪ್ರಥಮ ಬಹುಮಾನ : 5000 ದ್ವಿತೀಯ ಬಹುಮಾನ : 3000 ಹಾಗೂ ತೃತೀಯ ಬಹುಮಾನ : ₹2000 ಸಿಗಲಿದೆ.
ಆಗಸ್ಟ್ 30ರೊಳಗೆ ಬರಹಗಳನ್ನು ಇ-ಮೇಲ್: deepasuddidina@gmail.com ಗೆ ಕಳುಹಿಸಲು ತಿಳಿಸಿದೆ. ಈ ಕುರಿತು ಹೆಚ್ಚಿನ ಮಾಹಿತಿಗಾಗಿ :9980346243 ಹಾಗೂ visit: www.suddidina.com ಅನ್ನು ವೀಕ್ಷಿಸಬಹುದಾಗಿದೆ.
ಕಚೇರಿ ವಿಳಾಸ
ದೇವನಗರಿ ಸುದ್ದಿದಿನ- ಕನ್ನಡ ದಿನ ಪತ್ರಿಕೆ
ದೀಪಾವಳಿ ವಿಶೇಷಾಂಕ ವಿಭಾಗ
#3231/1, ಸಂಜೀವ ಸದನ, 11ನೇ ಮುಖ್ಯರಸ್ತೆ, 4 ನೇ ಅಡ್ಡರಸ್ತೆ, ಎಂಸಿಸಿ ಬಿ ಬ್ಲಾಕ್, ದಾವಣಗೆರೆ, 577004
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಭೀಕರ | ಪ್ರಿಯಕರನಿಂದ ಪ್ರೇಯಸಿಯ ಬರ್ಬರ ಹತ್ಯೆ
ಸುದ್ದಿದಿನ ಡೆಸ್ಕ್:ಬೆಂಗಳೂರಿನಲ್ಲಿ ಪ್ರೀತಿಯೊಂದು ರಕ್ತಸಿಕ್ತ ಅಂತ್ಯ ಕಂಡಿದೆ. ಮದುವೆಗೆ ನಿರಾಕರಿಸಿದ ಪ್ರೇಯಸಿಯನ್ನು ಪ್ರಿಯಕರನೇ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಮಹಾಲಕ್ಷ್ಮಿ ಲೇಔಟ್ ಪೊಲೀಸ್ ಠಾಣೆ ವ್ಯಾಪ್ತಿಯ ಪೈಪ್‌ಲೈನ್ ರಸ್ತೆಯಲ್ಲಿ ನಡೆದಿದೆ.
23 ವರ್ಷದ ಅಂಜಲಿ ಕೊಲೆಯಾದ ಯುವತಿಯಾಗಿದ್ದು, ರಾಜೀವ್ ಬಂಧಿತ ಆರೋಪಿ. ಕಳೆದ ಮೂರು-ನಾಲ್ಕು ವರ್ಷಗಳಿಂದ ಇಬ್ಬರೂ ಪರಸ್ಪರ ಪ್ರೀತಿಸುತ್ತಿದ್ದರು. ಈ ಹಿಂದೆ ಕೆಲಸ ಮಾಡುತ್ತಿದ್ದ ಸ್ಥಳದಲ್ಲೇ ಪರಿಚಯವಾಗಿ ಸ್ನೇಹ ಬೆಳೆದು, ಬಳಿಕ ಅದು ಪ್ರೀತಿಗೆ ತಿರುಗಿತ್ತು.
ಆದರೆ ರಾಜೀವ್‌ಗೆ ಕ್ರಿಮಿನಲ್ ಹಿನ್ನೆಲೆ ಇದ್ದ ಕಾರಣ ಅಂಜಲಿ ಕುಟುಂಬಸ್ಥರು ಈ ಮದುವೆಗೆ ವಿರೋಧ ವ್ಯಕ್ತಪಡಿಸಿದ್ದರು. ಹಲವು ಬಾರಿ ಕುಟುಂಬಸ್ಥರನ್ನು ಒಪ್ಪಿಸಲು ರಾಜೀವ್ ಪ್ರಯತ್ನಿಸಿದ್ದರೂ ಫಲಿಸಿರಲಿಲ್ಲ. ಇತ್ತೀಚೆಗೆ ಪೋಷಕರ ಒತ್ತಾಯಕ್ಕೆ ಮಣಿದ ಅಂಜಲಿ ರಾಜೀವ್‌ನಿಂದ ದೂರವಾಗಲು ಆರಂಭಿಸಿದ್ದಳು. ಇಂದು ಸಂಜೆ ಅಂಜಲಿಯನ್ನು ಊಟದ ನೆಪದಲ್ಲಿ ಕರೆಸಿಕೊಂಡಿದ್ದ ರಾಜೀವ್, ಮತ್ತೊಮ್ಮೆ ಮದುವೆ ವಿಚಾರ ಪ್ರಸ್ತಾಪಿಸಿದ್ದಾನೆ. ಈ ವೇಳೆ ಇಬ್ಬರ ನಡುವೆ ಮಾತಿನ ಚಕಮಕಿ ನಡೆದು, ಕೋಪಗೊಂಡ ರಾಜೀವ್ ಚಾಕುವಿನಿಂದ ಅಂಜಲಿಯ ಕುತ್ತಿಗೆಗೆ ಇರಿದಿದ್ದಾನೆ.
ರಕ್ತದ ಮಡುವಿನಲ್ಲಿ ಬಿದ್ದಿದ್ದ ಅಂಜಲಿಯನ್ನು ಸ್ಥಳೀಯರು ತಕ್ಷಣ ಆಸ್ಪತ್ರೆಗೆ ದಾಖಲಿಸಿದರೂ, ಚಿಕಿತ್ಸೆ ಫಲಕಾರಿಯಾಗದೆ ಆಕೆ ಮೃ*ತಪಟ್ಟಿದ್ದಾಳೆ. ಘಟನೆ ಕುರಿತು ಮಾಹಿತಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಧಾವಿಸಿದ ಮಹಾಲಕ್ಷ್ಮಿ ಲೇಔಟ್ ಪೊಲೀಸರು ಪರಿಶೀಲನೆ ನಡೆಸಿ, ಕೆಲವೇ ನಿಮಿಷಗಳಲ್ಲಿ ಆರೋಪಿ ರಾಜೀವ್‌ನನ್ನು ಬಂಧಿಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಎಂ.ಎಸ್. ರಾಮಯ್ಯ ಆಸ್ಪತ್ರೆಗೆ ರವಾನಿಸಲಾಗಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಮುಂದುವರಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ನಿಮ್ಮ ಕಥೆಗೆ ಹೊಸ ವೇದಿಕೆ ; ಕಥೆಗಾರರಿಗೆ ಪ್ರಿಯಾ ಸುದೀಪ್ ಆಹ್ವಾನ
ಸುದ್ದಿದಿನ ಡೆಸ್ಕ್:ಸುಪ್ರಿಯಾನ್ವಿ ಪ್ರೊಡಕ್ಷನ್ಸ್ ಸಂಸ್ಥೆಯಡಿ ಪ್ರಿಯಾ ಸುದೀಪ್ ನಿರ್ಮಿಸಿದ ಮೊದಲ ಚಿತ್ರ ‘ಮ್ಯಾಂಗೋ ಪಚ್ಚ’. ಸಂಚಿತ್ ಸಂಜೀವ್ ಅಭಿನಯದ ಈ ಚಿತ್ರ ಹೆಚ್ಚು ಸದ್ದು ಮಾಡಲಿಲ್ಲ.
ಈ ಸೋಲನ್ನು ಹಿಂದಕ್ಕೆ ಹಾಕಿ, ಪ್ರಿಯಾ ಸುದೀಪ್ ಇನ್ನಷ್ಟು ಹೊಸ ಕಥೆಗಳನ್ನು ತೆರೆಗೆ ತರುವುದಕ್ಕೆ, ಹೊಸ ಚಿತ್ರಗಳನ್ನು ನಿರ್ಮಿಸುವುದಕ್ಕೆ ಮುಂದಾಗಿದ್ದಾರೆ. ಕಥೆಗಾರರಿಗೆ ಆಹ್ವಾನ ನೀಡಿದ್ದಾರೆ. ‘ನಾವು ಹುಡುಕುತ್ತಿರುವುದು ಕೇವಲ ಕಥೆಗಳಲ್ಲ. ಮನಸ್ಸುಗಳನ್ನು ಮುಟ್ಟುವ ಭಾವನೆಗಳು, ಚಿಂತನೆಗೆ ಹಚ್ಚುವ ವಿಚಾರಗಳು ಮತ್ತು ಪರದೆಯ ಮೇಲೆ ಹೊಸ ಇತಿಹಾಸ ಬರೆಯುವ ಕಲ್ಪನೆಗಳು.
ನಿಮ್ಮ ಬಳಿ ಮೌಲಿಕ ಕಥೆ-ಚಿತ್ರಕಥೆ ಇದ್ದರೆ ಅಥವಾ ವಿಶಿಷ್ಟ ಕಥಾ ಪರಿಕಲ್ಪನೆ ಇದ್ದರೆ, ಅದನ್ನು ನಮ್ಮೊಂದಿಗೆ ಹಂಚಿಕೊಳ್ಳಿ. ತಮ್ಮದೇ ಆದ ವಿಶಿಷ್ಟ ದೃಷ್ಟಿಕೋನ ಮತ್ತು ಸೃಜನಾತ್ಮಕತೆಯನ್ನು ಹೊಂದಿರುವ ಲೇಖಕರು, ಕಥೆಗಾರರು ಮತ್ತು ಸೃಜನಶೀಲ ಮನಸ್ಸುಗಳನ್ನು ನಾವು ಸ್ವಾಗತಿಸುತ್ತೇವೆ. ಎಲ್ಲಾ ಪ್ರಕಾರಗಳು ಮತ್ತು ಎಲ್ಲಾ ಮಾದರಿಗಳಲ್ಲಿನ ಕಥಾ ಸಲ್ಲಿಕೆಗಳನ್ನು ನಾವು ಸ್ವಾಗತಿಸುತ್ತೇವೆ. ನಿಮ್ಮ ಕಥೆಯೇ ಮುಂದಿನ ದೊಡ್ಡ ಪ್ರಯಾಣದ ಆರಂಭವಾಗಬಹುದು’ ಎಂದು ಪ್ರಿಯಾ ಸುದೀಪ್, ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.
ಜೊತೆಗೆ ಒಂದು ಮೊಬೈಲ್ ಸಂಖ್ಯೆಯನ್ನು ಸಹ ಹಂಚಿಕೊಂಡಿದ್ದಾರೆ. ಆದರೆ, ಕರೆ ಮಾಡುವಂತಿಲ್ಲ. ಚಾಟ್ ಮಾತ್ರ ಮಾಡಬಹುದು. ಕಥೆಗಳಿದ್ದರೆ 6663307434 ಸಂಖ್ಯೆಯನ್ನು ಸಂಪರ್ಕಿಸಬಹುದು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ5 days agoಚನ್ನಗಿರಿ | ಲವ್ ಮ್ಯಾರೇಜ್ ; ಪೊಲೀಸ್ ಠಾಣೆ ಆವರಣದಲ್ಲೇ ಯುವಕನಿಗೆ ಚಾಕು ಇರಿತ
-
ದಿನದ ಸುದ್ದಿ3 days agoದಾವಣಗೆರೆ | ತಾಪಂ ಅನುದಾನ ದುರುಪಯೋಗ: ಮೂವರು ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ತನಿಖೆ ಚುರುಕು
-
ದಿನದ ಸುದ್ದಿ4 days ago
ಮತದಾರರ ಪಟ್ಟಿ ಪರಿಷ್ಕರಣೆ | ಪ್ರತಿಯೊಬ್ಬರ ಮನೆಬಾಗಿಲಿಗೆ ತಲುಪಲಿವೆ ಫಾರಂಗಳು ; ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ
-
ದಿನದ ಸುದ್ದಿ24 hours agoಮಾಠಾಧೀಶರ ಮೇಲೆ ಹಲ್ಲೆ ; ನಿರ್ಲಕ್ಷಿಸಿದರೆ ದುಷ್ಕೃತ್ಯ ಹೆಚ್ಚಳ ಸಂಭವ; ಕಠಿಣ ಕ್ರಮಕ್ಕೆ ಎಚ್.ಆಂಜನೇಯ ಆಗ್ರಹ


