ಲೈಫ್ ಸ್ಟೈಲ್

‘ಸೀಬೆಹಣ್ಣಿ’ನ ಮಹತ್ವ..!

Published

on

ಸೀಬೆಹಣ್ಣು(ಪೇರಳೆ) ಬಾಯಿಗೆ ಮಾತ್ರ ರುಚಿ ಅಲ್ಲ ಅದರಿಂದ ಆರೋಗ್ಯ ಕೂಡ ವೃದ್ಧಿಸಲು ಸಾಧ್ಯ. ಈ‌ ಸೀಬೆಹಣ್ಣು ಎಲ್ಲಾ ಕಾಲದಲ್ಲೂ ದೊರೆಯುತ್ತದೆ. ಸೀಬೆ ಮಾತ್ರವಲ್ಲ ಅದರ ಬೇರೆ ಭಾಗಗಳು ಕೂಡ ತುಂಬಾ ಉಪಯೋಗವಿದೆ. ಈಗ ಅದರ ಭಾಗ ಹಾಗೂ ಹಣ್ಣಿನಿಂದ ಆಗುವ ಉಪಯೋಗವನ್ನು ಮುಂದೆ ತಿಳಿಯೋಣ.

  1. ಸೀಬೆಯ ಎಲೆಗಳನ್ನು ನುಣ್ಣಗೆ ಅರೆದು ಮುಖಕ್ಕೆ ಲೇಪಿಸಿಕೊಂಡರೆ ಒಂದು ವಾರದೊಳಗೆ ಮೊಡವೆಗಳ ನಿವಾರಣೆಯಾಗುವುದು.
  2. ಸೀಬೆಯ ಕಾಯಿಗಳನ್ನು ಹಲ್ಲುಗಳಿಂದ ಕಚ್ಚಿ ಚಪ್ಪರಿಸಿ ತಿಂದರೆ ದಂತಕ್ಷಯದ ಭಾದೆ ಇರುವುದಿಲ್ಲ.
  3. ಸೀಬೆಯ ಎಲೆಗಳನ್ನು ನುಣ್ಣಗೆ ಅರೆದು ಅದರಲ್ಲಿ ಮೈಕೈ ತಿಕ್ಕಿಕೊಂಡು ಬಿಸಿನೀರಿನಲ್ಲಿ ಸ್ನಾನ ಮಾಡುತ್ತಾ ಬಂದರೆ ಬೆವರಿನ ದುರ್ನಾತ ಮಾಯವಾಗುವುದು.
  4. ಬೀಜ ತೆಗೆದ ಸೀಬೆಹಣ್ಣಿನ ತಿರುಳಿಗೆ ಜೇನುತುಪ್ಪವನ್ನು ಬೆರೆಸಿ ಗರ್ಭಿಣಿಯರು ಸೇವಿಸಿದರೆ ಹೃದ್ರೋಗ, ಅರಿಶಿನ ಕಾಮಾಲೆ, ಉಬ್ಬಸ ಮತ್ತು ಕ್ಷಯದಂತಹ ಖಾಯಿಲೆಗಳಿಗೆ ನಿರೋಧಕವಾಗಿರುವುದು.
  5. ಶ್ರೀಗಂಧದೊಂದಗೆ ಸೀಬೆ ಎಲೆಗಳನ್ನು ತೇದು ಹಚ್ಚಿದರೆ ಕಜ್ಜಿ, ತುರಿ, ಹುಳಕಡ್ಡಿಗಳು ಮಾಯವಾಗಿ ಹೋಗುವುದು. ಇದೇ ಲೇಪನವನ್ನು ತಲೆಗೆ ಹಚ್ಚಿಕೊಂಡು ಒಂದೆರಡು ಗಂಟೆಗಳ ನಂತರ ಸ್ನಾನ ಮಾಡಿದರೆ ಹೇನುಗಳು ಸಾಯುವುವು.
  6. ಚಿಗುರು ಸೀಬೆ ಎಲೆಗಳ ಕಷಾಯವನ್ನು ತಯಾರಿಸಿ ಅದಕ್ಕೆ ಸ್ವಲ್ಪ ಉಪ್ಪು ಸೇರಿಸಿ ದಿನಕ್ಕೆ ಮೂರು ಬಾರಿ ಬಾಯಿ ಮುಕ್ಕಳಿಸಿ ಉಗುಳುವುದರಿಂದ ಬಾಯಿಯ ದುರ್ನಾತ ಮಾಯವಾಗುವುದು. ಬಾಯಿಹುಣ್ಣು ನಿವಾರಣೆಯಾಗುವುದು. ಜೊತೆಗೆ ವಸಡಿನಿಂದ ರಕ್ತಸ್ರಾವವಾಗುತ್ತಿದ್ದರೆ ಅದು ಸಹ ನಿಂತು ಹೋಗುವುದು.
  7. ಚಿಗುರು ಸೀಬೆಯ ಎಲೆಗಳನ್ನು ನುಣ್ಣಗೆ ಅರೆದು ಕಷಾಯ ತಯಾರಿಸಿ ಅದಕ್ಕೆ ರುಚಿಗೆ ತಕ್ಕಷ್ಟು ಉಪ್ಪು ಸೇರಿಸಿ ದಿನಕ್ಕೆ ಮೂರು ಬಾರಿ ಬಾಯಿ ಮುಕ್ಕುಳಿಸುವುದರಿಂದ ವಸಡಿನ ರಕ್ತಸ್ರಾವ ಸ್ಥಗಿತಗೊಳ್ಳವುದು ಹಾಗೂ ಬಾಯಿ ಹುಣ್ಣು ನಿವಾರಣೆಯಾಗುವುದು.
  8. ಮೈನವೆ ಮತ್ತು ಪಿತ್ತದ ಗಂಧೆಗಳನ್ನು ಹೋಗಲಾಡಿಸಲು ಸೀಬೆಯ ಮತ್ತು ದೊಡ್ಡ ಪತ್ರೆಯ ಸೊಪ್ಪನ್ನು ಮೊಸರಿನಲ್ಲಿ ನುಣ್ಣಗೆ ಅರೆದು ಮೈಗೆ ಹಚ್ಚಿಕೊಂಡು ಚನ್ನಾಗಿ ತಿಕ್ಕಿದ ನಂತರ ಬಿಸಿ ಬಿಸಿ ನೀರಿನ ಸಾನ್ನ ಮಾಡಿ.
  9. ಬೀಜ ಬಲಿಯದ ಸೀಬೆಕಾಯಿಗಳ ಕಷಾಯ ಸಿದ್ಧಪಡಿಸಿ ಮಜ್ಜಿಗೆಯೊಂದಿಗೆ ಕುಡಿದರೆ ಆಮಶಂಕೆ ಮತ್ತು ಎದೆನೋವು ನಿವಾರಣೆಯಾಗುವುದು.
  10. ಅತಿಯಾದ ಹೊಟ್ಟೆ ನೋವು ಉಂಟಾಗಿದ್ದರೆ ಸೀಬೆಯ ಹಣ್ಣನ್ನು ಉಪ್ಪು ಮತ್ತು ಕುಟ್ಟಿದ ಕಾಳು ಮೆಣಸಿನ ಪುಡಿಯೊಂದಿಗೆ ತಿಂದರೆ ನೋವು ಮಾಯವಾಗಿ ಹೊಟ್ಟೆ ಹಗುರವಾಗುತ್ತದೆ.
  11. ಸೀಬೆಯ ತಿರುಳನ್ನು ಬೀಜ ತೆಗೆದು ಹಾಲು ಮತ್ತು ಜೇನಿನೊಂದಿಗೆ ಬೆರೆಸಿ ಟಾನಿಕ್ ತಯಾರಿಸಿಕೊಂಡು ಸೇವಿಸಿದರೆ ಅಕಾಲ ಮುಪ್ಪು, ಹೊಟ್ಟೆ ಹುಣ್ಣು, ಮುಟ್ಟಿನ ಸಂಬಂಧ ಶೂಲೆ, ಅರಿಶಿನ ಕಾಮಾಲೆಯವರು ವೈದ್ಯಕೀಯ ಚಿಕಿತ್ಸೆ ಪಡೆಯುವಾಗ ಹೆಚ್ಚು ಶಕ್ತಿಯ ಉತ್ಪನ್ನವಾಗುತ್ತದೆ.
  12. ಸಾಮಾನ್ಯವಾಗಿ ಶೀತ ಉಂಟಾದರೆ ಸೀಬೆಕಾಯಿ ತಿನ್ನಬಾರದು ಅನ್ನುವುದನ್ನು ನೀವು ಕೇಳಿರಬಹುದು. ಆದರೆ ಶೀತ ಉಂಟಾದರೆ ಸೀಬೆಕಾಯಿ ತಿನ್ನುವುದು ಒಳ್ಳೆಯದು. ಏಕೆಂದರೆ ಇದರಲ್ಲಿ ವಿಟಮಿನ್ ಸಿ ಹಾಗೂ ಕಬ್ಬಿಣದಂಶವಿದ್ದು ಶೀತವನ್ನು ಕಡಿಮೆ ಮಾಡುತ್ತದೆ.
  13. ಇದರಲ್ಲಿ ಮ್ಯಾಗ್ನಿಷಿಯಂ ಇರುವುದರಿಂದ ಸ್ನಾಯುಗಳಲ್ಲಿರುವ ಒತ್ತಡವನ್ನು ಕಡಿಮೆ ಮಾಡಿ ಅದಕ್ಕೆ ವಿಶ್ರಾಂತಿಯನ್ನು ನೀಡುತ್ತದೆ. ಇದರಿಂದ ಮೈಕೈ ಸೆಳೆತ ಕಡಿಮೆಯಾಗುವುದು.
  14. ಬಿ ಗುಂಪಿನ ವಿಟಮಿನ್‌ಗಳು ಮೆದುಳಿಗೆ ಅವಶ್ಯಕ. ಸೀಬೆಕಾಯಿಯಲ್ಲಿ ಬಿ3 ಹಾಗೂ ಬಿ6 ವಿಟಮಿನ್ ಇದ್ದು ಮೆದುಳಿನ ನರಗಳು ಸರಿಯಾಗಿ ಕಾರ್ಯನಿರ್ವಹಿಸುವಂತೆ ಮಾಡುತ್ತದೆ.
  15. ಸೀಬೆಕಾಯಿಯಲ್ಲಿ ವಿಟಮಿನ್ ಇ ಇದೆ. ತ್ವಚೆ ರಕ್ಷಣೆಯಲ್ಲಿ ವಿಟಮಿನ್ ಇ ಪ್ರಮುಖ ಪಾತ್ರವನ್ನು ವಹಿಸುತ್ತದೆ.
  16. ಇದರಲ್ಲಿ ಫಾಲಿಕ್ ಆಸಿಡ್ ಹಾಗೂ ಇತರ ಖನಿಜಾಂಶಗಳು ಇರುವುದರಿಂದ ಗರ್ಭಿಣಿಯರಿಗೆ ಸೂಕ್ತವಾದ ಆಹಾರವಾಗಿದೆ.
  17. ವಯಸ್ಸಿಗೆ ಸಂಬಂಧಿಸಿದ ಸಮಸ್ಯೆಗಳಾದ ಮರೆವು, ಮಂದ ದೃಷ್ಟಿ ಮತ್ತು ಸಂಧಿವಾತವನ್ನೂ ನಿವಾರಿಸುವಲ್ಲಿ ಸೀಬೆ ಹಣ್ಣು ಸಹಕಾರಿ.
  18. ತೂಕ ಕಡಿಮೆಮಾಡಿಕೊಳ್ಳಬೇಕೆಂದಿದ್ದರೆ ಸೀಬೆ ಒಳ್ಳೆ ಆಯ್ಕೆ. ಸೀಬೆಯಲ್ಲಿ ಅವಶ್ಯಕ ಕಾರ್ಬೊ ಹೈಡ್ರೇಡ್ ಮತ್ತು ಫೈಬರ್ ಇರುವುದರಿಂದ ಬೊಜ್ಜನ್ನೂ ನಿಯಂತ್ರಿಸುತ್ತದೆ.
  19. ವೀರ್ಯೋತ್ಪತ್ತಿ ಕಡಿಮೆಯಿದ್ದ ಪುರುಷರು ಸೀಬೆಹಣ್ಣನ್ನು ಸೇವಿಸುವುದರಿಂದ ತಮ್ಮ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬಹುದು ಎನ್ನಲಾಗಿದೆ.
  20. ಇದರಲ್ಲಿ ನಾರಿನಂಶ ಅಧಿಕವಿರುವುದರಿಂದ ಜೀರ್ಣಕ್ರಿಯೆಗೆ ತುಂಬಾ ಒಳ್ಳೆಯದು. ಮಲಬದ್ಧತೆ ಸಮಸ್ಯೆ ಇರುವವರು ಹಣ್ಣಾದ ಸೀಬೆಕಾಯಿಯನ್ನು ಪ್ರತೀದಿನ ತಿನ್ನಿ, ಉತ್ತಮ ಫಲಿತಾಂಶ ಕಾಣುವಿರಿ.

ಸುದ್ದಿದಿನ.ಕಾಂ|ವಾಟ್ಸಾಪ್|9986715401

Trending

Exit mobile version