ದಿನದ ಸುದ್ದಿ
ಉತ್ತರ ಕನ್ನಡ ಜಿಲ್ಲೆಯ ಕರಾವಳಿಯಲ್ಲಿ ಧಾರಾಕಾರ ಮಳೆ ; ಜನಜೀವನ ಅಸ್ತವ್ಯಸ್ಥ
ಸುದ್ದಿದಿನ ಡೆಸ್ಕ್ : ಉತ್ತರಕನ್ನಡ ಜಿಲ್ಲೆಯ ಕರಾವಳಿಯಾದ್ಯಂತ ಇಂದು ಧಾರಾಕಾರ ಮಳೆಯಾಗುತ್ತಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ.
ಮುಂದಿನ 2-3 ದಿನಗಳ ಕಾಲ ಸಾರ್ವಜನಿಕರು ಮತ್ತು ಪ್ರವಾಸಿಗರು ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಜಿಲ್ಲಾಡಳಿತ ಸೂಚನೆ ನೀಡಿದೆ. ಇದೇ 22 ರಿಂದ 25 ರವರೆಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಸಾರ್ವಜನಿಕರು ಪ್ರಕೃತಿ ವಿಕೋಪ ಸಂಬಂಧಿತ ತುರ್ತು ಸೇವೆಗಾಗಿ ಉಚಿತ ಸಹಾಯವಾಣಿ ಸಂಖ್ಯೆ 10 77 ಅಥವಾ 94 83 51 10 15 ಸಂಪರ್ಕಿಸಲು ಜಿಲ್ಲಾಡಳಿತ ಸೂಚನೆ ನೀಡಿದೆ.
ಭಾರೀ ಮಳೆಯಿಂದ ಕಾರವಾರದ ಹಬ್ಬುವಾಡಾ, ಹೈಚರ್ಚ್ ರಸ್ತೆ, ರೈಲು ನಿಲ್ದಾಣ ರಸ್ತೆ ಸೇರಿದಂತೆ ಹಲವೆಡೆ ರಸ್ತೆಗಳು ಜಲಾವೃತಗೊಂಡಿವೆ. ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಮಳೆ ನೀರು ನಿಂತು ವಾಹನ ಸಂಚಾರ ಅಸ್ತವ್ಯಸ್ತಗೊಂಡಿದೆ. ಕುಮಟಾದಲ್ಲೂ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದೆ ಎಂದು ನಮ್ಮ ಪ್ರತಿನಿಧಿ ವರದಿ ಮಾಡಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243