ದಿನದ ಸುದ್ದಿ
ಶೀಘ್ರದಲ್ಲೇ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿ : ಗೃಹ ಸಚಿವ ಜಿ. ಪರಮೇಶ್ವರ್
ಸುದ್ದಿದಿನಡೆಸ್ಕ್:ಪಿಎಸ್‌ಐ ಹಗರಣ ನಂತರ ಐದು ವರ್ಷಗಳಿಂದ ಇಲ್ಲಿವರೆಗೂ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಿರಲಿಲ್ಲ. ಈಗ ಶೀಘ್ರದಲ್ಲಿಯೇ ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು ಗೃಹ ಸಚಿವ ಜಿ.ಪರಮೇಶ್ವರ್ ತಿಳಿಸಿದ್ದಾರೆ.
ಬಾಗಲಕೋಟೆ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪೊಲೀಸ್ ಇಲಾಖೆಯಲ್ಲಿ ಕಳೆದ ಐದು ವರ್ಷಗಳಿಂದ ಯಾವುದೇ ನೇಮಕಾತಿಗಳು ಆಗಿಲ್ಲ. ಒಂದು ಸಾವಿರ ಪಿಎಸ್‌ಐ ಹುದ್ದೆಗಳು ಖಾಲಿ ಇದ್ದು, ಈಗಾಗಲೇ 500 ಹುದ್ದೆಗಳ ನೇಮಕಾತಿ ಪ್ರಕ್ರಿಯೆಯು ನಡೆದಿದ್ದು, ಕೆಲವರು ತರಬೇತಿಯಲ್ಲಿದ್ದಾರೆ. ಇಲಾಖೆಯಲ್ಲಿರುವ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಹಂತ-ಹಂತವಾಗಿ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243