Connect with us

ದಿನದ ಸುದ್ದಿ

ನಿಷೇದಾಜ್ಞೆ ಮುಗಿಯುವವರೆಗೆ ಸರ್ಕಾರಿ ಆರೋಗ್ಯ ಸಂಸ್ಥೆಗಳಲ್ಲಿ ಲಸಿಕೆ

Published

on

ಸುದ್ದಿದಿನ,ದಾವಣಗೆರೆ : ಮೋತಿ ವೀರಪ್ಪ ಕಾಲೇಜಿನ ಆವರಣದಲ್ಲಿ ನಡೆಯುತ್ತಿದ್ದ ಲಸಿಕಾಕರಣ ವ್ಯವಸ್ಥೆಯನ್ನು ಇನ್ನು ಮುಂದೆ ಆ ಸ್ಥಳದ ಬದಲು ಚಿಗಟೇರಿ ಆಸ್ಪತ್ರೆ ಒಳಗಡೆ ಇರುವ ಮಕ್ಕಳ ಮತ್ತು ಹೆರಿಗೆ ಆಸ್ಪತ್ರೆ ಕೊಠಡಿ ಸಂಖ್ಯೆ 34ರಲ್ಲಿ ಲಸಿಕಾಕರಣವನ್ನು ಮಾಡಲಾಗುವುದು.

ಇನ್ನು ಮುಂದೆ ಜಿಲ್ಲೆಯಾದ್ಯಂತ ಪ್ರತಿಯೊಂದು ತಾಲ್ಲೂಕು ಸಾರ್ವಜನಿಕ ಆಸ್ಪತ್ರೆಗಳು, ಸಮುದಾಯ ಆರೋಗ್ಯ ಕೇಂದ್ರಗಳು, ಪ್ರಾಥಮಿಕ ಆರೋಗ್ಯ ಕೇಂದ್ರಗಳು, ಉಪಕೇಂದ್ರಗಳು ಹಾಗೂ ದಾವಣಗೆರೆ ನಗರದಲ್ಲಿರುವ ಚಾಮರಾಜಪೇಟೆಯ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯಲ್ಲಿಯೂ ಕೋವಿಡ್-19 ಲಸಿಕಾಕರಣ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ.

ಇದನ್ನೂ ಓದಿ | ಕೋವಿಡ್ 2ನೇ ಅಲೆ ಹೆಚ್ಚು ಅಪಾಯಕಾರಿ : ಶ್ರಮ ವಹಿಸಿ ಕರ್ತವ್ಯ ನಿರ್ವಹಿಸುವಂತೆ ವೈದ್ಯರಲ್ಲಿ ಸಂಸದ ಜಿ.ಎಂ.ಸಿದ್ದೇಶ್ ಮನವಿ

ಲಸಿಕೆಯನ್ನು ಪಡೆಯುವವರು ಕಡ್ಡಾಯವಾಗಿ ಆನ್‍ಲೈನ್‍ನಲ್ಲಿ ನೋಂದಾವಣೆ ಮಾಡಿ, ಅದರ ಪ್ರತಿಯನ್ನು ಲಸಿಕಾಕರಣ ಕೇಂದ್ರಕ್ಕೆ ತರತಕ್ಕದ್ದು. ಪ್ರಸ್ತುತವಾಗಿ 45 ವರ್ಷ ಮೇಲ್ಪಟ್ಟವರಿಗೆ ಮಾತ್ರ ಲಸಿಕೆಯನ್ನು ನೀಡಲಾಗುತ್ತಿದ್ದು, 18 ವರ್ಷದಿಂದ 45 ವರ್ಷದೊಳಗಿನವರಿಗೆ ಲಸಿಕಾಕರಣವನ್ನು ಮಾಡುವ ದಿನಾಂಕವನ್ನು ಮುಂದೆ ತಿಳಿಸಲಾಗುವುದೆಂದು ದಾವಣಗೆರೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ | ವಾಟ್ಸಾಪ್ | 9980346243

ದಿನದ ಸುದ್ದಿ

ದಾವಣಗೆರೆ | 197 ಹೊಸ ಕೊರೋನಾ ಪ್ರಕರಣಗಳು ಪತ್ತೆ, ಜಿಲ್ಲೆಯಲ್ಲಿ ಸಕ್ರಿಯ ಪ್ರಕರಣಗಳು ಎಷ್ಟಿವೆ ಗೊತ್ತಾ..?

Published

on

ಸುದ್ದಿದಿನ,ದಾವಣಗೆರೆ: ದಾವಣಗೆರೆ ಜಿಲ್ಲೆಯಲ್ಲಿಂದು 197 ಹೊಸ ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಮೂರು ಮಂದಿ ಸೋಂಕಿನಿಂದ ಸಾವನ್ನಪ್ಪಿದ್ದಾರೆ.

ದಾವಣಗೆರೆ ನಗರ ಸೇರಿದಂತೆ ತಾಲೂಕುಗಳಲ್ಲಿ ಪತ್ತೆಯಾದ ಕೊರೋನಾ ಪ್ರಕರಣಗಳ ಸಂಖ್ಯೆ ಹೀಗಿದೆ. ದಾವಣಗೆರೆ 142, ಹರಿಹರ 20, ಜಗಳೂರು 2, ಚನ್ನಗಿರಿ 13, ಹೊನ್ನಾಳಿ 11, ಹೊರ ಜಿಲ್ಲೆಯಿಂದ 09 ಮಂದಿ ಕೊರೊನಾ ಸೋಂಕಿಗೆ ಒಳಗಾಗಿದ್ದಾರೆ. ಈ ಮೂಲಕ ಸೋಂಕಿತರ ಸಂಖ್ಯೆ 29,905ಕ್ಕೆ ಏರಿಕೆಯಾಗಿದೆ.

ಇದನ್ನೂ ಓದಿ : ದಾವಣಗೆರೆ : ಆಸ್ತಿ ತೆರಿಗೆ ರಿಯಾಯಿತಿ ಸೌಲಭ್ಯ ಅವಧಿ ವಿಸ್ತರಣೆ

ಸೋಮವಾರ 301 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದು, ಇದುವೆಗೆ ಒಟ್ಟು 26,495 ಮಂದಿ ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ ಇದುವರೆಗೆ 304 ಮಂದಿ ಸಾವನ್ನಪ್ಪಿದ್ದಾರೆ. ಜಿಲ್ಲೆಯಲ್ಲಿ ಇನ್ನು 3,106 ಸಕ್ರಿಯ ಕೇಸ್ ಗಳಿವೆ. 68 ವರ್ಷದ ಗೋಪನಾಳ ವೃದ್ಧ, ಹರಿಹರದ 25 ವರ್ಷದ ಯುವಕ, ದಾವಣಗೆರೆಯ 28 ವರ್ಷದ ಯುವಕ ಸಾವನ್ನಪ್ಪಿದ್ದಾರೆ ಎಂದು ಆರೋಗ್ಯ ಇಲಾಖೆಯ ಬುಲೆಟಿನ್ ನಲ್ಲಿ ತಿಳಿಸಲಾಗಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ದಾವಣಗೆರೆ : ಆಸ್ತಿ ತೆರಿಗೆ ರಿಯಾಯಿತಿ ಸೌಲಭ್ಯ ಅವಧಿ ವಿಸ್ತರಣೆ

Published

on

ಸುದ್ದಿದಿನ,ದಾವಣಗೆರೆ : ಆಸ್ತಿ ತೆರಿಗೆ ಮೇಲೆ ಶೇ.5 ರಷ್ಟು ರಿಯಾಯಿತಿ ಸೌಲಭ್ಯವನ್ನು 2021 ರ ಏ.30 ರವರೆಗೆ ನೀಡಲಾಗಿತ್ತು. ಕೋವಿಡ್ 19 ಸೋಂಕು ನಿಯಂತ್ರಣಕ್ಕಾಗಿ ಲಾಕ್‍ಡೌನ್ ಇರುವ ಪ್ರಯುಕ್ತ ಶೇ.5 ರಷ್ಟು ರಿಯಾಯಿತಿ ಸೌಲಭ್ಯವನ್ನು ಸರ್ಕಾರದ ಸುತ್ತೋಲೆಯನ್ವಯ ಪ್ರಸಕ್ತ ಸಾಲಿನ ಜೂನ್ 30 ರವರೆಗೆ ವಿಸ್ತರಿಸಲಾಗಿದ್ದು ನಿಗದಿತ ದಿನಾಂಕದೊಳಗಾಗಿ ಆಸ್ತಿ ತೆರಿಗೆಯನ್ನು ಪಾವತಿಸಿ ಈ ಸೌಲಭ್ಯವನ್ನು ಆಸ್ತಿ ಮಾಲೀಕರು ಸದುಪಯೋಗ ಪಡೆದುಕೊಳ್ಳಬೇಕೆಂದು ಹರಿಹರ ನಗರಸಭೆಯ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ | ಕೋವಿಡ್ 19 ಪರೀಕ್ಷೆ ಮತ್ತು ಲಸಿಕೆ ಹಾಕಿಸಿಕೊಳ್ಳಲು ಮನವಿ

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಕೋವಿಡ್ 19 ಪರೀಕ್ಷೆ ಮತ್ತು ಲಸಿಕೆ ಹಾಕಿಸಿಕೊಳ್ಳಲು ಮನವಿ

Published

on

ಸುದ್ದಿದಿನ,ದಾವಣಗೆರೆ : ಕೋವಿಡ್ 19 ಸಾಂಕ್ರಾಮಿಕ ರೋಗ ಹಬ್ಬುತ್ತಿರುವ ಹಿನ್ನೆಲೆಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಸಿಎಸ್‍ಆರ್ ಪಾರ್ಟನರ್ಸ್ ಇವರ ಸಹಯೋಗದೊಂದಿಗೆ ಅಲ್ಪಸಂಖ್ಯಾತ ಜನಾಂಗದವರು ಹೆಚ್ಚಾಗಿ ವಾಸಿಸುವ ಪ್ರದೇಶಗಳನ್ನು ಗುರುತಿಸಿ ಕೋವಿಡ್ ಪರೀಕ್ಷೆ ಮತ್ತು ಲಸಿಕೆ ಮಾಡಿಸಲು ನಿರ್ದೇಶನ ನೀಡಿದ್ದು, ಜಿಲ್ಲೆಯ ಎಲ್ಲ ಅಲ್ಪಸಂಖ್ಯಾತರು ಲಕ್ಷಣಗಳಿದ್ದಲ್ಲಿ ಪರೀಕ್ಷೆ ಮಾಡಿಸಿಕೊಳ್ಳಬೇಕು ಮತ್ತು ಲಸಿಕೆ ಹಾಕಿಸಿಕೊಂಡು ಎಲ್ಲರೂ ಸರ್ಕಾರದ ನಿಯಮಗಳನ್ನು ಪಾಲಿಸುವಂತೆ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending