ದಿನದ ಸುದ್ದಿ

ಆರೋಗ್ಯ ಕಾರ್ಯಕರ್ತರ ಕುಟುಂಬದವರಿಗೆ ಲಸಿಕೆ

Published

on

ಸುದ್ದಿದಿನ,ದಾವಣಗೆರೆ: ಕೇಂದ್ರ ಹಾಗೂ ರಾಜ್ಯ ಸರ್ಕಾರದ ಮಾರ್ಗಸೂಚಿಯಂತೆ ಜಿಲ್ಲೆಯಲ್ಲಿನ ಆರೋಗ್ಯ ಕಾರ್ಯಕರ್ತರ ಅವಲಂಬಿತ ನಿಕಟಸಂಬಂಧಿ ಕುಟುಂಬದವರಿಗೆ ಎಲ್ಲ ಸರ್ಕಾರಿ ಆರೋಗ್ಯ ಸಂಸ್ಥೆಗಳು ಹಾಗೂ ಸಂಬಂಧಪಟ್ಟ ವಾರ್ಡ್‍ಗಳಲ್ಲಿ ಲಸಿಕೆಯ ಲಭ್ಯತೆಗನುಗುಣವಾಗಿ ಕೋವಿಡ್-19 ನಿರೋಧಕ ಲಸಿಕೆ ನೀಡಲಾಗುವುದು.

ಮುಖ್ಯಮಂತ್ರಿಗಳು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗಳು, ಮತ್ತು ಭಾರತ ಸರ್ಕಾರದ ಮಾರ್ಗಸೂಚಿಯಂತೆ ಆರೋಗ್ಯ ಕಾರ್ಯಕರ್ತರ ಅವಲಂಬಿತ ವಿಕಟಸಂಬಂಧಿ ಕುಟುಂಬದವರಿಗೆ ಕೋವಿಡ್-19 ಲಸಿಕೆ ನೀಡಲು ಆದೇಶಿಸಲಾಗಿದೆ.

ಇದನ್ನೂ ಓದಿ | ಕ್ರೀಡಾಪಟುಗಳಿಗೆ ಕೋವಿಡ್ ನಿರೋಧಕ ಲಸಿಕೆ

ಹೀಗಾಗಿ, ಪ್ರಸ್ತುತ ದಾವಣಗೆರೆ ಜಿಲ್ಲೆಯಲ್ಲಿ 8000 ಡೋಸಸ್ ಮುಂಚೂಣಿ ಕಾರ್ಯಕರ್ತರಿಗೆ (ಫ್ರಂಟ್ ಲೈನ್ ವರ್ಕರ್ಸ್) ಹಾಗೂ 6000 ಡೋಸಸ್ 45 ವರ್ಷ ಮೇಲ್ಪಟ್ಟ ವಯೋಮಾನದವರಿಗೆ ತಾಲ್ಲೂಕುವಾರು ಹಂಚಿಕೆಯಾಗಿದ್ದು, ಎಲ್ಲಾ ಸರ್ಕಾರಿ ಆರೋಗ್ಯ ಸಂಸ್ಥೆಗಳು ಹಾಗೂ ಸಂಬಂಧಪಟ್ಟ ವಾರ್ಡ್‍ಗಳಲ್ಲಿ ಲಸಿಕೆಯ ಲಭ್ಯತೆಗನುಗುಣವಾಗಿ ಕೋವಿಡ್-19 ಲಸಿಕೆಯನ್ನು ನೀಡಲಾಗುವುದು ಎಂದು ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಮೀನಾಕ್ಷಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version