ದಿನದ ಸುದ್ದಿ

ಮುಂದಿನ ವರ್ಷ ರಾಜ್ಯದಲ್ಲಿ ವಚನ ವಿಶ್ವವಿದ್ಯಾಲಯ ಸ್ಥಾಪನೆಗೆ ಸರ್ಕಾರದ ಚಿಂತನೆ : ಸಿಎಂ ಸಿದ್ದರಾಮಯ್ಯ

Published

on

ಸುದ್ದಿದಿನ, ಬೀದರ್ : ಮುಂದಿನ ವರ್ಷ ರಾಜ್ಯದಲ್ಲಿ ವಚನ ವಿಶ್ವವಿದ್ಯಾಲಯ ಸ್ಥಾಪನೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಬಸವಣ್ಣನವರನ್ನು ಕರ್ನಾಟಕದ ಸಾಂಸ್ಕೃತಿಕ ನಾಯಕನೆಂದು ಘೋಷಿಸಿದ ಹಿನ್ನೆಲೆಯಲ್ಲಿ ಅವರಿಗೆ ಬೀದರ್ ಜಿಲ್ಲೆಯ ಬಸವಕಲ್ಯಾಣದಲ್ಲಿ ಗುರುವಾರ ಏರ್ಪಡಿಸಿದ್ದ ಸನ್ಮಾನ ಸಮಾರಂಭದಲ್ಲಿ ಅವರು ಮಾತನಾಡಿದರು.

ಸಮಸ್ತ ಕನ್ನಡಿಗರು ಹಾಗೂ ಭಾರತೀಯರ ಅಭಿಮಾನದ ಸಂಖೇತವಾಗಿ ಬಸವಣ್ಣನವರನ್ನು ಸಾಂಸ್ಕೃತಿಕ ನಾಯಕನನ್ನಾಗಿ ಘೋಷಿಸಲಾಗಿದೆ. ಜಾತಿ, ವರ್ಗ, ಅಸಮಾನತೆ ಇಲ್ಲದ ಮನುಷ್ಯತ್ವದ ಸಮಾಜ ನಿರ್ಮಾಣ ಬಸವಣ್ಣನವರ ಗುರಿಯಾಗಿತ್ತು. ಅವರ ವಿಚಾರಗಳು ಇಂದಿಗೂ ಮತ್ತು ಮುಂದಿನ ದಿನಗಳಿಗೂ ಪ್ರಸ್ತುತವಾಗಲಿವೆ ಎಂದರು.

ಬಸವಾದಿಶರಣರು ನುಡಿದಂತೆ ನಡೆದಿದ್ದಾರೆ ಅವರೇ, ನಮ್ಮ ಸರ್ಕಾರಕ್ಕೆ ಮಾದರಿಯಾಗಿದ್ದು, ವಿಧಾನಸಭಾ ಚುನಾವಣಾ ವೇಳೆಯಲ್ಲಿ ಜನತೆಗೆ ನೀಡಿದ್ದ ಆಶ್ವಾಸನೆಗಳನ್ನು ಈಡೇರಿಸಿದ್ದೇವೆ ಎಂದರು. ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ ಸೇರಿದಂತೆ ಹಲವಾರು ಸಚಿವರು, ಶಾಸಕರು, ಮಠಾಧೀಶರು ಸಮಾರಂಭದಲ್ಲಿ ಪಾಲ್ಗೊಂಡಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version