ದಿನದ ಸುದ್ದಿ
ಅಜಾತಶತ್ರು ವಾಜಪೇಯಿ ಇನ್ನಿಲ್ಲ
ಸುದ್ದಿದಿನ ಡೆಸ್ಕ್ | ದೇಶ ರಾಜಕಾರಣದಲ್ಲಿ ಅಜಾತಶತ್ರು ಎಂದೇ ಹೆಸರಾಗಿದ್ದ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ವಯೋಸಹಜ ಅನಾರೋಗ್ಯದಿಂದ ನವದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಗುರುವಾರ ನಿಧನರಾದರು.
ಕಳೆದ ಕೆಲವು ದಿನಗಳ ಹಿಂದೆ ನವದೆಹಲಿಯ ಏಮ್ಸ್ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಾಗಿದ್ದರು. ಮೂತ್ರಪಿಂಡದ ಸೋಂಕು, ಎದೆ ನೋವಿನಿಂದ ಬಳಲುತ್ತಿದ್ದರು. ವಾಜಪೇಯಿಗೆ 93 ವರ್ಷ ವಯಸ್ಸಾಗಿತ್ತು.