ದಿನದ ಸುದ್ದಿ

ರಾಜನಹಳ್ಳಿಯಲ್ಲಿ ಫೆಬ್ರವರಿ 8 ಮತ್ತು 9ರಂದು ವಾಲ್ಮೀಕಿ ಜಾತ್ರೆ, ಎಲ್ಲಾ ಸಿದ್ದತೆಯನ್ನು ಅಚ್ಚುಕಟ್ಟಾಗಿ ಆಯೋಜಿಸಲು ಅಧಿಕಾರಿಗಳಿಗೆ ಡಿಸಿ ಸೂಚನೆ

Published

on

ಸುದ್ದಿದಿನ,ದಾವಣಗೆರೆ:ರಾಜನಹಳ್ಳಿ ಮಹರ್ಷಿ ವಾಲ್ಮೀಕಿ ಗುರುಪೀಠದಲ್ಲಿ ಫೆಬ್ರುವರಿ 8 ಮತ್ತು 9 ರಂದು ಮಹರ್ಷಿ ವಾಲ್ಮೀಕಿ ನಡೆಯಲಿರುವುದರಿಂದ ಈ ಸಂದರ್ಭದಲ್ಲಿ ಲಕ್ಷಾಂತರ ಭಕ್ತರು ಬಂದು ಹೋಗುತ್ತಾರೆ. ಆಗಮಿಸುವ ಭಕ್ತರಿಗೆ ಅಗತ್ಯ ಮೂಲಭೂತ ಸೌಕರ್ಯ ಒದಗಿಸಲು ಎಲ್ಲಾ ಇಲಾಖೆ ಅಧಿಕಾರಿಗಳು ಶ್ರಮಿಸಬೇಕೆಂದು ಜಿಲ್ಲಾಧಿಕಾರಿ ಗಂಗಾಧರಸ್ವಾಮಿ ಜಿ.ಎಂ. ತಿಳಿಸಿದರು.

ಅವರು ಮಂಗಳವಾರ ಶ್ರೀಮಠದಲ್ಲಿ ನಡೆದ ಜಾತ್ರಾ ಮಹೋತ್ಸವ ಪೂರ್ವಭಾವಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಹೆಚ್ಚು ಜನರು ಬರುವುದರಿಂದ ಜನರ ಆರೋಗ್ಯ ಮತ್ತು ನೈರ್ಮಲ್ಯತೆಯನ್ನು ಕಾಪಾಡುವುದು ಬಹಳ ಮುಖ್ಯವಾಗಿದೆ. ಆರೋಗ್ಯ ಇಲಾಖೆಯಿಂದ ಇಲ್ಲಿಗೆ ಮೊಬೈಲ್ ತಂಡವನ್ನು ನಿಯೋಜಿಸಲು ಮತ್ತು ಅಂಬುಲೆನ್ಸ್‍ನ್ನು ಇಲ್ಲಿಯೇ ಕಾಯ್ದಿರಿಸಲು ಸೂಚನೆ ನೀಡಿ ಅಗತ್ಯ ಔಷಧ ದಾಸ್ತಾನಿಡಲು ಸೂಚನೆ ನೀಡಿದರು.

ಕುಡಿಯುವ ನೀರು: ಹೆಚ್ಚು ಜನರು ಆಗಮಿಸುವುದರಿಂದ ಕುಡಿಯುವ ನೀರಿನ ವ್ಯವಸ್ಥೆ ಮಾಡಲು ಹಾಗೂ ತಿಳಿಸಿ ನೈರ್ಮಲ್ಯತೆ ಕಾಪಾಡಲು ಮೊಬೈಲ್ ಶೌಚಾಲಯದ ಜೊತೆಗೆ ಇಲ್ಲಿಗೆ ಬೇಕಾದ ನೀರು ಪೂರೈಕೆ ಮಾಡಿಕೊಡಲು ಇಂಜಿನಿಯರಿಂಗ್ ವಿಭಾಗದವರಿಗೆ ತಿಳಿಸಿದರು.

ನಿರಂತರ ವಿದ್ಯುತ್ ಪೂರೈಕೆ: ಜಾತ್ರಾ ಸಂದರ್ಭದಲ್ಲಿ ಅನಿಯಮಿತ ವಿದ್ಯುತ್ ಪೂರೈಕೆಗಾಗಿ ಹೆಚ್ಚುವರಿಯಾಗಿ ಮೊಬೈಲ್ ಟಿಸಿಗಳ ದಾಸ್ತಾನಿಟ್ಟುಕೊಳ್ಳಬೇಕು. ವಿದ್ಯುತ್ ಪೂರೈಕೆಗೆ ಅಡಚಣೆಯಾಗಿರುವ ಗಿಡ, ಮರಗಳ ಕೊಂಬೆಗಳನ್ನು ಈಗಲೇ ತಂತಿ ಮೇಲೆ ಬೀಳದಂತೆ ನೋಡಿಕೊಳ್ಳಲು ನಿರಂತರ ವಿದ್ಯುತ್ ಪೂರೈಕೆಗಾಗಿ ಎಷ್ಟು ಕೆವಿ ವಿದ್ಯುತ್ ಪೂರೈಕೆಯ ಅವಶ್ಯಕತೆ ಇದೆ ಎಂದು ಅಂದಾಜಿಸಿಕೊಳ್ಳಲು ಮತ್ತು ಯಾವುದೇ ಅವಘಡಗಳು ಸಂಭವಿಸದಂತೆ ಎಲೆಕ್ಟ್ರಿಕಲ್ ಇನ್ಸ್‍ಪೆಕ್ಟರ್‍ಗಳಿಂದ ಜಾತ್ರಾ ಪೂರ್ವದಲ್ಲಿ ಪರೀಕ್ಷೆ ನಡೆಸಲು ಬೆಸ್ಕಾಂ ಅಧಿಕಾರಿಗಳಿಗೆ ಸೂಚನೆ ನೀಡಿದರು.

ವಾಹಗಳ ನಿಲುಗಡೆ: ಜಾತ್ರೆಯ ವೇಳೆ ಬರುವ ವಾಹನಗಳನ್ನು ಎರಡು ಕಿ.ಮೀ ದೂರದಲ್ಲಿಯೇ ನಿಲುಗಡೆ ಮಾಡಲು ಸೂಚನೆ ನೀಡಲಾಗುತ್ತಿತ್ತು. ಮಠದ ಆವರಣಕ್ಕೆ ಬರಲು ಸಾಕಷ್ಟು ದೂರವಾಗುವುದರಿಂದ ಹತ್ತಿರದವರೆಗೆ ವಾಹನಗಳು ಬಂದು, ನಂತರ ಮುಂದೆ ಹೋಗಿ ನಿಲುಗಡೆ ಮಾಡಲು ಪರಿಶೀಲನೆ ನಡೆಸಲಾಗುತ್ತದೆ ಎಂದರು.

ಶಾಸಕರು ಹಾಗೂ ಜಾತ್ರಾ ಸಮಿತಿಯ ಅಧ್ಯಕ್ಷರಾದ ಬಿ.ದೇವೇಂದ್ರಪ್ಪ ಚಿಕ್ಕಮ್ಮನಹಟ್ಟಿ ರವರು ಮಾತನಾಡಿ ವಾಲ್ಮೀಕಿ ಜಾತ್ರೆಯ ಸಂಪೂರ್ಣ ವ್ಯವಸ್ಥೆಯನ್ನು ಜಿಲ್ಲಾಡಳಿತ ಮಾಡಿಕೊಡಲಿದೆ. ಜಾತ್ರೆ ಎಂಬುದು ಧಾರ್ಮಿಕ ಪ್ರಕ್ರಿಯೆಯಾಗಿದ್ದರೂ ಸಮುದಾಯದ ಜನರನ್ನು ಒಂದೆಡೆ ಸೇರಿಸಿ ಸಮಾಲೋಚನೆ, ಜಾಗೃತಿ ಮೂಡಿಸುವ, ಸಂಘಟನೆ ಮಾಡುವ ಉದ್ದೇಶವಿದೆ. ಭಕ್ತಾಧಿಗಳಿಗೆ ಎಲ್ಲಾ ರೀತಿ ಮೂಲಭೂತ ಸೌಕರ್ಯ ಕಲ್ಪಿಸಲು ಹಾಗೂ ಜಾತ್ರೆ ಸುಗಮವಾಗಿ ನಡೆಯಲು ಎಲ್ಲರ ಸಹಕಾರ ಪ್ರಮುಖವಾಗಿದೆ ಎಂದರು.

ನಾಡಿನಾದ್ಯಂತ ಇರುವ ಸಮುದಾಯದ ಜನರ ಸಂಘಟನೆಯೇ ಮಹರ್ಷಿ ವಾಲ್ಮೀಕಿ ಜಾತ್ರೆಯ ಮೂಲ ಉದ್ದೇಶ ಎಂದು ಸಾನಿಧ್ಯ ವಹಿಸಿದ್ದ ರಾಜನಹಳ್ಳಿ ವಾಲ್ಮೀಕಿ ಗುರುಪೀಠದ ಡಾ; ವಾಲ್ಮೀಕಿ ಪ್ರಸನ್ನಾನಂದ ಸ್ವಾಮೀಜಿಯವರು ತಿಳಿಸಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಸುರೇಶ್ ಬಿ.ಇಟ್ನಾಳ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್, ಧರ್ಮದರ್ಶಿ ಶಾಂತಲಾ ರಾಜಣ್ಣ, ಮುಖಂಡರಾದ ಹೊದಿಗೆರೆ ರಮೇಶ್, ಸಂಚಾಲಕರಾದ ಶ್ರೀನಿವಾಸ ದಾಸಕರಿಯಪ್ಪ ಹಾಗೂ ಇನ್ನಿತರೆ ಮುಖಂಡರು, ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version