ದಿನದ ಸುದ್ದಿ

ವಾಲ್ಮೀಕಿ ಪ್ರಶಸ್ತಿಗೆ ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ : 2020-21ನೇ ಸಾಲಿಗೆ ವಾಲ್ಮೀಕಿ ಪ್ರಶಸ್ತಿಯನ್ನು ರಾಜ್ಯ ಮಟ್ಟದಲ್ಲಿ ನೀಡಲು ಜಿಲ್ಲೆಯಿಂದ ಅರ್ಜಿಗಳನ್ನು ಆಹ್ವಾನಿಸಿ ಸರ್ಕಾರದ ಮಾರ್ಗಸೂಚಿಗಳನ್ವಯ ಪ್ರಶಸ್ತಿಗೆ ಅರ್ಹರಾಗಿರುವ ಒಬ್ಬರನ್ನು ಜಿಲ್ಲೆಯಿಂದ ಆಯ್ಕೆಮಾಡಿ ಪ್ರಸ್ತಾವನೆಯನ್ನು ಕಳುಹಿಸಿಕೊಡಲು ಸೂಚಿಸಲಾಗಿರುವ ಹಿನ್ನೆಲೆಯಲ್ಲಿ ಅರ್ಜಿ ಆಹ್ವಾನಿಸಲಾಗಿದೆ.

ಜಿಲ್ಲೆಯಿಂದ ಪರಿಶಿಷ್ಟ ವರ್ಗದ ಜನಾಂಗದ ಏಳಿಗೆಗಾಗಿ ಶ್ರಮಿಸಿದ ಹಾಗೂ ಅರ್ಹ ವ್ಯಕ್ತಿಗಳನ್ನು ಆಯ್ಕೆ ಮಾಡಲು ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ, ಕೊಠಡಿ ಸಂಖ್ಯೆ 45, ಜಿಲ್ಲಾಡಳಿತ ಭವನ ಇಲ್ಲಿ ಕಚೇರಿ ವೇಳೆಯಲ್ಲಿ ಅರ್ಜಿ ನಮೂನೆಗಳನ್ನು ಪಡೆದು, ಭರ್ತಿ ಮಾಡಿದ ಅರ್ಜಿಗಳನ್ನು ಅ.15 ರೊಳಗೆ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 08192-263546 ಸಂಪರ್ಕಿಸಬಹುದೆಂದು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version