Connect with us

ಬಹಿರಂಗ

ಧ್ವಂಸ ಕಾರ್ಯಾಚರಣೆ ಅಂತರರಾಷ್ಟ್ರೀಯ ಕಾನೂನಿನ ಉಲ್ಲಂಘನೆ

Published

on


ದಂಗೆಕೋರರನ್ನು ಸಾಮೂಹಿಕ ಶಿಕ್ಷೆಗೊಳಪಡಿಸುವ ಧ್ವಂಸ ಕಾರ್ಯಾಚರಣೆ ಸಂವಿಧಾನಬದ್ಧವಲ್ಲ.


  • ಮೂಲ : ಪ್ರಭಾಶ್‌ ರಂಜನ್‌ ಮತ್ತು ಅಮನ್‌ ಕುಮಾರ್‌, ಅನುವಾದ : ನಾ ದಿವಾಕರ

ಈ ವರ್ಷದ ರಾಮನವಮಿ ಆಚರಣೆಯ ಮೆರವಣಿಗೆಗಳ ಸಂದರ್ಭದಲ್ಲಿ ಮಧ್ಯಪ್ರದೇಶದ ಕರ್ಗೋನ್‌ ಸೇರಿದಂತೆ ದೇಶದ ಹಲವೆಡೆ ಕೋಮು ಸಂಘರ್ಷ ಏರ್ಪಟ್ಟಿತ್ತು. ಮಧ್ಯಪ್ರದೇಶ ಸರ್ಕಾರವು ಈ ಗಲಭೆಗಳಲ್ಲಿ ಪಾಲ್ಗೊಂಡಿದ್ದವರ ಮನೆಗಳನ್ನು ಧ್ವಂಸ ಮಾಡುವಂತೆ ಅಧಿಕೃತವಾಗಿ ಆದೇಶ ಹೊರಡಿಸಿತ್ತು.

ಈ ಕಟ್ಟಡ ಧ್ವಂಸ ಕಾರ್ಯಾಚರಣೆಯನ್ನು ಅಕ್ರಮವಾಗಿ ಒತ್ತುವರಿ ಮಾಡಿಕೊಂಡಿರುವ ಕಟ್ಟಡಗಳ ವಿರುದ್ಧ ನಡೆಸಲಾಯಿತು ಎಂದು ಮಧ್ಯಪ್ರದೇಶ ಸರ್ಕಾರ ಹೇಳಿದೆ. ಆದರೆ ಈ ಧ್ವಂಸ ಕಾರ್ಯಾಚರಣೆಯನ್ನು ಕೋಮು ದಂಗೆಗಳ ತರುವಾಯ ಒಂದು ನಿರ್ದಿಷ್ಟ ಕೋಮಿಗೆ ಸೇರಿದ ದಂಗೆಕೋರರ ವಿರುದ್ಧ, ಸ್ವೇಚ್ಚಾನುಸಾರ ಕೈಗೊಳ್ಳಲಾಗಿರುವುದನ್ನು ಗಮನಿಸಿದರೆ, ಈ ಕಾರ್ಯಾಚರಣೆಯ ಉದ್ದೇಶ ಸಾಮೂಹಿಕ ಶಿಕ್ಷೆಗೊಳಪಡಿಸುವುದೇ ಆಗಿದೆ ಎನ್ನುವುದು ಸ್ಪಷ್ಟ.

ಪ್ರಭುತ್ವದ ಕ್ರೂರ ಬಲದ ಸಂಕೇತವೇ ಆಗಿರುವ ಈ ಧ್ವಂಸ ಮಾಡುವ ಯಂತ್ರಗಳು ಕೇವಲ ಮನೆಗಳನ್ನು, ಕಟ್ಟಡಗಳನ್ನು ಮಾತ್ರವೇ ಧ್ವಂಸ ಮಾಡುತ್ತಿಲ್ಲ, ಬದಲಾಗಿ ಸಾಂವಿಧಾನಿಕ ನಿಯಮಗಳನ್ನೂ, ಕಾನೂನು ಕಟ್ಟಳೆಗಳನ್ನೂ ಧ್ವಂಸ ಮಾಡುತ್ತಿವೆ. ಕ್ಷಿಪ್ರಗತಿಯಲ್ಲಿ ನ್ಯಾಯ ವಿತರಣೆ ಮಾಡುವ ಈ ಕ್ರೂರ ಪದ್ಧತಿ ಆರಂಭವಾದದ್ದು ಉತ್ತರಪ್ರದೇಶದಲ್ಲಿ.

2019ರ ಪೌರತ್ವ ತಿದ್ದುಪಡಿ ಕಾಯ್ದೆಯ ವಿರುದ್ಧ ಪ್ರತಿಭಟನೆಗಳು ತೀವ್ರಗೊಂಡ ಸಂದರ್ಭದಲ್ಲಿ ಉತ್ತರ ಪ್ರದೇಶ ಸರ್ಕಾರವು ಯಾವುದೇ ಸಮೂಹ ಗಲಭೆಗಳಲ್ಲಿ ಸಾರ್ವಜನಿಕ ಆಸ್ತಿಪಾಸ್ತಿಗಳಿಗೆ ಹಾನಿ ಉಂಟಾದರೆ ಅದರ ನಷ್ಟವನ್ನು ದಂಗೆಕೋರರಿಂದಲೇ ವಸೂಲಿ ಮಾಡುವ ಆದೇಶವೊಂದನ್ನು ಹೊರಡಿಸಿತ್ತು ಈ ನಿಯಮವನ್ನು ಸಾಂಸ್ಥೀಕರಿಸುವ ಸಲುವಾಗಿಯೇ ಉತ್ತರಪ್ರದೇಶ ಸಾರ್ವಜನಿಕ ಆಸ್ತಿಪಾಸ್ತಿ ನಷ್ಟ ವಸೂಲಾತಿ ಕಾಯ್ದೆ 2020ನ್ನು ಜಾರಿಗೊಳಿಸಲಾಯಿತು.

ಈ ರೀತಿಯ ಪ್ರಭುತ್ವದ ಕ್ರೂರ ಬಲ ಪ್ರಯೋಗವು ಅನೇಕ ಸ್ಥಳೀಯ ಕಾನೂನುಗಳ ಉಲ್ಲಂಘನೆಯಾಗುತ್ತದೆ ಎಂದು ಈಗಾಗಲೇ ಹಲವು ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ. ಸೂಕ್ತ ಕಾನೂನು ಪ್ರಕ್ರಿಯೆಯನ್ನು ಅನುಸರಿಸದೆ, ಕಾನೂನು ಸಮ್ಮತಿ ಪಡೆಯದೆ, ಈ ರೀತಿ ಮನೆಗಳನ್ನು ಧ್ವಂಸ ಮಾಡುವುದು ಭಾರತವು ಒಪ್ಪಿರುವಂತಹ ಹಲವು ಅಂತರರಾಷ್ಟ್ರೀಯ ಕಾನೂನುಗಳ ಉಲ್ಲಂಘನೆಯಾಗುತ್ತದೆ ಎನ್ನುವುದನ್ನು ಗಮನಿಸಬೇಕಿದೆ.

ಸಮರ್ಪಕ ವಸತಿಯ ಹಕ್ಕು

ವಸತಿ ಅಥವಾ ಸೂರಿನ ಹಕ್ಕು ಭಾರತೀಯ ಸಂವಿಧಾನದ ಅನುಚ್ಚೇದ 21ರ ಅನ್ವಯ ಮೂಲಭೂತ ಹಕ್ಕು ಎಂದೇ ಪರಿಗಣಿಸಲ್ಪಟ್ಟಿದ್ದು, ಅಂತರರಾಷ್ಟ್ರೀಯ ಮಾನವ ಹಕ್ಕುಗಳ ಕಾನೂನು ಚೌಕಟ್ಟಿನಲ್ಲೂ ಸಹ ಇದನ್ನು ಮೂಲಭೂತ ಹಕ್ಕು ಎಂದೇ ಪರಿಗಣಿಸಲಾಗುತ್ತದೆ. ಈ ಅಂತರರಾಷ್ಟ್ರೀಯ ಕಾನೂನು ನಿಯಮಗಳಿಗೆ ಭಾರತವೂ ಒಳಪಟ್ಟಿರುತ್ತದೆ. ಉದಾಹರಣೆಗೆ ಮಾನವ ಹಕ್ಕುಗಳ ಸಾರ್ವತ್ರಿಕ ಘೋಷಣೆ (ಯುಡಿಹೆಚ್‌ಆರ್)‌ಯ ಅನುಚ್ಚೇದ 25ರ ಅನ್ವಯ “ ಪ್ರತಿಯೊಬ್ಬ ವ್ಯಕ್ತಿಗೂ ತನ್ನ ಕುಟುಂಬದೊಡನೆ, ಸಮರ್ಪಕ ಆಹಾರ, ವಸ್ತ್ರ ವಸತಿ ಮತ್ತು ಆರೋಗ್ಯ ಸೇವೆಯನ್ನೊಳಗೊಂಡಂತೆ ಆರೋಗ್ಯಕರವಾದ, ಯೋಗಕ್ಷೇಮದ ಜೀವನಮಟ್ಟವನ್ನು ಕಾಪಾಡಿಕೊಳ್ಳುವ ಹಕ್ಕು ಇರುತ್ತದೆ ”.

ಇದೇ ರೀತಿ ಆರ್ಥಿಕ, ಸಾಮಾಜಿಕ ಮತ್ತು ಸಾಂಸ್ಕೃತಿಕ ಹಕ್ಕುಗಳ ಅಂತರರಾಷ್ಟ್ರೀಯ ಒಡಂಬಡಿಕೆ(ಐಸಿಇಎಸ್‌ಸಿಆರ್)‌ ಅನುಚ್ಚೇದ 11.1ರಲ್ಲಿ “ ಪ್ರತಿಯೊಬ್ಬ ವ್ಯಕ್ತಿಯೂ ತನಗಾಗಿ ಮತ್ತು ತನ್ನ ಕುಟುಂಬದವರಿಗಾಗಿ ಸಮರ್ಪಕವಾದ ಆಹಾರ, ಆರೋಗ್ಯ, ವಸ್ತ್ರ ಮತ್ತು ವಸತಿ ಸೌಲಭ್ಯಗಳನ್ನು ಹೊಂದಿರುವ ಜೀವನಮಟ್ಟವನ್ನು ಕಾಪಾಡಿಕೊಳ್ಳುವ ಹಕ್ಕು ಇರುವುದೇ ಅಲ್ಲದೆ, ತನ್ನ ಜೀವನಮಟ್ಟವನ್ನು ನಿರಂತರವಾಗಿ ಉತ್ತಮಪಡಿಸಿಕೊಳ್ಳುವ ಹಕ್ಕು ಸಹ ಇರುತ್ತದೆ ” ಎಂದು ಹೇಳಲಾಗಿದೆ. ಇದೇ ಅನುಚ್ಚೇದದ ಅಡಿಯಲ್ಲಿ ಪ್ರತಿಯೊಂದು ದೇಶವೂ “ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು ” ಎಂದೂ ಹೇಳಲಾಗಿದ್ದು, ಸಮರ್ಪಕ ವಸತಿ ಸೌಕರ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ವ್ಯಕ್ತಿಗಳ ಹಕ್ಕುಗಳನ್ನು ಕಾಪಾಡಲು ಕ್ರಮ ಕೈಗೊಳ್ಳಬೇಕು ಎಂದು ಹೇಳಲಾಗಿದೆ.

ಅನುಚ್ಚೇದ 4ರ ಅನ್ವಯ, ಐಸಿಇಎಸ್‌ಸಿಆರ್‌ ಒಡಂಬಡಿಕೆಯಲ್ಲಿ ಮಾನ್ಯ ಮಾಡಲಾಗಿರುವ ಹಕ್ಕುಗಳನ್ನು ಯಾವುದೇ ದೇಶದ ಸರ್ಕಾರಗಳು ಅಮಾನ್ಯ ಮಾಡಬೇಕಾದಲ್ಲಿ, ಸರ್ಕಾರಗಳು ವಿಧಿಸುವ ನಿರ್ಬಂಧಗಳು ಈ ಹಕ್ಕುಗಳ ಮೂಲ ಲಕ್ಷಣಗಳಿಗೆ ಪೂರಕವಾಗಿರಬೇಕಾಗುತ್ತದೆ ಮತ್ತು ಸಮಾಜದ ಸಮಗ್ರ ಒಳಿತಿನ ಉದ್ದೇಶವನ್ನು ಹೊಂದಿರಬೇಕಾಗುತ್ತದೆ. ಆದಾಗ್ಯೂ ಈ ಒಡಂಬಡಿಕೆಯಲ್ಲಿ ಸ್ವೀಕೃತವಾಗಿರುವ ಯಾವುದೇ ಹಕ್ಕುಗಳಿಗೆ ನಿರ್ಬಂಧ ಹೇರುವುದು, ಅದರಲ್ಲೂ ವಸತಿ ಹಕ್ಕಿನ ಮೇಲೆ ನಿರ್ಬಂಧ ಹೇರುವುದು, ಮೂಲತಃ ಈ ಹಕ್ಕುಗಳ ಉಲ್ಲಂಘನೆಯೇ ಆಗುತ್ತದೆ. ಈ ಅಂಶವನ್ನು ಒಡಂಬಡಿಕೆಯ ಅನುಚ್ಚೇದ 5ರಲ್ಲಿ ಸ್ಪಷ್ಟವಾಗಿ ಹೇಳಲಾಗಿದೆ.

ಅಷ್ಟೇ ಅಲ್ಲದೆ ಯಾವುದೇ ವ್ಯಕ್ತಿಯ ಖಾಸಗಿ ಆಸ್ತಿಯ ಹಕ್ಕುಗಳಲ್ಲಿ ಸ್ವೇಚ್ಚಾನುಸಾರದಿಂದ ಹಸ್ತಕ್ಷೇಪ ಮಾಡುವುದು ಅಂತರರಾಷ್ಟ್ರೀಯ ಕಾನೂನುಗಳ ಉಲ್ಲಂಘನೆಯಾಗುತ್ತದೆ. ಉದಾಹರಣೆಗೆ ಯುಡಿಹೆಚ್‌ಆರ್‌ ಒಡಂಬಡಿಕೆಯ ಅನುಚ್ಚೇದ 12ರಲ್ಲಿ “ ಯಾವುದೇ ವ್ಯಕ್ತಿಯ ವ್ಯಕ್ತಿಗತ ಅಥವಾ ಕೌಟುಂಬಿಕ ಖಾಸಗಿತನ, ವಸತಿ ಅಥವಾ ಸಂವಹನ ಪ್ರಕ್ರಿಯೆಯಲ್ಲಿ ಸ್ವೇಚ್ಚಾನುಸಾರದ ಹಸ್ತಕ್ಷೇಪ ಮಾಡುವಂತಿಲ್ಲ ಅಥವಾ ಆತನ/ಆಕೆಯ ಗೌರವ ಮತ್ತು ಘನತೆಯ ಮೇಲಿನ ದಾಳಿ ಮಾಡುವಂತಿಲ್ಲ” ಎಂದು ಹೇಳಲಾಗಿದೆ. “ ಇಂತಹ ಯಾವುದೇ ಹಸ್ತಕ್ಷೇಪದ ವಿರುದ್ಧ ಅಥವಾ ಆಕ್ರಮಣದ ವಿರುದ್ಧ ಕಾನೂನು ರಕ್ಷಣೆ ಪಡೆಯುವ ಹಕ್ಕು ಪ್ರತಿಯೊಬ್ಬ ವ್ಯಕ್ತಿಗೂ ಇರುತ್ತದೆ ” ಎಂದು ಅನುಚ್ಚೇದ 12ರಲ್ಲಿ ಹೇಳಲಾಗಿದೆ.

ಇದೇ ಹಕ್ಕುಗಳನ್ನು ನಾಗರಿಕ ಮತ್ತು ರಾಜಕೀಯ ಹಕ್ಕುಗಳ ಅಂತರರಾಷ್ಟ್ರೀಯ ಒಡಂಬಡಿಕೆ (ಐಸಿಸಿಪಿಆರ್)‌ಯ ಅನುಚ್ಚೇದ 17ರಲ್ಲಿ ಮಾನ್ಯ ಮಾಡಲಾಗಿದ್ದು , ಈ ಅನುಚ್ಚೇದದ ಅನ್ವಯ ಪ್ರತಿಯೊಬ್ಬ ವ್ಯಕ್ತಿಯೂ ವೈಯಕ್ತಿಕವಾಗಿ ಅಥವಾ ಇತರರ ಜೊತೆಗೂಡಿ ತನ್ನದೇ ಆದ ಆಸ್ತಿಯನ್ನು ಹೊಂದುವ ಹಕ್ಕು ಹೊಂದಿರುತ್ತಾನೆ ಹಾಗೂ ಯಾವುದೇ ವ್ಯಕ್ತಿಯ ಆಸ್ತಿಯ ಹಕ್ಕನ್ನು ಸ್ವೇಚ್ಚಾನುಸಾರದಿಂದ ಕಸಿದುಕೊಳ್ಳಲಾಗುವುದಿಲ್ಲ. ಈ ದೃಷ್ಟಿಯಿಂದ ನೋಡಿದಾಗ ವ್ಯಕ್ತಿಗಳ ಆಸ್ತಿಯ ಹಕ್ಕುಗಳಲ್ಲಿ ಸ್ವೇಚ್ಚಾನುಸಾರ ಹಸ್ತಕ್ಷೇಪ ಮಾಡುವುದು ಐಸಿಸಿಪಿಆರ್‌ ಒಡಂಬಡಿಕೆಯ ಉಲ್ಲಂಘನೆಯೇ ಆಗುತ್ತದೆ.

ಬಲಾತ್ಕಾರದ ಎತ್ತಂಗಡಿಗಳು

ಸಂಯುಕ್ತ ರಾಷ್ಟ್ರಗಳ ಮಾನವ ಹಕ್ಕುಗಳ ಕಚೇರಿ ಎಂದೇ ಪರಿಗಣಿಸಲ್ಪಡುವ ಮಾನವ ಹಕ್ಕುಗಳ ಉನ್ನತ ಆಯುಕ್ತರ ಕಚೇರಿ (ಓಹೆಚ್‌ಸಿಹೆಚ್‌ಆರ್)‌ ಅಂತರರಾಷ್ಟ್ರೀಯ ಕಾನೂನುಗಳ ಅನ್ವಯ ಒದಗಿಸಲಾಗುವ ಮಾನವ ಹಕ್ಕುಗಳನ್ನು ರಕ್ಷಿಸಲೆಂದೇ ಸ್ಥಾಪಿಸಲಾಗಿರುವ ಒಂದು ಸಂಸ್ಥೆ. ಈ ಸಂಸ್ಥೆಯು ಸಮರ್ಪಕ ವಸತಿ ಸೌಕರ್ಯದ ಬಗ್ಗೆ ಸೂಕ್ತವಾದ ನಿಯಮಗಳನ್ನು ಸಹ ರೂಪಿಸಿದೆ. ಸಂಯುಕ್ತ ರಾಷ್ಟ್ರಗಳ ಮಾನವ ಹಕ್ಕುಗಳ ಕಚೇರಿಯ ನಿಯಮಗಳ ಅನ್ವಯ, ಯಾವುದೇ ವ್ಯಕ್ತಿಯ ಸಮರ್ಪಕ ವಸತಿಯ ಹಕ್ಕು ರಕ್ಷಣೆ ಎಂದರೆ ಬಲಾತ್ಕಾರದ ಎತ್ತಂಗಡಿ ಅಥವಾ ಉಚ್ಚಾಟನೆಯಿಂದ ರಕ್ಷಣೆ ಪಡೆಯುವುದೇ ಆಗಿರುತ್ತದೆ.

ಐಸಿಇಎಸ್‌ಸಿಆರ್‌ ಒಡಂಬಡಿಕೆಯ ಅನುಚ್ಚೇದ 11.1ರಲ್ಲಿ “ ಬಲಾತ್ಕಾರದ ಎತ್ತಂಗಡಿ ಅಥವಾ ಉಚ್ಚಾಟನೆ ಎನ್ನುವುದು, ವ್ಯಕ್ತಿ, ಕುಟುಂಬ ಅಥವಾ ಸಮುದಾಯಗಳನ್ನು ಅವರು ನೆಲೆಸಿರುವ ಮನೆಗಳಿಂದ ಅಥವಾ ಭೂಮಿಯಿಂದ, ಯಾವುದೇ ಕಾನೂನು ರಕ್ಷಣೆ ಅಥವಾ ನೆರವು ಇಲ್ಲದೆಯೇ, ಶಾಶ್ವತವಾಗಿ ಬೇರ್ಪಡಿಸುವುದೇ ಆಗಿರುತ್ತದೆ ”. ಸಮರ್ಪಕ ವಸತಿಯ ಹಕ್ಕು ಎಂದರೆ ಯಾವುದೇ ವ್ಯಕ್ತಿಯ ವಸತಿ, ಖಾಸಗಿತನ, ಕುಟುಂಬದ ಹಕ್ಕುಗಳು ಸ್ವೇಚ್ಚಾನುಸಾರದ ಹಸ್ತಕ್ಷೇಪದಿಂದ ಮುಕ್ತವಾಗಿರುವುದು ಎಂದೇ ಪರಿಗಣಿಸಬೇಕಾಗುತ್ತದೆ.

ಮಧ್ಯಪ್ರದೇಶ ಸರ್ಕಾರವು ಆರೋಪಿತ ದಂಗೆಕೋರರ ಮನೆಗಳ ಮೇಲೆ ಧ್ವಂಸ ಕಾರ್ಯಾಚರಣೆ ನಡೆಸಿರುವುದು ಬಲಾತ್ಕಾರದ ಎತ್ತಂಗಡಿಯೇ ಆಗುತ್ತದೆ. ಹಾಗೆಯೇ ವ್ಯಕ್ತಿಯ ವಸತಿ ಹಕ್ಕುಗಳಲ್ಲಿ ಸ್ವೇಚ್ಚಾನುಸಾರದ ಹಸ್ತಕ್ಷೇಪ ಮಾಡಿದಂತಾಗುವುದರಿಂದ ಇದು ಐಸಿಇಎಸ್‌ಸಿಆರ್‌ ಒಡಂಬಡಿಕೆಯ ಅನುಚ್ಚೇದ 11.1ರ ಉಲ್ಲಂಘನೆಯೇ ಆಗುತ್ತದೆ. ಈ ಎತ್ತಂಗಡಿಯ ಕಾರ್ಯಾಚರಣೆ ಕಾನೂನು ಪ್ರಕಾರ ಕೈಗೊಳ್ಳಲಾಗಿದೆ ಮತ್ತು ಮಾನವ ಹಕ್ಕು ಒಡಂಬಡಿಕೆಗಳ ಅನ್ವಯ ಕೈಗೊಳ್ಳಲಾಗಿದೆ ಎಂದು ನಿರೂಪಿಸಿದಲ್ಲಿ ಮಾತ್ರ ಈ ಧ್ವಂಸ ಕಾರ್ಯಾಚರಣೆಯನ್ನು ಅಂತರರಾಷ್ಟ್ರೀಯ ಕಾನೂನುಗಳಡಿ ಸಮರ್ಥಿಸಿಕೊಳ್ಳಲು ಸಾಧ್ಯ. ಹಾಗೆಯೇ ರಾಜ್ಯ ಸರ್ಕಾರಗಳ ಈ ಕಾರ್ಯಾಚರಣೆ ಅವಶ್ಯಕವಾಗಿತ್ತೇ ಮತ್ತು ಪರಿಸ್ಥಿತಿಗೆ ಪೂರಕವಾಗಿತ್ತೇ ಎನ್ನುವುದೂ ಮುಖ್ಯವಾಗುತ್ತದೆ.

ಆದರೆ ಈ ಕಾರ್ಯಾಚರಣೆಯನ್ನು ಕೈಗೊಳ್ಳಲಾಗಿರುವ ಸಮಯವನ್ನು ಗಮನಿಸಿದರೆ ಈ ಬಲಾತ್ಕಾರದ ಎತ್ತಂಗಡಿಯನ್ನು ಕಾನೂನಾತ್ಮಕವಾಗಿ ಸಮರ್ಥಿಸಿಕೊಳ್ಳಲಾಗುವುದಿಲ್ಲ. ಒಂದು ವೇಳೆ ಈ ಧ್ವಂಸ ಕಾರ್ಯಾಚರಣೆಗೆ ಅಕ್ರಮ ಒತ್ತುವರಿಯೇ ಕಾರಣ ಎಂದಾದಲ್ಲಿ, ಕೋಮು ದಂಗೆಗಳು ಸಂಭವಿಸಿದ ದಿನದಂದು ಅಧಿಕಾರಿಗಳು ಮುನ್ಸೂಚನೆ ಅಥವಾ ನೋಟಿಸ್‌ ನೀಡಿದ್ದರೇ ಎಂದು ಗಮನಿಸಬೇಕಾಗುತ್ತದೆ. ಅಥವಾ ಮುಂಚಿತವಾಗಿಯೇ ಎತ್ತಂಗಡಿಯ ಆದೇಶವನ್ನು ಹೊಂದಿದ್ದರೇ ಎಂದು ಪ್ರಶ್ನಿಸಬೇಕಾಗುತ್ತದೆ. ಅಥವಾ ದಂಗೆಗಳ ನಂತರವೇ ಈ ನಿರ್ಧಾರವನ್ನು ಕೈಗೊಳ್ಳಲಾಯಿತೇ ? ಈ ಎತ್ತಂಗಡಿಯ ಆದೇಶ ಕೇವಲ ಮುಸ್ಲಿಂ ಸಮುದಾಯಕ್ಕೆ ಮಾತ್ರವೇ ಸೀಮಿತವಾಗಿದೆಯೇ ? ಈ ಪ್ರಶ್ನೆಗಳೂ ಉದ್ಭವಿಸುತ್ತವೆ.

ನ್ಯಾಯಾಂಗದ ನಿಯಮಗಳು

ಮೇಲಾಗಿ, ಮೇಲೆ ಉಲ್ಲೇಖಿಸಲಾದ ಅಂತರರಾಷ್ಟ್ರೀಯ ಮಾನವ ಹಕ್ಕುಗಳ ಕಾನೂನು, ಒಡಂಬಡಿಕೆಗಳನ್ನು ಭಾರತದ ಸರ್ವೋಚ್ಚ ನ್ಯಾಯಾಲಯವು ಭಾರತೀಯ ನ್ಯಾಯ ವ್ಯವಸ್ಥೆಯಲ್ಲೂ ಅಳವಡಿಸಿದೆ. ಬಚ್ಚನ್‌ ಸಿಂಗ್‌ ಮತ್ತು ಪಂಜಾಬ್‌ ರಾಜ್ಯದ ಪ್ರಕರಣ, ವಿಶಾಖ ಮತ್ತು ರಾಜಸ್ತಾನ ಸರ್ಕಾರದ ಪ್ರಕರಣ ಮತ್ತು ಇತ್ತೀಚಿನ ಪುಟ್ಟಸ್ವಾಮಿ ಮತ್ತು ಒಕ್ಕೂಟ ಸರ್ಕಾರ ಪ್ರಕರಣಗಳ ಸಂದರ್ಭದಲ್ಲಿ ಸುಪ್ರೀಂಕೋರ್ಟ್‌ “ ಭಾರತದ ಸಂವಿಧಾನದಲ್ಲಿ ನೀಡಲಾಗಿರುವ ಮೂಲಭೂತ ಹಕ್ಕುಗಳನ್ನು ವ್ಯಾಖ್ಯಾನ ಮಾಡುವ ಸಂದರ್ಭದಲ್ಲಿ ಈ ಹಕ್ಕುಗಳನ್ನು ಅಂತರರಾಷ್ಟ್ರೀಯ ಮಾನವ ಹಕ್ಕು ಕಾನೂನುಗಳ ವ್ಯಾಪ್ತಿಯೊಳಗೆ ಅಳವಡಿಸಿ ವ್ಯಾಖ್ಯಾನಕ್ಕೊಳಪಡಿಸಬೇಕು ” ಎಂದು ಹೇಳಿದೆ.

ಭಾರತದ ಸಾಂವಿಧಾನಿಕ ವ್ಯವಸ್ಥೆಯನ್ನು ಸಂರಕ್ಷಿಸುವ ಗುರುತರ ಜವಾಬ್ದಾರಿ ಹೊಂದಿರುವ ನ್ಯಾಯಾಂಗವು ಕಾರ್ಯಾಂಗ ಕೈಗೊಳ್ಳುತ್ತಿರುವ ಈ ಅನಿರ್ಬಂಧಿತ ಕಾರ್ಯಾಚರಣೆಯ ಮೇಲೆ ನಿರ್ಬಂಧಗಳನ್ನು ಹೇರಲು ಮುಂದಾಗಬೇಕಿದೆ. ರಾಷ್ಟ್ರೀಯವಾದಿ-ಜನಪ್ರಿಯ ರಾಜಕಾರಣದ ಸಂಕಥನಕ್ಕೆ ಪ್ರತಿಯಾಗಿ ನ್ಯಾಯಾಲಯಗಳು ಅಂತರರಾಷ್ಟ್ರೀಯ ಕಾನೂನುಗಳನ್ನು ಬಳಸಲು ಮುಂದಾಗಬೇಕಿದೆ.

ಕೃಪೆ : ದ ಹಿಂದೂ : 20-04-22

ಸುದ್ದಿದಿನ.ಕಾಂ|ವಾಟ್ಸಾಪ್|9980346243

 

ಅಂತರಂಗ

ದೇವನಗರಿ ಸುದ್ದಿದಿನ – ದೀಪಾವಳಿ ವಿಶೇಷ ಸಂಚಿಕೆ 2026 : ಕತಾ ಸ್ಪರ್ಧೆ ; ಅನಂತ ಕುಣಿಗಲ್ ಅವರ ಸಂಸ‌ ಕತೆ ಪಡೆದ ಪ್ರಥಮ ಸ್ಥಾನ ಅಮಾನ್ಯ ; ಪರಿಷ್ಕೃತ ಫಲಿತಾಂಶ ‌ಪ್ರಕಟ

Published

on

ಸುದ್ದಿದಿನ,ದಾವಣಗೆರೆ:ದೇವನಗರಿ ಸುದ್ದಿದಿನ – ದೀಪಾವಳಿ ವಿಶೇಷ ಸಂಚಿಕೆ 2026ರ ಕತಾ ಸ್ಪರ್ಧೆಯ ನಿಯಮಾವಳಿಯನ್ನು ಉಲಂಘಿಸಿರುವ ಕಾರಣ ಅನಂತ ಕುಣಿಗಲ್ ಅವರ ಸಂಸ‌ ಕತೆ ಪಡೆದ ಪ್ರಥಮ ಸ್ಥಾನವನ್ನು ಅಮಾನ್ಯ ಮಾಡಲಾಗಿದೆ ಎಂದು ಪತ್ರಿಕೆಯ ಸಂಪಾದಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕತೆ-ಕವಿತೆ ಸ್ಪರ್ಧೆಯ ನಿಯಮಾವಳಿಗಳ ಪ್ರಕಾರ ‘ “ಸ್ವತಂತ್ರ ರಚನೆಯಾಗಿರ ಬೇಕು. ಈ ಮೊದಲು ಯಾವ ಮಾಧ್ಯಮಗಳಲ್ಲಿಯೂ ಪ್ರಕಟ ಅಥವಾ ಪ್ರಸಾರ ಆಗಿರಬಾರದು” ಎನ್ನುವ ನಿಯಮಾವಳಿಗಳನ್ನು ಉಲಂಘಿಸಿರುವುದರಿಂದ ಪ್ರಥಮ ಸ್ಥಾನ ಪಡೆದ ” ಸಂಸ” ಕತೆಯನ್ನು ಅಮಾನ್ಯಗೊಳಿಸಲಾಗಿದೆ.

‘ಸಂಸ’ ಕತೆಯ ಕತೆಗಾರರಾದ ಅನಂತ ಕುಣಿಗಲ್ ಅವರು
ಸ್ವತಃ ತಮ್ಮ ಫೇಸ್ ಬುಕ್ ವಾಲ್ ನಲ್ಲಿ ‘ ಸಂಸ’ ಕತೆಯು ಈ ಹಿಂದೆ ಯಾವುದೋ ಕತಾ ಸ್ಪರ್ಧೆಯಲ್ಲಿ ಸಮಾಧಾನಕರ ಬಹುಮಾನ ಪಡೆದಿತ್ತು. ಮತ್ತೊಂದೆಡೆ ತೃತೀಯ, ಮಗದೊಂದೆಡೆ ದ್ವಿತೀಯ ಬಹುಮಾನ ಲಭಿಸಿತ್ತು, ಅಲ್ಲದೆ ‘ಟೋಟೋ’ ಅವಾರ್ಡ್ ನ ಅಂತಿಮ ಸುತ್ತಿಗೆ ಎರಡು ಬಾರಿ ಶಾರ್ಟ್ ಲಿಸ್ಟ್ ಆಗಿತ್ತು ಎಂದು ಬರೆದು ಕೊಂಡಿರುತ್ತಾರೆ. ಆದಕಾರಣ ಈ ಕ್ರಮವನ್ನು ಕೈಗೊಳ್ಳಲಾಗಿದೆ.

ಕತಾ ಸ್ಪರ್ಧೆಯ ಪರಿಷ್ಕೃತ ಫಲಿತಾಂಶ

ಕತಾ ಸ್ಪರ್ಧೆಯಲ್ಲಿ ರವಿಮುಡೋಡಿ ಅವರ ʼಅರ್ಧ ರೇಖೆಯ ಚಿತ್ರʼ  ಕತೆಗೆ ಪ್ರಥಮ ಬಹುಮಾನ, ವಿಜಯ ಶ್ರೀ ಹಾಲಾಡಿ ಅವರ ʼಮಳೆಹಾಡುʼ ಕತೆಗೆ ದ್ವಿತೀಯ ಬಹುಮಾನ ಹಾಗೂ ಅಜೇಯ ಸಿಂಹ ಕೆ.ವಿ ಅವರ ‘ ಮಾರ್ಜಕದ ಶ್ರೀಮುಡಿ’ ಕತೆಗೆ  ತೃತೀಯ ಬಹುಮಾನ ದೊರೆತಿದೆ ಎಂದು ಸುದ್ದಿದಿನ ಪತ್ರಿಕೆ ಸಂಪಾದಕ ಮಾಹಿತಿ ನೀಡಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

Mysuru Dasara Elephants: ದಸರಾ ಗಜಪಡೆಯ ತೂಕ ಪರೀಕ್ಷೆ: ಶ್ರೀಕಂಠ ಭಾರೀ ಗಜ, ಏಕಲವ್ಯಕ್ಕೆ 2ನೇ ಸ್ಥಾನ; ಅಂಬಾರಿ ಆನೆ ಆಯ್ಕೆ ಇನ್ನೂ ಬಾಕಿ

Published

on

mysuru-dasara-elephants-srikanta-5790-kg-ekalavya-elephant-weight
Mysuru Dasara Elephants: 5,790 ಕೆಜಿ ತೂಕದ ಶ್ರೀಕಂಠ ನಂಬರ್ 1; ಗಜಪಡೆಯ ಆನೆಗಳ ತೂಕ ಎಷ್ಟು?

ಸುದ್ದಿದಿನ,ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಸಿದ್ಧತೆಗಳು ಆರಂಭವಾಗಿದ್ದು, ಮೊದಲ ಹಂತದಲ್ಲಿ ಆಗಮಿಸಿರುವ 9 ಆನೆಗಳಿಗೆ ಸಾಂಪ್ರದಾಯಿಕ ತೂಕ ಪರೀಕ್ಷೆ ನಡೆಸಲಾಗಿದೆ. ಈ ಬಾರಿ ಮತ್ತಿಗೋಡು ಶಿಬಿರದ 57 ವರ್ಷದ ಶ್ರೀಕಂಠ 5,790 ಕೆಜಿ ತೂಕದೊಂದಿಗೆ ಗಜಪಡೆಯಲ್ಲೇ ಅತ್ಯಂತ ಭಾರವಾದ ಆನೆಯಾಗಿ ಮೊದಲ ಸ್ಥಾನ ಪಡೆದುಕೊಂಡಿದ್ದಾನೆ. ಭೀಮನಕಟ್ಟೆ ಶಿಬಿರದ 41 ವರ್ಷದ ಏಕಲವ್ಯ 5,600 ಕೆಜಿ ತೂಗಿ ಎರಡನೇ ಸ್ಥಾನದಲ್ಲಿದ್ದಾನೆ.

ನಗರದ ಧನ್ವಂತರಿ ರಸ್ತೆಯಲ್ಲಿರುವ ಎಲೆಕ್ಟ್ರಾನಿಕ್ ವೇ ಬ್ರಿಡ್ಜ್‌ನಲ್ಲಿ ಭಾನುವಾರ ಬೆಳಗ್ಗೆ ಎಲ್ಲ 9 ಆನೆಗಳ ತೂಕ ಪರೀಕ್ಷೆ ನಡೆಸಲಾಯಿತು. ಕಳೆದ ವರ್ಷ ಭೀಮ ಮತ್ತು ಅಭಿಮನ್ಯು ಕ್ರಮವಾಗಿ ಮೊದಲ ಎರಡು ಸ್ಥಾನದಲ್ಲಿದ್ದರು. ಆದರೆ ಈ ಬಾರಿ ಇವರಿಬ್ಬರನ್ನೂ ದಸರಾಗೆ ಕರೆತಂದಿಲ್ಲ. ಹೀಗಾಗಿ ಶ್ರೀಕಂಠನ ತೂಕವೇ ಈ ವರ್ಷದ ಗಜಪಡೆಯ ಗಮನ ಸೆಳೆದಿದೆ.

ಹೈಲೈಟ್ಸ್: 57 ವರ್ಷದ ಶ್ರೀಕಂಠನೇ ಗಜಪಡೆಯ ತೂಕದ ಬಾದ್‌ಷಾ

  • ಶ್ರೀಕಂಠ 5,790 ಕೆಜಿ ತೂಕದೊಂದಿಗೆ ಮೊದಲ ಸ್ಥಾನ
  • ಏಕಲವ್ಯ 5,600 ಕೆಜಿ ತೂಕದೊಂದಿಗೆ ಎರಡನೇ ಸ್ಥಾನ
  • ಮೊದಲ ಹಂತದಲ್ಲಿ ಒಟ್ಟು 9 ಆನೆಗಳಿಗೆ ತೂಕ ಪರೀಕ್ಷೆ
  • ಆನೆಗಳ ತೂಕದ ಆಧಾರದ ಮೇಲೆ ಆಹಾರ ಮತ್ತು ತಾಲೀಮು ನಿರ್ಧಾರ
  • ಅಂತಿಮ ತಾಲೀಮಿನ ಬಳಿಕವೇ ಚಿನ್ನದ ಅಂಬಾರಿ ಆನೆ ಆಯ್ಕೆ

http://Visit : www.suddidina.com

ಗಂಡಾನೆಗಳ ತೂಕ 5 ಸಾವಿರ ಕೆಜಿಗೂ ಅಧಿಕ

ಈ ಬಾರಿಯ ಮೊದಲ ಹಂತದ ಗಜಪಡೆಯ ವಿಶೇಷತೆಯೆಂದರೆ ಬಹುತೇಕ ಗಂಡಾನೆಗಳು 5 ಸಾವಿರ ಕೆಜಿಗೂ ಹೆಚ್ಚು ತೂಕ ಹೊಂದಿರುವುದು. ಆದರೆ ಆನೆಗಳ ತೂಕ ಹೆಚ್ಚಿಸುವುದೇ ಅರಣ್ಯ ಇಲಾಖೆಯ ಮುಖ್ಯ ಗುರಿಯಲ್ಲ. ಬದಲಿಗೆ ಅವುಗಳ ಆರೋಗ್ಯ, ದೈಹಿಕ ಸಾಮರ್ಥ್ಯ ಮತ್ತು ತಾಲೀಮಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ.

ಡಿಸಿಎಫ್ ಡಾ. ಐ.ಬಿ. ಪ್ರಭುಗೌಡ ಅವರ ಪ್ರಕಾರ, ಆನೆಗಳ ತೂಕದ ಆಧಾರದ ಮೇಲೆ ಅವುಗಳಿಗೆ ನೀಡಬೇಕಾದ ಆಹಾರದ ಪ್ರಮಾಣ ಮತ್ತು ಪೌಷ್ಟಿಕ ಆಹಾರವನ್ನು ನಿರ್ಧರಿಸಲಾಗುತ್ತದೆ. ಪ್ರತಿಯೊಂದು ಆನೆಯ ದೈಹಿಕ ಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ತಾಲೀಮು ರೂಪಿಸಲಾಗುತ್ತದೆ.

9 ಆನೆಗಳ ತೂಕದ ಆಧಾರದಲ್ಲೇ ಆಹಾರ

ದಸರಾ ಗಜಪಡೆಯಲ್ಲಿರುವ ಆನೆಗಳ ಆರೋಗ್ಯ ಕಾಪಾಡುವುದು ಪ್ರಮುಖ ಆದ್ಯತೆಯಾಗಿದೆ. ತೂಕ ಪರೀಕ್ಷೆಯ ಮೂಲಕ ಆನೆಗಳ ದೈಹಿಕ ಸ್ಥಿತಿಯ ಬಗ್ಗೆ ಅಗತ್ಯ ಮಾಹಿತಿ ಪಡೆಯಲಾಗುತ್ತದೆ. ಅದರ ಆಧಾರದ ಮೇಲೆ ಪೌಷ್ಟಿಕ ಆಹಾರ, ದಿನನಿತ್ಯದ ಚಟುವಟಿಕೆ ಹಾಗೂ ತಾಲೀಮಿನಲ್ಲಿ ಅಗತ್ಯ ಬದಲಾವಣೆ ಮಾಡಲಾಗುತ್ತದೆ.

ಅರಣ್ಯ ಇಲಾಖೆ ಅಧಿಕಾರಿಗಳ ಪ್ರಕಾರ, ಈಗಿರುವ ಎಲ್ಲ ಆನೆಗಳೂ ಅಂಬಾರಿ ಹೊರುವ ಸಾಮರ್ಥ್ಯ ಹೊಂದಿವೆ. ಅನುಭವಿ ಆನೆಗಳಾಗಿರುವುದರಿಂದ ಅಂತಿಮ ತಾಲೀಮು ಅತ್ಯಂತ ಮಹತ್ವ ಪಡೆಯಲಿದೆ.

ಅಂಬಾರಿ ಆನೆ ಯಾರು? ಕುತೂಹಲ

ಈ ಬಾರಿಯ ದಸರಾ ಜಂಬೂಸವಾರಿಯಲ್ಲಿ ಚಿನ್ನದ ಅಂಬಾರಿ ಹೊರುವ ಆನೆ ಯಾರು ಎಂಬ ಕುತೂಹಲ ಈಗಾಗಲೇ ಹೆಚ್ಚಾಗಿದೆ. ಕೇವಲ ತೂಕದ ಆಧಾರದ ಮೇಲೆ ಅಂಬಾರಿ ಆನೆಯನ್ನು ಆಯ್ಕೆ ಮಾಡುವುದಿಲ್ಲ. ಆನೆಯ ಆರೋಗ್ಯ, ಸಾಮರ್ಥ್ಯ, ಅನುಭವ, ತಾಲೀಮು ಮತ್ತು ಅಂತಿಮ ಹಂತದ ಪ್ರದರ್ಶನವನ್ನು ಪರಿಗಣಿಸಿ ಆಯ್ಕೆ ಮಾಡಲಾಗುತ್ತದೆ.

ಮೊದಲ ಹಂತದ ತಾಲೀಮು ಮುಗಿದ ಬಳಿಕ ನಡೆಯುವ ಅಂತಿಮ ತಾಲೀಮಿನ ನಂತರವೇ ಚಿನ್ನದ ಅಂಬಾರಿ ಹೊರುವ ಆನೆಯನ್ನು ಅಂತಿಮಗೊಳಿಸಲಾಗುತ್ತದೆ. ಹೀಗಾಗಿ ಶ್ರೀಕಂಠ ತೂಕದಲ್ಲಿ ನಂಬರ್‌ 1 ಆಗಿದ್ದರೂ, ಅಂಬಾರಿ ವಿಚಾರದಲ್ಲಿ ಅಂತಿಮ ನಿರ್ಧಾರ ಇನ್ನೂ ಬಾಕಿಯಿದೆ.

ಆನೆಗಳ ಬಳಿ ಸಾರ್ವಜನಿಕರಿಗೆ ನಿರ್ಬಂಧ

ದಸರಾ ಆನೆಗಳ ವೀಕ್ಷಣೆಗೆ ಯಾವುದೇ ಟಿಕೆಟ್‌ ವ್ಯವಸ್ಥೆ ಮಾಡಿಲ್ಲ ಎಂದು ಡಿಸಿಎಫ್ ಸ್ಪಷ್ಟಪಡಿಸಿದ್ದಾರೆ. ಸಾರ್ವಜನಿಕರು ಆನೆಗಳ ಬಳಿ ತೆರಳದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ. ದಸರಾ ಆನೆಗಳ ಕುರಿತು ಸುಳ್ಳು ಮಾಹಿತಿ ಹರಡಿದರೆ ಕ್ರಮ ಕೈಗೊಳ್ಳುವುದಾಗಿಯೂ ಅರಣ್ಯ ಇಲಾಖೆ ಎಚ್ಚರಿಕೆ ನೀಡಿದೆ.

“ಆನೆಗಳಿಗೆ ಹಂತ ಹಂತವಾಗಿ ತಾಲೀಮು ಮಾಡಲಾಗುತ್ತದೆ. ಸದ್ಯಕ್ಕೆ ಎಲ್ಲ ಆನೆಗಳ ಆರೋಗ್ಯ ಚೆನ್ನಾಗಿದೆ. ಅಂತಿಮ ಹಂತದ ತಾಲೀಮಿನ ಬಳಿಕ ಅಂಬಾರಿ ಹೊರುವ ಆನೆ ಆಯ್ಕೆ ಮಾಡಲಾಗುವುದು.”

                                                   – ಡಾ.ಐ.ಬಿ.ಪ್ರಭುಗೌಡ, ಡಿಸಿಎಫ್‌ 

ದಸರಾ ಗಜಪಡೆಯ ತೂಕದ ವಿವರ

  • ಶ್ರೀಕಂಠ: 5,790 ಕೆಜಿ
  • ಏಕಲವ್ಯ: 5,600 ಕೆಜಿ
  • ಧನಂಜಯ: 5,530 ಕೆಜಿ
  • ಮಹೇಂದ್ರ: 5,490 ಕೆಜಿ
  • ಪ್ರಶಾಂತ: 5,205 ಕೆಜಿ
  • ಗೋಪಿ: 5,170 ಕೆಜಿ
  • ಶ್ರೀರಾಮ: 4,820 ಕೆಜಿ
  • ಲಕ್ಷ್ಮೀ: 3,990 ಕೆಜಿ
  • ಕಾವೇರಿ: 3,075 ಕೆಜಿ
Continue Reading

ದಿನದ ಸುದ್ದಿ

ಬೆಂಗಳೂರು ಕಟ್ಟಡ ತೆರವು ಕಾರ್ಯಾಚರಣೆ: 18 ಅಂತಸ್ತಿನ ಅಪಾರ್ಟ್‌ಮೆಂಟ್‌ಗೆ ‘ಡೆಮಾಲಿಷನ್’ ಶುರು!

Published

on

bengaluru-koodlugate-snn-raj-eternia-18-floor-building-demolition
ಕೂಡ್ಲುಗೇಟ್‌ನ ಎಸ್‌ಎನ್‌ಎನ್‌ ರಾಜ್‌ ಎಟರ್ನಿಯಾ ಸಂಕೀರ್ಣದ 49 ಫ್ಲ್ಯಾಟ್‌ಗಳ ತೆರವು; ₹200 ಕೋಟಿ ವೆಚ್ಚದ ಕಟ್ಟಡಕ್ಕೆ ಹೊಸ ರೂಪ

ಕೂಡ್ಲುಗೇಟ್‌ನ ಎಸ್‌ಎನ್‌ಎನ್‌ ರಾಜ್‌ ಎಟರ್ನಿಯಾ ಸಂಕೀರ್ಣದ 49 ಫ್ಲ್ಯಾಟ್‌ಗಳ ತೆರವು; ₹200 ಕೋಟಿ ವೆಚ್ಚದ ಕಟ್ಟಡಕ್ಕೆ ಹೊಸ ರೂಪ


ಸುದ್ದಿದಿನ,ಬೆಂಗಳೂರು:
ನಗರದ ಪ್ರಮುಖ ವಸತಿ ಯೋಜನೆಗಳಲ್ಲಿ ಒಂದಾಗಿರುವ ಕೂಡ್ಲುಗೇಟ್‌ನ ಎಸ್‌ಎನ್‌ಎನ್‌ ಎಸ್ಟೇಟ್‌ ಒಡೆತನದ 18 ಅಂತಸ್ತಿನ ಕಟ್ಟಡದ ತೆರವು ಕಾರ್ಯಾಚರಣೆ ಶುಕ್ರವಾರದಿಂದ ಆರಂಭವಾಗಿದೆ. ಬೆಂಗಳೂರಿನ ಗಮನ ಸೆಳೆದಿದ್ದ ಈ ಪ್ರಕರಣದಲ್ಲಿ ಎಸ್‌ಎನ್‌ಎನ್‌ ರಾಜ್‌ ಕಾರ್ಪ್‌ ಸಂಸ್ಥೆಯು ಎಚ್‌ಎಸ್‌ಆರ್‌ ಲೇಔಟ್‌ನಲ್ಲಿರುವ ತನ್ನ ಎಸ್‌ಎನ್‌ಎನ್‌ ರಾಜ್‌ ಎಟರ್ನಿಯಾ ಪ್ರೀಮಿಯಂ ವಸತಿ ಸಂಕೀರ್ಣದ 49 ಅಪಾರ್ಟ್‌ಮೆಂಟ್‌ ಘಟಕಗಳನ್ನು ನಿಯಂತ್ರಿತ ರೀತಿಯಲ್ಲಿ ಕೆಡವುವ ಪ್ರಕ್ರಿಯೆಗೆ ಚಾಲನೆ ನೀಡಿದೆ.

ಒಟ್ಟು 972 ಮನೆಗಳನ್ನು ಹೊಂದಿರುವ ಈ ವಸತಿ ಯೋಜನೆಯಲ್ಲಿನ 49 ಘಟಕಗಳ ತೆರವು ಈಗ ಭಾರಿ ಕುತೂಹಲ ಮೂಡಿಸಿದೆ. ಕಟ್ಟಡದ ಸುರಕ್ಷತೆ ಕುರಿತು ತಾಂತ್ರಿಕ ಪರಿಶೀಲನೆ ನಡೆಸಿದ ಬಳಿಕ ಈ ಕ್ರಮಕ್ಕೆ ಮುಂದಾಗಲಾಗಿದೆ.

₹200 ಕೋಟಿ ವೆಚ್ಚದ ಕಟ್ಟಡದಲ್ಲಿ ದೋಷ ಪತ್ತೆ

ಸುಮಾರು ₹200 ಕೋಟಿ ವೆಚ್ಚದಲ್ಲಿ ನಿರ್ಮಿಸಲಾದ ಕಟ್ಟಡ ಇದಾಗಿದೆ. ತಾಂತ್ರಿಕ ಪರಿಶೀಲನೆ ವೇಳೆ ಕಟ್ಟಡದ ರಚನೆಯಲ್ಲಿ ಹಾನಿಯಾಗಿರುವುದು ಹಾಗೂ ಕಟ್ಟಡ ವಾಲಿರುವುದು ಬೆಳಕಿಗೆ ಬಂದಿತ್ತು. ಈ ಹಿನ್ನೆಲೆಯಲ್ಲಿ ನಿವಾಸಿಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಕಟ್ಟಡದ ನಿರ್ದಿಷ್ಟ ಭಾಗಗಳನ್ನು ತೆರವುಗೊಳಿಸುವ ನಿರ್ಧಾರ ಕೈಗೊಳ್ಳಲಾಗಿದೆ.

ತೆರವು ಕಾರ್ಯಾಚರಣೆಯನ್ನು ಯಾವುದೇ ರೀತಿಯ ಆತಂಕ ಅಥವಾ ಅಪಾಯ ಉಂಟಾಗದಂತೆ ಅತ್ಯಂತ ನಿಯಂತ್ರಿತ ರೀತಿಯಲ್ಲಿ ನಡೆಸಲಾಗುತ್ತಿದೆ. ಕಟ್ಟಡ ತೆರವು ಸಂದರ್ಭದಲ್ಲಿ ಸುತ್ತಮುತ್ತಲಿನ ಪ್ರದೇಶಕ್ಕೂ ಸಮಸ್ಯೆಯಾಗದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ.

ಮುಂಬೈ ಮೂಲದ ಖಾಸಗಿ ಕಂಪನಿಗೆ ಗುತ್ತಿಗೆ

ತೆರವು ಕಾರ್ಯವನ್ನು ಮುಂಬೈ ಮೂಲದ ಖಾಸಗಿ ಕಂಪನಿಗೆ ಗುತ್ತಿಗೆ ನೀಡಲಾಗಿದೆ ಎಂದು ಎಸ್‌ಎನ್‌ಎನ್‌ ಅಪಾರ್ಟ್‌ಮೆಂಟ್‌ ನಿರ್ದೇಶಕ ಅನೂಜ್‌ ತಿಳಿಸಿದ್ದಾರೆ. ಫ್ಲ್ಯಾಟ್‌ಗಳನ್ನು ಹಂತ ಹಂತವಾಗಿ ತೆರವುಗೊಳಿಸುವ ಮೂಲಕ ಕಾರ್ಯಾಚರಣೆ ನಡೆಸಲಾಗುತ್ತಿದೆ.

ಈ ಕುರಿತು ಮಾತನಾಡಿರುವ ಅವರು, ಬಿಬಿಎಂಪಿಗೂ ಸಂಸ್ಥೆಯ ವತಿಯಿಂದ ಪತ್ರ ಬರೆಯಲಾಗಿದೆ ಎಂದು ತಿಳಿಸಿದ್ದಾರೆ. ಯಾವುದೇ ರೀತಿಯ ಸಮಸ್ಯೆ ಉಂಟಾಗದಂತೆ ತೆರವು ಕಾರ್ಯ ನಡೆಸಲಾಗುವುದು ಎಂಬ ಭರವಸೆಯನ್ನೂ ನೀಡಿದ್ದಾರೆ.

ಅದೇ ಜಾಗದಲ್ಲಿ ಹೊಸ ಅಪಾರ್ಟ್‌ಮೆಂಟ್‌ ನಿರ್ಮಾಣ

ಪ್ರಸ್ತುತ ಕಟ್ಟಡದ ತೆರವು ಕಾರ್ಯ ಪೂರ್ಣಗೊಂಡ ಬಳಿಕ ಅದೇ ಜಾಗದಲ್ಲಿ ಹೊಸ ಅಪಾರ್ಟ್‌ಮೆಂಟ್‌ ನಿರ್ಮಿಸುವ ಯೋಜನೆ ಇದೆ ಎಂದು ಸಂಸ್ಥೆ ತಿಳಿಸಿದೆ. ಈಗಾಗಲೇ ಕೆಲವು ಫ್ಲ್ಯಾಟ್‌ಗಳು ಮುಂಗಡವಾಗಿ ಬುಕ್‌ ಆಗಿದ್ದ ಹಿನ್ನೆಲೆಯಲ್ಲಿ ಖರೀದಿದಾರರೊಂದಿಗೆ ಮಾತುಕತೆ ನಡೆಸಿ ಸಮಸ್ಯೆ ಪರಿಹರಿಸುವುದಾಗಿ ಸಂಸ್ಥೆ ಹೇಳಿದೆ.

ಯಾರಿಗೂ ತೊಂದರೆಯಾಗದಂತೆ ಸಂಪೂರ್ಣ ಪ್ರಕ್ರಿಯೆ ನಡೆಸುವುದಾಗಿ ಸ್ಪಷ್ಟಪಡಿಸಿರುವ ಸಂಸ್ಥೆ, ನಿವಾಸಿಗಳು ಹಾಗೂ ಖರೀದಿದಾರರ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಮುಂದಿನ ಕ್ರಮ ಕೈಗೊಳ್ಳಲಿದೆ.

Continue Reading

Trending