ರಾಜಕೀಯ
ವಾರಣಾಸಿ ಲೋಕಸಭಾ : ಮಾಜಿ ಯೋಧ ತೇಜ್ ಬಹದ್ದೂರ್ ನಾಮಪತ್ರ ತಿರಸ್ಕೃತ

ಸುದ್ದಿದಿನ, ವಾರಣಾಸಿ : ವಾರಣಾಸಿಯ ಲೋಕಸಭಾ ಚುನಾವಣಾ ಕಣದಲ್ಲಿ ನರೇಂದ್ರ ಮೋದಿಯ ವಿರುದ್ಧ ಎಸ್ಪಿ ಪಕ್ಷದ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಂತಹ ಮಾಜಿ ಸೈನಿಕ ತೇಜ್ ಬಹದ್ದೂರ್ ಅವರ ನಾಮಪತ್ರವನ್ನು ಜಿಲ್ಲಾ ಚುನಾವಣಾ ಆಯೋಗವು ಇಂದು ತಿರಸ್ಕರಿಸಿದೆ.
Samajwadi Party MP candidate from Varanasi, Tej Bahadur Yadav: My nomination has been rejected wrongly. I was asked to produce the evidence at 6.15pm yesterday, we produced the evidence, still my nomination was rejected. We will go to the Supreme Court. pic.twitter.com/MF05gNoLJq
— ANI UP (@ANINewsUP) May 1, 2019
ತೇಜ್ ಬಹದ್ದೂರ್ ಅವರು ಭ್ರಷ್ಟಾಚಾರ, ವಿಶ್ವಾಸ ದ್ರೋಹದಡಿ ಬಿಎಸ್ಎಫ್ ಸೇವೆಯಿಂದ ವಜಾಗೊಂಡಿದ್ದರು. ಸೇವೆಯಿಂದ ವಜಾಗೊಂಡ ವ್ಯಕ್ತಿ ಐದು ವರ್ಷಗಳ ಕಾಲ ಯಾವುದೇ ಚುನಾವಣೆಯಲ್ಲಿ ಸ್ಪರ್ಧಿಸಲು ಅರ್ಹನಲ್ಲ. ಹಾಗಾಗಿ ಸೇವೆಯಿಂದ ವಜಾಗೊಂಡಿರುವಂತಹ ತೇಜ್ ಬಹದ್ದೂರ್ ಅವರು ಬಿಎಸ್ಎಫ್ ನಿಂದ ನಿರಪೇಕ್ಷಣಾ ಪತ್ರವನ್ನು ತರುವಂತೆ ಆಯೋಗವು ಸೂಚನೆ ನೀಡಿತ್ತು.
ಈ ಹಿನ್ನೆಲೆಯಲ್ಲಿ ಸಮಾಜವಾದಿ ಪಕ್ಷವು ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಶಾಲಿನಿಯಾದವ್ ಅವರನ್ನು ತಮ್ಮ ಪಕ್ಷದಿಂದ ಚುನಾವಣಾ ಕಣಕ್ಕಿಳಿಸಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಎಸ್.ಎಸ್.ಜನರಲ್ ಆಸ್ಪತ್ರೆಯಲ್ಲಿ ಒಳರೋಗಿಗಳ ಸೇವೆಗೆ ಡಾ|| ಶಾಮನೂರು ಶಿವಶಂಕರಪ್ಪ ಚಾಲನೆ

ಸುದ್ದಿದಿನ,ದಾವಣಗೆರೆ:ದಾವಣಗೆರೆಯ ಕೆ.ಆರ್. ರಸ್ತೆಯಲ್ಲಿರುವ ಎಸ್.ಎಸ್. ಜನರಲ್ ಆಸ್ಪತ್ರೆ, ದಾವಣಗೆರೆ ದಕ್ಷಿಣದ ಜನರಿಗೆ, ವಿಶೇಷವಾಗಿ ನಗರದ ಕೊಳೆಗೇರಿಗಳಲ್ಲಿ ವಾಸಿಸುವ ಜನರಿಗೆ ಕೈಗೆಟುಕುವ, ಸುಲಭವಾಗಿ ಸಿಗುವ ಆರೋಗ್ಯ ಸೇವೆಯನ್ನು ಒದಗಿಸಲು ಮುಂದಾಗಿದೆ.
ಇಂದು ಸಂಜೆ ಶಾಸಕರು, ಬಾಪೂಜಿ ವಿದ್ಯಾಸಂಸ್ಥೆಯ ಗೌರವ ಕಾರ್ಯದರ್ಶಿಗಳೂ ಆದ ಡಾ|| ಶಾಮನೂರು ಶಿವಶಂಕರಪ್ಪನವರು ಚಾಲನೆ ನೀಡಿ ಮಾತನಾಡಿ ಈಗಾಗಲೇ ಹೊರರೋಗಿಗಳ ವಿಭಾಗ, ಡಯಾಲಿಸಿಸ್ ಕೇಂದ್ರ ಸೇರಿದಂತೆ ವಿವಿಧ ಆರೋಗ್ಯ ಸೇವೆಯನ್ನು ನೀಡುತ್ತಿರುವ ಈ ಸಾರ್ವಜನಿಕ ಆಸ್ಪತ್ರೆಯಲ್ಲಿ ಇಂದಿನಿಂದ ಮಹಿಳೆಯರು ಮತ್ತು ಮಕ್ಕಳಿಗೆ ಕೈಗೆಟುಕುವ ಒಳರೋಗಿ ಆರೈಕೆಯ ಹೆಚ್ಚುತ್ತಿರುವ ಅಗತ್ಯವನ್ನು ಪೂರೈಸುವ ಉದ್ದೇಶದಿಂದ 50 ಹಾಸಿಗೆಗಳ ಒಳರೋಗಿ ವಿಭಾಗವನ್ನು ಆರಂಭಿಸಲಾಗುತ್ತಿದೆ ಎಂದರು.
ಸಮುದಾಯ ವೈದ್ಯಕೀಯ ವಿಭಾಗದಿಂದ ನಡೆಸುವ ಕ್ಯಾನ್ಸರ್ ಪತ್ತೆ ಪರೀಕ್ಷಾ ಕ್ಲಿನಿಕ್, ಉಚಿತ ಡಯಾಲಿಸಿಸ್ ಸೇವೆಗಳು, ರಕ್ತದಲ್ಲಿನ ಸಕ್ಕರೆ, ಹಿಮೋಗ್ಲೋಬಿನ್, ಮೂತ್ರಪಿಂಡದ ಕಾರ್ಯ ಪರೀಕ್ಷೆಗಳು ಮತ್ತು ಮೂತ್ರ ಪರೀಕ್ಷೆಗಳಂತಹ ಮೂಲಭೂತ ಪ್ರಯೋಗಾಲಯ ಪರೀಕ್ಷೆಗಳು ನಡೆಯುತ್ತಿದ್ದು, ಆಸ್ಪತ್ರೆಯಲ್ಲಿ ಇಲ್ಲಿನ ಜನರಿಗೆ ಅನುಕೂಲ ಮಾಡಿಕೊಡುವ ದೃಷ್ಟಿಯಿಂದ ಒಳರೋಗಿಗಳ ವಿಭಾಗವನ್ನು ಆರಂಬಿಸಿದ್ದು, ಈ ಭಾಗದ ಜನರು ಸದುಪಯೋಗ ಪಡಿಸಿಕೊಳ್ಳುವಂತೆ ಕರೆ ನೀಡಿದರು.
ಒಳರೋಗಿ ವಿಭಾಗದ ಸೇವೆಗಳನ್ನು ಬೆಂಬಲಿಸುವ ಉದ್ದೇಶದಿಂದ, ಅಲ್ಟ್ರಾಸೌಂಡ್ ಮತ್ತು ಎಕ್ಸ್-ರೇ, ಡಯೊಗ್ನೊಸ್ಟಿಕ್ ಸೇರಿದಂತೆ ಇತರೆ ಆರೋಗ್ಯ ಸೇವೆಗಳನ್ನೂ ಪರಿಚಯಿಸಿ ರಿಯಾಯಿತಿ ದರದಲ್ಲಿ ಒದಗಿಸಲಾಗುವುದು, ಯಾವುದೇ ರೋಗಿಯನ್ನು ವೆಚ್ಚದ ಕಾರಣದಿಂದಾಗಿ ವಾಪಾಸ್ ಕಳಿಸುವುದಿಲ್ಲ ಎಂದು ಭರವಸೆ ನೀಡಿದರು.
ಸಾರ್ವಜನಿಕರಿಗೆ ಹೆಚ್ಚಿನ ನೆರವು ನೀಡಲು ಎಸ್.ಎಸ್.ಕೇರ್ ಟ್ರಸ್ಟ್ ಕೂಡ ನಮ್ಮೊಂದಿಗೆ ಕೈಜೋಡಿಸಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಎಸ್.ಎಸ್.ಕೇರ್ ಟ್ರಸ್ಟ್ ಲೈಫ್ ಟ್ಟಸ್ರಿಗಳು, ದಾವಣಗೆರೆ ಸಂಸದರಾದ ಡಾ|| ಪ್ರಭಾ ಮಲ್ಲಿಕಾರ್ಜುನ್ ಅವರು ಮಾತನಾಡಿ 2019ರಿಂದ ಆರಂಭವಾದ ಎಸ್.ಎಸ್.ಕೇರ್ ಟ್ರಸ್ಟ್ ಅನೇಕ ಆರೋಗ್ಯ ಸೇವೆಗಳನ್ನು ಒದಗಿಸಲು ಡಾ|| ಶಾಮನೂರು ಶಿವಶಂಕರಪ್ಪನವರ ಪ್ರೇರಣೆಯೇ ಸಾಕ್ಷಿ ಎಂದರು.
ಈ ಸಂದರ್ಭದಲ್ಲಿ ಬಾಪೂಜಿ ಆಡಳಿತ ಮಂಡಳಿಯ ಸದಸ್ಯರಾದ ಅಥಣಿ ವೀರಣ್ಣನವರು, ಶ್ರೀಮತಿ ಕಿರುವಾಡಿ ಗಿರಿಜಮ್ಮ, ಸಂಪನ್ನ ಮುತಾಲಿಕ್, ಬಾಪೂಜಿ ವಿದ್ಯಾಸಂಸ್ಥೆಯ ಶೈಕ್ಷಣಿಕ ನಿರ್ದೇಶಕರಾದ ಪ್ರೊ|| ಬಕ್ಕಪ್ಪ, ಎಸ್‌ಎಸ್‌ಐಎಂಎಸ್‌ಆರ್‌ಸಿ ಪ್ರಾಂಶುಪಾಲರಾದ ಡಾ. ಪ್ರಸಾದ್, ಎಸ್‌ಎಸ್‌ಐಎಂಎಸ್‌ಆರ್‌ಸಿ ವೈದ್ಯಕೀಯ ನಿರ್ದೇಶಕರಾದ ಡಾ. ಅರುಣಕುಮಾರ್ ಅಜ್ಜಪ್ಪ, ಬಾಪೂಜಿ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕರಾದ ಡಾ. ಕುಮಾರ್, ಸತ್ಯನಾರಾಯಣ, ಡಾ|| ಪ್ರಶಾಂತಕುಮಾರಿ, ಡಾ|| ಶ್ರೇಷ್ಠ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಯೂಬ್ ಪೈಲ್ವಾನ್, ದಾದು ಸೇಠ್, ಚಮನ್ ಸಾಬ್, ಮುನ್ನಾ ಪೈಲ್ವಾನ್, ಮುದೇಗೌಡ್ರು ಗಿರೀಶ್, ಜಿ.ಎಸ್.ಮಂಜುನಾಥ್ (ಗಡಿಗುಡಾಳ್) ಮತ್ತಿತರರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಕ್ರೀಡೆ
ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನ ; ಇ-ಖಾತೆ ಅಭಿಯಾನ ಹಾಗೂ ಇತರೆ ಪ್ರಮುಖ ಸುದ್ದಿಗಳು

ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನ ; ಇ-ಖಾತೆ ಅಭಿಯಾನ ಹಾಗೂ ಇತರೆ ಪ್ರಮುಖ ಸುದ್ದಿಗಳು
1. ಮುಖ್ಯಮಂತ್ರಿ ಸಿದ್ದರಾಮಯ್ಯ ನವದೆಹಲಿ ತಲುಪಿದ್ದಾರೆ. ಇಂದು ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿ, 5 ಪ್ರಮುಖ ಮಸೂದೆಗಳಿಗೆ ಅಂಗೀಕಾರ ನೀಡುವಂತೆ ಮನವಿ ಮಾಡಲಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ. ಭದ್ರಾ ಮೇಲ್ದಂಡೆ ಯೋಜನೆ ಸೇರಿದಂತೆ ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ, ಹೆಚ್ಚಿನ ಅನುದಾನ ಬಿಡುಗಡೆ ಮಾಡುವಂತೆ, ಕೇಂದ್ರದ ಜಲಶಕ್ತಿ ಖಾತೆ ಸಚಿವರನ್ನು ಕೋರುವುದಾಗಿ, ಇದೇ ವೇಳೆ ಸಾಮಾಜಿಕ ಜಾಲತಾಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
2. ರಾಜ್ಯದ ಗ್ರಾಮ ಪಂಚಾಯ್ತಿಗಳ ಹಂತದಲ್ಲಿ ಜುಲೈ 15ರಿಂದ, ಸಾರ್ವಜನಿಕರ ಆಸ್ತಿಗಳ ಇ-ಖಾತೆ ರೂಪಿಸುವ ಅಭಿಯಾನವನ್ನು ಕಂದಾಯ ಇಲಾಖೆ ಆಯೋಜಿಸಲಿದೆ ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.
3. ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆಗೆ ಸಂಬಂಧಿಸಿ, ಇಲ್ಲಿಯವರೆಗೆ ಹೆಸರು ನೋಂದಾಯಿಸದವರು, ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ, ಈ ತಿಂಗಳ 30ರವರೆಗೆ ಮಾಹಿತಿ ನೀಡಲು ಅವಕಾಶವಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಎ.ಬಿ.ಬಸವರಾಜು ತಿಳಿಸಿದ್ದಾರೆ.
4. ಕಾವೇರಿ ಜಲಾನಯನ ಪ್ರದೇಶದಲ್ಲಿ ವ್ಯಾಪಕವಾಗಿ ಸುರಿಯುತ್ತಿರುವ ಮಳೆಯಿಂದ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆ.ಆರ್.ಎಸ್. ಅಣೆಕಟ್ಟೆ ಭಾಗಶ: ಭರ್ತಿಯಾಗಿದ್ದು, ಒಳ ಹರಿವು ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಅಣೆಕಟ್ಟೆಯಿಂದ 5 ಸಾವಿರದಿಂದ 15 ಸಾವಿರ ಕ್ಯುಸೆಕ್ ನೀರನ್ನು ನದಿಗೆ ಹರಿಸಲಾಗಿದೆ.
5. ಕತಾರ್‌ನಲ್ಲಿರುವ ಅಲ್ ಉದೈದ್ ಅಮೇರಿಕ ವಾಯುನೆಲೆಯ ಮೇಲೆ ಇರಾನ್ ನಡೆಸಿದ ದಾಳಿಯ ನಂತರ ಜಾಗತಿಕ ತೈಲ ಬೆಲೆಗಳು ಐದು ವರ್ಷಗಳಲ್ಲಿ ನಿನ್ನೆ ಒಂದೇ ದಿನದಲ್ಲಿ ತೀವ್ರ ಕುಸಿತವನ್ನು ದಾಖಲಿಸಿದೆ.
6. ಕರ್ನಾಟಕ, ಮಧ್ಯಪ್ರದೇಶ, ಬಿಹಾರ, ಜಾಖಂಡ್, ಒಡಿಶಾ, ಛತ್ತೀಸ್‌ಗಢ, ಪಶ್ಚಿಮ ಬಂಗಾಳ, ಸಿಕ್ಕಿಂ, ಅರುಣಾಚಲ ಪ್ರದೇಶ, ಕೊಂಕಣ, ಗೋವಾ, ಮಹಾರಾಷ್ಟ್ರ, ಗುಜರಾತ್, ಹಿಮಾಚಲ ಪ್ರದೇಶ, ಉತ್ತರಾಖಂಡ, ಪಶ್ಚಿಮ ಉತ್ತರ ಪ್ರದೇಶ, ರಾಜಸ್ಥಾನ, ಕೇರಳದ ಕೆಲವು ಸ್ಥಳಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
7. ಅಯೋವಾದಲ್ಲಿ ನಾಳೆ ಆರಂಭವಾಗಲಿರುವ ಯುಎಸ್ ಓಪನ್ 2025 ಬ್ಯಾಡ್ಮಿಂಟನ್ ಪಂದ್ಯಾವಳಿಯ ಪುರುಷರ ಡಬಲ್ಸ್ ವಿಭಾಗದಲ್ಲಿ ಹರಿಹರನ್ ಅಂಶಕರುಣನ್ ಮತ್ತು ರೂಬನ್ ಕುಮಾರ್ ರೆಥಿನಸಬಪತಿ, ಭಾರತವನ್ನು ಮುನ್ನಡೆಸಲಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಶೀಘ್ರದಲ್ಲೇ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿ : ಗೃಹ ಸಚಿವ ಜಿ. ಪರಮೇಶ್ವರ್

ಸುದ್ದಿದಿನಡೆಸ್ಕ್:ಪಿಎಸ್‌ಐ ಹಗರಣ ನಂತರ ಐದು ವರ್ಷಗಳಿಂದ ಇಲ್ಲಿವರೆಗೂ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಿರಲಿಲ್ಲ. ಈಗ ಶೀಘ್ರದಲ್ಲಿಯೇ ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು ಗೃಹ ಸಚಿವ ಜಿ.ಪರಮೇಶ್ವರ್ ತಿಳಿಸಿದ್ದಾರೆ.
ಬಾಗಲಕೋಟೆ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪೊಲೀಸ್ ಇಲಾಖೆಯಲ್ಲಿ ಕಳೆದ ಐದು ವರ್ಷಗಳಿಂದ ಯಾವುದೇ ನೇಮಕಾತಿಗಳು ಆಗಿಲ್ಲ. ಒಂದು ಸಾವಿರ ಪಿಎಸ್‌ಐ ಹುದ್ದೆಗಳು ಖಾಲಿ ಇದ್ದು, ಈಗಾಗಲೇ 500 ಹುದ್ದೆಗಳ ನೇಮಕಾತಿ ಪ್ರಕ್ರಿಯೆಯು ನಡೆದಿದ್ದು, ಕೆಲವರು ತರಬೇತಿಯಲ್ಲಿದ್ದಾರೆ. ಇಲಾಖೆಯಲ್ಲಿರುವ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಹಂತ-ಹಂತವಾಗಿ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
