ದಿನದ ಸುದ್ದಿ

ತಾಪಮಾನ ನಿಯಂತ್ರಣಕ್ಕೆ ಹಲವು ಕ್ರಮ : ಕೇಂದ್ರ ಸಚಿವ ನಿತಿನ್ ಗಡ್ಕರಿ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ ಡೆಸ್ಕ್ : ದೇಶದಲ್ಲಿ ತಾಪಮಾನ ಕಡಿಮೆ ಮಾಡಲು ಕೇಂದ್ರ ಸರ್ಕಾರ ಹಲವು ಕ್ರಮಗಳನ್ನು ಕೈಗೊಂಡಿದೆ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ.

ಮೈಸೂರಿನಲ್ಲಿ ಸುತ್ತೂರು ಶಿವರಾತ್ರಿ ದೇಶಿಕೇಂದ್ರ ಸ್ವಾಮಿ ಭೇಟಿ ನಂತರ ಸಚಿವರು ಈ ವಿಷಯ ತಿಳಿಸಿದರು. ಪೆಟ್ರೋಲ್,ಡಿಸೇಲ್ ಬಳಕೆ ಕಡಿಮೆ ಮಾಡಲು ಕಬ್ಬು ಮತ್ತು ಅಕ್ಕಿಯಿಂದ ತಯಾರಾಗುವ ಎಥನಾಲ್ ಬಳಕೆಗೆ ಹೆಚ್ಚು ಒತ್ತು ನೀಡಲಾಗಿದೆ. ಇದರಿಂದ ಪರಿಸರ ಮಾಲಿನ್ಯವನ್ನು ಸಾಧ್ಯವಾದಷ್ಟು ಮಟ್ಟಿಗೆ ಕಡಿಮೆ ಮಾಡಬಹುದಾಗಿದೆ ಎಂದರು.

ಗ್ರಾಮೀಣ ಜನರ ಜೀವನದಲ್ಲಿ ಸುಧಾರಣೆ ತಂದು, ಕೃಷಿಯಲ್ಲಿ ಸ್ವಾವಲಂಬನೆ ಸಾಧಿಸಲು ಹೆಚ್ಚು ಒತ್ತು ನೀಡಲಾಗುತ್ತಿದೆ. ಆತ್ಮನಿರ್ಭರ್ ಭಾರತ್ ಅಭಿಯಾನದ ಮೂಲಕ ಸ್ವದೇಶಿ ಉತ್ಪನ್ನಗಳ ಬಳಕೆಯಲ್ಲಿ ಹೆಚ್ಚಿನ ಪ್ರಗತಿ ಸಾಧಿಸುವುದೇ ಸರ್ಕಾರದ ಉದ್ದೇಶ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಹೇಳಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version