ದಿನದ ಸುದ್ದಿ

ಚನ್ನಗಿರಿ | ಜಿಲ್ಲಾ ಸಮುದಾಯ ಆರೋಗ್ಯ ಅಧಿಕಾರಿ ಸಂಘದ ಅಧ್ಯಕ್ಷರಾಗಿ ವಸಂತಕುಮಾರ ಸಿ ಆಯ್ಕೆ

Published

on

ಸುದ್ದಿದಿನ, ಚನ್ನಗಿರಿ : ಏಪ್ರಿಲ್ 17 ರಂದು ನಡೆದ ಜಿಲ್ಲಾ ಸಮುದಾಯ ಆರೋಗ್ಯ ಅಧಿಕಾರಿಗಳ ವಿಶೇಷ ಸಭೆಯಲ್ಲಿ ಸಮುದಾಯ ಆರೋಗ್ಯ ಅಧಿಕಾರಿಯಾಗಿ ವಸಂತಕುಮಾರ ಸಿ ಅವರನ್ನು ಜಿಲ್ಲಾ ಸಮುದಾಯ ಆರೋಗ್ಯ ಅಧಿಕಾರಿಗಳ ಸಂಘದ ಜಿಲ್ಲಾ ಅಧ್ಯಕ್ಷರನ್ನಾಗಿ ಆಯ್ಕೆಮಾಡಲಾಗಿದೆ.

ಇವರು ಸಮುದಾಯ ಆರೋಗ್ಯ ಅಧಿಕಾರಿಯಾಗಿ ಚನ್ನಗಿರಿ ತಾಲ್ಲೂಕಿನ ಗರಗ ಆರೋಗ್ಯ ಮತ್ತು ಕ್ಷೇಮ ಕೇಂದ್ರದಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.

2011-2013ರಲ್ಲಿ ಮೆಡಿಕಲ್ ಸರ್ಜಿಕಲ್ ನರ್ಸಿಂಗ್ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ ಬೆಂಗಳೂರು ಇಲ್ಲಿ ಐಚ್ಛಿಕ ವಿಷಯ ಕಾರ್ಡಿಯೋ ಥೋರಾಸಿಕ್ ಕುರಿತು ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ.2009-2018ವರೆಗೆ ಪ್ರಾಧ್ಯಾಪಕರಾಗಿ ಹಾಗೂ ಕಾಲೇಜಿನ ಪ್ರಾಂಶುಪಾಲರಾಗಿ ರಾಯಪುರದಲ್ಲಿ ಛತ್ತೀಸ್ ಗಡದಲ್ಲಿ ಸೇವೆಯನ್ನು ಸಲ್ಲಿಸಿದ್ದಾರೆ.

ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲ್ಲೂಕಿನ ಹೊಸನಗರ ಗ್ರಾಮದ ಚಂದ್ರನಾಯ್ಕ್ ಆರ್ ಮಂಜುಳಾ ಬಾಯಿ ಅವರ ದ್ವಿತೀಯ ಪುತ್ರರಾಗಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version