ದಿನದ ಸುದ್ದಿ
ಜನಸಂಖ್ಯೆಗೆ ಅನುಗುಣವಾಗಿ ವೈದ್ಯಕೀಯ ಕಾಲೇಜು ಸ್ಥಾಪನೆಯಾಗಬೇಕು : ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯ ಕುಲಪತಿ ಡಾ.ಎಂ.ಕೆ.ರಮೇಶ್
ಸುದ್ದಿದಿನ, ದಾವಣಗೆರೆ : ಜನಸಂಖ್ಯೆಗೆ ಅನುಗುಣವಾಗಿ ವೈದ್ಯಕೀಯ ಕಾಲೇಜು ಸ್ಥಾಪನೆಯಾಗಬೇಕು ಎಂದು ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯದ ಕುಲಪತಿ ಡಾ.ಎಂ.ಕೆ.ರಮೇಶ್ ಅಭಿಪ್ರಾಯಪಟ್ಟಿದ್ದಾರೆ.
ದಾವಣಗೆರೆಯಲ್ಲಿ ಭಾನುವಾರ ರಾಜ್ಯ ಮಟ್ಟದ 27ನೇ ಯುರಾಲಜಿ ಸಂಸ್ಥೆಯ ವಾರ್ಷಿಕ ಸಮಾವೇಶವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಜಿಲ್ಲೆಗೊಂದು ವೈದ್ಯಕೀಯ ಕಾಲೇಜು ನೀತಿಯ ಬದಲು 20 ರಿಂದ 25 ಲಕ್ಷ ಜನಸಂಖ್ಯೆಗೆ ವೈದ್ಯಕೀಯ ಕಾಲೇಜು ಇರಬೇಕು. ಪ್ರತಿ ಕಾಲೇಜಿಗೆ ವಿದ್ಯಾರ್ಥಿಗಳ ಸಂಖ್ಯೆ ಮಿತಿ ದಾಟಬಾರದು ಎಂದು ಹೇಳಿದರು.
ಯುರಾಲಜಿ ಸಂಸ್ಥೆಯ ಅಧ್ಯಕ್ಷ ಡಾ. ನಿಶ್ಚಿತ್ ಡಿಸೋಜ ಮಾತನಾಡಿ, ಸಂಘದ ಬೆಳವಣಿಗೆಯನ್ನು ಪ್ರಶಂಸಿಸಿದರು. ಯುರಾಲಜಿ ಸಂಸ್ಥೆಯ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243