ದಿನದ ಸುದ್ದಿ

ನೂತನ ರಾಷ್ಟ್ರೀಯ ಶಿಕ್ಷಣ ನೀತಿ ಪರಿಣಾಮಕಾರಿ ಅನುಷ್ಟಾನಕ್ಕೆ ಉಪ ರಾಷ್ಟ್ರಪತಿ ಕರೆ

Published

on

ಸುದ್ದಿದಿನ ಡೆಸ್ಕ್ : ನೂತನ ರಾಷ್ಟ್ರೀಯ ಶಿಕ್ಷಣ ನೀತಿ ಸರಿಯಾದ ದಿಕ್ಕಿನಲ್ಲಿ ಉತ್ತಮ ಹೆಜ್ಜೆಯಾಗಿದೆ. ಅದನ್ನು ಪರಿಣಾಮಕಾರಿಯಾಗಿ ಅನುಷ್ಟಾನಗೊಳಿಸಬೇಕಾಗಿದೆ ಎಂದು ಉಪರಾಷ್ಟ್ರಪತಿ ಎಂ. ವೆಂಕಯ್ಯ ನಾಯ್ಡು ಹೇಳಿದ್ದಾರೆ.

ಬೆಂಗಳೂರಿನಲ್ಲಿಂದು ಮೌಂಟ್ ಕಾರ್ಮೆಲ್ ಕಾಲೇಜಿನ ಅಮೃತ ಮಹೋತ್ಸವ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು, ನೂತನ ಶಿಕ್ಷಣ ನೀತಿಯಲ್ಲಿ ಮಾತೃಭಾಷೆಗೆ ಆದ್ಯತೆ ನೀಡಲಾಗಿದೆ. ವಿದ್ಯಾರ್ಥಿಗಳು ಅನೇಕ ಭಾಷೆಗಳನ್ನು ಕಲಿಯಲು ಸಾಧ್ಯವಾಗಲಿದೆ ಎಂದು ಅವರು ತಿಳಿಸಿದರು.

ಮಹಿಳೆಯರ ಸಬಲೀಕರಣಕ್ಕಾಗಿ ಸಮಾನ ಹಕ್ಕು ಮತ್ತು ಅವಕಾಶಗಳನ್ನು ಜನರು ಕಲ್ಪಿಸಿಕೊಡಬೇಕು. ಮಹಿಳೆಯರ ಶಿಕ್ಷಣಕ್ಕೆ ಸರ್ಕಾರ ಒತ್ತು ನೀಡಬೇಕಾಗಿದೆ. ಪುರಾತನ ಕಾಲದಿಂದಲೂ ಭಾರತ ಶಿಕ್ಷಣ ಭವ್ಯ ಪರಂಪರೆ ಹೊಂದಿದೆ ಎಂದು ಉಪರಾಷ್ಟ್ರಪತಿ ಹೇಳಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version