ದಿನದ ಸುದ್ದಿ

ರಾಮನವಮಿ | ಪ್ರಧಾನಮಂತ್ರಿ ನರೇಂದ್ರ ಮೋದಿ ಗುಜರಾತಿನ ಉಮಿಯಾ ಮಾತಾ ದೇವಸ್ಥಾನದಿಂದ ವಿಡಿಯೋ ಕಾನ್ಫರೆನ್ಸ್

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ ಡೆಸ್ಕ್ : ಇಂದು ರಾಮನವಮಿ. ಶ್ರೀ ರಾಮನು ಚೈತ್ರ ಮಾಸದ ಶುಕ್ಲ ಪಕ್ಷದ ನವಮಿಯಂದು ಜನಿಸಿದನು. ಹಾಗಾಗಿ ಪ್ರತಿ ವರ್ಷ ಈ ದಿನದಂದು ಶ್ರೀ ರಾಮನವಮಿ ಎಂದು ರಾಮನ ಜನ್ಮ ದಿನ ಆಚರಿಸಲಾಗುತ್ತದೆ. ದೇಶಾದ್ಯಂತ ಬಹಳಷ್ಟು ದೇವಾಲಯಗಳಲ್ಲಿ ರಾಮನವಮಿಯನ್ನು ಒಂಬತ್ತು ದಿನಗಳ ಕಾಲ ಆಚರಿಸಲಾಗುತ್ತದೆ.

ರಾಮನವಮಿಯು ಹಿಂದೂಗಳ ದೊಡ್ಡ ಹಬ್ಬಗಳಲ್ಲಿ ಒಂದಾಗಿದ್ದು, ಅತ್ಯಂತ ಭಕ್ತಿಯಿಂದ ಜನರು ಇದನ್ನು ಆಚರಿಸುತ್ತಾರೆ. ರಾಮನವಮಿ ಅಂಗವಾಗಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ದೇಶವಾಸಿಗಳಿಗೆ ಶುಭಾಶಯ ಕೋರಿದ್ದಾರೆ.

ಶ್ರೀರಾಮನವಮಿ ಶುಭ ಸಂದರ್ಭದಲ್ಲಿ ಶ್ರೀರಾಮನ ತತ್ವಾದರ್ಶಗಳನ್ನು ನೆನಪು ಮಾಡಿಕೊಳ್ಳುವುದರ ಜೊತೆಗೆ ಪ್ರತಿಯೊಬ್ಬರೂ ಅವುಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಲು ಪ್ರಯತ್ನಿಸಬೇಕು ಎಂದು ಅವರು ತಮ್ಮ ಸಂದೇಶದಲ್ಲಿ ತಿಳಿಸಿದ್ದಾರೆ.

ರಾಮನವಮಿ ಹಬ್ಬದ ವಿಶೇಷತೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಗುಜರಾತಿನ ಜುನಾಗಢದ ಗಥಿಲಾದಲ್ಲಿರುವ ಉಮಿಯಾ ಮಾತಾ ದೇವಸ್ಥಾನದಲ್ಲಿ ಇಂದು ಮಧ್ಯಾಹ್ನ 1 ಗಂಟೆಗೆ ವಿಡಿಯೋ ಕಾನ್ಫರೆನ್ಸ್ ಮೂಲಕ 14 ನೇ ಸಂಸ್ಥಾಪನಾ ದಿನಾಚರಣೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version