ದಿನದ ಸುದ್ದಿ
ವಿಧಾನಪರಿಷತ್ ಚುನಾವಣೆ : ಅವಿರೋಧ ಆಯ್ಕೆ
ಸುದ್ದಿದಿನ ಡೆಸ್ಕ್ : ವಿಧಾನಸಭೆಯಿಂದ ವಿಧಾನಪರಿಷತ್ತಿಗೆ ನಡೆಯಬೇಕಿದ್ದ ಚುನಾವಣೆಯಲ್ಲಿ ಎಲ್ಲಾ 11 ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ವಿಧಾನಸಭೆಯ ಕಾರ್ಯದರ್ಶಿ ಎಂ.ಕೆ.ವಿಶಾಲಾಕ್ಷಿ ತಿಳಿಸಿದ್ದಾರೆ.
ಕಾಂಗ್ರೆಸ್‌ನಿಂದ ಐವಾನ್ ಡಿಸೋಜಾ, ಕೆ.ವಿ.ಗೋವಿಂದರಾಜು, ಜಗದೇವ್ ಗುತ್ತೇದಾರರ್, ಬಲ್ಕಿಶ್‌ಬಾನು, ಎನ್.ಎಸ್.ಬೋಸರಾಜು, ಎ. ವಸಂತ ಕುಮಾರ್ ಡಾ.ಎಸ್. ಯತೀಂದ್ರ ಬಿಜೆಪಿಯಿಂದ ಸಿ.ಟಿ.ರವಿ, ಎನ್.ರವಿಕುಮಾರ್, ಮುಳೆ ಮಾರುತಿರಾವ್, ಜೆಡಿಎಸ್‌ನಿಂದ ಟಿ.ಎನ್.ಜವರಾಯಿಗೌಡ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
11 ಸ್ಥಾನಗಳಿಗೆ 12 ಅಭ್ಯರ್ಥಿಗಳು ಉಮೇದುವಾರಿಕೆ ಸಲ್ಲಿಸಿದ್ದರು. ಆದರೆ, ಸೂಚಕರ ಸಹಿ ಇಲ್ಲದ ಕಾರಣ ಆಸೀಫ್ ಪಾಷಾ ನಾಮಪತ್ರ ತಿರಸ್ಕೃತಗೊಂಡಿತ್ತು. ಹೀಗಾಗಿ ಕಣದಲ್ಲಿದ್ದ ಎಲ್ಲ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ನಾಮಪತ್ರ ವಾಪಸ್ ಪಡೆಯಲು ಇಂದು ಕಡೆಯ ದಿನವಾಗಿತ್ತು.
ಈ ನಡುವೆ ಮೂರು ಶಿಕ್ಷಕರು ಹಾಗೂ ಮೂರು ಪದವೀಧರ ಕ್ಷೇತ್ರಗಳಿಗೆ ಕಳೆದ ಸೋಮವಾರ ನಡೆದ ಚುನಾವಣೆ ಮತ ಎಣಿಕೆ ಕಾರ್ಯ ಪ್ರಗತಿಯಲ್ಲಿದೆ. ಮೈಸೂರು, ಬೆಂಗಳೂರು ಹಾಗೂ ಕಲಬುರಗಿಯಲ್ಲಿ ಮತ ಎಣಿಕೆ ನಡೆಯುತ್ತಿದ್ದು, ರಾತ್ರಿ ವೇಳೆಗೆ ಸ್ಪಷ್ಟ ಫಲಿತಾಂಶ ಲಭ್ಯವಾಗುವ ಸಾಧ್ಯತೆ ಇದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243