ದಿನದ ಸುದ್ದಿ

ವಿಧಾನ ಪರಿಷತ್ ಚುನಾವಣಾ ಫಲಿತಾಂಶ ಪ್ರಕಟ : ಬಿಜೆಪಿ, ಕಾಂಗ್ರೆಸ್ ತಲಾ ಎರಡು ಸ್ಥಾನಗಳಲ್ಲಿ ಜಯ

Published

on

ಸುದ್ದಿದಿನ ಡೆಸ್ಕ್ : ವಿಧಾನಪರಿಷತ್ತಿನ ನಾಲ್ಕು ಕ್ಷೇತ್ರಗಳ ಫಲಿತಾಂಶ ಪ್ರಕಟವಾಗಿದ್ದು, ಬಿಜೆಪಿ ಮತ್ತು ಕಾಂಗ್ರೆಸ್ ತಲಾ ಎರಡು ಸ್ಥಾನಗಳಲ್ಲಿ ಜಯಗಳಿಸಿದೆ.

ವಾಯವ್ಯ ಪದವೀಧರ ಮತ ಕ್ಷೇತ್ರದಿಂದ ನಿರಾಣಿ ಹಣಮಂತ ರುದ್ರಪ್ಪ ಅವರು 44 ಸಾವಿರದ 815 ಮತ ಪಡೆದು ಬಾರೀ ಅಂತರದಿಂದ ಜಯಶಾಲಿಯಾಗಿದ್ದಾರೆ.

ಅವರ ಎದುರಾಳಿ ಕಾಂಗ್ರೆಸ್ ಅಭ್ಯರ್ಥಿ ಸುನೀಲ ಸಂಕ 10 ಸಾವಿರದ 122 ಮತ ಪಡೆದಿದ್ದಾರೆ. ದಕ್ಷಿಣ ಪದವಿಧರ ಕ್ಷೇತ್ರದ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮಧುಮಾದೇಗೌಡ 19ನೇ ಸುತ್ತಿನ ಮತ ಎಣಿಕೆ ನಂತರ ಅಂತಿಮವಾಗಿ ಗೆಲುವು ಸಾಧಿಸಿದರು.

ಮಧುಮಾದೇಗೌಡ ಅವರಿಗೆ 46 ಸಾವಿರದ 803, ಎದುರಾಳಿ ಮೈ.ವಿ.ರವಿಶಂಕರ್ ಅವರಿಗೆ 33 ಸಾವಿರದ 70 ಮತಗಳು ಲಭಿಸಿವೆ. ಪಶ್ಚಿಮ ಶಿಕ್ಷಕರ ಮತ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿ ಬಸವರಾಜ ಹೊರಟ್ಟಿ ಹಾಗೂ ವಾಯವ್ಯ ಶಿಕ್ಷಕರ ಕ್ಷೇತ್ರದಿಂದ ಪ್ರಕಾಶ್ ಹುಕ್ಕೆರಿ ಗೆಲುವು ಸಾಧಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version