ದಿನದ ಸುದ್ದಿ
ನಾಲ್ಕು ವಿಧಾನಪರಿಷತ್ ಕ್ಷೇತ್ರಗಳ ಚುನಾವಣೆ | ಬಹಿರಂಗ ಪ್ರಚಾರ ಅಂತ್ಯ; ನಾಡಿದ್ದು ಮತದಾನ
ಸುದ್ದಿದಿನ ಡೆಸ್ಕ್ : ಕರ್ನಾಟಕ ವಿಧಾನ ಪರಿಷತ್ತಿನ ಪಶ್ಚಿಮ ಶಿಕ್ಷಕರ ಮತಕ್ಷೇತ್ರ ಚುನಾವಣೆಗೆ ಸಂಬಂಧಿಸಿದಂತೆ ಜೂನ್ 13ರಂದು ಮತದಾನ ಜರುಗಲಿದ್ದು, ಮತದಾನಕ್ಕೆ ಹಾವೇರಿ ಜಿಲ್ಲಾಡಳಿತದಿಂದ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣವರ ಹೇಳಿದ್ದಾರೆ.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಂದು ನಡೆದ ರಾಜಕೀಯ ಪಕ್ಷಗಳ ಸಭೆಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ 3 ಸಾವಿರ 249 ಪುರುಷ, 1 ಸಾವಿರ 374 ಮಹಿಳಾ ಮತದಾರರು ಸೇರಿ ಒಟ್ಟು 4 ಸಾವಿರ 623 ಮತದಾರರು ಇದ್ದಾರೆ.
ಜೂನ್ 13 ರಂದು ಬೆಳಿಗ್ಗೆ 8ರಿಂದ ಸಂಜೆ 5 ಗಂಟೆವರೆಗೆ ಮತದಾನ ನಡೆಯಲಿದೆ. ಮತ ಎಣಿಕೆ ಜೂನ್ 15ರಂದು ಬೆಳಗಾವಿ ಜ್ಯೋತಿ ಕಾಲೇಜಿನಲ್ಲಿ ನಡೆಯಲಿದೆ.
ಮುಕ್ತ ಹಾಗೂ ಸುಗಮ ಚುನಾವಣೆಗೆ 26 ಮತಗಟ್ಟೆ ಸ್ಥಾಪಿಸಲಾಗಿದ್ದು, ಮತಗಟ್ಟೆಗಳ ಸುತ್ತಲಿನ 200 ಮೀಟರ್ ಪ್ರದೇಶ ಹಾಗೂ ಜಿಲ್ಲೆಯಾದ್ಯಂತ ಚುನಾವಣಾ ಪ್ರಕ್ರಿಯೆಗಳಿಗೆ ಅನ್ವಯಿಸುವಂತೆ ಮಾತ್ರ ಇಂದು ಸಂಜೆಯಿಂದ ಜೂನ್ 13ರ ಸಂಜೆ 5 ಗಂಟೆವರೆಗೆ ಪ್ರತಿಬಂಧಕಾಜ್ಞೆ ವಿಧಿಸಲಾಗಿದೆ ಎಂದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243