ದಿನದ ಸುದ್ದಿ
ಹತ್ತು ಲಕ್ಷ ರೈತ ಕುಟುಂಬದ ವಿದ್ಯಾರ್ಥಿಗಳಿಗೆ ವಿದ್ಯಾನಿಧಿ ಯೋಜನೆ : ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ
ಸುದ್ದಿದಿನ, ಶಿಗ್ಗಾವ್ : ಕೋವಿಡ್ ವಿರುದ್ಧದ ಹೋರಾಟಕ್ಕೆ ಇನ್ನಷ್ಟು ವೇಗ ನೀಡಲು ಕೇಂದ್ರ ಸರ್ಕಾರ 18 ವರ್ಷ ಮೇಲ್ಪಟ್ಟವರಿಗೆ ಮುಂಜಾಗ್ರತಾ ಡೋಸ್ ನೀಡುತ್ತಿದೆ.ರಾಜ್ಯದಲ್ಲಿ ಈ ಡೋಸ್‌ನ್ನು ನೀಡುವ ಕುರಿತಂತೆ ಆರೋಗ್ಯ ಸಚಿವಾಲಯ ಕಾರ್ಯಕ್ರಮವನ್ನು ರೂಪಿಸಿದೆ. ಅದರ ಅನ್ವಯ ಲಸಿಕೆಗಳನ್ನು ನೀಡಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಶಿಗ್ಗಾಂವ್‌ನಲ್ಲಿ ಮಾಧ್ಯಮದ ಪ್ರತಿನಿಧಿಗಳಿಗೆ ಮಾಹಿತಿ ನೀಡಿದರು.
ದೇಶದ್ಯಾಂತ ಕೋರೊನಾ ಸೋಂಕು ಇಳಿಕೆಯಾಗುತ್ತಿರುವ ನಡುವೆಯೂ ಕೇರಳ, ಮಹಾರಾಷ್ಟ್ರ, ದೆಹಲಿ, ಹರಿಯಾಣ ಮತ್ತು ಮಿಜೋರಾಂನಲ್ಲಿ ಕೋವಿಡ್ ಸೋಂಕಿನ ಪ್ರಕರಣಗಳು ಹೆಚ್ಚಳವಾಗಿರುವ ಬಗ್ಗೆ ಕೇಂದ್ರ ಸರ್ಕಾರ ಮುನ್ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ತಜ್ಞರೊಂದಿಗೆ ಚರ್ಚಿಸಿ ರಾಜ್ಯದಲ್ಲಿ ಅಗತ್ಯ ಕ್ರಮ ಕೈಗೊಳ್ಳಳಾಗುವುದು ಎಂದು ಅವರು ಹೇಳಿದರು.
ರಾಜ್ಯದಲ್ಲಿ ಕಳೆದ ಹಣಕಾಸು ವರ್ಷದಲ್ಲಿ 6 ಲಕ್ಷ ರೈತ ಕುಟುಂಬಗಳ ವಿದ್ಯಾರ್ಥಿಗಳಿಗೆ ವಿದ್ಯಾನಿಧಿ ಯೋಜನೆಯ ಲಾಭ ನೀಡಲಾಗಿತ್ತು. ಈ ವರ್ಷ 10 ಲಕ್ಷಕ್ಕೂ ಹೆಚ್ಚು ರೈತರ ಕುಟುಂಬಗಳ ವಿದ್ಯಾರ್ಥಿಗಳಿಗೆ ಈ ಯೋಜನೆಯನ್ನು ವಿಸ್ತರಿಸುವ ಗುರಿ ಹಮ್ಮಿಕೊಳ್ಳಲಾಗಿದೆ ಎಂದು ಅವರು ತಿಳಿಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243